2021ರ ಟಾಟಾ ಸಫಾರಿ ಎಸ್‌ಯುವಿ ಫಸ್ಟ್ ಡ್ರೈವ್ ರಿವ್ಯೂ ವಿಡಿಯೋ

ಟಾಟಾ ಮೋಟಾರ್ಸ್ ಕಂಪನಿಯು ತನ್ನ ಹೊಸ ಸಫಾರಿ ಎಸ್‍ಯುವಿಯನ್ನು ಹಲವಾರು ಹೊಸ ಬದಲಾವಣೆಯೊಂದಿಗೆ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಹಾಗಾದ್ರೆ ಹೊಸ ಬದಲಾವಣೆ ಹೊತ್ತು ಬಂದಿರುವ ನ್ಯೂ ಜನರೇಷನ್ ಸಫಾರಿ ಎಸ್‌ಯುವಿಯು ವಿಶೇಷತೆ ಏನು? ಎನ್ನುವುದನ್ನು ಫಸ್ಟ್ ಡ್ರೈವ್ ರಿವ್ಯೂನಲ್ಲಿ ನೋಡೋಣ.

ಸಫಾರಿ ಹೊಸ ಕಾರು ಮಾದರಿಯು ಟಾಟಾ ಕಂಪನಿಯ OMEGA ಕಾರು ಉತ್ಪಾದನಾ ಪ್ಲ್ಯಾಟ್‌ಫಾರ್ಮ್ ಆಧರಿಸಿ ನಿರ್ಮಾಣಗೊಂಡಿದ್ದು, ಗ್ರಾಹಕರ ಬೇಡಿಕೆಯೆಂತೆ 6 ಸೀಟರ್ ಮತ್ತು 7 ಸೀಟರ್ ಆಸನ ಸೌಲಭ್ಯ ಹೊಂದಿದೆ. ಒಟ್ಟು ಆರು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರಲಿರುವ ಹೊಸ ಸಫಾರಿ ಕಾರು ಪ್ರತಿಸ್ಪರ್ಧಿ ಕಾರುಗಳಿಂತಲೂ ಅತ್ಯುತ್ತಮ ತಾಂತ್ರಿಕ ಅಂಶಗಳು, ಎಂಜಿನ್ ಆಯ್ಕೆ ಮತ್ತು ಆಕರ್ಷಕ ಬೆಲೆಯೊಂದಿಗೆ ಖರೀದಿಗೆ ಲಭ್ಯವಿರಲಿದೆ.

2021ರ ಟಾಟಾ ಸಫಾರಿ ಎಸ್‌ಯುವಿ ಫಸ್ಟ್ ಡ್ರೈವ್ ರಿವ್ಯೂ ವಿಡಿಯೋ

1998ರಲ್ಲಿ ಮೊದಲ ಬಾರಿಗೆ ಬಿಡುಗಡೆಗೊಂಡಿದ್ದ ಸಫಾರಿ ಎಸ್‌ಯುವಿ ಕಾರು ಗ್ರಾಹಕರ ಬೇಡಿಕೆಯೆಂತೆ ಕಾಲಕಾಲಕ್ಕೆ ಹಲವಾರು ಬದಲಾವಣೆಗಳನ್ನು ಪಡೆದುಕೊಳ್ಳುತ್ತಾ 2019ರ ತನಕವು ಮಾರಾಟದಲ್ಲಿತ್ತು. ಆದರೆ 2019ರ ಮಧ್ಯಂತರದಲ್ಲಿ ಪ್ರತಿಸ್ಪರ್ಧಿ ಕಾರುಗಳ ಅಬ್ಬರದಿಂದ ಸಫಾರಿ ಮಾರಾಟವನ್ನು ಸ್ಥಗಿತಗೊಳಿಸಿದ್ದ ಟಾಟಾ ಕಂಪನಿಯು ಇದೀಗ ಮತ್ತೆ ಗ್ರಾವಿಟಾಸ್ ಕಾನ್ಸೆಪ್ಟ್ ಮಾದರಿಯನ್ನೇ ರೀ ಬ್ರಾಂಡ್ ಮಾದರಿಯಾಗಿ ಸಫಾರಿಯನ್ನು ನ್ಯೂ ಜನರೇಷನ್ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆ ಮಾಡುತ್ತಿದೆ.

2021ರ ಟಾಟಾ ಸಫಾರಿ ಎಸ್‌ಯುವಿ ಫಸ್ಟ್ ಡ್ರೈವ್ ರಿವ್ಯೂ ವಿಡಿಯೋ

ಹೊಸ ತಲೆಮಾರಿನ ಸಫಾರಿ ಮಾದರಿಯು ಎಸ್‌ಯುವಿ ಸೆಗ್ಮೆಂಟ್ ಫಸ್ಟ್ ಮಾದರಿಯಲ್ಲೇ ಅತ್ಯುತ್ತಮ ಫೀಚರ್ಸ್‌ಗಳೊಂದಿಗೆ ಅಭಿವೃದ್ದಿಗೊಂಡಿದ್ದು, ಸಫಾರಿ ಕಾರು ಹ್ಯಾರಿಯರ್ ಕಾರಿಗಿಂತಲೂ 63 ಎಂಎಂ ಹೆಚ್ಚುವರಿ ಉದ್ದಳತೆಯೊಂದಿಗೆ ಮೂರನೇ ಸಾಲಿನ ಆಸನಗಳನ್ನು ಹೊಂದಿದೆ. ಹೊಸ ಕಾರು 6 ಸೀಟರ್ ಮತ್ತು 7 ಸೀಟರ್ ಸೌಲಭ್ಯದೊಂದಿಗೆ ಗ್ರಾಹಕರನ್ನು ಆಕರ್ಷಿಸಲಿದ್ದು, ಐರಾ ಕನೆಕ್ಟೆಡ್ ಟೆಕ್ನಾಲಜಿಯು ಹೊಸ ಕಾರಿಗೆ ಮತ್ತಷ್ಟು ಭದ್ರತೆ ಒದಗಿಸುತ್ತದೆ.

2021ರ ಟಾಟಾ ಸಫಾರಿ ಎಸ್‌ಯುವಿ ಫಸ್ಟ್ ಡ್ರೈವ್ ರಿವ್ಯೂ ವಿಡಿಯೋ

ಇನ್ನು ಹೊಸ ಸಫಾರಿ ಆವೃತ್ತಿಯು ಹ್ಯಾರಿಯರ್‌ನಲ್ಲಿರುವಂತೆ 2.0-ಲೀಟರ್ ಕ್ರಿಯೊಟೆಕ್ ಡೀಸೆಲ್ ಎಂಜಿನ್ ಅನ್ನು ಹ್ಯುಂಡೈನಿಂದ ಎರವಲು ಪಡೆದುಕೊಳ್ಳಲಾಗಿದೆ. ಆರು ಸ್ಪೀಡ್ ಮ್ಯಾನುವಲ್ ಮತ್ತು ಆರು ಸ್ಪೀಡ್ ಆಟೋಮ್ಯಾಟಿಕ್ ಟಾರ್ಕ್ ಕನ್ವರ್ಟರ್ ಗೇರ್‌ಬಾಕ್ಸ್ ಆಯ್ಕೆಗಳೊಂದಿಗೆ 168-ಬಿಎಚ್‌ಪಿ ಮತ್ತು 350-ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಅತ್ಯುತ್ತಮ ಎಂಜಿನ್ ಕಾರ್ಯಕ್ಷಮತೆ ಪಡೆದುಕೊಂಡಿದೆ.

Most Read Articles

Kannada
English summary
2021 Tata Safari Video Review. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X