ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ Tesla

ದುಬಾರಿ ಇಂಧನ ದರ ಮತ್ತುಹೆಚ್ಚುತ್ತಿರುವ ಮಾಲಿನ್ಯ ತಡೆಗಾಗಿ ವಿವಿಧ ರಾಷ್ಟ್ರಗಳು 2030ರಿಂದಲೇ ಸಂಪೂರ್ಣವಾಗಿ ಇಂಧನ ಚಾಲಿತ ವಾಹನಗಳ ಮಾರಾಟವನ್ನು ಪೂರ್ಣಪ್ರಮಾಣದಲ್ಲಿ ಸ್ಥಗಿತಗೊಳಿಸುವ ನಿರ್ಣಯ ಕೈಗೊಂಡಿದ್ದು, ಇದಕ್ಕೆ ಪೂರಕವಾಗಿ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲಾಗುತ್ತಿದೆ.

ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ Tesla ಕಂಪನಿ

ಎಲೆಕ್ಟ್ರಿಕ್ ವಾಹನಗಳಿಗೆ ಪೂರಕವಾಗಿ ಅಮೆರಿಕ ಮತ್ತು ಯುರೋಪ್ ಒಕ್ಕೂಟದಲ್ಲಿನ ಪ್ರಮುಖ ರಾಷ್ಟ್ರಗಳ ಹೊಸ ನಿರ್ಣಯ ಪರಿಣಾಮ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮಾರಾಟವು ಸಾಕಷ್ಟು ಇಳಿಕೆಯಾಗುತ್ತಿದ್ದು, ಹೈಬ್ರಿಡ್ ಮತ್ತು ಪೂರ್ಣ ಪ್ರಮಾಣದ ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಸಾಕಷ್ಟು ಬೆಳವಣಿಗೆ ಕಂಡುಬಂದಿದೆ.

ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ Tesla ಕಂಪನಿ

2020ರಲ್ಲೇ ಅಮೆರಿಕ ಮತ್ತು ಯುರೋಪಿನ ಪ್ರಮುಖ ರಾಷ್ಟ್ರಗಳಲ್ಲಿ ವಿವಿಧ ಆಟೋ ಉತ್ಪಾದನಾ ಕಂಪನಿಗಳು ಭಾರೀ ಪ್ರಮಾಣದ ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡಿದ್ದು, ಡೀಸೆಲ್ ಕಾರುಗಳ ಮಾರಾಟದಲ್ಲಿ ಸಾಕಷ್ಟು ಇಳಿಕೆಯಾಗಿದೆ.

ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ Tesla ಕಂಪನಿ

ಡೀಸೆಲ್ ಕಾರುಗಳ ಬಳಕೆಗೆ ಹಲವಾರು ನಿರ್ಬಂಧ ವಿಧಿಸುತ್ತಿರುವ ಹಿನ್ನಲೆಯಲ್ಲಿ ಎಲೆಕ್ಟ್ಕಿಕ್ ವಾಹನಗಳ ಮಾರಾಟ ಮತ್ತು ಬಳಕೆಗೆ ಸಾಕಷ್ಟು ವಿನಾಯ್ತಿಗಳನ್ನು ನೀಡುತ್ತಿರುವುದೇ ಇವಿ ವಾಹನಗಳ ಬಳಕೆ ಹೆಚ್ಚಳವಾಗಲು ಪ್ರಮುಖ ಕಾರಣವಾಗಿದೆ.

ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ Tesla ಕಂಪನಿ

ಮಾಲಿನ್ಯ ತಡೆ ಮತ್ತು ಭವಿಷ್ಯದ ದೃಷ್ಠಿಯಿಂದ ಇಂಧನದ ಮೇಲೆ ಅವಂಲನೆಯನ್ನು ತಪ್ಪಿಸಲು ಎಲೆಕ್ಟ್ರಿಕ್ ಬ್ಯಾಟರಿ ಚಾಲಿತ ವಾಹನಗಳ ಬಳಕೆಯತ್ತ ಗಮನಹರಿಸಲಾಗುತ್ತಿದ್ದು, ಸರ್ಕಾರದ ನಿರ್ಣಯಗಳಿಗೆ ಪೂರಕವಾಗಿ ಆಟೋ ಉತ್ಪಾದನಾ ಕಂಪನಿಗಳು ಸಹ ವಿವಿಧ ಮಾದರಿಯ ಎಲೆಕ್ಟ್ರಿಕ್ ವಾಹನಗಳ ಮಾದರಿಗಳ ಮಾರಾಟದೊಂದಿಗೆ ಗ್ರಾಹಕರನ್ನು ಸೆಳೆಯುತ್ತಿವೆ.

ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ Tesla ಕಂಪನಿ

ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಸದ್ಯ ಜಾಗತಿಕವಾಗಿ ಗುರುತಿಸಿಕೊಂಡಿರುವ ಅಮೆರಿಕದ ಟೆಸ್ಲಾ ಕಂಪನಿಯು ಇವಿ ಕಾರುಗಳ ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ್ದು, ಕಂಪನಿಯು ಕಳೆದ 13 ವರ್ಷಗಳಲ್ಲಿ ಬರೋಬ್ಬರಿ 20 ಲಕ್ಷ ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡುವ ಮೂಲಕ ಹೊಸ ದಾಖಲೆ ನಿರ್ಮಿಸಿದೆ.

ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ Tesla

2003ರಲ್ಲಿ ಸ್ಥಾಪನೆಗೊಂಡ ಕಂಪನಿಯ 2008ರಲ್ಲಿ ಮೊದಲ ಬಾರಿಗೆ ರೋಡ್‌ಸ್ಟರ್ ಕಾರು ಮಾದರಿಯೊಂದಿಗೆ ಇವಿ ಕಾರು ಮಾರಾಟ ಆರಂಭಿಸಿದ ಟೆಸ್ಲಾ ಕಂಪನಿಯು ಯಾವುದೇ ಇವಿ ತಯಾರಕ ಕಂಪನಿಯು ಮಾಡಿರದ ಮಹತ್ವದ ಸಾಧನೆ ಮಾಡಿದ್ದು, ಕಳೆದ ಮೂರು ವರ್ಷಗಳಲ್ಲಿ ಬರೋಬ್ಬರಿ 15 ಲಕ್ಷ ಕಾರುಗಳನ್ನು ಮಾರಾಟ ಮಾಡಿದೆ.

ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ Tesla

ಎಲೆಕ್ಟ್ರಿಕ್ ಕಾರು ಮಾರಾಟವನ್ನು 2008ರಲ್ಲೇ ಆರಂಭಿಸಿದ್ದರೂ 2018ರ ತನಕ ಕೇವಲ 5 ಲಕ್ಷ ಕಾರುಗಳನ್ನು ಮಾರಾಟ ಮಾಡಿದ್ದ ಟೆಸ್ಲಾ ಕಂಪನಿಯು 2018ರ ಮಧ್ಯಂತರದಿಂದ ಹೆಚ್ಚಿನ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಕೇವಲ ಅಮೆರಿಕ ಮಾತ್ರವಲ್ಲದೆ ವಿಶ್ವದ ಪ್ರಮುಖ ರಾಷ್ಟ್ರಗಳಿಗೆ ರಫ್ತು ಕೈಗೊಳ್ಳುತ್ತಿರುವ ಟೆಸ್ಲಾ ಕಂಪನಿಯು ಕಳೆದ ಮೂರು ವರ್ಷಗಳಲ್ಲಿ ಬರೋಬ್ಬರಿ 15 ಲಕ್ಷ ಕಾರುಗಳನ್ನು ಮಾರಾಟ ಮಾಡಿದೆ.

ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ Tesla

ಟೆಸ್ಲಾ ಕಂಪನಿಯು ಮೊದಲ ಕಾರು ಮಾದರಿಯಾಗಿ ರೋಡ್‌ಸ್ಟರ್(2008), ಮಾಡೆಲ್ ಎಸ್(2012), ಮಾಡೆಲ್ ಎಕ್ಸ್(2015), ಮಾಡೆಲ್ 3(2017) ಮತ್ತು ಮಾಡೆಲ್ ವೈ(2020) ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, ಇವುಗಳಲ್ಲಿ 2017ರಲ್ಲಿ ಬಿಡುಗಡೆಯಾದ ಮಾಡೆಲ್ 3 ಮಾದರಿಯೇ ಇದುವರೆಗೆ ಬರೋಬ್ಬರಿ 10 ಲಕ್ಷ ಯುನಿಟ್ ಮಾರಾಟಗೊಂಡಿದೆ.

ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ Tesla ಕಂಪನಿ

ತದನಂತರ ಮಾಡೆಲ್ ಎಸ್, ಮಾಡೆಲ್ ಎಕ್ಸ್ ಮತ್ತು ಮಾಡೆಲ್ ವೈ ಮಾದರಿಗಳು ಸಹ ಉತ್ತಮ ಬೇಡಿಕೆ ಪಡೆದುಕೊಂಡಿದ್ದು, ಟೆಸ್ಲಾ ಬಜೆಟ್ ಮಾದರಿಯಾದ ಮಾಡೆಲ್ 3 ಕಾರುಗಳ ಹೆಚ್ಚಿನ ಮಟ್ಟದ ಬೇಡಿಕೆಯಲ್ಲಿರುವ ಕಾರು ಮಾದರಿಯಾಗಿದೆ.

ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ Tesla ಕಂಪನಿ

ಇನ್ನು ಟೆಸ್ಲಾ ಕಂಪನಿಯು ಇದೇ ವರ್ಷಾಂತ್ಯಕ್ಕೆ ಭಾರತದಲ್ಲೂ ತನ್ನ ಮೊದಲ ಎಲೆಕ್ಟ್ರಿಕ್ ಕಾರು ಮಾದರಿಯನ್ನು ಮಾರಾಟ ಮಾಡುವ ಯೋಜನೆಯಲ್ಲಿದ್ದು, ಹೊಸ ಕಾರುಗಳ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿದೆ.

ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ Tesla

ವಾಣಿಜ್ಯ ನಗರಿ ಮುಂಬೈನಲ್ಲಿ ತನ್ನ ಕೇಂದ್ರ ಕಚೇರಿ ತೆರೆಯಲು ಉದ್ದೇಶಿಸಿರುವ ಟೆಸ್ಲಾ ಕಂಪನಿಯು ಮಾಡೆಲ್ 3 ಮತ್ತು ಮಾಡೆಲ್ ವೈ ಕಾರು ಮಾದರಿಗಳ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಎರಡು ಕಾರು ಮಾದರಿಗಳಿಂದ ತಲಾ ಎರಡು ವೆರಿಯೆಂಟ್ ಬಿಡುಗಡೆ ಮಾಡುವ ನೀರಿಕ್ಷೆಯಿದೆ.

ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ Tesla

ಕೇಂದ್ರ ಸಾರಿಗೆ ಇಲಾಖೆಯಿಂದ ಪಡೆದುಕೊಂಡಿರುವ ಅನುಮತಿ ಪತ್ರದಲ್ಲಿ ಪ್ರಮುಖ ನಾಲ್ಕು ವೆರಿಯೆಂಟ್‌ಗಳನ್ನು ಬಿಡುಗಡೆ ಮಾಡುವ ಸುಳಿವು ನೀಡಿರುವ ಟೆಸ್ಲಾ ಕಂಪನಿಯು ಆರಂಭಿಕವಾಗಿ ಮಾಡೆಲ್ 3 ಮಾದರಿಯನ್ನು ರಸ್ತೆಗಿಳಿಸುವ ಸಾಧ್ಯತೆಗಳಿವೆ.

ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ Tesla ಕಂಪನಿ

ಹೊಸ ಕಾರುಗಳ ಬಿಡುಗಡೆಯ ಕುರಿತಂತೆ ಇನ್ನು ಕೂಡಾ ಯಾವುದೇ ಅಧಿಕೃತ ಮಾಹಿತಿ ಬಿಟ್ಟುಕೊಡದ ಟೆಸ್ಲಾ ಕಂಪನಿಯು ಪ್ರಮುಖ ನಾಲ್ಕು ರೂಪಾಂತರಗಳನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲು ಅನುಮೋದನೆ ಪಡೆದಿರುವುದು ಮಾತ್ರ ಖಚಿತವಾಗಿದೆ.

ಭಾರತದಲ್ಲಿ ಟೆಸ್ಲಾ ನಿರ್ಮಾಣದ ಎಂಟ್ರಿ ಲೆವಲ್ ಮಾದರಿಯಾದ ಮಾಡೆಲ್ 3 ಕಾರು ಮಾದರಿಯೇ ಮೊದಲ ಹಂತದಲ್ಲಿ ಬಿಡುಗಡೆಯಾಗಬಹುದಾಗದ್ದು, ತದನಂತರ ಮಾಡೆಲ್ 3 ನಂತರ ಮಾಡೆಲ್ ವೈ, ಮಾಡೆಲ್ ಎಸ್ ಸರಣಿ ಎಲೆಕ್ಟ್ರಿಕ್ ಕಾರು ಮಾದರಿಗಳು ಭಾರತವನ್ನು ಪ್ರವೇಶಿಸುವ ಸಾಧ್ಯತೆಗಳಿವೆ.

Most Read Articles

Kannada
Read more on ಟೆಸ್ಲಾ tesla
English summary
Tesla reach new milestone sold 2 million electric cars globally
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X