Just In
- 8 hrs ago
ಕೊನೆಯ ಆಸೆಯೆಂತೆ ರಾಜಕುಮಾರ ಪ್ರಿನ್ಸ್ ಫಿಲಿಪ್ ಅಂತಿಮ ಯಾತ್ರೆಗೆ ಸಿದ್ದವಾಗಿದೆ ಮಾಡಿಫೈ ಲ್ಯಾಂಡ್ ರೋವರ್
- 9 hrs ago
ಜಪಾನ್ನಲ್ಲಿ ಬಿಡುಗಡೆಯಾಯ್ತು ಮೇಡ್ ಇನ್ ಇಂಡಿಯಾ 2021ರ ಸುಜುಕಿ ಜಿಕ್ಸರ್ 250 ಬೈಕ್
- 10 hrs ago
ಆಕರ್ಷಕ ಬೆಲೆಯಲ್ಲಿ ದೇಶದ ಮೊದಲ ಹೈಬ್ರಿಡ್ ಟ್ರ್ಯಾಕ್ಟರ್ ಬಿಡುಗಡೆ
- 10 hrs ago
ಬೆಲೆ ಏರಿಕೆ ಪಡೆದುಕೊಂಡ ಟಿವಿಎಸ್ ಸ್ಟಾರ್ ಸಿಟಿ ಪ್ಲಸ್ ಬೈಕ್
Don't Miss!
- News
ಭಾರತದಲ್ಲಿ ಲಸಿಕೆ ಉತ್ಸವದ 4ನೇ ದಿನ ಲಸಿಕೆ ಪಡೆದ ಫಲಾನುಭವಿಗಳೆಷ್ಟು?
- Lifestyle
ಗುರುವಾರದ ದಿನ ಭವಿಷ್ಯ: ಈ ದಿನ ಹೇಗಿದೆ ನಿಮ್ಮ ರಾಶಿಫಲ
- Sports
ಐಪಿಎಲ್ ಇತಿಹಾಸದಲ್ಲಿ ಅಪರೂಪದ ದಾಖಲೆ ಬರೆದ ಆರ್ಸಿಬಿ!
- Finance
ಚಿನ್ನ, ಬೆಳ್ಳಿ ಸ್ವಲ್ಪ ಕುಸಿತ: ಏಪ್ರಿಲ್ 14ರಂದು ಎಲ್ಲೆಡೆ ಬೆಲೆ ಎಷ್ಟಿದೆ?
- Movies
40, 50, 60ರ ಸೀಕ್ರೆಟ್ ಬಿಚ್ಚಿಟ್ಟ ಕ್ರೇಜಿಸ್ಟಾರ್ ರವಿಚಂದ್ರನ್
- Education
SSLC Exams 2021: ಸಿಬಿಎಸ್ಇ ಪರೀಕ್ಷೆ ರದ್ದು ಬೆನ್ನಲ್ಲೇ ಎಸ್ಎಸ್ಎಲ್ಸಿ ಪರೀಕ್ಷೆ ಊಹಾಪೋಹ: ಸುರೇಶ್ ಕುಮಾರ್ ಸ್ಪಷ್ಟನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸಿಎನ್ಜಿ ಟಿಗೋರ್ ಮತ್ತು ಟಿಯಾಗೋ ಕಾರುಗಳ ಬಿಡುಗಡೆಗೆ ಸಜ್ಜಾದ ಟಾಟಾ ಮೋಟಾರ್ಸ್
ಡೀಸೆಲ್ ಮತ್ತು ಪೆಟ್ರೋಲ್ ಬಳಕೆಯನ್ನು ತಗ್ಗಿಸಿ ಪರಿಸರಕ್ಕೆ ಪೂರಕವಾದ ಸಿಎನ್ಜಿ ಮತ್ತು ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸಲಾಗುತ್ತಿದ್ದು, ಬಹುತೇಕ ವಾಹನ ಮಾರಾಟ ಕಂಪನಿಗಳು ಕೂಡಾ ಭವಿಷ್ಯದ ವಾಹನ ಮಾದರಿಗಳ ಬಗೆಗೆ ಹೆಚ್ಚಿನ ಒತ್ತು ನೀಡುತ್ತಿವೆ.

ಹೊಸ ಕಾರುಗಳ ಮಾರಾಟದಲ್ಲಿ ಈಗಾಗಲೇ ಹಲವಾರು ಬದಲಾವಣೆಗಳನ್ನು ಪರಿಚಯಿಸುವ ಮೂಲಕ ಮಾರುಕಟ್ಟೆಯಲ್ಲಿ ಮುಂಚೂಣಿ ಸಾಧಿಸುತ್ತಿರುವ ಟಾಟಾ ಕಂಪನಿಯು ಸಹ ತನ್ನ ಪ್ರಮುಖ ಕಾರುಗಳಲ್ಲಿ ಡೀಸೆಲ್ ಮತ್ತು ಪೆಟ್ರೋಲ್ ಮಾದರಿಗಳ ಜೊತೆಗೆ ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲೂ ಗಮನಸೆಳೆಯುತ್ತಿದೆ. ಪ್ರಮುಖ ಕಾರುಗಳಲ್ಲಿ ಈಗಾಗಲೇ ಎಲೆಕ್ಟ್ರಿಕ್ ಆವೃತ್ತಿಯನ್ನು ಮಾರಾಟ ಮಾಡುತ್ತಿರುವ ಟಾಟಾ ಕಂಪನಿಯು ಸಹ ಮೊದಲ ಬಾರಿಗೆ ಟಿಗೋರ್ ಮತ್ತು ಟಿಯಾಗೋ ಮಾದರಿಗಳಲ್ಲಿ ಸಿಎನ್ಜಿ ಆವೃತ್ತಿಗಳನ್ನು ಮಾರಾಟ ಮಾಡಲು ನಿರ್ಧರಿಸಿದೆ.

ಸಂಕುಚಿತ ನೈಸರ್ಗಿಕ ಅನಿಲ (ಸಿಎನ್ಜಿ) ತಂತ್ರಜ್ಞಾನವನ್ನು ಅಳವಡಿಸಿ ಈಗಾಗಲೇ ಟಿಗೋರ್ ಮತ್ತು ಟಿಯಾಗೋ ಕಾರುಗಳಲ್ಲಿ ಅಳವಡಿಸಿ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಕೈಗೊಂಡಿದ್ದು, ಸಿಎನ್ಜಿ ಆವೃತ್ತಿಗಳು ಅತಿ ಕಡಿಮೆ ಮಾಲಿನ್ಯ ಉತ್ಪತ್ತಿಯೊಂದಿಗೆ ಹೆಚ್ಚಿನ ಮಟ್ಟದ ಮೈಲೇಜ್ ಹಿಂದಿರುಗಿಸುತ್ತವೆ.

ಸಿಎನ್ಜಿ ತಂತ್ರಜ್ಞಾನ ಪ್ರೇರಿತ ವಾಹನ ಮಾರಾಟದಲ್ಲಿ ಈಗಾಗಲೇ ಮಾರುತಿ ಸುಜುಕಿ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ವಾಹನಗಳಿಗೆ ಪೂರಕವಾಗಿ ಸಿಎನ್ಜಿ ಪೂರೈಕೆಯ ಕೇಂದ್ರಗಳನ್ನು ಸಹ ಹೆಚ್ಚಿಸುತ್ತಿರುವುದು ಹೊಸ ಮಾದರಿಗಳತ್ತ ಗ್ರಾಹಕರು ಗಮನಹರಿಸುತ್ತಿದ್ದಾರೆ.

ಈ ನಿಟ್ಟಿನಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ತನ್ನ ಎಂಟ್ರಿ ಲೆವಲ್ ಹ್ಯಾಚ್ಬ್ಯಾಕ್ ಮಾದರಿಯಾದ ಟಿಯಾಗೋ ಮತ್ತು ಕಂಪ್ಯಾಕ್ಟ್ ಸೆಡಾನ್ ಮಾದರಿಯಾದ ಟಿಗೋರ್ ಆವೃತ್ತಿಗಳಲ್ಲಿ ಸಿಎನ್ಜಿ ತಂತ್ರಜ್ಞಾನವನ್ನು ಅಳವಡಿಸಲು ನಿರ್ಧರಿಸಿದ್ದು, ಶೀಘ್ರದಲ್ಲೇ ಹೊಸ ಕಾರುಗಳು ಮಾರುಕಟ್ಟೆ ಪ್ರವೇಶಿಸಲಿವೆ. ಟಿಗೋರ್ ಮತ್ತು ಟಿಯಾಗೋ ಕಾರುಗಳಲ್ಲಿ ಸದ್ಯಕ್ಕೆ ಪೆಟ್ರೋಲ್ ಮಾದರಿಗಳನ್ನು ಮಾತ್ರವೇ ಮಾರಾಟ ಮಾಡಲಾಗುತ್ತಿದ್ದು, ಬಿಎಸ್ 6 ಜಾರಿ ನಂತರ ಡೀಸೆಲ್ ಎಂಜಿನ್ ಅನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ.

ಡೀಸೆಲ್ ಎಂಜಿನ್ ಸ್ಥಗಿತದ ನಂತರ ಪೆಟ್ರೋಲ್ ಮಾದರಿಗಳನ್ನು ಸಹ ಮುಂಬರುವ ಕೆಲವೇ ವರ್ಷಗಳಲ್ಲಿ ಹಂತ-ಹಂತವಾಗಿ ಸ್ಥಗಿತಗೊಳಿಸುವ ನಿರ್ಧರಿಸಿರುವ ಕಾರು ಕಂಪನಿಗಳು ಸಂಪೂರ್ಣವಾಗಿ ಎಲೆಕ್ಟ್ರಿಕ್ ಮತ್ತು ನೈಸರ್ಗಿಕ ಅನಿಲಗಳಿಂದ ಚಾಲನೆ ಮಾಡಬಹುದಾದ ವಿವಿಧ ತಂತ್ರಜ್ಞಾನ ಪ್ರೇರಣೆಯ ವಾಹನಗಳನ್ನು ಬಿಡುಗಡೆ ಮಾಡುವ ಇರಾದೆಯಲ್ಲಿವೆ.
MOST READ: ಕ್ರ್ಯಾಶ್ ಟೆಸ್ಟಿಂಗ್ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಇನ್ನು ಟಿಗೋರ್ ಮತ್ತು ಟಿಯಾಗೋ ಎರಡು ಮಾದರಿಗಳಲ್ಲೂ ಟಾಟಾ ಮೋಟಾರ್ಸ್ ಕಂಪನಿಯು 1.2-ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆ ನೀಡುತ್ತಿದ್ದು, ಹೊಸದಾಗಿ ಪರಿಚಯಿಸಲಿರುವ ಸಿಎನ್ಜಿ ಆಯ್ಕೆಯು ಹೊಸ ಕಾರಿನ ಮಾರಾಟವನ್ನು ಹೆಚ್ಚಿಸಲಿದೆ.

ಸಿಎನ್ಜಿ ಆವೃತ್ತಿಯನ್ನು ಟಿಗೋರ್ ಮತ್ತು ಟಿಯಾಗೋ ಕಾರಿನ ಕ್ರಮಾಂಕದ ಮಾದರಿಗಳಲ್ಲಿ ಜೋಡಣೆ ಮಾಡಲಾಗುತ್ತಿದ್ದು, ಹೊಸ ಕಾರು ಮಾದರಿಗಳು ಸ್ಟ್ಯಾಂಡರ್ಡ್ ಮಾದರಿಗಿಂತ ತುಸು ದುಬಾರಿಯಾದರೂ ಇಂಧನ ಉತ್ತಮ ಇಂಧನ ದಕ್ಷತೆಯೊಂದಿಗೆ ನಿರ್ವಹಣಾ ವೆಚ್ಚವನ್ನು ತಗ್ಗಿಸಲಿವೆ.
MOST READ: ಪ್ರತಿ ಚಾರ್ಜ್ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್ಯುವಿ..!

ಸದ್ಯ ಟಿಗೋರ್ ಕಾರು ಮಾದರಿಯು ದೆಹಲಿ ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ. 4.85 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 6.84 ಲಕ್ಷ ಬೆಲೆ ಹೊಂದಿದ್ದರೆ ಟಿಯಾಗೋ ಕಾರು ಮಾದರಿಯು ಆರಂಭಿಕವಾಗಿ ರೂ. 5.49 ಲಕ್ಷದಿಂದ ರೂ. 7.63 ಲಕ್ಷ ಬೆಲೆ ಹೊಂದಿದೆ.