ಸಿಎನ್‌ಜಿ ಟಿಗೋರ್ ಮತ್ತು ಟಿಯಾಗೋ ಕಾರುಗಳ ಬಿಡುಗಡೆಗೆ ಸಜ್ಜಾದ ಟಾಟಾ ಮೋಟಾರ್ಸ್

ಡೀಸೆಲ್ ಮತ್ತು ಪೆಟ್ರೋಲ್ ಬಳಕೆಯನ್ನು ತಗ್ಗಿಸಿ ಪರಿಸರಕ್ಕೆ ಪೂರಕವಾದ ಸಿಎನ್‌ಜಿ ಮತ್ತು ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸಲಾಗುತ್ತಿದ್ದು, ಬಹುತೇಕ ವಾಹನ ಮಾರಾಟ ಕಂಪನಿಗಳು ಕೂಡಾ ಭವಿಷ್ಯದ ವಾಹನ ಮಾದರಿಗಳ ಬಗೆಗೆ ಹೆಚ್ಚಿನ ಒತ್ತು ನೀಡುತ್ತಿವೆ.

ಸಿಎನ್‌ಜಿ ಟಿಗೋರ್ ಮತ್ತು ಟಿಯಾಗೋ ಕಾರುಗಳ ಬಿಡುಗಡೆಗೆ ಸಜ್ಜಾದ ಟಾಟಾ ಮೋಟಾರ್ಸ್

ಹೊಸ ಕಾರುಗಳ ಮಾರಾಟದಲ್ಲಿ ಈಗಾಗಲೇ ಹಲವಾರು ಬದಲಾವಣೆಗಳನ್ನು ಪರಿಚಯಿಸುವ ಮೂಲಕ ಮಾರುಕಟ್ಟೆಯಲ್ಲಿ ಮುಂಚೂಣಿ ಸಾಧಿಸುತ್ತಿರುವ ಟಾಟಾ ಕಂಪನಿಯು ಸಹ ತನ್ನ ಪ್ರಮುಖ ಕಾರುಗಳಲ್ಲಿ ಡೀಸೆಲ್ ಮತ್ತು ಪೆಟ್ರೋಲ್ ಮಾದರಿಗಳ ಜೊತೆಗೆ ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲೂ ಗಮನಸೆಳೆಯುತ್ತಿದೆ. ಪ್ರಮುಖ ಕಾರುಗಳಲ್ಲಿ ಈಗಾಗಲೇ ಎಲೆಕ್ಟ್ರಿಕ್ ಆವೃತ್ತಿಯನ್ನು ಮಾರಾಟ ಮಾಡುತ್ತಿರುವ ಟಾಟಾ ಕಂಪನಿಯು ಸಹ ಮೊದಲ ಬಾರಿಗೆ ಟಿಗೋರ್ ಮತ್ತು ಟಿಯಾಗೋ ಮಾದರಿಗಳಲ್ಲಿ ಸಿಎನ್‌ಜಿ ಆವೃತ್ತಿಗಳನ್ನು ಮಾರಾಟ ಮಾಡಲು ನಿರ್ಧರಿಸಿದೆ.

ಸಿಎನ್‌ಜಿ ಟಿಗೋರ್ ಮತ್ತು ಟಿಯಾಗೋ ಕಾರುಗಳ ಬಿಡುಗಡೆಗೆ ಸಜ್ಜಾದ ಟಾಟಾ ಮೋಟಾರ್ಸ್

ಸಂಕುಚಿತ ನೈಸರ್ಗಿಕ ಅನಿಲ (ಸಿಎನ್‍ಜಿ) ತಂತ್ರಜ್ಞಾನವನ್ನು ಅಳವಡಿಸಿ ಈಗಾಗಲೇ ಟಿಗೋರ್ ಮತ್ತು ಟಿಯಾಗೋ ಕಾರುಗಳಲ್ಲಿ ಅಳವಡಿಸಿ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಕೈಗೊಂಡಿದ್ದು, ಸಿಎನ್‌ಜಿ ಆವೃತ್ತಿಗಳು ಅತಿ ಕಡಿಮೆ ಮಾಲಿನ್ಯ ಉತ್ಪತ್ತಿಯೊಂದಿಗೆ ಹೆಚ್ಚಿನ ಮಟ್ಟದ ಮೈಲೇಜ್ ಹಿಂದಿರುಗಿಸುತ್ತವೆ.

ಸಿಎನ್‌ಜಿ ಟಿಗೋರ್ ಮತ್ತು ಟಿಯಾಗೋ ಕಾರುಗಳ ಬಿಡುಗಡೆಗೆ ಸಜ್ಜಾದ ಟಾಟಾ ಮೋಟಾರ್ಸ್

ಸಿಎನ್‍ಜಿ ತಂತ್ರಜ್ಞಾನ ಪ್ರೇರಿತ ವಾಹನ ಮಾರಾಟದಲ್ಲಿ ಈಗಾಗಲೇ ಮಾರುತಿ ಸುಜುಕಿ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ವಾಹನಗಳಿಗೆ ಪೂರಕವಾಗಿ ಸಿಎನ್‌ಜಿ ಪೂರೈಕೆಯ ಕೇಂದ್ರಗಳನ್ನು ಸಹ ಹೆಚ್ಚಿಸುತ್ತಿರುವುದು ಹೊಸ ಮಾದರಿಗಳತ್ತ ಗ್ರಾಹಕರು ಗಮನಹರಿಸುತ್ತಿದ್ದಾರೆ.

ಸಿಎನ್‌ಜಿ ಟಿಗೋರ್ ಮತ್ತು ಟಿಯಾಗೋ ಕಾರುಗಳ ಬಿಡುಗಡೆಗೆ ಸಜ್ಜಾದ ಟಾಟಾ ಮೋಟಾರ್ಸ್

ಈ ನಿಟ್ಟಿನಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ತನ್ನ ಎಂಟ್ರಿ ಲೆವಲ್ ಹ್ಯಾಚ್‌ಬ್ಯಾಕ್ ಮಾದರಿಯಾದ ಟಿಯಾಗೋ ಮತ್ತು ಕಂಪ್ಯಾಕ್ಟ್ ಸೆಡಾನ್ ಮಾದರಿಯಾದ ಟಿಗೋರ್ ಆವೃತ್ತಿಗಳಲ್ಲಿ ಸಿಎನ್‌ಜಿ ತಂತ್ರಜ್ಞಾನವನ್ನು ಅಳವಡಿಸಲು ನಿರ್ಧರಿಸಿದ್ದು, ಶೀಘ್ರದಲ್ಲೇ ಹೊಸ ಕಾರುಗಳು ಮಾರುಕಟ್ಟೆ ಪ್ರವೇಶಿಸಲಿವೆ. ಟಿಗೋರ್ ಮತ್ತು ಟಿಯಾಗೋ ಕಾರುಗಳಲ್ಲಿ ಸದ್ಯಕ್ಕೆ ಪೆಟ್ರೋಲ್ ಮಾದರಿಗಳನ್ನು ಮಾತ್ರವೇ ಮಾರಾಟ ಮಾಡಲಾಗುತ್ತಿದ್ದು, ಬಿಎಸ್ 6 ಜಾರಿ ನಂತರ ಡೀಸೆಲ್ ಎಂಜಿನ್ ಅನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ.

ಸಿಎನ್‌ಜಿ ಟಿಗೋರ್ ಮತ್ತು ಟಿಯಾಗೋ ಕಾರುಗಳ ಬಿಡುಗಡೆಗೆ ಸಜ್ಜಾದ ಟಾಟಾ ಮೋಟಾರ್ಸ್

ಡೀಸೆಲ್ ಎಂಜಿನ್ ಸ್ಥಗಿತದ ನಂತರ ಪೆಟ್ರೋಲ್ ಮಾದರಿಗಳನ್ನು ಸಹ ಮುಂಬರುವ ಕೆಲವೇ ವರ್ಷಗಳಲ್ಲಿ ಹಂತ-ಹಂತವಾಗಿ ಸ್ಥಗಿತಗೊಳಿಸುವ ನಿರ್ಧರಿಸಿರುವ ಕಾರು ಕಂಪನಿಗಳು ಸಂಪೂರ್ಣವಾಗಿ ಎಲೆಕ್ಟ್ರಿಕ್ ಮತ್ತು ನೈಸರ್ಗಿಕ ಅನಿಲಗಳಿಂದ ಚಾಲನೆ ಮಾಡಬಹುದಾದ ವಿವಿಧ ತಂತ್ರಜ್ಞಾನ ಪ್ರೇರಣೆಯ ವಾಹನಗಳನ್ನು ಬಿಡುಗಡೆ ಮಾಡುವ ಇರಾದೆಯಲ್ಲಿವೆ.

MOST READ: ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಸಿಎನ್‌ಜಿ ಟಿಗೋರ್ ಮತ್ತು ಟಿಯಾಗೋ ಕಾರುಗಳ ಬಿಡುಗಡೆಗೆ ಸಜ್ಜಾದ ಟಾಟಾ ಮೋಟಾರ್ಸ್

ಇನ್ನು ಟಿಗೋರ್ ಮತ್ತು ಟಿಯಾಗೋ ಎರಡು ಮಾದರಿಗಳಲ್ಲೂ ಟಾಟಾ ಮೋಟಾರ್ಸ್ ಕಂಪನಿಯು 1.2-ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆ ನೀಡುತ್ತಿದ್ದು, ಹೊಸದಾಗಿ ಪರಿಚಯಿಸಲಿರುವ ಸಿಎನ್‌ಜಿ ಆಯ್ಕೆಯು ಹೊಸ ಕಾರಿನ ಮಾರಾಟವನ್ನು ಹೆಚ್ಚಿಸಲಿದೆ.

ಸಿಎನ್‌ಜಿ ಟಿಗೋರ್ ಮತ್ತು ಟಿಯಾಗೋ ಕಾರುಗಳ ಬಿಡುಗಡೆಗೆ ಸಜ್ಜಾದ ಟಾಟಾ ಮೋಟಾರ್ಸ್

ಸಿಎನ್‌ಜಿ ಆವೃತ್ತಿಯನ್ನು ಟಿಗೋರ್ ಮತ್ತು ಟಿಯಾಗೋ ಕಾರಿನ ಕ್ರಮಾಂಕದ ಮಾದರಿಗಳಲ್ಲಿ ಜೋಡಣೆ ಮಾಡಲಾಗುತ್ತಿದ್ದು, ಹೊಸ ಕಾರು ಮಾದರಿಗಳು ಸ್ಟ್ಯಾಂಡರ್ಡ್ ಮಾದರಿಗಿಂತ ತುಸು ದುಬಾರಿಯಾದರೂ ಇಂಧನ ಉತ್ತಮ ಇಂಧನ ದಕ್ಷತೆಯೊಂದಿಗೆ ನಿರ್ವಹಣಾ ವೆಚ್ಚವನ್ನು ತಗ್ಗಿಸಲಿವೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಸಿಎನ್‌ಜಿ ಟಿಗೋರ್ ಮತ್ತು ಟಿಯಾಗೋ ಕಾರುಗಳ ಬಿಡುಗಡೆಗೆ ಸಜ್ಜಾದ ಟಾಟಾ ಮೋಟಾರ್ಸ್

ಸದ್ಯ ಟಿಗೋರ್ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 4.85 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 6.84 ಲಕ್ಷ ಬೆಲೆ ಹೊಂದಿದ್ದರೆ ಟಿಯಾಗೋ ಕಾರು ಮಾದರಿಯು ಆರಂಭಿಕವಾಗಿ ರೂ. 5.49 ಲಕ್ಷದಿಂದ ರೂ. 7.63 ಲಕ್ಷ ಬೆಲೆ ಹೊಂದಿದೆ.

Most Read Articles

Kannada
English summary
Tata Tiago, Tigor CNG Models Spotted Testing Again. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X