ಬಿಡುಗಡೆಯ ನಂತರ ಮೊದಲ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ ನ್ಯೂ ಜನರೇಷನ್ ಟಾಟಾ ಸಫಾರಿ

ಟಾಟಾ ಮೋಟಾರ್ಸ್ ನಿರ್ಮಾಣದ ನ್ಯೂ ಜನರೇಷನ್ ಸಫಾರಿ ಎಸ್‌ಯುವಿ ಮಾದರಿಯು ಬಿಡುಗಡೆಯ ನಂತರ ಮೊದಲ ಬಾರಿಗೆ ದರ ಹೆಚ್ಚಳ ಪಡೆದುಕೊಂಡಿದ್ದು, ಪೂರ್ವ ನಿಗದಿಯೆಂತೆ ಕಂಪನಿಯು ಸಫಾರಿ ಕಾರಿನ ಪ್ರಮುಖ ವೆರಿಯೆಂಟ್‌ಗಳ ಬೆಲೆ ಹೆಚ್ಚಳ ಮಾಡಿದೆ.

ಬೆಲೆ ಹೆಚ್ಚಳ ಪಡೆದುಕೊಂಡ ನ್ಯೂ ಜನರೇಷನ್ ಟಾಟಾ ಸಫಾರಿ

ಹೆಚ್ಚುತ್ತಿರುವ ಬಿಡಿಭಾಗಗಳ ಬೆಲೆಯಿಂದಾಗಿ ಟಾಟಾ ಮೋಟಾರ್ಸ್ ಕಂಪನಿಯು ತನ್ನ ಪ್ರಮುಖ ಪ್ರಯಾಣಿಕ ಕಾರುಗಳ ಬೆಲೆಯನ್ನು ಹೆಚ್ಚಳ ಮಾಡಿದ್ದು, ಹೊಸ ದರವನ್ನು ಇಂದಿನಿಂದಲೇ ಅನ್ವಯವಾಗುವಂತೆ ಹೊಸ ದರಪಟ್ಟಿಯನ್ನು ಬಿಡುಗಡೆ ಮಾಡಿದೆ. ಗ್ರಾಹಕರ ಬೇಡಿಕೆಯೆಂತೆ ವಿವಿಧ ಕಾರು ಮಾದರಿಗಳ ಮಾರಾಟ ಹೊಂದಿರುವ ಟಾಟಾ ಮೋಟಾರ್ಸ್ ಕಂಪನಿಯು ಉತ್ಪಾದನಾ ವೆಚ್ಚ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಬೆಲೆ ಹೆಚ್ಚಳ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದು, ಕಾರುಗಳ ಬೆಲೆಗೆ ಅನುಗುಣವಾಗಿ ಶೇ.1 ರಿಂದ ಶೇ.1.80 ರಷ್ಟು ದರ ಏರಿಕೆ ಮಾಡಲಾಗಿದೆ.

ಬೆಲೆ ಹೆಚ್ಚಳ ಪಡೆದುಕೊಂಡ ನ್ಯೂ ಜನರೇಷನ್ ಟಾಟಾ ಸಫಾರಿ

ಮೇ 8ರಿಂದ ಕಾರು ಖರೀದಿಸುವ ಗ್ರಾಹಕರಿಗೆ ಮಾತ್ರ ಹೊಸ ದರ ಅನ್ವಯವಾಗಿದೆ ಎಂಬುವುದನ್ನು ಸ್ಪಷ್ಟಪಡಿಸಿರುವ ಟಾಟಾ ಮೋಟಾರ್ಸ್ ಕಂಪನಿಯು ಇತ್ತೀಚೆಗೆ ಬಿಡುಗಡೆಯಾದ ಸಫಾರಿ ಎಸ್‌ಯುವಿ ಕಾರು ಮಾದರಿಯ ಬೆಲೆಯಲ್ಲೂ ಹೆಚ್ಚಿಸಲಾಗಿದೆ.

ಬೆಲೆ ಹೆಚ್ಚಳ ಪಡೆದುಕೊಂಡ ನ್ಯೂ ಜನರೇಷನ್ ಟಾಟಾ ಸಫಾರಿ

ಕಳೆದ ಫೆಬ್ರವರಿಯಲ್ಲಿ ಬಿಡುಗಡೆಯಾಗಿದ್ದ ಸಫಾರಿ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.14.69 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯು ರೂ. 21.45 ಲಕ್ಷ ಬೆಲೆ ಹೊಂದಿತ್ತು. ಇದೀಗ ಹೊಸ ದರ ಪಟ್ಟಿಯಲ್ಲಿ ಸಫಾರಿ ಕಾರಿನ ಆರಂಭಿಕ ಆವೃತ್ತಿಯು ರೂ. 14.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 21.81 ಲಕ್ಷ ಬೆಲೆ ಪಡೆದುಕೊಂಡಿದೆ.

ಬೆಲೆ ಹೆಚ್ಚಳ ಪಡೆದುಕೊಂಡ ನ್ಯೂ ಜನರೇಷನ್ ಟಾಟಾ ಸಫಾರಿ

ಹೊಸ ದರಪಟ್ಟಿಯಲ್ಲಿ ಸಫಾರಿ ಕಾರಿನ ಆರಂಭಿಕ ಮಾದರಿಯು ಎಕ್ಸ್‌ಶೋರೂಂ ದರದಂತೆ ರೂ. 30 ಸಾವಿರ ಹೆಚ್ಚುವರಿ ದರ ಪಡೆದುಕೊಂಡಲ್ಲಿ ಟಾಪ್ ಎಂಡ್ ಮಾದರಿಯು ರೂ. 36 ಸಾವಿರದಷ್ಟು ಹೆಚ್ಚುವರಿ ದರ ಪಡೆದುಕೊಂಡಿದೆ. ಮಧ್ಯಮ ಕ್ರಮಾಂಕದ ಮಾದರಿಗಳ ಬೆಲೆಯಲ್ಲೂ ತುಸು ಹೆಚ್ಚಳವಾಗಿದ್ದು, ಟಾಟಾ ಮೋಟಾರ್ಸ್ ಸೇರಿದಂತೆ ಬಹುತೇಕ ಕಾರು ಕಂಪನಿಗಳು ತಮ್ಮ ಕಾರುಗಳ ಬೆಲೆಯಲ್ಲಿ ಹೆಚ್ಚಳ ಮಾಡಿವೆ.

ಬೆಲೆ ಹೆಚ್ಚಳ ಪಡೆದುಕೊಂಡ ನ್ಯೂ ಜನರೇಷನ್ ಟಾಟಾ ಸಫಾರಿ

ಇನ್ನು ಸಫಾರಿ ಕಾರು ಮಾದರಿಯು ಎಕ್ಸ್ಇ, ಎಕ್ಸ್ಎಂ, ಎಕ್ಸ್‌ಟಿ, ಎಕ್ಸ್‌ಟಿ ಪ್ಲಸ್, ಎಕ್ಸ್‌ಜೆಡ್, ಎಕ್ಸ್‌ಜೆಡ್ ಪ್ಲಸ್ ಮತ್ತು ಎಕ್ಸ್‌ಜೆಡ್ ಪ್ಲಸ್ ಅಡ್ವೆಂಚರ್ ಪೆರಸೊನಾ ಮಾದರಿಗಳೊಂದಿಗೆ ಖರೀದಿಗೆ ಲಭ್ಯವಿದ್ದು, ಹೊಸ ಕಾರು ಗ್ರಾಹಕರ ಬೇಡಿಕೆಯೆಂತೆ 6 ಸೀಟರ್ ಮತ್ತು 7 ಸೀಟರ್ ಆಯ್ಕೆ ಪಡೆದುಕೊಂಡಿದೆ.

ಬೆಲೆ ಹೆಚ್ಚಳ ಪಡೆದುಕೊಂಡ ನ್ಯೂ ಜನರೇಷನ್ ಟಾಟಾ ಸಫಾರಿ

ಸ್ಟ್ಯಾಂಡರ್ಡ್ ಸಫಾರಿ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ರೂ.14.99 ಲಕ್ಷದಿಂದ ರೂ. 21.61 ಲಕ್ಷ ಬೆಲೆ ಹೊಂದಿದ್ದಲ್ಲಿ ಅಡ್ವೆಂಚರ್ ಪೆರಸೊನಾ ಸಫಾರಿ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 20.56 ಲಕ್ಷದಿಂದ ರೂ. 21.81 ಲಕ್ಷ ಬೆಲೆ ಪಡೆದುಕೊಂಡಿದೆ.

MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಬೆಲೆ ಹೆಚ್ಚಳ ಪಡೆದುಕೊಂಡ ನ್ಯೂ ಜನರೇಷನ್ ಟಾಟಾ ಸಫಾರಿ

ಒಮೆಗಾ ಪ್ಲ್ಯಾಟ್‌ಫಾರ್ಮ್‌ನಿಂದಾಗಿ ಟಾಟಾ ಹೊಸ ಕಾರಿಗೆ ಐಷಾರಾಮಿ ವಿನ್ಯಾಸ, ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ನೀಡುವುದರ ಜೊತೆಗೆ ಎಂಜಿನ್ ಕಾರ್ಯಕ್ಷಮತೆಯಲ್ಲೂ ಗಮನಸೆಳೆಯಲಿದೆ.

ಬೆಲೆ ಹೆಚ್ಚಳ ಪಡೆದುಕೊಂಡ ನ್ಯೂ ಜನರೇಷನ್ ಟಾಟಾ ಸಫಾರಿ

ಹೊಸ ಕಾರಿನ ಕಂಪನಿಯು ಹಲವಾರು ಸ್ಟ್ಯಾಂಡರ್ಡ್ ಸೇಫ್ಟಿ ಫೀಚರ್ಸ್‌ಗಳೊಂದಿಗೆ ಗರಿಷ್ಠ ಸುರಕ್ಷತೆಗೆ ಒತ್ತು ನೀಡಿದ್ದು, ಸ್ಟ್ಯಾಂಡರ್ಡ್ ಮತ್ತು ಅಡ್ವೆಂಚರ್ ಎರಡು ಮಾದರಿಗಳಲ್ಲೂ ಒಂದೇ ಮಾದರಿಯ ಡೀಸೆಲ್ ಎಂಜಿನ್ ಆಯ್ಕೆ ನೀಡಲಾಗಿದೆ.

MOST READ: ಬಿಡುಗಡೆಯಾಗಲಿರುವ 4x4 ಡ್ರೈವ್ ಸಿಸ್ಟಂ ಸೌಲಭ್ಯವುಳ್ಳ ಟಾಪ್ 5 ಕಾರುಗಳಿವು..!

ಬೆಲೆ ಹೆಚ್ಚಳ ಪಡೆದುಕೊಂಡ ನ್ಯೂ ಜನರೇಷನ್ ಟಾಟಾ ಸಫಾರಿ

ಸಫಾರಿ ಎಸ್‌ಯುವಿಯಲ್ಲಿ ಆರು ಸ್ಪೀಡ್ ಮ್ಯಾನುವಲ್ ಅಥವಾ ಆರು ಸ್ಪೀಡ್ ಆಟೋಮ್ಯಾಟಿಕ್ ಟಾರ್ಕ್ ಕನ್ವರ್ಟರ್ ಗೇರ್‌ಬಾಕ್ಸ್ ಆಯ್ಕೆ ಹೊಂದಿರುವ 2.0-ಲೀಟರ್ ಕ್ರಿಯೊಟೆಕ್ ಡೀಸೆಲ್ ಎಂಜಿನ್ ಆಯ್ಕೆ ನೀಡಲಾಗಿದ್ದು, ಫ್ರಂಟ್ ವೀಲ್ಹ್ ಡ್ರೈವ್ ಸಿಸ್ಟಂನೊಂದಿಗೆ 168-ಬಿಎಚ್‌ಪಿ ಮತ್ತು 350-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದೆ.

Most Read Articles

Kannada
English summary
Tata Safari SUV Prices Hiked By Up To Rs. 36,000. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X