Just In
- 11 min ago ಪೆಟ್ರೋಲ್ಗೆ ಹೆಚ್ಚು ಹಣ ಖರ್ಚು ಮಾಡುತ್ತಿದ್ದೀರಾ?.. ಇಲ್ಲಿವೆ ಉತ್ತಮ ಎಲೆಕ್ಟ್ರಿಕ್ ಸ್ಕೂಟರ್ಗಳು, ಜಾಸ್ತಿ ಓಡುತ್ತವೆ!
- 2 hrs ago Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- 14 hrs ago ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- 15 hrs ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
Don't Miss!
- News Karnataka Dam Water Level: ಏಪ್ರಿಲ್ 20ರಂದು ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ, ವಿವರ ಇಲ್ಲಿದೆ
- Finance Bengaluru Traffic Police: ಬೆಂಗಳೂರಿನ ಈ ರಸ್ತೆ ಸಂಚಾರ ಮಾರ್ಗ ಬದಲಾವಣೆ, ವಿವರ
- Technology Samsung: ಭಾರತದಲ್ಲಿ ಹೊಸ ವೇರಿಯಂಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F15 5G! ಬೆಲೆ ಎಷ್ಟು?
- Sports RCB: 'ಗೋ ಗ್ರೀನ್' ಭಾಗವಾಗಿ 3 ಕೆರೆಗಳ ಅಭಿವೃದ್ಧಿಪಡಿಸಿದ ಆರ್ಸಿಬಿ
- Movies Amruthadhaare ; ಪಾರ್ಥ ಮತ್ತು ಅಪೇಕ್ಷಾ ಪ್ರೀತಿ, ಕೆಂಡಾಮಂಡಲಗೊಂಡ ಶಕುಂತಲಾ..!
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಎಲೆಕ್ಟ್ರಿಕ್ ಕಾರು ಬಿಡುಗಡೆಗೂ ಮುನ್ನ ಸೂಪರ್ ಚಾರ್ಜರ್ ಸೌಲಭ್ಯ ತೆರೆಯಲು ಮುಂದಾದ ಟೆಸ್ಲಾ
ಅಮೆರಿಕದ ಜನಪ್ರಿಯ ಎಲೆಕ್ಟ್ರಿಕ್ ಕಾರು ತಯಾರಿಕಾ ಕಂಪನಿಯಾಗಿರುವ ಟೆಸ್ಲಾ ಶೀಘ್ರದಲ್ಲೇ ಭಾರತದಲ್ಲಿ ತನ್ನ ಮೊದಲ ಎಲೆಕ್ಟ್ರಿಕ್ ಕಾರು ಮಾದರಿಯನ್ನು ಮಾರಾಟ ಮಾಡುವ ಯೋಜನೆಯಲ್ಲಿದ್ದು, ಹೊಸ ಕಾರುಗಳ ರೋಡ್ ಟೆಸ್ಟಿಂಗ್ ಪ್ರಕ್ರಿಯೆ ಜೊತೆಗೆ ಸೂಪರ್ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣಕ್ಕೆ ಸಿದ್ದವಾಗಿದೆ.
ವಾಣಿಜ್ಯ ನಗರಿ ಮುಂಬೈನಲ್ಲಿ ತನ್ನ ಕೇಂದ್ರ ಕಚೇರಿ ತೆರೆಯಲು ಉದ್ದೇಶಿಸಿರುವ ಟೆಸ್ಲಾ(Tesla) ಕಂಪನಿಯು ಮಾಡೆಲ್ 3(Model 3) ಮತ್ತು ಮಾಡೆಲ್ ವೈ(Model Y) ಕಾರು ಮಾದರಿಗಳ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಎರಡು ಕಾರು ಮಾದರಿಗಳಿಂದ ತಲಾ ಎರಡು ವೆರಿಯೆಂಟ್ ಬಿಡುಗಡೆ ಮಾಡುವ ನೀರಿಕ್ಷೆಯಿದೆ.
ಟೆಸ್ಲಾ ಕಂಪನಿಯು ಕೇಂದ್ರ ಸಾರಿಗೆ ಇಲಾಖೆಯಿಂದ ಪಡೆದುಕೊಂಡಿರುವ ಅನುಮತಿ ಪತ್ರದಲ್ಲಿ ಪ್ರಮುಖ ನಾಲ್ಕು ವೆರಿಯೆಂಟ್ಗಳನ್ನು ಬಿಡುಗಡೆ ಮಾಡುವ ಸುಳಿವು ನೀಡಿರುವ ಟೆಸ್ಲಾ ಕಂಪನಿಯು ಹೊಸ ಕಾರುಗಳ ಬಿಡುಗಡೆಗೂ ಮುನ್ನ ಪ್ರಮುಖ ನಗರಗಳಲ್ಲಿ ಸೂಪರ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ನಿರ್ಮಾಣ ಮಾಡುವ ಯೋಜನೆಯಲ್ಲಿದೆ.
ಸೂಪರ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಈಗಾಗಲೇ ಅಮೆರಿಕದಿಂದ ಆಮದು ಮಾಡಿಕೊಂಡಿರುವ ಚಿತ್ರಗಳು ಬಹಿರಂಗವಾಗಿದ್ದು, ಮೊದಲ ಹಂತದಲ್ಲಿ ಕಾರು ಬಿಡುಗಡೆ ಮಾಡಲಿರುವ ನಗರಗಳಲ್ಲಿ ತನ್ನ ವಿನೂತನ ತಂತ್ರಜ್ಞಾನ ಪ್ರೇರಿತ ಚಾರ್ಜಿಂಗ್ ಸೌಲಭ್ಯವನ್ನು ಅಳವಡಿಸಿಕೊಳ್ಳಲಿದೆ.
ಟೆಸ್ಲಾ ಕಂಪನಿಯು ಅಳವಡಿಸಿಕೊಳ್ಳುತ್ತಿರುವ ಸೂಪರ್ ಚಾರ್ಜಿಂಗ್ ನಿಲ್ದಾಣಗಳ ಮೂಲಕ ಕೆಲವೇ ನಿಮಿಷಗಳಲ್ಲಿ ಶೇ.80 ರಷ್ಟು ಬ್ಯಾಟರಿ ಚಾರ್ಜ್ ಮಾಡಿಕೊಳ್ಳಬಹುದಾಗಿದ್ದು, ಸಾಮಾನ್ಯ ಚಾರ್ಜರ್ಗಳಿಗೆ ಹೋಲಿಕೆ ಮಾಡಿದರೆ ಸಾಕಷ್ಟು ಸಮಯ ಉಳಿತಾಯವಾಗಲಿದೆ.
ಇನ್ನು ಹೊಸ ಕಾರುಗಳ ಬಿಡುಗಡೆಯ ಕುರಿತಂತೆ ಇನ್ನು ಕೂಡಾ ಯಾವುದೇ ಅಧಿಕೃತ ಮಾಹಿತಿ ಬಿಟ್ಟುಕೊಡದ ಟೆಸ್ಲಾ ಕಂಪನಿಯು ಪ್ರಮುಖ ನಾಲ್ಕು ರೂಪಾಂತರಗಳನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲು ಅನುಮೋದನೆ ಪಡೆದಿರುವುದು ಮಾತ್ರ ಖಚಿತವಾಗಿದೆ.
ಭಾರತದಲ್ಲಿ ಟೆಸ್ಲಾ ನಿರ್ಮಾಣದ ಎಂಟ್ರಿ ಲೆವಲ್ ಮಾದರಿಯಾದ ಮಾಡೆಲ್ 3 ಕಾರು ಮಾದರಿಯೇ ಮೊದಲ ಹಂತದಲ್ಲಿ ಬಿಡುಗಡೆಯಾಗಬಹುದಾಗದ್ದು, ಮಾಡೆಲ್ 3 ನಂತರ ಮಾಡೆಲ್ ವೈ, ಮಾಡೆಲ್ ಎಸ್ ಸರಣಿ ಎಲೆಕ್ಟ್ರಿಕ್ ಕಾರು ಮಾದರಿಗಳು ಭಾರತವನ್ನು ಪ್ರವೇಶಿಸುವ ಸಾಧ್ಯತೆಗಳಿವೆ.
ಮಾಡೆಲ್ 3 ಕಾರು ಮಾದರಿಯು ಪ್ರತಿ ಚಾರ್ಜ್ಗೆ 500ಕಿ.ಮೀ ಗೂ ಹೆಚ್ಚು ಮೈಲೇಜ್ ಹೊಂದಿದ್ದು, ಬೆಲೆಯಲ್ಲೂ ಇದು ತುಸು ದುಬಾರಿಯಾಗಿರಲಿದೆ. ಹೊಸ ಕಾರು ಎಕ್ಸ್ಶೋರೂಂ ಪ್ರಕಾರ ರೂ. 45 ಲಕ್ಷದಿಂದ ರೂ. 55 ಲಕ್ಷ ಇರಬಹುದೆಂದು ನೀರಿಕ್ಷಿಸಲಾಗಿದೆ.
ಆರಂಭಿಕವಾಗಿ ಸಿಬಿಯು ಆಮದು ನೀತಿಯಡಿಯಲ್ಲಿ ಹೊಸ ಎಲೆಕ್ಟ್ರಿಕ್ ಕಾರುಗಳನ್ನ ಮಾರಾಟ ಮಾಡಲಿರುವ ಟೆಸ್ಲಾ ಕಂಪನಿಯು 2023ರ ವೇಳೆಗೆ ಭಾರತದಲ್ಲೇ ಕಾರುಗಳನ್ನು ಅಸೆಂಬ್ಲಿ ಘಟಕ ಆರಂಭಿಸುವ ಸಿದ್ದತೆಯಲ್ಲಿದೆ.
ಭಾರತದಲ್ಲಿ ಹೊಸ ವಾಹನಗಳ ಮಾರಾಟಕ್ಕಾಗಿ ಮುಂಬೈ, ಬೆಂಗಳೂರು ಮತ್ತು ದೆಹಲಿ ಆಯ್ದಕೊಂಡಿರುವ ಟೆಸ್ಲಾ ಕಂಪನಿಯು ಮುಂಬೈನಲ್ಲಿ ಕೇಂದ್ರ ಕಚೇರಿಯೊಂದಿಗೆ ಮಾರಾಟ ಮಳಿಗೆಯನ್ನು ನಮ್ಮ ಬೆಂಗಳೂರಿನಲ್ಲಿ ಆರ್ಡಿ ಕಚೇರಿ ಜೊತೆ ಮಾರಾಟ ಮಳಿಗೆಯನ್ನು ಮತ್ತು ದೆಹಲಿಯಲ್ಲಿ ಮಾರಾಟ ಮಳಿಗೆಯನ್ನು ತೆರೆಯುತ್ತಿದೆ.
ಸದ್ಯಕ್ಕೆ ಸಿಬಿಯು ಮೂಲಕ ಮತ್ತು 2023ರಿಂದ ಸಿಕೆಡೆ ಆಮದು ನೀತಿ ಅಡಿಯಲ್ಲಿ ವಾಹನ ಮಾರಾಟ ಕೈಗೊಳ್ಳಲಿರುವ ಟೆಸ್ಲಾ ಕಂಪನಿಯು ಹೊಸ ಯೋಜನೆಯ ಮೇಲೆ ಭಾರೀ ಪ್ರಮಾಣದ ಹೂಡಿಕೆ ಮಾಡುತ್ತಿದ್ದು, ಭವಿಷ್ಯದ ವಾಹನಗಳ ಮೇಲೆ ಟೆಸ್ಲಾ ಕಂಪನಿಯು ಭಾರೀ ನೀರಿಕ್ಷೆಯಿಟ್ಟುಕೊಂಡಿದೆ.
ಇದರ ನಡುವೆ ವಿದೇಶಿ ವಸ್ತುಗಳಿಗೆ ಜಗತ್ತಿನಲ್ಲೇ ಅತಿ ಹೆಚ್ಚು ಆಮದು ಸುಂಕ ವಿಧಿಸುವ ಭಾರತ ಸರ್ಕಾರವು ಭವಿಷ್ಯದ ವಾಹನಗಳಾದ ಎಲೆಕ್ಟ್ರಿಕ್ ಮಾದರಿಗಳಿಗೆ ಕೆಲವು ವಿನಾಯ್ತಿ ನೀಡುವಂತೆ ಟೆಸ್ಲಾ ಕಂಪನಿಯು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿತ್ತು.
ಜಗತ್ತಿನಾದ್ಯಂತ ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಮಟ್ಟದ ಆದ್ಯತೆ ನೀಡುತ್ತಿರುವುದರಿಂದ ಭಾರತ ಸರ್ಕಾರವು ಕೂಡಾ ಇಂಧನ ಆಧರಿತ ವಾಹನಗಳನ್ನು ಹೊರತುಪಡಿಸಿ ಆಮದುಗೊಳ್ಳಿರುವ ಎಲೆಕ್ಟ್ರಿಕ್ ಮಾದರಿಗಳಿಗೆ ಆಮದು ಸುಂಕದಲ್ಲಿ ವಿನಾಯ್ತಿ ನೀಡಬಹುದೆಂಬ ನೀರಿಕ್ಷೆಯಲ್ಲಿತ್ತು.
ಭಾರತದಲ್ಲಿ ವಿದೇಶ ವಸ್ತುಗಳಿಗೆ ವಿಧಿಸುವ ಆಮದು ಸುಂಕ ಕುರಿತು ಟ್ವಿಟ್ ಮಾಡಿದ್ದ ಟೆಸ್ಲಾ ಸಿಇಒ ಎಲಾನ್ ಮಸ್ಕ್ ಕೂಡಾ ಭಾರತ ಸರ್ಕಾರದಿಂದ ಉತ್ತಮ ಪ್ರಕ್ರಿಯೆ ನೀರಿಕ್ಷೆಯಲ್ಲಿದ್ದೇವೆ ಎಂದಿದ್ದರು. ಆದರೆ ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಉತ್ತೇಜನಕ್ಕೆ ಭಾರತದಲ್ಲೇ ನಿರ್ಮಾಣವಾಗುವ ಇವಿ ವಾಹನಗಳಿಗೆ ಫೇಮ್ 2 ಸಬ್ಸಡಿ ಯೋಜನೆಯಡಿ ಹಲವಾರು ವಿನಾಯ್ತಿಗಳನ್ನು ನೀಡಲಾಗುತ್ತಿದ್ದು, ಹೊಸ ಯೋಜನೆಗಳು ಜಾರಿಯಲ್ಲಿರುವಾದ ಆಮದು ಇವಿ ವಾಹನಗಳಿಗಾಗಿ ಪ್ರತ್ಯೇಕ ವಿನಾಯ್ತಿ ಪರಿಗಣಿಸಲು ಸಾಧ್ಯವಿಲ್ಲವೆಂದು ಕ್ರಿಶನ್ ಪಾಲ್ ಗುರ್ಜಾರ್ ಪ್ರಕ್ರಿಯೆಸಿದ್ದರು.
ಕೇಂದ್ರ ಸರ್ಕಾರದ ಸ್ಪಷ್ಟನೆ ನಂತರ ಟೆಸ್ಲಾ ಕಂಪನಿಯು ಯಾವುದೇ ರೀತಿಯ ಪ್ರಕ್ರಿಯೆ ಹಂಚಿಕೊಂಡಿಲ್ಲವಾದರೂ ಕೇಂದ್ರ ತೆರಿಗೆ ನೀತಿಗಳುವ ಟೆಸ್ಲಾ ಭಾರತದ ಪ್ರವೇಶವನ್ನು ದುಬಾರಿಯಾಗಿಸಲಿದ್ದು, ಭಾರತದಲ್ಲೇ ನಿರ್ಮಾಣವಾಗುವ ಇವಿ ವಾಹನಗಳಿಗೆ ಕೇಂದ್ರ ಸರ್ಕಾರವು ಹೆಚ್ಚಿನ ನೆರವು ನೀಡಬೇಕೆಂಬುವುದು ಮತ್ತೆ ಕೆಲವು ಎಲೆಕ್ಟ್ರಿಕ್ ವಾಹನ ಕಂಪನಿಗಳ ಮನವಿಯಾಗಿದೆ.