Just In
- 7 min ago
ವಿನೂತನ ವೈಶಿಷ್ಟ್ಯತೆಯೊಂದಿಗೆ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನವಾದ ರಾಯಲ್ ಎನ್ಫೀಲ್ಡ್ ಮಿಟಿಯೊರ್ 350
- 44 min ago
ಹೊಸ ಜೀಪ್ ರ್ಯಾಂಗ್ಲರ್ ರೂಬಿಕಾನ್ 392 ಲಾಂಚ್ ಎಡಿಷನ್ ಬಿಡುಗಡೆ
- 1 hr ago
ಸ್ಪ್ಲೆಂಡರ್ ಬೈಕುಗಳ ಮೇಲೆ ಭರ್ಜರಿ ಡಿಸ್ಕೌಂಟ್ ನೀಡುತ್ತಿದೆ ಹೀರೋ ಮೋಟೊಕಾರ್ಪ್
- 2 hrs ago
2021ರ ಸ್ವಿಫ್ಟ್ ಕಾರಿನ ಆಕ್ಸೆಸರಿಸ್ ಪ್ಯಾಕೇಜ್ ಬಿಡುಗಡೆ ಮಾಡಿದ ಮಾರುತಿ ಸುಜುಕಿ
Don't Miss!
- News
ಅಂತರರಾಷ್ಟ್ರೀಯ ವಿಮಾನ ಸಂಚಾರದ ಮೇಲಿನ ನಿರ್ಬಂಧ ಮುಂದುವರಿಕೆ
- Movies
ನಿರ್ದೇಶಕನಿಗೆ ಅವಮಾನ: ಸ್ಟಾರ್ ನಟ ಆಗಿದ್ರೆ ಸುಮ್ಮನೆ ಬಿಡುತ್ತಿದ್ರಾ? ಚಂದ್ರಶೇಖರ್ ಅಸಮಾಧಾನ
- Finance
ಮುಂದಿನ 6 ತಿಂಗಳಿನಲ್ಲಿ ದೆಹಲಿಯ ಎಲ್ಲಾ ಸರ್ಕಾರಿ ಕಾರುಗಳು, ಎಲೆಕ್ಟ್ರಿಕ್ ಕಾರುಗಳಾಗಿ ಬದಲಾಗಲಿವೆ!
- Education
MCL Recruitment 2021: 8 ಸಾಮಾನ್ಯ ವೈದ್ಯಕೀಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Sports
ಐಪಿಎಲ್ 2021: ರಾಜಸ್ಥಾನ್ ರಾಯಲ್ಸ್ ಜೊತೆ ಇಶ್ ಸೋಧಿ ಒಪ್ಪಂದ
- Lifestyle
ಅರಿಶಿನದ ಈ ಆರೋಗ್ಯ ಪ್ರಯೋಜನಗಳನ್ನು ಕೇಳಿದರೆ, ನೀವೂ ಶಾಕ್ ಆಗ್ತೀರಾ!
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸಫಾರಿ ಎಸ್‌ಯುವಿ ಕಾರಿನ ಮೊದಲ ಟಿವಿ ಜಾಹೀರಾತು ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್
ಟಾಟಾ ಬಹುನೀರಿಕ್ಷಿತ ನ್ಯೂ ಜನರೇಷನ್ ಸಫಾರಿ ಎಸ್‌ಯುವಿ ಕಾರು ಮಾದರಿಯು ಇದೇ ತಿಂಗಳಾಂತ್ಯಕ್ಕೆ ಬಿಡುಗಡೆಯಾಗುತ್ತಿದ್ದು, ಟಾಟಾ ಕಂಪನಿಯು ಹೊಸ ಕಾರಿನ ಮೊದಲ ಟಿವಿ ಜಾಹೀರಾತು ಪ್ರಕಟಿಸುವ ಮೂಲಕ ಎಸ್‌ಯುವಿ ಕಾರು ಮಾರಾಟದಲ್ಲಿ ಹೊಸ ಸಂಚಲನ ಮೂಡಿಸುವ ಸುಳಿವು ನೀಡಿದೆ.

2020ರ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನಗೊಂಡಿದ್ದ ಗ್ರಾವಿಟಾಸ್ ಎಸ್‌ಯುವಿ ಮಾದರಿಯನ್ನೇ ಇದೀಗ ಸಫಾರಿ ಹೆಸರಿನಲ್ಲಿ ರೀ ಬ್ರಾಂಡ್ ಮಾದರಿಯಾಗಿ ರಸ್ತೆಗಿಳಿಸಲಾಗುತ್ತಿದ್ದು, ಈ ಹಿಂದೆ ಎಸ್‌ಯುವಿ ಕಾರು ಮಾರಾಟದಲ್ಲಿ ತನ್ನದೆ ಜನಪ್ರಿಯತೆ ಹೊಂದಿದ್ದ ಸಫಾರಿ ಕಾರು ಮಾದರಿಯನ್ನೇ ಇದೀಗ ಮತ್ತೊಮ್ಮೆ ಮಾರುಕಟ್ಟೆಯಲ್ಲಿ ಹೊಸ ಬದಲಾವಣೆಯೊಂದಿಗೆ ಅಭಿವೃದ್ದಿಗೊಳಿಸಲಾಗಿದೆ.

ಟಾಟಾ ಮೋಟಾರ್ಸ್ ಕಂಪನಿಯು ಸದ್ಯ 2.0 ಯೋಜನೆ ಅಡಿ ಹೊಸ ಕಾರುಗಳತ್ತ ಗಮನಹರಿಸಿದ್ದು, ಹೊಸ ಯೋಜನೆ ಅಡಿಯಲ್ಲೇ 2020ರ ದೆಹಲಿ ಎಕ್ಸ್‌ಪೋದಲ್ಲಿ ಗ್ರಾವಿಟಾಸ್ 7 ಸೀಟರ್ ಎಸ್‌ಯುವಿ ಅನಾವರಣಗೊಳಿಸಿತ್ತು.
ಗ್ರಾವಿಟಾಸ್ ಹೆಸರಿನಲ್ಲೇ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿರುವ ಟಾಟಾ ಮೋಟಾರ್ಸ್ ಕಂಪನಿಯು ಇದೀಗ ಹೊಸ ಕಾರನ್ನು ಈ ಹಿಂದಿನ ಜನಪ್ರಿಯ ಸಫಾರಿ ಮಾದರಿಯ ಹೊಸ ತಲೆಮಾರಿನ ಆವೃತ್ತಿಯಾಗಿ ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದೆ.

ಹೊಸ ತಲೆಮಾರಿನ ಸಫಾರಿ ಮಾದರಿಯು ಎಸ್‌ಯುವಿ ಮಾದರಿಯಲ್ಲೇ ಅತ್ಯುತ್ತಮ ಫೀಚರ್ಸ್‌ಗಳೊಂದಿಗೆ ಅಭಿವೃದ್ದಿಗೊಂಡಿದ್ದು, ಹ್ಯಾರಿಯರ್ ಎಸ್‌ಯುವಿಯ ಮುಂದುವರಿದ ಭಾಗವಾಗಿರುವ ಸಫಾರಿ ಕಾರು ಮೂರನೇ ಸಾಲಿನ ಆಸನದೊಂದಿಗೆ ಫುಲ್ ಸೈಜ್ ಎಸ್‌ಯುವಿ ಪ್ರಿಯರನ್ನು ಸೆಳೆಯಲಿದೆ. OMEGA ಕಾರು ಉತ್ಪಾದನಾ ತಂತ್ರಜ್ಞಾನದ ಮೂಲಕ ಹೊಸ ಕಾರುಗಳ ಅಭಿವೃದ್ದಿಯಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗಿರುವ ಟಾಟಾ ಕಂಪನಿಯು ಹೊಸ ಪ್ಲ್ಯಾಟ್‌ಫಾರ್ಮ್ ಮೂಲಕ ಕಾರುಗಳಲ್ಲಿ ಐಷಾರಾಮಿ ವಿನ್ಯಾಸ, ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ನೀಡುವುದರ ಜೊತೆಗೆ ಎಂಜಿನ್ ಕಾರ್ಯಕ್ಷಮತೆಯಲ್ಲೂ ಗಮನಸೆಳೆಯುತ್ತಿದೆ.

ಸಫಾರಿ ಎಸ್‌ಯುವಿ ಹೊಸ ಕಾರು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ 6 ಸೀಟರ್ ಮತ್ತು 7 ಸೀಟರ್ ಸೌಲಭ್ಯದೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸಲಿದ್ದು, ಪ್ರೀಮಿಯಂ ಫೀಚರ್ಸ್‌ನಲ್ಲೂ ಗಮನಸೆಳೆಯಲಿದೆ.

ಹಾಗೆಯೇ ಹೊಸ ಕಾರಿನಲ್ಲಿ ಸ್ಪೋರ್ಟಿ ಮಾದರಿಯ ಆಸನಗಳೊಂದಿಗೆ ಮಲ್ಟಿ ಫಂಕ್ಷನ್ ಸ್ಟೀರಿಂಗ್ ವೀಲ್ಹ್ ಮೌಂಟೆಡ್, ತ್ರೀ ಜೋನ್ ಕ್ಲೈಮೆಟ್ ಕಂಟ್ರೋಲ್, ವಿವಿಧ ಡ್ರೈವ್ ಮೋಡ್, ಪನೊರಮಿಕ್ ಸನ್‌ರೂಫ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಸೇರಿದಂತೆ ಹಲವು ಪ್ರೀಮಿಯಂ ಫೀಚರ್ಸ್‌ಗಳಿವೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಹೊಸ ಕಾರು ಆವೃತ್ತಿಯು ಪ್ರತಿಸ್ಪರ್ಧಿ ಕಾರು ಮಾದರಿಗಳಾದ ಹ್ಯುಂಡೈ ಟ್ಯೂಸಾನ್, ಮಹೀಂದ್ರಾ ಅಲ್ಟುರಾಸ್ ಜಿ4, ಫೋರ್ಡ್ ಎಂಡೀವರ್ ಜೊತೆಗೆ ಟೊಯೊಟಾ ಫಾರ್ಚೂನರ್ ಕಾರಿಗೂ ಪೈಪೋಟಿ ನೀಡಲಿದ್ದು, ಉತ್ತಮ ಸ್ಥಳಾವಕಾಶದೊಂದಿಗೆ ಎಸ್‌ಯುವಿ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಲಿದೆ.

ಹೊಸ ಸಫಾರಿ ಕಾರಿನಲ್ಲಿ ಹ್ಯಾರಿಯರ್ ಮಾದರಿಯಲ್ಲೇ 2.0-ಲೀಟರ್(1,956 ಸಿಸಿ) 4 ಸಿಲಿಂಡರ್, ಕ್ರೆಯೊಟೆಕ್ ಡೀಸೆಲ್ ಎಂಜಿನ್ ಆಯ್ಕೆ ಹೊಂದಿದ್ದು, 6 ಸ್ಪೀಡ್ ಮ್ಯಾನುವಲ್ ಗೇರ್‍ಬಾಕ್ಸ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ 170-ಬಿಹೆಚ್‍ಪಿ, 350-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದೆ.
MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಎಸ್‌ಯುವಿ ಕಾರುಗಳ ಮಾರಾಟದಲ್ಲಿ ಗಮನಸೆಳೆಯಲಿರುವ ಹೊಸ ಸಫಾರಿ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 19 ಲಕ್ಷದಿಂದ ಟಾಪ್ ಎಂಡ್ ಆವೃತ್ತಿಯು ರೂ. 23 ಲಕ್ಷ ಬೆಲೆ ಹೊಂದಿರಬಹುದೆಂದು ನೀರಿಕ್ಷಿಸಲಾಗಿದೆ.