ಕಡಿಮೆ ಬೆಲೆಯ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸಲಿದೆ ಟೆಸ್ಲಾ

ಖ್ಯಾತ ಎಲೆಕ್ಟ್ರಿಕ್ ಕಾರು ತಯಾರಕ ಕಂಪನಿಯಾದ ಟೆಸ್ಲಾ ಭಾರತಕ್ಕೆ ಕಾಲಿಟ್ಟಿದೆ. ಕಂಪನಿಯು ಶೀಘ್ರದಲ್ಲೇ ಭಾರತದಲ್ಲಿ ತನ್ನ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸಲಿದೆ. ಟೆಸ್ಲಾ ಕಂಪನಿಯು ಗುಣಮಟ್ಟದ ಹಾಗೂ ಪರ್ಫಾಮೆನ್ಸ್ ಎಲೆಕ್ಟ್ರಿಕ್ ಕಾರುಗಳಿಗೆ ವಿಶ್ವದಾದ್ಯಂತ ಹೆಸರುವಾಸಿಯಾಗಿದೆ.

ಕಡಿಮೆ ಬೆಲೆಯ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸಲಿದೆ ಟೆಸ್ಲಾ

ಮಾಡೆಲ್ 3, ಟೆಸ್ಲಾ ಕಂಪನಿಯ ಒಳ್ಳೆಯ ಎಲೆಕ್ಟ್ರಿಕ್ ಕಾರ್ ಆಗಿದ್ದು, ಯುರೋಪ್ ಹಾಗೂ ಅಮೆರಿಕಾದಲ್ಲಿ ಸಾಕಷ್ಟು ಜನಪ್ರಿಯತೆಯನ್ನು ಹೊಂದಿದೆ. ದುಬಾರಿ ಬೆಲೆಯನ್ನು ಹೊಂದಿರುವ ಕಾರಣಕ್ಕೆ ಈ ಕಾರು ಭಾರತದ ಜೊತೆಗೆ ವಿಶ್ವದ ಹಲವು ದೇಶಗಳ ಜನರ ಕೈಗೆಟುಕಾದಂತಾಗಿದೆ.

ಕಡಿಮೆ ಬೆಲೆಯ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸಲಿದೆ ಟೆಸ್ಲಾ

ಇದರಿಂದ ಜನರು ಟೆಸ್ಲಾ ಕಂಪನಿಯ ಕಾರುಗಳನ್ನು ಖರೀದಿಸಲು ಹಿಂದೆ ಮುಂದೆ ನೋಡುವಂತಾಗಿದೆ. ಈ ಹಿನ್ನೆಲೆಯಲ್ಲಿ ಎಲಾನ್ ಮಸ್ಕ್ ಕಡಿಮೆ ಬೆಲೆಯ ಟೆಸ್ಲಾ ಕಾರುಗಳನ್ನು ಬಿಡುಗಡೆಗೊಳಿಸುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.

MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

ಕಡಿಮೆ ಬೆಲೆಯ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸಲಿದೆ ಟೆಸ್ಲಾ

ಹೀಗೆ ಬಿಡುಗಡೆಯಾಗಲಿರುವ ಕಾರು ಮಾಡೆಲ್ 3 ಕಾರಿಗಿಂತ ಕಡಿಮೆ ಬೆಲೆಯನ್ನು ಹೊಂದಿರಲಿದೆ. ಅಮೆರಿಕಾದಲ್ಲಿರುವ ಕಂಪನಿಯ ಸಂಶೋಧನಾ ಹಾಗೂ ಅಭಿವೃದ್ಧಿ ಕೇಂದ್ರದಲ್ಲಿ ಟೆಸ್ಲಾ ಅಗ್ಗದ ಎಲೆಕ್ಟ್ರಿಕ್ ಕಾರಿನ ಮೂಲ ಮಾದರಿಯನ್ನು ಸಿದ್ಧಪಡಿಸಲಾಗುತ್ತಿದೆ.

ಕಡಿಮೆ ಬೆಲೆಯ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸಲಿದೆ ಟೆಸ್ಲಾ

ಈ ಕಾರನ್ನು ಭಾರತವೂ ಸೇರಿದಂತೆ ದಕ್ಷಿಣ ಏಷ್ಯಾದ ದೇಶಗಳಿಗಾಗಿ ವಿಶೇಷವಾಗಿ ವಿನ್ಯಾಸಗೊಳಿಸಲಾಗುತ್ತಿದೆ. ಈ ಕಾರಿನ ಬೆಲೆ 25,000 ಡಾಲರ್'ಗಳು ಅಂದರೆ ಸುಮಾರು 18 ಲಕ್ಷ ರೂಪಾಯಿಗಳಾಗಬಹುದು ಎಂದು ಹೇಳಲಾಗಿದೆ.

MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಕಡಿಮೆ ಬೆಲೆಯ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸಲಿದೆ ಟೆಸ್ಲಾ

ಎಂಜಿ ಮೋಟಾರ್ ಕಂಪನಿಯ ಝಡ್ಎಸ್ ಇವಿ ಹಾಗೂ ಹ್ಯುಂಡೈ ಕಂಪನಿಯ ಕೋನಾ ಎಲೆಕ್ಟ್ರಿಕ್ ಕಾರುಗಳು ಭಾರತದಲ್ಲಿ ಬಹುತೇಕ ಒಂದೇ ಬೆಲೆಯನ್ನು ಹೊಂದಿವೆ. ಟೆಸ್ಲಾ ಎಲೆಕ್ಟ್ರಿಕ್ ಕಾರು ಸಹ ಕೈಗೆಟುಕುವ ಬೆಲೆಯನ್ನು ಹೊಂದುವುದರಿಂದ ಭಾರತದ ಗ್ರಾಹಕರಿಗೆ ಹೆಚ್ಚು ಪ್ರಯೋಜನವಾಗಲಿದೆ.

ಕಡಿಮೆ ಬೆಲೆಯ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸಲಿದೆ ಟೆಸ್ಲಾ

ಕಳೆದ ತಿಂಗಳು ಟೆಸ್ಲಾ ಕಂಪನಿಯ ಷೇರುಗಳು ಹಠಾತ್ತನೇ ಏರಿಕೆಯಾಗಿ ಟೆಸ್ಲಾ ಕಂಪನಿಯನ್ನು ವಿಶ್ವದ ಶ್ರೀಮಂತ ಕಾರು ಕಂಪನಿಯನ್ನಾಗಿ ಮಾಡಿವೆ. ಇದರಿಂದಾಗಿ ಟೆಸ್ಲಾ ಕಂಪನಿಯ ಸಿಇಒ ಎಲಾನ್ ಮಸ್ಕ್ ಅಮೆಜಾನ್ ಸಿಇಒ ಜೆಫ್ ಬೆಜೋಸ್'ರವರನ್ನು ಹಿಂದಿಕ್ಕಿ ವಿಶ್ವದ ಅತಿ ಶ್ರೀಮಂತ ವ್ಯಕ್ತಿಯಾಗಿದ್ದಾರೆ.

MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಕಡಿಮೆ ಬೆಲೆಯ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸಲಿದೆ ಟೆಸ್ಲಾ

ಗುಣಮಟ್ಟದ ಕಾರುಗಳ ಕಾರಣದಿಂದಾಗಿ ಟೆಸ್ಲಾ ಕಂಪನಿಯು ತನ್ನದೇ ಆದ ಇಮೇಜ್ ಅನ್ನು ರಚಿಸಿದೆ. ಕಂಪನಿಯು ಅಮೆರಿಕಾದ ಕ್ಯಾಲಿಫೋರ್ನಿಯಾ ಬಳಿಯ ಫ್ರೀಮಾಂಟ್'ನಲ್ಲಿ ಕಾರುಗಳನ್ನು ಉತ್ಪಾದಿಸುತ್ತದೆ.

ಕಡಿಮೆ ಬೆಲೆಯ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸಲಿದೆ ಟೆಸ್ಲಾ

ಟೆಸ್ಲಾ ಕಂಪನಿಯು ಈ ಜಾಗದಲ್ಲಿ 370 ಎಕರೆ ವಿಸ್ತೀರ್ಣದ ಅತಿದೊಡ್ಡ ಉತ್ಪಾದನಾ ಘಟಕವನ್ನು ಹೊಂದಿದೆ. ಇದರ ಜೊತೆಗೆ ಕಂಪನಿಯು ಹೊಸದಾದ ಹಾಗೂ ಹೆಚ್ಚಿನ ಸಾಮರ್ಥ್ಯದ ಬ್ಯಾಟರಿ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸುವಲ್ಲಿಯೂ ನಿರತವಾಗಿದೆ.

MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಕಡಿಮೆ ಬೆಲೆಯ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸಲಿದೆ ಟೆಸ್ಲಾ

ಟೆಸ್ಲಾ ಕಂಪನಿಯು ಜರ್ಮನಿಯ ಬರ್ಲಿನ್‌ನಲ್ಲಿ ವಿಶ್ವದ ಅತಿದೊಡ್ಡ ಬ್ಯಾಟರಿ ಉತ್ಪಾದನಾ ಘಟಕವನ್ನು ತೆರೆಯಲು ಮುಂದಾಗಿದೆ. ಮುಂಬರುವ ದಿನಗಳಲ್ಲಿ ಎಲೆಕ್ಟ್ರಿಕ್ ಕಾರುಗಳಿಗೆ ಹೆಚ್ಚು ಬೇಡಿಕೆ ಉಂಟಾಗುವ ಹಿನ್ನೆಲೆಯಲ್ಲಿ ಟೆಸ್ಲಾ ಕಂಪನಿಯು ಹೊಸ ತಂತ್ರಜ್ಞಾನವನ್ನು ವೇಗವಾಗಿ ಅಭಿವೃದ್ಧಿಪಡಿಸಲು ಮುಂದಾಗಿದೆ.

ಕಡಿಮೆ ಬೆಲೆಯ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸಲಿದೆ ಟೆಸ್ಲಾ

ಕಳೆದ ವರ್ಷದ ಜಾಗತಿಕ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಯಲ್ಲಿ ಟೆಸ್ಲಾ ಕಂಪನಿಯ ಕಾರುಗಳು ಅತಿ ಹೆಚ್ಚು ಸಂಖ್ಯೆಯಲ್ಲಿ ಮಾರಾಟವಾಗಿವೆ. ಟೆಸ್ಲಾ ಮಾಡೆಲ್ 3 ವಿಶ್ವದಾದ್ಯಂತ ಹೆಚ್ಚು ಜನಪ್ರಿಯತೆಯನ್ನು ಹೊಂದಿರುವ ಎಲೆಕ್ಟ್ರಿಕ್ ಕಾರ್ ಆಗಿ ಮಾರ್ಪಟ್ಟಿದೆ.

MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಕಡಿಮೆ ಬೆಲೆಯ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸಲಿದೆ ಟೆಸ್ಲಾ

ಗ್ಲೋಬಲ್ ಎಲೆಕ್ಟ್ರಿಕ್ ವೆಹಿಕಲ್ ಸೇಲ್ಸ್ ರಿಪೋರ್ಟ್ ಪ್ರಕಾರ, ಟೆಸ್ಲಾ ಕಂಪನಿಯ ಮಾಡೆಲ್ 3 ಕಾರು 2020ರಲ್ಲಿ ಅತಿ ಹೆಚ್ಚು ಮಾರಾಟವನ್ನು ಕಂಡಿದೆ. ಟೆಸ್ಲಾ ಕಂಪನಿಯು ಕಳೆದ ವರ್ಷ ಮಾಡೆಲ್ 3 ಕಾರಿನ 3,65,240 ಯುನಿಟ್‌ಗಳನ್ನು ಮಾರಾಟ ಮಾಡಿದೆ.

ಕಡಿಮೆ ಬೆಲೆಯ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸಲಿದೆ ಟೆಸ್ಲಾ

ಎಲೆಕ್ಟ್ರಿಕ್ ಕಾರು ಮಾರುಕಟ್ಟೆಯಲ್ಲಿ ಟೆಸ್ಲಾ ಕಾರುಗಳ ಪಾಲು 12%ಗೆ ಏರಿಕೆಯಾಗಿದೆ. ಟೆಸ್ಲಾ ಮಾಡೆಲ್ 3 ಕಾರಿನ ನಂತರ, ಚೀನಾದ ವುಲಿಂಗ್ ಹಾಂಗ್ ಗುವಾಂಗ್ ಮಿನಿ ಕಾರು ಎರಡನೇ ಅತಿ ಹೆಚ್ಚು ಮಾರಾಟವಾದ ಎಲೆಕ್ಟ್ರಿಕ್ ಕಾರ್ ಆಗಿ ಹೊರಹೊಮ್ಮಿದೆ.

Most Read Articles

Kannada
Read more on ಟೆಸ್ಲಾ tesla
English summary
Tesla company to launch low price electric cars in India. Read in Kannada.
Story first published: Friday, February 12, 2021, 16:51 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X