Just In
- 1 hr ago
ಹೊಸ ರೂಪದೊಂದಿಗೆ ರಸ್ತೆಗಿಳಿಯಲಿವೆ ತೆರೆಮರೆಗೆ ಸರಿದ ಜಟಕಾ ಬಂಡಿ
- 3 hrs ago
ಫೆಬ್ರವರಿ ತಿಂಗಳಿನಲ್ಲಿ 12 ಸಾವಿರಕ್ಕೂ ಹೆಚ್ಚು ಎಂಪಿವಿಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ
- 3 hrs ago
ಸಿಎನ್ಜಿ ವರ್ಷನ್ನಲ್ಲೂ ಬಿಡುಗಡೆಯಾಗಲಿದೆ ಸ್ಕೋಡಾ ರ್ಯಾಪಿಡ್ ಸೆಡಾನ್
- 4 hrs ago
ಸ್ಕ್ರ್ಯಾಪೇಜ್ ನೀತಿ ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಸಿಹಿಸುದ್ದಿ ನೀಡಿದ ಕೇಂದ್ರ ಸರ್ಕಾರ
Don't Miss!
- News
ಪೆಟ್ರೋಲ್, ಡೀಸೆಲ್ ದರ ಏರಿಕೆ: ಕೇಂದ್ರಕ್ಕೆ ಬಿಸಿ ಮುಟ್ಟಿಸಿದ ಮಲ್ಲಿಕಾರ್ಜುನ್ ಖರ್ಗೆ
- Movies
ಬಿಗ್ಬಾಸ್: ಪ್ರಶಾಂತ್ ಸಂಬರ್ಗಿ ಮೇಲೆ ಉರಿದು ಬಿದ್ದ ಮನೆ ಸದಸ್ಯರು
- Education
UAS Dharwad Recruitment 2021: ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಮಾ.10ಕ್ಕೆ ನೇರ ಸಂದರ್ಶನ
- Sports
ಐಎಸ್ಎಲ್: ಫೈನಲ್ಗಾಗಿ ನಾರ್ಥ್ ಈಸ್ಟ್, ಬಾಗನ್ ನಡುವೆ ಫೈನಲ್ ಫೈಟ್
- Lifestyle
ಮಾ.11ಕ್ಕೆ ಕುಂಭ ರಾಶಿಗೆ ಬುಧನ ಪ್ರವೇಶ: ನಿಮ್ಮ ಬದುಕಿನಲ್ಲಿ ಆಗಲಿದೆ ಈ ಬದಲಾವಣೆ
- Finance
ಅಡಿಕೆ, ಕಾಫೀ, ಮೆಣಸು ಹಾಗೂ ರಬ್ಬರ್ನ ಮಾ. 08ರ ಮಾರುಕಟ್ಟೆ ದರ ಇಲ್ಲಿದೆ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸುಧಾರಿತ ತಂತ್ರಜ್ಞಾನ ಪ್ರೇರಿತ ನ್ಯೂ ಜನರೇಷನ್ ಟಾಟಾ ಸಫಾರಿ ಎಸ್‌ಯುವಿ ಬಿಡುಗಡೆ
ಟಾಟಾ ಮೋಟಾರ್ಸ್ ಕಂಪನಿಯು ತನ್ನ ಜನಪ್ರಿಯ ಎಸ್‌ಯುವಿ ಕಾರು ಮಾದರಿಯಾದ ಸಫಾರಿ ನ್ಯೂ ಜನರೇಷನ್ ಆವೃತ್ತಿಯನ್ನು ಭಾರತದಲ್ಲಿ ಬಿಡುಗಡೆ ಮಾಡಿದ್ದು, ಹೊಸ ಕಾರು ಹಲವಾರು ಹೊಸ ವಿನ್ಯಾಸ ಮತ್ತು ಬಲಿಷ್ಠ ಎಂಜಿನ್ ಆಯ್ಕೆಯೊಂದಿಗೆ ಎಸ್‌ಯುವಿ ಪ್ರಿಯರನ್ನು ಸೆಳೆಯಲು ಸಿದ್ದವಾಗಿದೆ.

ಮಧ್ಯಮ ಗಾತ್ರದ ಎಸ್‌ಯುವಿ ಮಾದರಿಯಲ್ಲೇ ಬಲಿಷ್ಠ ಕಾರು ಮಾದರಿಯಾಗಿರುವ 2021ರ ಸಫಾರಿ ಆವೃತ್ತಿಯು ಎಕ್ಸ್ಇ, ಎಕ್ಸ್ಎಂ, ಎಕ್ಸ್‌ಟಿ, ಎಕ್ಸ್‌ಟಿ ಪ್ಲಸ್, ಎಕ್ಸ್‌ಜೆಡ್, ಎಕ್ಸ್‌ಜೆಡ್ ಪ್ಲಸ್ ಮತ್ತು ಎಕ್ಸ್‌ಜೆಡ್ ಪ್ಲಸ್ ಅಡ್ವೆಂಚರ್ ಮಾದರಿಗಳೊಂದಿಗೆ ಖರೀದಿಗೆ ಲಭ್ಯವಿರಲಿದ್ದು, ಹೊಸ ಕಾರು ಆರಂಭಿಕವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.14.69 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯು ರೂ. 21.45 ಲಕ್ಷ ಬೆಲೆ ಹೊಂದಿದೆ.

ಹೊಸ ಸಫಾರಿ ಕಾರು ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಅತ್ಯುತ್ತಮ ಫೀಚರ್ಸ್‌ಗಳೊಂದಿಗೆ ಆಕರ್ಷಕ ಬೆಲೆ ಪಡೆದುಕೊಳ್ಳಲಿದ್ದು, ಒಮೆಗಾ(OMEGA)ಕಾರು ಉತ್ಪಾದನಾ ಪ್ಲ್ಯಾಟ್‌ಫಾರ್ಮ್ ಆಧರಿಸಿ ನಿರ್ಮಾಣಗೊಂಡಿರುವ ಹೊಸ ಕಾರು ಗ್ರಾಹಕರ ಬೇಡಿಕೆಯೆಂತೆ 6 ಸೀಟರ್ ಮತ್ತು 7 ಸೀಟರ್ ಆಸನ ಸೌಲಭ್ಯಗಳ ಆಯ್ಕೆ ಹೊಂದಿದೆ.
ವೆರಿಯೆಂಟ್ | ಮ್ಯಾನುವಲ್ಆವೃತ್ತಿ | ಆಟೋಮ್ಯಾಟಿಕ್ ಆವೃತ್ತಿ |
ಎಕ್ಸ್ಇ | ರೂ. 14.69 ಲಕ್ಷ | |
ಎಕ್ಸ್ಎಂ | ರೂ. 16.00 ಲಕ್ಷ | ರೂ 17.25 ಲಕ್ಷ |
ಎಕ್ಸ್‌ಟಿ | ರೂ. 17.45 ಲಕ್ಷ | |
ಎಕ್ಸ್‌ಟಿ ಪ್ಲಸ್ | ರೂ. 18.25 ಲಕ್ಷ | |
ಎಕ್ಸ್‌ಜೆಡ್ | ರೂ. 19.15 ಲಕ್ಷ | ರೂ. 20.40 ಲಕ್ಷ |
ಎಕ್ಸ್‌ಜೆಡ್ ಪ್ಲಸ್ (6/7 ಸೀಟರ್) | ರೂ. 19.99 ಲಕ್ಷ | ರೂ. 21.25 ಲಕ್ಷ |
ಅಡ್ವೆಂಚರ್ | ||
ಎಕ್ಸ್‌ಜೆಡ್ ಪ್ಲಸ್ (6/7 ಸೀಟರ್) | ರೂ. 20.20 ಲಕ್ಷ | ರೂ. 21.45 ಲಕ್ಷ |

ಸಫಾರಿ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಹ್ಯಾರಿಯರ್ ಎಸ್‌ಯುವಿ ಕಾರಿಗಿಂತಲೂ 63 ಎಂಎಂ ಹೆಚ್ಚುವರಿ ಉದ್ದಳತೆಯೊಂದಿಗೆ ಮೂರನೇ ಸಾಲಿನ ಆಸನಗಳನ್ನು ಹೊಂದಿದ್ದು, ಹ್ಯಾರಿಯರ್ ಕಾರು ಮಾದರಿಯೆಂತೆಯೇ ಬಹುತೇಕ ತಾಂತ್ರಿಕ ಅಂಶಗಳನ್ನು ಪಡೆದುಕೊಂಡಿರುವ ಹೊಸ ಸಫಾರಿ ಕಾರು ಪ್ರತಿಸ್ಪರ್ಧಿ ಕಾರುಗಳಿಗೆ ಉತ್ತಮ ಪೈಪೋಟಿ ನೀಡಲಿದೆ.

ಒಮೆಗಾ ಪ್ಲ್ಯಾಟ್‌ಫಾರ್ಮ್‌ನಿಂದಾಗಿ ಐಷಾರಾಮಿ ವಿನ್ಯಾಸ, ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ನೀಡುವುದರ ಜೊತೆಗೆ ಎಂಜಿನ್ ಕಾರ್ಯಕ್ಷಮತೆಯಲ್ಲೂ ಗಮನಸೆಳೆಯಲಿರುವ ಹೊಸ ಸಫಾರಿ ಕಾರಿನಲ್ಲಿ ಟಾಟಾ ಕಂಪನಿಯು ಹಲವಾರು ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡುತ್ತದೆ. ಆರಂಭಿಕ ಮಾದರಿಯಾದ ಎಕ್ಸ್ಇ ಮತ್ತು ಎಕ್ಸ್ಎಂ ವೆರಿಯೆಂಟ್‌ನಲ್ಲಿ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಇಎಸ್‌ಪಿ, ಹಿಲ್ ಹೋಲ್ಡ್ ಅಸಿಸ್ಟ್, ರೋಲ್ ಓವರ್ ಮಿಟಿಗೇಷನ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಟೆಲಿಸ್ಕೋಪಿಕ್ ಸ್ಟೀರಿಂಗ್ ವೀಲ್ಹ್ ಮತ್ತು ಪ್ರೋಜೆಕ್ಟರ್ ಹೆಡ್‌ಲ್ಯಾಂಪ್ ಸೌಲಭ್ಯವಿದೆ.

ಎಕ್ಸ್‌ಟಿ, ಎಕ್ಸ್‌ಟಿ ಪ್ಲಸ್ ಆವೃತ್ತಿಯಲ್ಲಿ ಆರಂಭಿಕ ಮಾದರಿಗಳಲ್ಲಿ ಕೆಲವು ಫೀಚರ್ಸ್‌ಗಳ ಜೊತೆಗೆ ಟೈರ್ ಪ್ರೆಷರ್ ಮಾನಿಟರ್, ಆಟೋ ಡಿಮ್ಮಿಂಗ್ ಇನ್‌ಸೈಡ್ ರಿಯರ್ ವ್ಯೂ ಮಿರರ್, 18-ಇಂಚಿನ ಅಲಾಯ್ ವೀಲ್ಹ್, ಆಟೋ ಕ್ಲೈಮೆಟ್ ಕಂಟ್ರೋಲ್, ಆಟೋ ಹೆಡ್‌ಲೈಟ್ಸ್ ಮತ್ತು ವೈಪರ್ಸ್, ಪವರ್ ಫೋಲ್ಡಿಂಗ್ ಮತ್ತು ಹೊಂದಾಣಿಕೆ ಮಾಡಬಹುದಾದ ವಿಂಗ್ ಮಿರರ್, ಕೀ ಲೆಸ್ ಎಂಟ್ರಿ, ಆ್ಯಂಬಿಯೆಂಟ್ ಮೋಡ್ ಮತ್ತು ಐರಾ ಕಾರ್ ಕನೆಕ್ಟ್ ಟೆಕ್ನಾಲಜಿ ನೀಡಲಾಗಿದೆ.

ಟಾಪ್ ಎಂಡ್‌ನಲ್ಲಿರುವ ಎಕ್ಸ್‌ಜೆಡ್, ಎಕ್ಸ್‌ಜೆಡ್ ಪ್ಲಸ್ ಆವೃತ್ತಿಗಳಲ್ಲಿ ಆರಂಭಿಕ ಮಾದರಿಗಳಲ್ಲಿನ ಹಲವು ಫೀಚರ್ಸ್‌ನೊಂದಿಗೆ ಪನೊರಮಿಕ್ ಸನ್‌ರೂಫ್, ಸೈಡ್ ಕರ್ಟೈನ್ ಏರ್‌ಬ್ಯಾಗ್, ಹಿಲ್ ಡಿಸೆಂಟ್ ಕಂಟ್ರೋಲ್, ಟೈರೈನ್ ರೆಸ್ಪಾನ್ಸ್, ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್, 18-ಇಂಚಿನ ಮಷಿನ್ ಕಟ್ ಅಯಾಲ್ ವೀಲ್ಹ್, ಜೆಕ್ಸಾನ್ ಹೆಚ್‌ಡಿಐ ಹೆಡ್‌ಲೈಟ್ಸ್, ಫ್ರಂಟ್ ಫಾಗ್ ಲೈಟ್ಸ್, ಕಾರ್ನರಿಂಗ್ ಫಂಕ್ಷನ್, ಟೆರೈನ್ ರೆನ್ಪಾನ್ಸ್ ಮೋಡ್, 8.8 ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ ನೀಡಲಾಗಿದೆ.

ಜೊತೆಗೆ 7 ಇಂಚಿನ ಡಿಜಿಟಲ್ ಡಿಸ್‌ಪ್ಲೇ, 9 ಜೆಬಿಎಲ್ ಸ್ಪೀಕರ್ಸ್ 6 ಹಂತಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟ್ ಮತ್ತು ಹೈ ಎಂಡ್ ಮಾದರಿಯಲ್ಲಿ ಮಾತ್ರ ಪನೊರಮಿಕ್ ಸನ್‌ರೂಫ್ ಸೌಲಭ್ಯ ನೀಡಲಾಗಿದ್ದು, ಎಕ್ಸ್‌ಜೆಡ್ ಪ್ಲಸ್ ಆಧರಿಸಿರುವ ಎಕ್ಸ್‌ಜೆಡ್ ಪ್ಲಸ್ ಅಡ್ವೆಂಚರ್ ಕಾರು ಮಾದರಿಯಲ್ಲಿ ಮೈಸ್ಟಿಕ್ ಬ್ಲ್ಯೂ ಬಣ್ಣದ ಆಯ್ಕೆಯೊಂದಿಗೆ ಬ್ಲ್ಯಾಕ್ ಔಟ್ ಅಂಶಗಳನ್ನು ಹೊಂದಿದೆ.

ಎಂಜಿನ್ ಮತ್ತು ಪರ್ಫಾಮೆನ್ಸ್
ಸಫಾರಿ ಎಸ್‌ಯುವಿ ಆರು ಸ್ಪೀಡ್ ಮ್ಯಾನುವಲ್ ಮತ್ತು ಆರು ಸ್ಪೀಡ್ ಆಟೋಮ್ಯಾಟಿಕ್ ಟಾರ್ಕ್ ಕನ್ವರ್ಟರ್ ಗೇರ್‌ಬಾಕ್ಸ್ ಆಯ್ಕೆ ಹೊಂದಿರುವ 2.0-ಲೀಟರ್ ಕ್ರಿಯೊಟೆಕ್ ಡೀಸೆಲ್ ಎಂಜಿನ್ ಮಾದರಿಯು 168-ಬಿಎಚ್‌ಪಿ ಮತ್ತು 350-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದು, ಟಾಟಾ ಕಂಪನಿಯು ಹೊಸ ಕಾರಿನ ಪ್ರತಿ ಮಾದರಿಯಲ್ಲೂ 2 ವೀಲ್ಹ್ ಡ್ರೈವ್ ಸಿಸ್ಟಂ ಸೌಲಭ್ಯವನ್ನು ಸ್ಟ್ಯಾಂಡರ್ಡ್ ಆಗಿ ನೀಡಿದೆ.

ಈ ಮೂಲಕ ಹೊಸ ಸಫಾರಿ ಕಾರು ಮಾದರಿಯು ಮಹೀಂದ್ರಾ ಎಕ್ಸ್‌ಯುವಿ500, ಎಂಜಿ ಹೆಕ್ಟರ್ ಪ್ಲಸ್ ಮತ್ತು ಜೀಪ್ ಕಂಪಾಸ್ ಕಾರುಗಳಿಗೆ ಮತ್ತಷ್ಟು ಪೈಪೋಟಿ ನೀಡಲಿದ್ದು, ಹೊಸ ಕಾರನ್ನು ಗ್ರಾಹಕರು ರಾಯಲ್ ಬ್ಲ್ಯೂ, ಆರ್ಕಸ್ ವೈಟ್ ಮತ್ತು ಡೇಟೋನ್ ಗ್ರೆ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿರಲಿದೆ.