ಬಿಡುಗಡೆ ನಂತರ ಎರಡನೇ ಬಾರಿಗೆ ಬೆಲೆ ಏರಿಕೆ ಪಡೆದುಕೊಂಡ ಟಾಟಾ ಸಫಾರಿ ಎಸ್‌ಯುವಿ

ಟಾಟಾ ಮೋಟಾರ್ಸ್ ನಿರ್ಮಾಣದ ನ್ಯೂ ಜನರೇಷನ್ ಸಫಾರಿ ಎಸ್‌ಯುವಿ ಮಾದರಿಯು ಬಿಡುಗಡೆಯ ನಂತರ ಎರಡನೇ ಬಾರಿಗೆ ದರ ಹೆಚ್ಚಳ ಪಡೆದುಕೊಂಡಿದ್ದು, ಪೂರ್ವ ನಿಗದಿಯೆಂತೆ ಕಂಪನಿಯು ಸಫಾರಿ ಕಾರಿನ ಪ್ರಮುಖ ವೆರಿಯೆಂಟ್‌ಗಳ ಬೆಲೆ ಹೆಚ್ಚಳ ಮಾಡಿದೆ.

ಬಿಡುಗಡೆ ನಂತರ ಎರಡನೇ ಬಾರಿಗೆ ಬೆಲೆ ಏರಿಕೆ ಪಡೆದುಕೊಂಡ ಟಾಟಾ ಸಫಾರಿ ಎಸ್‌ಯುವಿ

ಹೆಚ್ಚುತ್ತಿರುವ ಬಿಡಿಭಾಗಗಳ ಬೆಲೆಯಿಂದಾಗಿ ಟಾಟಾ ಮೋಟಾರ್ಸ್ ಕಂಪನಿಯು ತನ್ನ ಪ್ರಮುಖ ಪ್ರಯಾಣಿಕ ಕಾರುಗಳ ಬೆಲೆಯನ್ನು ಹೆಚ್ಚಳ ಮಾಡಿದ್ದು, ಹೊಸ ದರವನ್ನು ಇಂದಿನಿಂದಲೇ ಅನ್ವಯವಾಗುವಂತೆ ಹೊಸ ದರಪಟ್ಟಿಯನ್ನು ಬಿಡುಗಡೆ ಮಾಡಿದೆ. ಗ್ರಾಹಕರ ಬೇಡಿಕೆಯೆಂತೆ ವಿವಿಧ ಕಾರು ಮಾದರಿಗಳ ಮಾರಾಟ ಹೊಂದಿರುವ ಟಾಟಾ ಮೋಟಾರ್ಸ್ ಕಂಪನಿಯು ಉತ್ಪಾದನಾ ವೆಚ್ಚ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಬೆಲೆ ಹೆಚ್ಚಳ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದು, ಕಾರುಗಳ ಬೆಲೆಗೆ ಅನುಗುಣವಾಗಿ ಶೇ.1 ರಿಂದ ಶೇ.1.50 ರಷ್ಟು ದರ ಏರಿಕೆ ಮಾಡಲಾಗಿದೆ.

ಬಿಡುಗಡೆ ನಂತರ ಎರಡನೇ ಬಾರಿಗೆ ಬೆಲೆ ಏರಿಕೆ ಪಡೆದುಕೊಂಡ ಟಾಟಾ ಸಫಾರಿ ಎಸ್‌ಯುವಿ

ಟಾಟಾ ಮೋಟಾರ್ಸ್ ಕಂಪನಿಯು ವಿವಿಧ ಕಾರು ಮಾದರಿಗಳೊಂದಿಗೆ ಇತ್ತೀಚೆಗೆ ಬಿಡುಗಡೆಯಾದ ಸಫಾರಿ ಎಸ್‌ಯುವಿ ಕಾರು ಮಾದರಿಯ ಬೆಲೆಯಲ್ಲೂ ಹೆಚ್ಚಿಸಿದ್ದು, ಕಳೆದ ಫೆಬ್ರವರಿಯಲ್ಲಿ ಬಿಡುಗಡೆಯಾಗಿದ್ದ ಸಫಾರಿ ಕಾರು ಇದೀಗ ಎರಡನೇ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡಿದೆ.

ಬಿಡುಗಡೆ ನಂತರ ಎರಡನೇ ಬಾರಿಗೆ ಬೆಲೆ ಏರಿಕೆ ಪಡೆದುಕೊಂಡ ಟಾಟಾ ಸಫಾರಿ ಎಸ್‌ಯುವಿ

ಹೊಸ ದರ ಪಟ್ಟಿಯಲ್ಲಿ ಸಫಾರಿ ಕಾರಿನ ಆರಂಭಿಕ ಆವೃತ್ತಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 14.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 23.19 ಲಕ್ಷ ಬೆಲೆ ಪಡೆದುಕೊಂಡಿದ್ದು, ಬೆಲೆ ಏರಿಕೆಯ ನಂತರ ಸಫಾರಿ ಕಾರಿನ ಬೆಲೆಯು ರೂ. 10 ಸಾವಿರದಿಂದ ರೂ. 35 ಸಾವಿರದಷ್ಟು ಹೆಚ್ಚುವರಿ ಪಡೆದುಕೊಂಡಿದೆ.

ಬಿಡುಗಡೆ ನಂತರ ಎರಡನೇ ಬಾರಿಗೆ ಬೆಲೆ ಏರಿಕೆ ಪಡೆದುಕೊಂಡ ಟಾಟಾ ಸಫಾರಿ ಎಸ್‌ಯುವಿ

ಟಾಟಾ ಮೋಟಾರ್ಸ್ ಕಂಪನಿಯು ಮಧ್ಯಮ ಕ್ರಮಾಂಕದ ಕಾರುಗಳ ಬೆಲೆ ಸಾಕಷ್ಟು ಏರಿಕೆ ಮಾಡಿದ್ದು, ಆರಂಭಿಕ ಕಾರು ಮಾದರಿಯ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಸಫಾರಿ ಕಾರಿನ ಬೆಲೆಯನ್ನು ಆರಂಭದಲ್ಲಿ ನಿಗದಿಪಡಿಸಿದ್ದ ಬೆಲೆಯನ್ನೇ ಮುಂದುವರಿಸಲಾಗಿದ್ದು, ಬೆಲೆ ಏರಿಕೆಗೆ ತಕ್ಕಂತೆ ಹೊಸ ಕಾರಿನ ತಾಂತ್ರಿಕ ಅಂಶಗಳಲ್ಲಿ ಹಲವಾರು ಹೊಸ ಬದಲಾವಣೆಗಳನ್ನು ನೀಡಲಾಗಿದೆ.

ಬಿಡುಗಡೆ ನಂತರ ಎರಡನೇ ಬಾರಿಗೆ ಬೆಲೆ ಏರಿಕೆ ಪಡೆದುಕೊಂಡ ಟಾಟಾ ಸಫಾರಿ ಎಸ್‌ಯುವಿ

ಬಹುತೇಕ ವಾಹನ ಉತ್ಪಾದನಾ ಕಂಪನಿಗಳು 2021ರಲ್ಲೇ ಎರಡರಿಂದ ಮೂರು ಬಾರಿ ದರ ಹೆಚ್ಚಿಸಿದ್ದು, ಇದೀಗ ಮತ್ತೆ ಬೆಲೆ ಹೆಚ್ಚಿಸಲು ನಿರ್ಧರಿಸಿವೆ. ಇದರಿಂದ ಕಾರು ಮಾಲೀಕತ್ವವು ಸಾಕಷ್ಟು ದುಬಾರಿಯಾಗುತ್ತಿದ್ದು, ಹೊಸ ವಾಹನ ಬಿಡಿಭಾಗಗಳ ಉತ್ಪಾದನೆಯಲ್ಲಿ ಉಂಟಾಗಿರುವ ಬಿಕ್ಕಟ್ಟು ದರ ಸಮರಕ್ಕೆ ಪ್ರಮುಖ ಕಾರಣವಾಗಿದೆ.

ಬಿಡುಗಡೆ ನಂತರ ಎರಡನೇ ಬಾರಿಗೆ ಬೆಲೆ ಏರಿಕೆ ಪಡೆದುಕೊಂಡ ಟಾಟಾ ಸಫಾರಿ ಎಸ್‌ಯುವಿ

ಹೊಸ ವಾಹನಗಳ ಬೆಲೆಯಲ್ಲಿ ನಿರಂತರವಾಗಿ ಶೇ. 1.50ರಿಂದ ಶೇ.2 ರಷ್ಟು ಬೆಲೆ ಹೆಚ್ಚುತ್ತಿದ್ದು, ಕಳೆದ ಒಂದು ವರ್ಷದಲ್ಲಿ ಬಜೆಟ್ ಕಾರುಗಳ ಬೆಲೆಯಲ್ಲಿ ಸರಾಸರಿಯಾಗಿಯಾಗಿ ರೂ.50 ಸಾವಿರದಿಂದ ರೂ.1.20 ಲಕ್ಷದಷ್ಟು ಮತ್ತು ಮಧ್ಯಮ ಕ್ರಮಾಂಕದ ಕಾರುಗಳ ಬೆಲೆಯಲ್ಲಿ ರೂ. 80 ಸಾವಿರದಿಂದ ರೂ.1.50 ಲಕ್ಷದಷ್ಟು ಹಾಗೂ ಐಷಾರಾಮಿ ಕಾರುಗಳ ಬೆಲೆಯಲ್ಲಿ ರೂ. 2 ಲಕ್ಷದಿಂದ ರೂ.5 ಲಕ್ಷ ಬೆಲೆ ಹೆಚ್ಚಳವಾಗಿವೆ.

ಬಿಡುಗಡೆ ನಂತರ ಎರಡನೇ ಬಾರಿಗೆ ಬೆಲೆ ಏರಿಕೆ ಪಡೆದುಕೊಂಡ ಟಾಟಾ ಸಫಾರಿ ಎಸ್‌ಯುವಿ

ಹೊಸ ವಾಹನಗಳ ದರ ಪರಿಷ್ಕರಣೆಯ ಮಾನದಂಡಗಳನ್ನು ಬದಲಾವಣೆ ಮಾಡಿರುವ ಆಟೋ ಉತ್ಪಾದನಾ ಕಂಪನಿಗಳು ಬಿಡಿಭಾಗಗಳ ಕೊರತೆ ಮತ್ತು ಹೆಚ್ಚುತ್ತಿರುವ ವೆಚ್ಚಗಳನ್ನು ನಿರ್ವಹಿಸಲು ಪ್ರತಿ ಮೂರು ತಿಂಗಳಿಗೆ ಒಂದು ಬಾರಿ ಬೆಲೆ ಹೆಚ್ಚಿಸುತ್ತಿದ್ದು, ಬಿಡಿಭಾಗಗಳು ದುಬಾರಿಯಾಗುತ್ತಿರುವುದರಿಂದ ಹೊಸ ವಾಹನಗಳು ಕಳೆದ ಒಂದು ವರ್ಷದಲ್ಲಿ ಸಾಕಷ್ಟು ಬೆಲೆ ಏರಿಕೆ ಕಂಡಿವೆ.

ಬಿಡುಗಡೆ ನಂತರ ಎರಡನೇ ಬಾರಿಗೆ ಬೆಲೆ ಏರಿಕೆ ಪಡೆದುಕೊಂಡ ಟಾಟಾ ಸಫಾರಿ ಎಸ್‌ಯುವಿ

ಇನ್ನು ಸಫಾರಿ ಕಾರು ಮಾದರಿಯು ಎಕ್ಸ್ಇ, ಎಕ್ಸ್ಎಂ, ಎಕ್ಸ್‌ಟಿ, ಎಕ್ಸ್‌ಟಿ ಪ್ಲಸ್, ಎಕ್ಸ್‌ಜೆಡ್, ಎಕ್ಸ್‌ಜೆಡ್ ಪ್ಲಸ್ ಮತ್ತು ಎಕ್ಸ್‌ಜೆಡ್ ಪ್ಲಸ್ ಅಡ್ವೆಂಚರ್ ಪೆರಸೊನಾ ಮಾದರಿಗಳೊಂದಿಗೆ ಖರೀದಿಗೆ ಲಭ್ಯವಿದ್ದು, ಹೊಸ ಕಾರು ಗ್ರಾಹಕರ ಬೇಡಿಕೆಯೆಂತೆ 6 ಸೀಟರ್ ಮತ್ತು 7 ಸೀಟರ್ ಆಯ್ಕೆ ಪಡೆದುಕೊಂಡಿದೆ.

ಬಿಡುಗಡೆ ನಂತರ ಎರಡನೇ ಬಾರಿಗೆ ಬೆಲೆ ಏರಿಕೆ ಪಡೆದುಕೊಂಡ ಟಾಟಾ ಸಫಾರಿ ಎಸ್‌ಯುವಿ

ಒಮೆಗಾ ಪ್ಲ್ಯಾಟ್‌ಫಾರ್ಮ್‌ನಿಂದಾಗಿ ಟಾಟಾ ಹೊಸ ಕಾರಿಗೆ ಐಷಾರಾಮಿ ವಿನ್ಯಾಸ, ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ನೀಡುವುದರ ಜೊತೆಗೆ ಎಂಜಿನ್ ಕಾರ್ಯಕ್ಷಮತೆಯಲ್ಲೂ ಗಮನಸೆಳೆಯಲಿದೆ.

ಬಿಡುಗಡೆ ನಂತರ ಎರಡನೇ ಬಾರಿಗೆ ಬೆಲೆ ಏರಿಕೆ ಪಡೆದುಕೊಂಡ ಟಾಟಾ ಸಫಾರಿ ಎಸ್‌ಯುವಿ

ಹೊಸ ಕಾರಿನ ಕಂಪನಿಯು ಹಲವಾರು ಸ್ಟ್ಯಾಂಡರ್ಡ್ ಸೇಫ್ಟಿ ಫೀಚರ್ಸ್‌ಗಳೊಂದಿಗೆ ಗರಿಷ್ಠ ಸುರಕ್ಷತೆಗೆ ಒತ್ತು ನೀಡಿದ್ದು, ಸ್ಟ್ಯಾಂಡರ್ಡ್ ಮತ್ತು ಅಡ್ವೆಂಚರ್ ಎರಡು ಮಾದರಿಗಳಲ್ಲೂ ಒಂದೇ ಮಾದರಿಯ ಡೀಸೆಲ್ ಎಂಜಿನ್ ಆಯ್ಕೆ ನೀಡಲಾಗಿದೆ.

ಬಿಡುಗಡೆ ನಂತರ ಎರಡನೇ ಬಾರಿಗೆ ಬೆಲೆ ಏರಿಕೆ ಪಡೆದುಕೊಂಡ ಟಾಟಾ ಸಫಾರಿ ಎಸ್‌ಯುವಿ

ಸಫಾರಿ ಎಸ್‌ಯುವಿಯಲ್ಲಿ ಆರು ಸ್ಪೀಡ್ ಮ್ಯಾನುವಲ್ ಅಥವಾ ಆರು ಸ್ಪೀಡ್ ಆಟೋಮ್ಯಾಟಿಕ್ ಟಾರ್ಕ್ ಕನ್ವರ್ಟರ್ ಗೇರ್‌ಬಾಕ್ಸ್ ಆಯ್ಕೆ ಹೊಂದಿರುವ 2.0-ಲೀಟರ್ ಕ್ರಿಯೊಟೆಕ್ ಡೀಸೆಲ್ ಎಂಜಿನ್ ಆಯ್ಕೆ ನೀಡಲಾಗಿದ್ದು, ಫ್ರಂಟ್ ವೀಲ್ಹ್ ಡ್ರೈವ್ ಸಿಸ್ಟಂನೊಂದಿಗೆ 168-ಬಿಎಚ್‌ಪಿ ಮತ್ತು 350-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದೆ.

ಬಿಡುಗಡೆ ನಂತರ ಎರಡನೇ ಬಾರಿಗೆ ಬೆಲೆ ಏರಿಕೆ ಪಡೆದುಕೊಂಡ ಟಾಟಾ ಸಫಾರಿ ಎಸ್‌ಯುವಿ

ಟಾಟಾ ಕಂಪನಿಯು ಹೊಸ ಕಾರಿನ ಪ್ರತಿ ಮಾದರಿಯಲ್ಲೂ ಸದ್ಯಕ್ಕೆ 2 ವೀಲ್ಹ್ ಡ್ರೈವ್ ಸಿಸ್ಟಂ ಸೌಲಭ್ಯವನ್ನು ಸ್ಟ್ಯಾಂಡರ್ಡ್ ಆಗಿ ನೀಡಿದ್ದು, ಮುಂಬರುವ ದಿನಗಳಲ್ಲಿ ಹೈ ಎಂಡ್ ಮಾದರಿಯಾಗಿರುವ ಅಡ್ವೆಂಚರ್ ಆವೃತ್ತಿಯಲ್ಲಿ ಗ್ರಾಹಕರ ಬೇಡಿಕೆಯ ಅನುಸಾರವಾಗಿ ಆಫ್ ರೋಡ್ ಪರ್ಫಾಮೆನ್ಸ್‌ಗಾಗಿ 4x4 ಡ್ರೈವ್ ಸಿಸ್ಟಂ ಮಾದರಿಯನ್ನು ಸಹ ಪರಿಚಯಿಸುವ ಯೋಜನೆಯಲ್ಲಿದೆ.

ಬಿಡುಗಡೆ ನಂತರ ಎರಡನೇ ಬಾರಿಗೆ ಬೆಲೆ ಏರಿಕೆ ಪಡೆದುಕೊಂಡ ಟಾಟಾ ಸಫಾರಿ ಎಸ್‌ಯುವಿ

ಹೊಸ ಸಫಾರಿ ಕಾರು ಸದ್ಯ ಮಾರುಕಟ್ಟೆಯಲ್ಲಿ ಸ್ಟ್ಯಾಂಡರ್ಡ್ ಮತ್ತು ಅಡ್ವೆಂಚರ್ ಎನ್ನುವ ಎರಡು ಪ್ರಮುಖ ವೆರಿಯೆಂಟ್‌ಗಳಲ್ಲಿ ಮಾರಾಟಗೊಳ್ಳುತ್ತಿದ್ದು, ಅಡ್ವೆಂಚರ್ ಮಾದರಿಯಾಗಿ ಗುರುತಿಸಿಕೊಳ್ಳಲು ಹೆಚ್ಚುವರಿಯಾಗಿ ಮೈಸ್ಟಿಕ್ ಬ್ಲ್ಯೂ ಬಣ್ಣದ ಆಯ್ಕೆಯೊಂದಿಗೆ ಬ್ಲ್ಯಾಕ್ ಔಟ್ ಅಂಶಗಳನ್ನು ಹೊಂದಿದೆ.

ಬಿಡುಗಡೆ ನಂತರ ಎರಡನೇ ಬಾರಿಗೆ ಬೆಲೆ ಏರಿಕೆ ಪಡೆದುಕೊಂಡ ಟಾಟಾ ಸಫಾರಿ ಎಸ್‌ಯುವಿ

ಸಫಾರಿ ಹೊಸ ಆವೃತ್ತಿಯ ಮತ್ತೊಂದು ವಿಶೇಷವೆಂದರೆ ನ್ಯೂ ಜನರೇಷನ್ ಸಫಾರಿ ಮಾದರಿಯು ಇದುವರೆಗೆ ಸುಮಾರು 10 ಸಾವಿರ ಯುನಿಟ್‌ಗಳು ಉತ್ಪಾದನೆಗೊಂಡಿದ್ದು, 10 ಸಾವಿರ ಯುನಿಟ್ ಉತ್ಪಾದನೆ ಸಂಭ್ರಮ ಭಾಗವಾಗಿಯೂ ಗೋಲ್ಡನ್ ಎಡಿಷನ್ ಮಾರುಕಟ್ಟೆ ಪ್ರವೇಶಿಸಿದೆ.

Most Read Articles

Kannada
English summary
Tata safari prices hikes due to rise in input costs details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X