Just In
Don't Miss!
- Movies
ಜಾಕಿ ಚಾನ್ ತಮ್ಮ ಮಗನಿಗೆ ಸಾವಿರಾರು ಕೋಟಿ ಆಸ್ತಿಯನ್ನು ಕೊಡುತ್ತಿಲ್ಲವೇಕೆ?
- News
ಏಪ್ರಿಲ್ 22ರವರೆಗೆ ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ
- Lifestyle
ಭಾನುವಾರದ ಭವಿಷ್ಯ: ಈ ದಿನ ಯಾವ ರಾಶಿಯವರಿಗೆ ಅದೃಷ್ಟದ ದಿನ
- Sports
ಹೈದರಾಬಾದ್ ಸೋಲಿಸಿ ಅಗ್ರ ಸ್ಥಾನಕ್ಕೇರಿದ ಮುಂಬೈ ಇಂಡಿಯನ್ಸ್
- Finance
ಮಹಾರಾಷ್ಟ್ರದಲ್ಲಿ ಲಾಕ್ಡೌನ್: ಕಾರುಗಳ ಉತ್ಪಾದನೆ ಮೇಲೆ ಭಾರೀ ಪರಿಣಾಮ
- Education
Ninasam Diploma Admission 2020-21: ಮೇ ತಿಂಗಳಲ್ಲಿ ನೀನಾಸಂ ಡಿಪ್ಲೋಮಾ ಪ್ರವೇಶಾತಿ ಆರಂಭ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ವಾಣಿಜ್ಯ ವಾಹನಗಳಲ್ಲೂ ಎಲೆಕ್ಟ್ರಿಕ್ ಮಾದರಿಗಳನ್ನು ಪರಿಚಯಿಸಲಿದೆ ಟಾಟಾ ಮೋಟಾರ್ಸ್
ದೇಶದ ಜನಪ್ರಿಯ ವಾಹನ ಉತ್ಪಾದನಾ ಕಂಪನಿಯಾಗಿರುವ ಟಾಟಾ ಮೋಟಾರ್ಸ್ ಭವಿಷ್ಯದ ವಾಹನ ಮಾದರಿಗಳ ಉತ್ಪಾದನೆಯಲ್ಲಿ ಹಲವಾರು ಬದಲಾವಣೆಗಳನ್ನು ಪರಿಚಯಿಸುತ್ತಿದ್ದು, ಕಂಪನಿಯು ಶೀಘ್ರದಲ್ಲೇ ವಾಣಿಜ್ಯ ವಾಹನ ಮಾದರಿಗಳಲ್ಲೂ ಎಲೆಕ್ಟ್ರಿಕ್ ಆವೃತ್ತಿಯನ್ನು ನಿರ್ಮಾಣ ಮಾಡುವ ಸಿದ್ದತೆ ನಡೆಸಿದೆ.

ಪ್ರಯಾಣಿಕರ ವಾಹನಗಳ ವಿಭಾಗದಲ್ಲಿ ಈಗಾಗಲೇ ನೆಕ್ಸಾನ್ ಇವಿ ಮತ್ತು ಟಿಗೋರ್ ಇವಿ ಮೂಲಕ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ವಾಣಿಜ್ಯ ವಾಹನಗಳ ಮಾರಾಟದಲ್ಲೂ ಬದಲಾವಣೆ ತರುವ ಪ್ರಮುಖ ಯೋಜನೆಗಳನ್ನು ಜಾರಿಗೆ ತರುತ್ತಿದ್ದು, ಸಣ್ಣ ಗಾತ್ರದ ವಾಣಿಜ್ಯ ವಾಹನಗಳ ಮಾದರಿಗಳಲ್ಲೂ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸುವ ಯೋಜನೆ ರೂಪಿಸಿದೆ.

ನೆಕ್ಸಾನ್ ಇವಿ ಮತ್ತು ಟಿಗೋರ್ ಇವಿ ನಂತರ ಮುಂಬರುವ ಎರಡು ವರ್ಷಗಳಲ್ಲಿ ಹೊಸ ಇವಿ ಕಾರುಗಳ ಜೊತೆಗೆ ಸಣ್ಣ ಗಾತ್ರದ ವಾಣಿಜ್ಯ ವಾಹನಗಳ ಮಾದರಿಯಲ್ಲೂ ಎಲೆಕ್ಟ್ರಿಕ್ ಮಾದರಿಗಳನ್ನು ಬಿಡುಗಡೆ ಮಾಡಲಿದ್ದು, ಎಲೆಕ್ಟ್ರಿಕ್ ವಾಹನಗಳಿಗೆ ಪೂರಕವಾಗಿ ಚಾರ್ಜಿಂಗ್ ನಿಲ್ದಾಣಗಳನ್ನು ಹೆಚ್ಚಿಸುತ್ತಿದೆ.

ವಿವಿಧ ಕಂಪನಿಗಳ ಜೊತೆಗೂಡಿ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ಹೆಚ್ಚಿಸುತ್ತಿರುವ ಟಾಟಾ ಕಂಪನಿಯು ಹಂತ-ಹಂತವಾಗಿ ಇವಿ ವಾಹನಗಳ ಮಾರಾಟ ವ್ಯಾಪ್ತಿಯನ್ನು ಹೆಚ್ಚಿಸಲಿದ್ದು, ಇವಿ ವಾಹನಗಳ ಮಾರಾಟ ವ್ಯಾಪ್ತಿ ವಿಸ್ತರಿಸುವುದಕ್ಕೂ ಮುನ್ನ ಹೆಚ್ಚಿನ ಮಟ್ಟದ ಚಾರ್ಜಿಂಗ್ ನಿಲ್ದಾಣಗಳನ್ನು ನಿರ್ಮಾಣ ಮಾಡಲು ನಿರ್ಧರಿಸಿದೆ.

ಹೆಚ್ಚುತ್ತಿರುವ ಇಂಧನಗಳ ಬೆಲೆ ಮತ್ತು ಮಾಲಿನ್ಯದ ಕಾರಣಕ್ಕೆ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹ ನೀಡುತ್ತಿರುವುದು ಹೊಸ ಬದಲಾವಣೆಗೆ ಕಾರಣವಾಗಿದೆ.

ಇಂಧನ ಚಾಲಿತ ವಾಹನಗಳನ್ನು ತಗ್ಗಿಸಿ ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರವು ಈಗಾಗಲೇ ಫೇಮ್ 2 ಸಬ್ಸಡಿ ಯೋಜನೆಯನ್ನು ಜಾರಿಗೆ ತಂದಿದ್ದು, ಹೊಸ ಯೋಜನೆಯಡಿ ಎಲೆಕ್ಟ್ರಿಕ್ ವಾಹನ ಖರೀದಿ ಮಾಡುವ ಗ್ರಾಹಕರಿಗೆ ಗರಿಷ್ಠ ಧನಸಹಾಯವನ್ನು ಒದಗಿಸುತ್ತಿದೆ.

ಹಾಗೆಯೇ ಫೇಮ್ 2 ಯೋಜನೆಯೊಂದಿಗೆ ವಿವಿಧ ರಾಜ್ಯ ಸರ್ಕಾರಗಳು ಸಹ ತಮ್ಮದೇ ಆದ ಎಲೆಕ್ಟ್ರಿಕ್ ವಾಹನ ನೀತಿಯನ್ನು ಅಳವಡಿಸಿಕೊಳ್ಳುತ್ತಿದ್ದು, ಫೇಮ್ 2 ಯೋಜನೆಯ ಸಬ್ಸಡಿ ಜೊತೆಗೆ ವಿವಿಧ ರಾಜ್ಯದ ಸರ್ಕಾರಗಳು ಸಹ ಕೆಲವು ವಿನಾಯ್ತಿಗಳನ್ನು ನೀಡುತ್ತಿವೆ.

ಹೊಸ ಇವಿ ನೀತಿ ಅಡಿಯಲ್ಲಿ ಪರಿಸರಕ್ಕೆ ಪೂರಕವಾದ ವಾಹನಗಳ ನೋಂದಣಿಯಲ್ಲಿ ಮುಂಚೂಣಿ ಸಾಧಿಸಲಾಗುತ್ತಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಖರೀದಿದಾರರನ್ನು ಉತ್ತೇಜಿಸಲು ಗರಿಷ್ಠ ಸಬ್ಸಡಿ, ರಸ್ತೆ ತೆರಿಗೆ ವಿನಾಯ್ತಿ ಮತ್ತು ನೋಂದಣಿ ಶುಲ್ಕವನ್ನು ಮನ್ನಾದಂತಹ ಯೋಜನೆಗಳನ್ನು ಕೈಗೊಂಡಿದೆ.

ಹೊಸ ಯೋಜನೆಗಳು ಇವಿ ವಾಹನಗಳ ಉತ್ಪಾದನೆ ಮತ್ತು ಮಾರಾಟಕ್ಕೆ ಪೂರಕವಾದ ಅಂಶವಾಗಿದ್ದು, ಗ್ರಾಹಕರು ಕೂಡಾ ಡೀಸೆಲ್ ಮತ್ತು ಪೆಟ್ರೋಲ್ ಬದಲಾಗಿ ಇವಿ ವಾಹನಗಳ ಖರೀದಿಯತ್ತ ಗಮಮಸೆಳೆಯಲು ಸಹಕಾರಿಯಾಗಿದೆ.

ಇದಕ್ಕೆ ಪೂರಕವಾಗಿ ವಾಹನ ಉತ್ಪಾದನಾ ಕಂಪನಿಯು ಸಹ ವಿವಿಧ ಎಲೆಕ್ಟ್ರಿಕ್ ವಾಹನಗಳ ಜೊತೆಗೆ ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗುತ್ತಿದ್ದು, ಮುಂಬರುವ 2025ರ ವೇಳೆಗೆ ಶೇ.25ರಷ್ಟು ಎಲೆಕ್ಟ್ರಿಕ್ ಮಾರಾಟ ಮಾಡುವ ಗುರಿಹೊಂದಲಾಗಿದೆ.