ಜಿಪ್‌ಟ್ರಾನ್ ತಂತ್ರಜ್ಞಾನ ಹೊಂದಿರುವ ಟಿಗೋರ್ ಇವಿ ಅನಾವರಣಗೊಳಿಸಿದ ಟಾಟಾ ಮೋಟಾರ್ಸ್

ಎಲೆಕ್ಟ್ರಿಕ್ ಹೊಸ ಕಾರುಗಳ ಉತ್ಪಾದನೆ ಹೊಸ ಬದಲಾವಣೆಗಳೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಟಿಗೋರ್ ಎಲೆಕ್ಟ್ರಿಕ್ ಆವೃತ್ತಿಯನ್ನು ಹೊಸ ಡ್ರೈವ್ ಟೆಕ್ನಾಲಜಿಯೊಂದಿಗೆ ಉನ್ನತೀಕರಿಸಿ ಅನಾವರಣಗೊಳಿಸಿದೆ.

ಜಿಪ್‌ಟ್ರಾನ್ ತಂತ್ರಜ್ಞಾನ ಹೊಂದಿರುವ ಟಿಗೋರ್ ಇವಿ ಅನಾವರಣಗೊಳಿಸಿದ ಟಾಟಾ ಮೋಟಾರ್ಸ್

ಟಿಗೋರ್ ಎಲೆಕ್ಟ್ರಿಕ್ ಕಾರು ಮಾದರಿಯು ಈಗಾಗಲೇ ಮಾರುಕಟ್ಟೆಯಲ್ಲಿ ಖರೀದಿಗೆ ಲಭ್ಯವಿದ್ದು, ಗ್ರಾಹಕರ ಬೇಡಿಕೆಯೆಂತೆ ಟಿಗೋರ್ ಇವಿ ಕಾರಿನಲ್ಲಿ ಹೊಸ ಬದಲಾವಣೆಗಾಗಿ ತಂದಿರುವ ಟಾಟಾ ಮೋಟಾರ್ಸ್ ಕಂಪನಿಯು ಹೈ ವೋಲ್ಟೆಜ್ ಒಳಗೊಂಡ ಜಿಪ್‌ಟ್ರಾನ್ ಪವರ್‌ಟ್ರೈನ್ ತಂತ್ರಜ್ಞಾನವನ್ನು ಜೋಡಣೆ ಮಾಡಿದೆ.

ಜಿಪ್‌ಟ್ರಾನ್ ತಂತ್ರಜ್ಞಾನ ಹೊಂದಿರುವ ಟಿಗೋರ್ ಇವಿ ಅನಾವರಣಗೊಳಿಸಿದ ಟಾಟಾ ಮೋಟಾರ್ಸ್

ಹೊಸ ಪವರ್‌ಟ್ರೈನ್ ತಂತ್ರಜ್ಞಾನ ಹೊಂದಿರುವ ಟಿಗೋರ್ ಇವಿ ಕಾರು ಅತ್ಯುತ್ತಮ ಪರ್ಫಾಮೆನ್ಸ್‌ನೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸಲಿದ್ದು, ಹೊಸ ಕಾರು ಇದೇ ತಿಂಗಳು 31ರಂದು ಬಿಡುಗಡೆಯಾಗಲಿದೆ.

ಜಿಪ್‌ಟ್ರಾನ್ ತಂತ್ರಜ್ಞಾನ ಹೊಂದಿರುವ ಟಿಗೋರ್ ಇವಿ ಅನಾವರಣಗೊಳಿಸಿದ ಟಾಟಾ ಮೋಟಾರ್ಸ್

ಹೊಸ ಕಾರು ಖರೀದಿಗಾಗಿ ಟಾಟಾ ಕಂಪನಿಯು ರೂ. 21 ಸಾವಿರ ಮುಂಗಡದೊಂದಿಗೆ ಬುಕ್ಕಿಂಗ್ ಆರಂಭಿಸಿದ್ದು, ಹೊಸ ಆವೃತ್ತಿಯು ಹಲವಾರು ಹೊಸ ತಾಂತ್ರಿಕ ಸೌಲಭ್ಯಗಳೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದೆ.

ಜಿಪ್‌ಟ್ರಾನ್ ತಂತ್ರಜ್ಞಾನ ಹೊಂದಿರುವ ಟಿಗೋರ್ ಇವಿ ಅನಾವರಣಗೊಳಿಸಿದ ಟಾಟಾ ಮೋಟಾರ್ಸ್

ನವೀಕೃತ ಟಿಗೋರ್ ಇವಿ ಮಾದರಿಯಲ್ಲಿ ನೆಕ್ಸಾನ್ ಇವಿ ಕಾರಿನಲ್ಲಿ ಬಳಕೆ ಮಾಡಲಾಗುತ್ತಿರುವ ಹೈ-ವೊಲ್ಟೆಜ್ ಆರ್ಕಿಟೆಕ್ಚರ್ ಪ್ರೇರಿತ ಜಿಪ್‌ಟ್ರಾನ್ ತಂತ್ರಜ್ಞಾನವನ್ನು ಜೋಡಣೆ ಮಾಡಲಾಗಿದ್ದು, ಜಿಪ್‌ಟ್ರಾನ್ ಪವರ್‌ಟ್ರೈನ್ ತಂತ್ರಜ್ಞಾನವನ್ನು ಹಲವು ಸುಧಾರಿತ ವೈಶಿಷ್ಟ್ಯತೆಗಳೊಂದಿಗೆ ಅಭಿವೃದ್ದಿಗೊಳಿಸಲಾಗಿದೆ.

ಜಿಪ್‌ಟ್ರಾನ್ ತಂತ್ರಜ್ಞಾನ ಹೊಂದಿರುವ ಟಿಗೋರ್ ಇವಿ ಅನಾವರಣಗೊಳಿಸಿದ ಟಾಟಾ ಮೋಟಾರ್ಸ್

ಜಿಪ್‌ಟ್ರಾನ್ ತಂತ್ರಜ್ಞಾನವು ಹೈ ವೊಲ್ಟೆಜ್ ಸಿಸ್ಟಂ, ದೀರ್ಘಕಾಲಿಕ ಬ್ಯಾಟರಿ ಸಾಮಾರ್ಥ್ಯ, ಅತಿಕಡಿಮೆ ಅವಧಿಯಲ್ಲಿ ಹೆಚ್ಚು ಚಾರ್ಜಿಂಗ್ ಸಿಸ್ಟಂ ಮತ್ತು ಸೂಪಿರಿಯರ್ ಪರ್ಫಾಮೆನ್ಸ್ ವೈಶಿಷ್ಟ್ಯತೆಗಳಿಂದ ಕೂಡಿದೆ.

ಜಿಪ್‌ಟ್ರಾನ್ ತಂತ್ರಜ್ಞಾನ ಹೊಂದಿರುವ ಟಿಗೋರ್ ಇವಿ ಅನಾವರಣಗೊಳಿಸಿದ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಕಂಪನಿಯು ಹೊಸ ಇವಿ ಡ್ರೈವ್ ತಂತ್ರಜ್ಞಾನದ ಸಾಧಕ-ಬಾಧಕಗಳ ಕುರಿತಾಗಿ ಪರೀಕ್ಷಿಸಲು ಸುಮಾರು 10 ಲಕ್ಷ ಕಿ.ಮಿ ವಿಶ್ವಪರ್ಯಟನೆ ಪೂರ್ಣಗೊಳಿಸಿದ ನಂತರವೇ ನೆಕ್ಸಾನ್ ಮಾದರಿಯಲ್ಲಿ ಅಳವಡಿಸಿದ್ದು, ನೆಕ್ಸಾನ್ ಇವಿ ನಂತರ ಇದೀಗ ಟಿಗೋರ್ ಇವಿ ವಿವಿಧ ಮಾದರಿಗಳಲ್ಲಿ ಅಳವಡಿಸಲಾಗುತ್ತಿದೆ.

ಜಿಪ್‌ಟ್ರಾನ್ ತಂತ್ರಜ್ಞಾನ ಹೊಂದಿರುವ ಟಿಗೋರ್ ಇವಿ ಅನಾವರಣಗೊಳಿಸಿದ ಟಾಟಾ ಮೋಟಾರ್ಸ್

ಜಿಪ್‌ಟ್ರಾನ್ ತಂತ್ರಜ್ಞಾನವು ಟಾಟಾ ಮೋಟಾರ್ಸ್ ಕಂಪನಿಯನ್ನು ಜಾಗತಿಕ ಮಟ್ಟದಲ್ಲಿ ಗಮನಸೆಳೆಯುವಂತೆ ಮಾಡಿದ್ದು, ಎಲೆಕ್ಟ್ರಿಕ್ ಕಾರುಗಳ ಕಾರ್ಯಕ್ಷಮತೆ, ಬ್ಯಾಟರಿ ದಕ್ಷತೆ ಮತ್ತು ಗ್ರಾಹಕರ ಸ್ನೇಹಿ ಎಲೆಕ್ಟ್ರಿಕ್ ಕಾರುಗಳ ಅಭಿವೃದ್ದಿಗೊಳಿಸುತ್ತಿದೆ.

ಜಿಪ್‌ಟ್ರಾನ್ ತಂತ್ರಜ್ಞಾನ ಹೊಂದಿರುವ ಟಿಗೋರ್ ಇವಿ ಅನಾವರಣಗೊಳಿಸಿದ ಟಾಟಾ ಮೋಟಾರ್ಸ್

ಜೊತೆಗೆ ಜಿಪ್‌ಟ್ರಾನ್ ತಂತ್ರಜ್ಞಾನವು ರೀಜನರೇಟಿವ್ ಬ್ರೇಕಿಂಗ್ ಸಿಸ್ಟಂ ಅಳವಡಿಕೆ ಹಿನ್ನಲೆಯಲ್ಲಿ ಕಾರು ಚಾಲನೆ ವೇಳೆ ನೀರ್ದಿಷ್ಟ ಪ್ರಮಾಣದಲ್ಲಿ ಬ್ಯಾಟರಿ ಚಾರ್ಜಿಂಗ್ ಪ್ರಕ್ರಿಯೆಯು ಮರಳಿ ಪಡೆಯಬಹುದಾಗಿದ್ದು, ಇದೇ ಕಾರಣಕ್ಕೆ ಹೊಸ ತಂತ್ರಜ್ಞಾನವು ಬ್ಯಾಟರಿ ದೀರ್ಘಕಾಲದ ಬಾಳಿಕೆಗೆ ಸಹಕರಿಸಲಿದೆ.

ಜಿಪ್‌ಟ್ರಾನ್ ತಂತ್ರಜ್ಞಾನ ಹೊಂದಿರುವ ಟಿಗೋರ್ ಇವಿ ಅನಾವರಣಗೊಳಿಸಿದ ಟಾಟಾ ಮೋಟಾರ್ಸ್

ಹೀಗಾಗಿ ಹೊಸ ಜಿಪ್‌ಟ್ರಾನ್ ತಂತ್ರಜ್ಞಾನವನ್ನು ನೆಕ್ಸಾನ್ ಇವಿ ನಂತರ ಟಿಗೋರ್ ಇವಿಯಲ್ಲೂ ಅಳವಡಿಸಲಾಗುತ್ತಿದ್ದು, ಹೊಸ ಕಾರು ನೆಕ್ಸಾನ್ ಇವಿ ಮಾದರಿಯಲ್ಲೇ ಟಿಗೋರ್ ಇವಿ ಕೂಡಾ ಅತ್ಯುತ್ತಮ ಪರ್ಫಾಮೆನ್ಸ್‌ನೊಂದಿಗೆ ಮೈಲೇಜ್‌ನಲ್ಲೂ ಗಮನಸೆಳೆಯಲಿದೆ.

ಜಿಪ್‌ಟ್ರಾನ್ ತಂತ್ರಜ್ಞಾನ ಹೊಂದಿರುವ ಟಿಗೋರ್ ಇವಿ ಅನಾವರಣಗೊಳಿಸಿದ ಟಾಟಾ ಮೋಟಾರ್ಸ್

ಉನ್ನತೀಕರಿಸಿದ ಟಿಗೋರ್ ಇವಿಯಲ್ಲಿ ಜಿಪ್‌ಟ್ರಾನ್ ತಂತ್ರಜ್ಞಾನದೊಂದಿಗೆ ಫಾಸ್ಟ್ ಚಾರ್ಜಿಂಗ್ ತಂತ್ರಜ್ಞಾನವನ್ನು ಕೂಡಾ ನೀಡಲಾಗುತ್ತಿದ್ದು, ಹೊಸ ಕಾರು 55kW ಎಲೆಕ್ಟ್ರಿಕ್ ಮೋಟಾರ್‌ ಮತ್ತು 26kWh ಲೀಥಿಯಂ ಅಯಾನ್ ಬ್ಯಾಟರಿಯೊಂದಿಗೆ ಪ್ರತಿ ಚಾರ್ಜ್‌ಗೆ ಗರಿಷ್ಠ 250 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ಜಿಪ್‌ಟ್ರಾನ್ ತಂತ್ರಜ್ಞಾನ ಹೊಂದಿರುವ ಟಿಗೋರ್ ಇವಿ ಅನಾವರಣಗೊಳಿಸಿದ ಟಾಟಾ ಮೋಟಾರ್ಸ್

ಹೊಸ ಆವೃತ್ತಿಯಲ್ಲಿರುವ 26kWh ಲೀಥಿಯಂ ಅಯಾನ್ ಬ್ಯಾಟರಿಯನ್ನು ಹೋಂ ಚಾರ್ಜರ್ ಮೂಲಕ ಚಾರ್ಜ್ ಮಾಡಲು 8 ಗಂಟೆ ಸಮಯಾವಕಾಶ ತೆಗೆದುಕೊಂಡರೆ ಫಾಸ್ಟ್ ಚಾರ್ಜಿಂಗ್ ಮೂಲಕ ಕೇವಲ 1 ಗಂಟೆಯಲ್ಲಿ ಶೇ. 80 ರಷ್ಟು ಚಾರ್ಜ್ ಮಾಡಬಹುದಾಗಿದೆ.

ಜಿಪ್‌ಟ್ರಾನ್ ತಂತ್ರಜ್ಞಾನ ಹೊಂದಿರುವ ಟಿಗೋರ್ ಇವಿ ಅನಾವರಣಗೊಳಿಸಿದ ಟಾಟಾ ಮೋಟಾರ್ಸ್

ಹಾಗೆಯೇ ಹೊಸ ಟಿಗೋರ್ ಇವಿ ಮಾದರಿಯಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ನವೀಕೃತ ವಿನ್ಯಾಸವನ್ನು ನೀಡಿದ್ದು, ಹೊರ ಭಾಗದಲ್ಲಿ ಮಾತ್ರವಲ್ಲ ಒಳಭಾಗದ ವಿನ್ಯಾಸದಲ್ಲೂ ಹೊಸ ಕಾರು ಗ್ರಾಹಕರನ್ನು ಸೆಳೆಯಲಿದೆ.

ಜಿಪ್‌ಟ್ರಾನ್ ತಂತ್ರಜ್ಞಾನ ಹೊಂದಿರುವ ಟಿಗೋರ್ ಇವಿ ಅನಾವರಣಗೊಳಿಸಿದ ಟಾಟಾ ಮೋಟಾರ್ಸ್

ಹೊಸ ಕಾರಿನಲ್ಲಿ ಟಾಟಾ ಕಂಪನಿಯು ಹೊಸ ವಿನ್ಯಾಸದ ಹೆಡ್‌ಲ್ಯಾಂಪ್‌ಗಳು, ಹೊಸ ಫ್ರಂಟ್ ಗ್ರಿಲ್ ಜೊತೆ ಟ್ರೈ ಅರೊ ಡಿಸೈನ್, ಮರುವಿನ್ಯಾಸಗೊಳಿಸಲಾದ ಟೈಲ್‌ಲ್ಯಾಂಪ್, ಕಲರ್ ಆಕ್ಸೆಂಟ್, ಹೊಸ ಅಲಾಯ್ ವೀಲ್ಹ್ ನೀಡಲಾಗಿದೆ.

ಜಿಪ್‌ಟ್ರಾನ್ ತಂತ್ರಜ್ಞಾನ ಹೊಂದಿರುವ ಟಿಗೋರ್ ಇವಿ ಅನಾವರಣಗೊಳಿಸಿದ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಕಂಪನಿಯು ಹೊಸ ಟಿಗೋರ್ ಇವಿ ಮಾದರಿಗಾಗಿ ಮೊದಲ ಬಾರಿಗೆ 30ಕ್ಕೂ ಹೆಚ್ಚು ತಾಂತ್ರಿಕ ಅಂಶಗಳನ್ನು ನಿಯಂತ್ರಿಸಬಹುದಾದ ಐರಾ ಕಾರ್ ಕನೆಕ್ಟ್ ಟೆಕ್ನಾಲಜಿ ಬಳಕೆ ಮಾಡಲಾಗಿದ್ದು, ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್, ಸೆಮಿ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಕ್ಲೈಮೆಟ್ ಕಂಟ್ರೋಲ್, ಮೊಬೈಲ್ ಚಾರ್ಜಿಂಗ್ ಪೋರ್ಟ್, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್ ಮತ್ತು 316-ಲೀಟರ್ ಸಾಮರ್ಥ್ಯದ ಬೂಟ್ ಸ್ಪೆಸ್ ನೀಡಲಾಗಿದೆ.

ಜಿಪ್‌ಟ್ರಾನ್ ತಂತ್ರಜ್ಞಾನ ಹೊಂದಿರುವ ಟಿಗೋರ್ ಇವಿ ಅನಾವರಣಗೊಳಿಸಿದ ಟಾಟಾ ಮೋಟಾರ್ಸ್

ಜೊತೆಗೆ ಹೊಸ ಕಾರಿನಲ್ಲಿ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಪ್ರೀಮಿಯಂ ಫೀಚರ್ಸ್‌‌ನೊಂದಿಗೆ ರಿಮೋಟ್ ಲಾಕಿಂಗ್, ಡ್ಯುಯಲ್ ಏರ್‌ಬ್ಯಾಗ್, ರಿಯರ್ ಪಾರ್ಕಿಂಗ್ ಸೆನ್ಸಾರ್, ಎಬಿಎಸ್ ಜೊತೆ ಇಬಿಡಿ, ಸ್ಟ್ಯಾಬಿಲಿಟಿ ಕಂಟ್ರೋಲ್, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್ ಮತ್ತು ಸೀಟ್ ಬೆಲ್ಟ್ ರಿಮೆಂಡರ್ ಸೌಲಭ್ಯ ಹೊಂದಿದೆ.

ಜಿಪ್‌ಟ್ರಾನ್ ತಂತ್ರಜ್ಞಾನ ಹೊಂದಿರುವ ಟಿಗೋರ್ ಇವಿ ಅನಾವರಣಗೊಳಿಸಿದ ಟಾಟಾ ಮೋಟಾರ್ಸ್

ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.10 ಲಕ್ಷದಿಂದ ರೂ. 12 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಬಹುದೆಂದು ಅಂದಾಜಿಸಲಾಗಿದ್ದು, ಹೊಸ ಕಾರಿನಲ್ಲಿ ಜಿಪ್‌ಟ್ರಾನ್ ತಂತ್ರಜ್ಞಾನ ಪ್ರೇರಿತ ಎಲೆಕ್ಟ್ರಿಕ್ ಮೋಟಾರ್ ಮೇಲೆ ಕಂಪನಿಯು ಎಂಟು ವರ್ಷಗಳ ಸ್ಟ್ಯಾಂಡರ್ಡ್ ವಾರಂಟಿ ನೀಡಿದೆ.

Article Published On: Wednesday, August 18, 2021, 12:45 [IST]
English summary
Tata tigor ev ziptron unveiled ahead of india launch on august 31 details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+