Just In
- 8 hrs ago
ಹೊಸ ಫೀಚರ್ಸ್‌ಗಳನ್ನು ಪಡೆಯಲಿದೆ ನ್ಯೂ ಜನರೇಷನ್ ಫೋಕ್ಸ್ವ್ಯಾಗನ್ ಪೊಲೊ
- 10 hrs ago
ಫೋರ್ಡ್ ಮುಸ್ಟಾಂಗ್ ಕಾರಿನಂತೆ ಮಾಡಿಫೈಗೊಂಡ ಬಲೆನೊ ಸೆಡಾನ್ ಕಾರು
- 13 hrs ago
ವಾರದ ಸುದ್ದಿ: ಸಿಟ್ರನ್ ಕಾರು ಬಿಡುಗಡೆ, ಹೊಸ ವಾಹನ ಬೆಲೆ ಹೆಚ್ಚಳ, ಅಲ್ಕಾಜರ್ ಅನಾವರಣ, ಯುಗಾದಿ ಆಫರ್ ಘೋಷಣೆ!
- 22 hrs ago
ಎಕ್ಸ್ಯುವಿ700 ಎಸ್‌ಯುವಿ ಕಾರಿನ ಮತ್ತಷ್ಟು ಹೊಸ ಮಾಹಿತಿ ಹಂಚಿಕೊಂಡ ಮಹೀಂದ್ರಾ
Don't Miss!
- News
ರೆಮ್ಡೆಸಿವಿರ್ ಔಷಧಿ ರಫ್ಚು ಮಾಡುವುದಕ್ಕೆ ಕೇಂದ್ರ ಸರ್ಕಾರದ ನಿರ್ಬಂಧ
- Sports
ಎಬಿಡಿಗೂ ಮುನ್ನ ಮ್ಯಾಕ್ಸ್ವೆಲ್ ಬ್ಯಾಟಿಂಗ್ಗೆ ಇಳಿದಿದ್ದೇಕೆ ಎಂದು ಬಹಿರಂಗಪಡಿಸಿದ ಕೊಹ್ಲಿ
- Movies
ಸೋನು ಸೂದ್ಗೆ ವಿಶೇಷ ಗೌರವ ನೀಡಿದ ಪಂಜಾಬ್ ಸರ್ಕಾರ
- Finance
ಟಾಪ್ 10ರಲ್ಲಿ 4 ಕಂಪನಿಗಳ ಮೌಲ್ಯ 1.14 ಲಕ್ಷ ಕೋಟಿ ರುಗೇರಿಕೆ
- Lifestyle
ವಾರ ಭವಿಷ್ಯ:ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?
- Education
Bank Of Baroda Recruitment 2021: 512 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸಫಾರಿ ಕಾರಿನ ಅತಿದೊಡ್ಡ ಜಾಹೀರಾತು ಫಲಕ ನಿರ್ಮಿಸಿದ ಟಾಟಾ ಮೋಟಾರ್ಸ್
ಟಾಟಾ ಮೋಟಾರ್ಸ್ ಕಂಪನಿಯು ನ್ಯೂ ಸಫಾರಿ ಎಸ್‌ಯುವಿ ಕಾರಿನ ಮೂಲಕ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಮತ್ತಷ್ಟು ಗ್ರಾಹಕರನ್ನು ಸೆಳೆಯಲು ಆಕರ್ಷಕ ಜಾಹೀರಾತುಗಳನ್ನು ಪ್ರಕಟಿಸುವ ಮೂಲಕ ಪ್ರತಿಸ್ಪರ್ಧಿ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದೆ.

ಯಾವುದೇ ಒಂದು ಹೊಸ ಉತ್ಪನ್ನದ ಕುರಿತು ಗ್ರಾಹಕರನ್ನು ಸೆಳೆಯಲು ಪ್ರತಿಯೊಂದು ಕಂಪನಿಗಳು ವಿವಿಧ ಮಾದರಿಯ ಹಲವಾರು ರೀತಿಯ ಜಾಹೀರಾತು ವಿಧಾನಗಳನ್ನು ಬಳಸಿಕೊಳ್ಳುವುದು ಸಾಮಾನ್ಯ. ಅತ್ಯುತ್ತಮ ಜಾಹೀರಾತುಗಳು ಯಾವುದೇ ಮಾದರಿಯ ಹೊಸ ಉತ್ಪನ್ನಗಳ ಬಗೆಗೆ ಗ್ರಾಹಕರಿಗೆ ಮಾಹಿತಿ ನೀಡಲು ಸಾಕಷ್ಟು ಸಹಕಾರಿಯಾಗಿದ್ದು, ಇತ್ತೀಚೆಗೆ ಜನಪ್ರಿಯ ಕಾರು ಉತ್ಪಾದನಾ ಕಂಪನಿ ಟಾಟಾ ಮೋಟಾರ್ಸ್ ಕೂಡಾ ಜಾಹೀರಾತು ವಿಚಾರವಾಗಿ ಗಮನಸೆಳೆಯುತ್ತಿದೆ.

ಸಾಮಾಜಿಕ ಜಾಲತಾಣಗಳ ಮೂಲಕ ಆಕರ್ಷಕ ಜಾಹೀರಾತುಗಳನ್ನು ಪ್ರಕಟಿಸುವ ಮೂಲಕ ಇತ್ತೀಚೆಗೆ ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಳ್ಳುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ನ್ಯೂ ಜನರೇಷನ್ ಸಫಾರಿ ಎಸ್‌ಯುವಿಗಾಗಿ ದೇಶದಲ್ಲೇ ಅತಿ ದೊಡ್ಡ ಜಾಹೀರಾತು ಫಲಕ ನಿರ್ಮಾಣ ಮಾಡಿದೆ.

ಮುಂಬೈ-ಪುಣೆ ಎಕ್ಸ್‌ಪ್ರೆಸ್ ವೇ ನಲ್ಲಿ ಟಾಟಾ ಮೋಟಾರ್ಸ್ ಕಂಪನಿಯ ಸಫಾರಿ ಕಾರಿನ ಜಾಹೀರಾತು ಫಲಕವು ನಿರ್ಮಾಣವಾಗಿದ್ದು, ಬರೋಬ್ಬರಿ 125 ಅಡಿ ಎತ್ತರ ಮತ್ತು 225 ಅಡಿ ಅಗಲವಾಗಿದೆ.

ಸಫಾರಿ ಕಾರಿನ ಹೊಸ ಜಾಹೀರಾತು ಫಲಕ ನಿರ್ಮಾಣಕ್ಕಾಗಿ ಬರೋಬ್ಬರಿ 265 ಟನ್ ಕಬ್ಬಿಣ ಬಳಕೆ ಮಾಡಲಾಗಿದ್ದು, ರಾತ್ರಿ ವೇಳೆಯು ಜಾಹೀರಾತು ಫಲಕ ಗೋಚರಿಸುವಂತೆ ಭಾರೀ ಪ್ರಮಾಣದ ಲೈಟಿಂಗ್ಸ್ ಬಳಕೆ ಮಾಡಲಾಗಿದೆ. ಮತ್ತೊಂದು ವಿಶೇಷ ಅಂದರೆ, ಹೈವೇ ಪ್ರಯಾಣಿಕರಿಗೆ ಜಾಹೀರಾತು ಫಲಕದಿಂದ ಯಾವುದೇ ರೀತಿಯ ಗೊಂದಲಗಳಾದಂತೆ ಮತ್ತು ಸ್ಪಷ್ಟವಾಗಿ ಜಾಹೀರಾತು ವೀಕ್ಷಿಸಬಹುದಾದ ರೀತಿಯಲ್ಲಿ ನಿರ್ಮಾಣ ಮಾಡಿದ್ದು, ಹೊಸ ಜಾಹೀರಾತು ಮೂಲಕ ನ್ಯೂ ಜನರೇಷನ್ ಸಫಾರಿ ಕಾರಿಗಾಗಿ ಹೆಚ್ಚಿನ ಮಟ್ಟದ ಬೇಡಿಕೆ ನೀರಿಕ್ಷೆಯಲ್ಲಿದೆ.
ಟಾಟಾ ಮೋಟಾರ್ಸ್ ತನ್ನ ಜನಪ್ರಿಯ ಸಫಾರಿ ಕಾರಿನ ನ್ಯೂ ಜನರೇಷನ್ ಮಾದರಿಯನ್ನು ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಅಭಿವೃದ್ದಿಗೊಳಿಸಿ ಬಿಡುಗಡೆ ಮಾಡಿದ್ದು, ಹೊಸ ಕಾರು ಸ್ಟ್ಯಾಂಡರ್ಡ್ ಮತ್ತು ಅಡ್ವೆಂಚರ್ ಆವೃತ್ತಿಯೊಂದಿಗೆ ಗ್ರಾಹಕರನ್ನು ಸೆಳೆಯುತ್ತಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

2021ರ ಸಫಾರಿ ಆವೃತ್ತಿಯು ಎಕ್ಸ್ಇ, ಎಕ್ಸ್ಎಂ, ಎಕ್ಸ್‌ಟಿ, ಎಕ್ಸ್‌ಟಿ ಪ್ಲಸ್, ಎಕ್ಸ್‌ಜೆಡ್, ಎಕ್ಸ್‌ಜೆಡ್ ಪ್ಲಸ್ ಮತ್ತು ಎಕ್ಸ್‌ಜೆಡ್ ಪ್ಲಸ್ ಅಡ್ವೆಂಚರ್ ಪೆರಸೊನಾ ಮಾದರಿಗಳೊಂದಿಗೆ ಖರೀದಿಗೆ ಲಭ್ಯವಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.14.69 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯು ರೂ. 21.45 ಲಕ್ಷ ಬೆಲೆ ಹೊಂದಿದೆ.
MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಒಮೆಗಾ ಪ್ಲ್ಯಾಟ್‌ಫಾರ್ಮ್‌ನಿಂದಾಗಿ ಟಾಟಾ ಹೊಸ ಕಾರಿಗೆ ಐಷಾರಾಮಿ ವಿನ್ಯಾಸ, ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ನೀಡುವುದರ ಜೊತೆಗೆ ಎಂಜಿನ್ ಕಾರ್ಯಕ್ಷಮತೆಯಲ್ಲೂ ಗಮನಸೆಳೆಯಲಿದ್ದು, ಹೊಸ ಕಾರಿನಲ್ಲಿ ಹಲವಾರು ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.
MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಸಫಾರಿ ಎಸ್‌ಯುವಿಯಲ್ಲಿ ಆರು ಸ್ಪೀಡ್ ಮ್ಯಾನುವಲ್ ಅಥವಾ ಆರು ಸ್ಪೀಡ್ ಆಟೋಮ್ಯಾಟಿಕ್ ಟಾರ್ಕ್ ಕನ್ವರ್ಟರ್ ಗೇರ್‌ಬಾಕ್ಸ್ ಆಯ್ಕೆ ಹೊಂದಿರುವ 2.0-ಲೀಟರ್ ಕ್ರಿಯೊಟೆಕ್ ಡೀಸೆಲ್ ಎಂಜಿನ್ ಆಯ್ಕೆ ನೀಡಲಾಗಿದ್ದು, ಫ್ರಂಟ್ ವೀಲ್ಹ್ ಡ್ರೈವ್ ಸಿಸ್ಟಂನೊಂದಿಗೆ 168-ಬಿಎಚ್‌ಪಿ ಮತ್ತು 350-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದೆ.