Just In
- 1 hr ago
ಕಾರುಗಳ ರಫ್ತಿನಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಮಾರುತಿ ಸುಜುಕಿ
- 3 hrs ago
ವಾರದ ಪ್ರಮುಖ ಸುದ್ದಿ: ಹೊಸ ಸಫಾರಿ ಬಿಡುಗಡೆ, ಟೋಲ್ ಸಂಗ್ರಹ ಹೆಚ್ಚಳ, ಇಳಿಕೆಯಾಗುತ್ತಾ ಪೆಟ್ರೋಲ್ ದರ?
- 13 hrs ago
ಬಿಡುಗಡೆಯಾಗಲಿರುವ ಓಲಾ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ವಿಶೇಷತೆಗಳೇನು?
- 15 hrs ago
ಪರಿಸರ ಸ್ನೇಹಿ ವಾಹನಗಳ ವಿಭಾಗದಲ್ಲಿ ಟಾಟಾ ನೆಕ್ಸಾನ್ ಇವಿ ಕಾರಿಗೆ ಪ್ರತಿಷ್ಠಿತ ಪ್ರಶಸ್ತಿ
Don't Miss!
- News
ಅಭಿವೃದ್ಧಿ ಯೋಜನೆಗಳು; ಪರಿಸರವಾದಿಗಳ ವಿರುದ್ಧ ಜನಾಕ್ರೋಶ
- Movies
ವಿಶೇಷ ಭಾನುವಾರ: ಮನೋರಂಜನಾ ಲೋಕದಲ್ಲಿ 'ಮದ-ಗಜ'ಗಳ ಕಾದಾಟ
- Sports
ಸ್ಪಿನ್ ಆಗಲು ಆರಂಭವಾದರೆ ಜಗತ್ತು ಅಳಲು ಆರಂಭಿಸುತ್ತದೆ: ಪಿಚ್ ಬಗ್ಗೆ ಟೀಕೆಗೆ ಆಸಿಸ್ ಸ್ಪಿನ್ನರ್ ತಿರುಗೇಟು
- Finance
ಭಾರತದಲ್ಲಿ ನೋಕಿಯಾ ಪವರ್ ಈಯರ್ಬಡ್ಸ್ ಲೈಟ್ಸ್ ಮಾರಾಟ
- Lifestyle
ವಾರ ಭವಿಷ್ಯ: ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?
- Education
MCL Recruitment 2021: 8 ಸಾಮಾನ್ಯ ವೈದ್ಯಕೀಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಟಿಯಾಗೋ ಲಿಮಿಟೆಡ್ ಎಡಿಷನ್‌ನಲ್ಲಿ ಕೇವಲ 2 ಸಾವಿರ ಯುನಿಟ್ ಮಾರಾಟ ಮಾಡಲಿದೆ ಟಾಟಾ
ಟಾಟಾ ಮೋಟಾರ್ಸ್ ಕಂಪನಿಯು ತನ್ನ ಎಂಟ್ರಿ ಲೆವಲ್ ಟಿಯಾಗೋ ಹ್ಯಾಚ್‌ಬ್ಯಾಕ್ ಕಾರಿನಲ್ಲಿ ಸೀಮಿತ ಅವಧಿಗಾಗಿ ಲಿಮಿಟೆಡ್ ಎಡಿಷನ್ ಬಿಡುಗಡೆ ಮಾಡಿದ್ದು, ಹೊಸ ಆವೃತ್ತಿಯನ್ನು ಸ್ಟ್ಯಾಂಡರ್ಡ್ ಮಾದರಿಯ ಎಕ್ಸ್‌ಟಿ ಆವೃತ್ತಿಯನ್ನು ಆಧರಿಸಿ ಬಿಡುಗಡೆ ಮಾಡಲಾಗಿದೆ.

ಎಂಟ್ರಿ ಲೆವಲ್ ಹ್ಯಾಚ್‌ಬ್ಯಾಕ್ ಖರೀದಿದಾರರನ್ನು ಸೆಳೆಯಲು ಲಿಮಿಟೆಡ್ ಎಡಿಷನ್ ಮೂಲಕ ಎಕ್ಸ್‌ಟಿ ಮಾದರಿಯಲ್ಲಿ ಕೆಲವು ಹೆಚ್ಚುವರಿ ಫೀಚರ್ಸ್ ಸೇರಿಸಲಾಗಿದ್ದು, ಹೊಸ ಆವೃತ್ತಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 5.79 ಲಕ್ಷ ಬೆಲೆ ಹೊಂದಿದೆ. ಲಿಮಿಟೆಡ್ ಎಡಿಷನ್ ಮಾದರಿಯು ಎಕ್ಸ್‌ಟಿ ಮತ್ತು ಎಕ್ಸ್‌ಜೆಡ್ ಮಾದರಿಗಳ ನಡುವಿನ ಸ್ಥಾನ ಹೊಂದಿದ್ದು, ಹೊಸ ಆವೃತ್ತಿಯು ಕೇವಲ 2 ಸಾವಿರ ಯುನಿಟ್ ಮಾತ್ರವೇ ಖರೀದಿಗೆ ಲಭ್ಯವಿರಲಿವೆ ಎನ್ನಲಾಗಿದೆ.

ಟಿಯಾಗೋ ಲಿಮಿಟೆಡ್ ಎಡಿಷನ್‌ನಲ್ಲಿ ಟಾಟಾ ಕಂಪನಿಯು 14-ಇಂಚಿನ ಹೊಸ ವಿನ್ಯಾಸದ ಅಲಾಯ್ ವೀಲ್ಹ್, ವಾಯ್ಸ್ ಕಮಾಂಡ್ ಸರ್ಪೊಟ್ ಮಾಡುವ ಇನ್ಪೋಟೈನ್‌ಮೆಂಟ್ ಸಿಸ್ಟಂ, ಆನ್ ಬೋರ್ಡ್ ನ್ಯಾವಿಷನ್ ಸೌಲಭ್ಯವನ್ನು ಪಡೆದುಕೊಂಡಿದೆ.

ಇದರ ಹೊರತಾಗಿ ಹೊಸ ಕಾರಿನಲ್ಲಿ ಫೀಚರ್ಸ್‌ಗಳು ಎಕ್ಸ್‌ಟಿ ಮಾದರಿಗಳಿಗೆ ಸಮನಾಗಿದ್ದು, ಹೆಚ್ಚುವರಿ ಫೀಚರ್ಸ್‌ಗಳಿಂದಾಗಿ ಲಿಮಿಟೆಡ್ ಎಡಿಷನ್ ಮಾದರಿಯು ಎಕ್ಸ್‌ಟಿ ಆವೃತ್ತಿಗಿಂತಲೂ ರೂ. 29 ಸಾವಿರ ದುಬಾರಿಯಾಗಿದ್ದರೆ ಎಕ್ಸ್‌ಜೆಡ್ ಆವೃತ್ತಿಗಿಂತಲೂ ರೂ. 16 ಸಾವಿರ ಕಡಿಮೆ ಬೆಲೆಗೆ ಖರೀದಿಗೆ ಲಭ್ಯವಿದೆ.

ಲಿಮಿಟೆಡ್ ಎಡಿಷನ್ ಕಾರಿನಲ್ಲಿ ಸ್ಟ್ಯಾಂಡರ್ಡ್ ಮಾದರಿಯೆಂತೆ 14-ಇಂಚಿನ ಅಲಾಯ್ ವೀಲ್ಹ್ ನೀಡಿದ್ದರೂ ಬ್ಲ್ಯಾಕ್ಔಟ್ ವಿನ್ಯಾಸ ಪಡೆದುಕೊಂಡಿದ್ದು, ಟಿಯಾಗೋ ಟಾಪ್ ಎಂಡ್ ಮಾದರಿಯಾದ ಎಕ್ಸ್‌ಜೆಡ್ ಪ್ಲಸ್‌ನಲ್ಲಿ ಮಾತ್ರ 15-ಇಂಚಿನ ಅಯಾಲ್ ವೀಲ್ಹ್ ಹೊಂದಿದೆ. ಇದರ ಹೊರತಾಗಿ ಲಿಮಿಟೆಡ್ ಎಡಿಷನ್ ಮಾದರಿಯು ಸ್ಟ್ಯಾಂಡರ್ಡ್ ಮಾದರಿಯಲ್ಲಿರುವ ತಾಂತ್ರಿಕ ಅಂಶಗಳನ್ನೇ ಪಡೆದುಕೊಂಡಿದ್ದು, ಎಂಟ್ರಿ ಲೆವಲ್ ಹ್ಯಾಚ್‌ಬ್ಯಾಕ್ ಕಾರು ಖರೀದಿದಾರರನ್ನು ಸೆಳೆಯಲು ಹೊಸ ಆವೃತ್ತಿಯನ್ನು ಪರಿಚಯಿಸಲಾಗಿದೆ.

ಲಿಮಿಟೆಡ್ ಎಡಿಷನ್ ಮಾದರಿಯು ಮುಂದಿನ ಕೆಲವೇ ದಿನಗಳವರೆಗೆ ಮಾತ್ರವೇ ಖರೀದಿಗೆ ಲಭ್ಯವಿರಲಿದ್ದು, ನಿಗದಿತ ಸಂಖ್ಯೆಯ ಮಾರಾಟ ನಂತರದ ಸ್ಟ್ಯಾಂಡರ್ಡ್ ಮಾದರಿಗಳು ಮಾತ್ರ ಖರೀದಿಗೆ ಲಭ್ಯವಿರುತ್ತವೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಟಿಯಾಗೋ ಲಿಮಿಟೆಡ್ ಎಡಿಷನ್‌ನಲ್ಲಿ ಎಕ್ಸ್‌ಟಿ ಮತ್ತು ಎಕ್ಸ್‌ಜೆಡ್ ಮಾದರಿಯಲ್ಲಿರುವಂತೆ ಆನ್‌ಬೋರ್ಡ್ ನ್ಯಾವಿಗೇಷನ್, 5-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್, ರಿಯರ್ ಪಾರ್ಸೆಲ್ ಟ್ರೆ, ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಫಾಲೋ ಮಿ ಹೋಂ ಹೆಡ್‌ಲೈಟ್ಸ್, 4-ಸ್ಪೀಕರ್ಸ್, ಕೀ ಲೆಸ್ ಎಂಟ್ರಿ, ಸ್ಪೀರಿಂಗ್ ಮೌಂಟೆಡ್ ಕಂಟ್ರೋಲ್ ಸೇರಿದಂತೆ ಹಲವು ಸೌಲಭ್ಯಗಳಿವೆ.

ಇನ್ನು ಟಿಯಾಗೋ ಸ್ಟ್ಯಾಂಡರ್ಡ್ ಕಾರು ಮಾದರಿಗಳು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 4.86 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 6.85 ಲಕ್ಷ ಬೆಲೆ ಹೊಂದಿದ್ದು, 1.2-ಲೀಟರ್ ಪೆಟ್ರೋಲ್ ಎಂಜಿನ್ ಜೊತೆಗೆ ಗ್ರಾಹಕರ ಬೇಡಿಕೆಯೆಂತೆ 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಮಾದರಿಗಳನ್ನು ಖರೀದಿ ಮಾಡಬಹುದಾಗಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಲಿಮಿಟೆಡ್ ಎಡಿಷನ್ ಟಿಯಾಗೋ ಆವೃತ್ತಿಯು ಮ್ಯಾನುವಲ್ ಮಾದರಿಯಾಗಿದ್ದು, ಪ್ರತಿಸ್ಪರ್ಧಿ ಕಾರು ಮಾದರಿಗಳಾದ ಹ್ಯುಂಡೈ ಸ್ಯಾಂಟ್ರೋ, ಮಾರುತಿ ಸುಜುಕಿ ಸೆಲೆರಿಯೊ ಮತ್ತು ವ್ಯಾಗನ್ಆರ್ ಜೊತೆಗೆ ದಟ್ಸನ್ ಗೊ ಕಾರುಗಳಿಗೆ ಇದು ಮತ್ತಷ್ಟು ಪೈಪೋಟಿ ನೀಡಲಿದೆ.