ಸುರಕ್ಷತೆಗೆ ಒತ್ತು- ಟಾಟಾ ಟಿಯಾಗೋ ಹ್ಯಾಚ್‌ಬ್ಯಾಕ್ ಕಾರು ಮಾರಾಟದಲ್ಲಿ ಭಾರೀ ಹೆಚ್ಚಳ

ಸುರಕ್ಷತೆ ಒತ್ತು- ಟಾಟಾ ಟಿಯಾಗೋ ಹ್ಯಾಚ್‌ಬ್ಯಾಕ್ ಕಾರು ಮಾರಾಟ ಭಾರೀ ಹೆಚ್ಚಳ

ಟಾಟಾ ಮೋಟಾರ್ಸ್ ಕಂಪನಿಯು 2021ರ ಜನವರಿ ಅವಧಿಯಲ್ಲಿನ ತನ್ನ ಕಾರು ಮಾರಾಟ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಟಾಟಾ ಮೋಟಾರ್ಸ್ ಕಂಪನಿಯು ಕಳೆದ ವರ್ಷದ ಜನವರಿ ಅವಧಿಯಲ್ಲಿನ ಕಾರು ಮಾರಾಟಕ್ಕಿಂತಲೂ ಭರ್ಜರಿ ಮುನ್ನಡೆ ಕಾಯ್ದುಕೊಂಡಿದೆ.

ಸುರಕ್ಷತೆ ಒತ್ತು- ಟಾಟಾ ಟಿಯಾಗೋ ಹ್ಯಾಚ್‌ಬ್ಯಾಕ್ ಕಾರು ಮಾರಾಟ ಭಾರೀ ಹೆಚ್ಚಳ

2020ರ ಜನವರಿ ಅವಧಿಯಲ್ಲಿ 13,893 ಯನಿಟ್ ಕಾರುಗಳನ್ನು ಮಾರಾಟ ಮಾಡಿದ್ದ ಟಾಟಾ ಕಂಪನಿಯು 2021ರ ಜನವರಿಯಲ್ಲಿ 26,980 ಯುನಿಟ್ ಕಾರುಗಳನ್ನು ಮಾರಾಟ ಮಾಡುವ ಮೂಲಕ ಶೇ.94 ರಷ್ಟು ಹೆಚ್ಚು ಬೇಡಿಕೆ ಪಡೆದುಕೊಂಡಿದೆ. ತಿಂಗಳ ವಾಹನ ಮಾರಾಟದಲ್ಲಿ ಶೇ.20 ರಷ್ಟು ಬೆಳವಣಿಗೆ ಸಾಧಿಸಿರುವ ಟಾಟಾ ಕಂಪನಿಯು ಪ್ರಮುಖ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದ್ದು, ಮುಂಬರುವ ದಿನಗಳಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರುಗಳು ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಿದೆ.

ಸುರಕ್ಷತೆ ಒತ್ತು- ಟಾಟಾ ಟಿಯಾಗೋ ಹ್ಯಾಚ್‌ಬ್ಯಾಕ್ ಕಾರು ಮಾರಾಟ ಭಾರೀ ಹೆಚ್ಚಳ

ಸದ್ಯ ಮಾರುತಿ ಸುಜುಕಿ ಮತ್ತು ಹ್ಯುಂಡೈ ನಂತರ ಮೂರನೇ ಸ್ಥಾನಕ್ಕೇರಿರುವ ಟಾಟಾ ಕಂಪನಿಯು ಮುಂಬರುವ ದಿನಗಳಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರುಗಳ ಮೂಲಕ ಪ್ರತಿ ತಿಂಗಳು 40 ಸಾವಿರ ಯುನಿಟ್ ಮಾರಾಟ ಗುರಿಹೊಂದಿದೆ.

ಸುರಕ್ಷತೆ ಒತ್ತು- ಟಾಟಾ ಟಿಯಾಗೋ ಹ್ಯಾಚ್‌ಬ್ಯಾಕ್ ಕಾರು ಮಾರಾಟ ಭಾರೀ ಹೆಚ್ಚಳ

2020 ರ ಡಿಸೆಂಬರ್‌ ಅವಧಿಯಲ್ಲಿನ ಮಾರಾಟಕ್ಕೆ ಹೋಲಿಸಿದರೆ ತಿಂಗಳ ಕಾರು ಮಾರಾಟದಲ್ಲೂ ಗಮನಾರ್ಹ ಬೆಳವಣಿಗೆಯನ್ನು ದಾಖಲಿಸಿರುವ ಟಿಯಾಗೋ ಕಾರು ಮಾದರಿಯು ಶೇ.13.9 ರಷ್ಟು ಬೆಳವಣಿಗೆ ಸಾಧಿಸಿದ್ದು, ಎಂಟ್ರಿ ಲೆವಲ್‌ನಲ್ಲೂ ಗ್ಲೋಬಲ್ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗರಿಷ್ಠ 4 ಸ್ಟಾರ್ ರೇಟಿಂಗ್ಸ್ ಪಡೆದಿರುವ ಹೊಸ ಕಾರು ತಿಂಗಳಿನಿಂದ ತಿಂಗಳಿಗೆ ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಳ್ಳಲು ಪ್ರಮುಖ ಕಾರಣವಾಗಿದೆ.

ಸುರಕ್ಷತೆ ಒತ್ತು- ಟಾಟಾ ಟಿಯಾಗೋ ಹ್ಯಾಚ್‌ಬ್ಯಾಕ್ ಕಾರು ಮಾರಾಟ ಭಾರೀ ಹೆಚ್ಚಳ

ಟಿಯಾಗೋ ಕಾರು ಮಾದರಿಯು ಸದ್ಯ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 4.86 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 6.85 ಲಕ್ಷ ಬೆಲೆ ಹೊಂದಿದ್ದು, 1.2-ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆ ಮಾರಾಟವಾಗುತ್ತಿದೆ.

ಸುರಕ್ಷತೆ ಒತ್ತು- ಟಾಟಾ ಟಿಯಾಗೋ ಹ್ಯಾಚ್‌ಬ್ಯಾಕ್ ಕಾರು ಮಾರಾಟ ಭಾರೀ ಹೆಚ್ಚಳ

ಜೊತೆಗೆ ಗ್ರಾಹಕರ ಬೇಡಿಕೆಯೆಂತೆ 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಮಾದರಿಗಳನ್ನು ಖರೀದಿ ಮಾಡಬಹುದಾಗಿದ್ದು, ಇತ್ತೀಚೆಗೆ ಹೊಸ ಕಾರಿನಲ್ಲಿ ಗ್ರಾಹಕರ ಆಕರ್ಷಣೆಗಾಗಿ ಸ್ಪೆಷಲ್ ಎಡಿಷನ್ ಸಹ ಬಿಡುಗಡೆ ಮಾಡಲಾಗಿದೆ.

ಸುರಕ್ಷತೆ ಒತ್ತು- ಟಾಟಾ ಟಿಯಾಗೋ ಹ್ಯಾಚ್‌ಬ್ಯಾಕ್ ಕಾರು ಮಾರಾಟ ಭಾರೀ ಹೆಚ್ಚಳ

ಎಂಟ್ರಿ ಲೆವಲ್ ಹ್ಯಾಚ್‌ಬ್ಯಾಕ್ ಖರೀದಿದಾರರನ್ನು ಸೆಳೆಯಲು ಲಿಮಿಟೆಡ್ ಎಡಿಷನ್ ಮೂಲಕ ಎಕ್ಸ್‌ಟಿ ಮಾದರಿಯಲ್ಲಿ ಕೆಲವು ಹೆಚ್ಚುವರಿ ಫೀಚರ್ಸ್ ಸೇರಿಸಲಾಗಿದ್ದು, ಹೊಸ ಆವೃತ್ತಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 5.79 ಲಕ್ಷ ಬೆಲೆ ಹೊಂದಿದೆ. ಲಿಮಿಟೆಡ್ ಎಡಿಷನ್ ಮಾದರಿಯು ಎಕ್ಸ್‌ಟಿ ಮತ್ತು ಎಕ್ಸ್‌ಜೆಡ್ ಮಾದರಿಗಳ ನಡುವಿನ ಸ್ಥಾನ ಹೊಂದಿದ್ದು, ಎಕ್ಸ್‌ಟಿ ಮಾದರಿಗಿಂತಲೂ ಕೆಲವು ಪ್ರಮುಖ ಫೀಚರ್ಸ್‌ಗಳನ್ನು ಒಳಗೊಂಡಿರಲಿದೆ.

MOST READ: 2021ರಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಎಸ್‌ಯುವಿ ಕಾರುಗಳಿವು..!

ಸುರಕ್ಷತೆ ಒತ್ತು- ಟಾಟಾ ಟಿಯಾಗೋ ಹ್ಯಾಚ್‌ಬ್ಯಾಕ್ ಕಾರು ಮಾರಾಟ ಭಾರೀ ಹೆಚ್ಚಳ

ಟಿಯಾಗೋ ಲಿಮಿಟೆಡ್ ಎಡಿಷನ್‌ನಲ್ಲಿ ಟಾಟಾ ಕಂಪನಿಯು 14-ಇಂಚಿನ ಹೊಸ ವಿನ್ಯಾಸದ ಅಲಾಯ್ ವೀಲ್ಹ್, ವಾಯ್ಸ್ ಕಮಾಂಡ್ ಸರ್ಪೊಟ್ ಮಾಡುವ ಇನ್ಪೋಟೈನ್‌ಮೆಂಟ್ ಸಿಸ್ಟಂ, ಆನ್ ಬೋರ್ಡ್ ನ್ಯಾವಿಷನ್ ಸೌಲಭ್ಯವನ್ನು ಪಡೆದುಕೊಂಡಿದೆ.

ಸುರಕ್ಷತೆ ಒತ್ತು- ಟಾಟಾ ಟಿಯಾಗೋ ಹ್ಯಾಚ್‌ಬ್ಯಾಕ್ ಕಾರು ಮಾರಾಟ ಭಾರೀ ಹೆಚ್ಚಳ

ಇದರ ಹೊರತಾಗಿ ಹೊಸ ಕಾರಿನಲ್ಲಿ ಫೀಚರ್ಸ್‌ಗಳು ಎಕ್ಸ್‌ಟಿ ಮಾದರಿಗಳಿಗೆ ಸಮನಾಗಿದ್ದು, ಹೆಚ್ಚುವರಿ ಫೀಚರ್ಸ್‌ಗಳಿಂದಾಗಿ ಲಿಮಿಟೆಡ್ ಎಡಿಷನ್ ಮಾದರಿಯು ಎಕ್ಸ್‌ಟಿ ಆವೃತ್ತಿಗಿಂತಲೂ ರೂ. 29 ಸಾವಿರ ದುಬಾರಿಯಾಗಿದ್ದರೆ ಎಕ್ಸ್‌ಜೆಡ್ ಆವೃತ್ತಿಗಿಂತಲೂ ರೂ. 16 ಸಾವಿರ ಕಡಿಮೆ ಬೆಲೆಗೆ ಖರೀದಿಗೆ ಲಭ್ಯವಿದೆ.

MOST READ: ನೆಕ್ಸಾನ್ ಇವಿ ಮತ್ತು ಟಿಗೋರ್ ಇವಿ ಕಾರು ಖರೀದಿದಾರರಿಗೆ ರೂ. 3 ಲಕ್ಷದ ತನಕ ಸಬ್ಸಡಿ

ಸುರಕ್ಷತೆ ಒತ್ತು- ಟಾಟಾ ಟಿಯಾಗೋ ಹ್ಯಾಚ್‌ಬ್ಯಾಕ್ ಕಾರು ಮಾರಾಟ ಭಾರೀ ಹೆಚ್ಚಳ

ಲಿಮಿಟೆಡ್ ಎಡಿಷನ್ ಕಾರಿನಲ್ಲಿ ಸ್ಟ್ಯಾಂಡರ್ಡ್ ಮಾದರಿಯೆಂತೆ 14-ಇಂಚಿನ ಅಲಾಯ್ ವೀಲ್ಹ್ ನೀಡಿದ್ದರೂ ಬ್ಲ್ಯಾಕ್ಔಟ್ ವಿನ್ಯಾಸ ಪಡೆದುಕೊಂಡಿದ್ದು, ಟಿಯಾಗೋ ಟಾಪ್ ಎಂಡ್ ಮಾದರಿಯಾದ ಎಕ್ಸ್‌ಜೆಡ್ ಪ್ಲಸ್‌ನಲ್ಲಿ ಮಾತ್ರ 15-ಇಂಚಿನ ಅಯಾಲ್ ವೀಲ್ಹ್ ಹೊಂದಿದೆ. ಇದರ ಹೊರತಾಗಿ ಲಿಮಿಟೆಡ್ ಎಡಿಷನ್ ಮಾದರಿಯು ಸ್ಟ್ಯಾಂಡರ್ಡ್ ಮಾದರಿಯಲ್ಲಿರುವ ತಾಂತ್ರಿಕ ಅಂಶಗಳನ್ನೇ ಪಡೆದುಕೊಂಡಿದ್ದು, ಎಂಟ್ರಿ ಲೆವಲ್ ಹ್ಯಾಚ್‌ಬ್ಯಾಕ್ ಕಾರು ಖರೀದಿದಾರರನ್ನು ಸೆಳೆಯಲು ಹೊಸ ಆವೃತ್ತಿಯನ್ನು ಪರಿಚಯಿಸಲಾಗಿದೆ.

Article Published On: Thursday, February 11, 2021, 21:00 [IST]
English summary
Tata Tiago Sales Increased By 60 Per cent In January 2021. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+