ಭಾರತದಲ್ಲಿ ಮೊದಲ ಕಾರ್ ಶೋರೂಂ ತೆರೆಯಲು ಸಜ್ಜಾದ ಟೆಸ್ಲಾ
ಟೆಸ್ಲಾ ಕಂಪನಿಯು ಭಾರತದಲ್ಲಿ ತನ್ನ ಉದ್ಯಮ ವ್ಯವಹಾರ ವಿಸ್ತರಿಸುವ ಸಿದ್ದತೆಯಲಿದ್ದು, ಕಾರು ಮಾರಾಟಕ್ಕಾಗಿ ಈಗಾಗಲೇ ಅಗತ್ಯ ನೋಂದಣಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದೆ. ಟೆಸ್ಲಾ ಕಂಪನಿಯು ದೇಶದ ಪ್ರಮುಖ ಮೂರು ಮಾಹಾನಗರಗಳಲ್ಲಿ ಹೊಸ ಶೋರೂಂ ತೆರೆಯುವ ಯೋಜನೆಯಲ್ಲಿದ್ದು, ಮೊದಲ ಶೋರೂಂ ಅನ್ನು ಮುಂಬೈನಲ್ಲಿ ಆರಂಭಿಸುತ್ತಿದೆ.

ಐಟಿ ಸಿಟಿ ಬೆಂಗಳೂರಿನಲ್ಲಿ ಹೊಸ ಉದ್ಯಮ ಘಟಕವನ್ನು ತೆರೆಯುವ ಬಗ್ಗೆ ಇತ್ತೀಚೆಗೆ ಮಾಹಿತಿ ಬಹಿರಂಗಪಡಿಸಿದ್ದ ಟೆಸ್ಲಾ ಕಂಪನಿಯು ಬೆಂಗಳೂರು, ಮುಂಬೈ ಮತ್ತು ದೆಹಲಿಯಲ್ಲಿ ಮೂರು ಹೊಸ ಶೋರೂಂಗಳನ್ನು ತೆರೆಯುವ ಸುಳಿವು ನೀಡಿತ್ತು. ಬೆಂಗಳೂರಿನ ಮಲ್ಯ ರಸ್ತೆಯಲ್ಲಿರುವ ಸ್ಕಾವ್ 909 ಕಾರ್ಪೊರೇಟ್ ಕಚೇರಿಯ 14ನೇ ಮಹಡಿಯಲ್ಲಿ ಟೆಸ್ಲಾ ಇಂಡಿಯಾ ಮುಖ್ಯ ಕಚೇರಿಯನ್ನು ಆರಂಭಿಸಲಾಗಿದ್ದು, ಇದೀಗ ಮೊದಲ ಶೋರೂಂ ಅನ್ನು ಮುಂಬೈನಲ್ಲಿ ತೆರೆಯಲಾಗುತ್ತಿದೆ.

ಮುಂಬೈನ ಪ್ರತಿಷ್ಠಿತ ಲೋವರ್ ಪ್ಯಾರೆಲ್-ವರ್ಲಿಯಲ್ಲಿ ಹೊಸ ಶೋರೂಂ ಆರಂಭಿಸಲಾಗುತ್ತಿದ್ದು, ನಮ್ಮ ಬೆಂಗಳೂರಿನಲ್ಲಿ ಪ್ರಧಾನ ಕಚೇರಿಯ ಜೊತೆಗೆ ಪ್ರತ್ಯೇಕವಾಗಿ ಮಾರಾಟ ಮಳಿಗೆಯನ್ನು ಸಹ ತೆರೆಯಲಾಗುತ್ತಿದೆ.

ಟೆಸ್ಲಾ ಇಂಡಿಯಾ ಮೋಟಾರ್ಸ್ ಮತ್ತು ಎನರ್ಜಿ ಪ್ರೈವೇಟ್ ಲಿಮಿಟೆಡ್ ಹೆಸರಿನಲ್ಲಿ ಟೆಸ್ಲಾವನ್ನು ಬೆಂಗಳೂರಿನಲ್ಲಿ ನೋಂದಾಯಿಸಲಾಗಿದ್ದು, ಟೆಸ್ಲಾ ಕಂಪನಿಯು ಭಾರತದಲ್ಲಿ ಸಿಕೆಡಿ ಆಮದು ನೀತಿ ಅಡಿಯಲ್ಲಿ ಹೊಸ ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡಲಿದೆ.

ಸಿಕೆಡಿ ಆಮದು ನೀತಿ ಅಡಿಯಲ್ಲಿ ವಾಹನ ತಯಾರಕ ಕಂಪನಿಗಳು ವಿದೇಶಿ ಮಾರುಕಟ್ಟೆಗಳಿಂದಲೇ ಬಿಡಿಭಾಗಗಳನ್ನು ಆಮದು ಮಾಡಿಕೊಂಡು ಸ್ಥಳೀಯ ಘಟಕದಲ್ಲಿ ಜೋಡಣೆ ಮಾಡಿ ಮಾರಾಟ ಪ್ರಕ್ರಿಯೆಯನ್ನು ಕೈಗೊಳ್ಳುತ್ತಿವೆ. ಸಂಪೂರ್ಣವಾಗಿ ವಿದೇಶಿ ಮಾರುಕಟ್ಟೆಗಳಲ್ಲೇ ಸಿದ್ದವಾಗಿರುವ ಬರುವ ಸಿಬಿಯು ಆಮದು ನೀತಿಯಡಿಯಲ್ಲಿ ಮಾರಾಟವಾಗುವ ವಾಹನಗಳಿಂತಲೂ ಸಿಕೆಡಿ ಆಮದು ನೀತಿ ಅಡಿಯಲ್ಲಿ ಮಾರಾಟವಾಗುವ ವಾಹನಗಳಿಂದ ಸ್ಥಳೀಯವಾಗಿ ಹೂಡಿಕೆ, ಸ್ಥಳೀಯರಿಗೆ ಉದ್ಯೋಗ ಅವಕಾಶಗಳನ್ನು ಕಲ್ಪಿಸಲು ಸಾಧ್ಯವಾಗಲಿದೆ.

ಹೊಸ ವಾಹನ ಉತ್ಪಾದನಾ ಘಟಕವು ಯಾವುದೇ ರಾಜ್ಯದಲ್ಲಿ ಸ್ಥಾಪನೆಯಾಗುವುದಾದರೇ ಸ್ಥಳೀಯ ಸರ್ಕಾರಗಳೊಂದಿಗೆ ಮೂಲಭೂತ ಸೌಕರ್ಯಗಳಿಗಾಗಿ ಒಪ್ಪಂದ ಮಾಡಿಕೊಳ್ಳುವ ಅನಿವಾರ್ಯತೆಯಿದ್ದು, ಮೂಲಭೂತ ಸೌಕರ್ಯಗಳಿಗೆ ಪರ್ಯಾಯವಾಗಿ ಸ್ಥಳೀಯರಿಗೆ ಹೆಚ್ಚಿನ ಮಟ್ಟದ ಉದ್ಯೋಗ ಅವಕಾಶವನ್ನು ನೀಡಬೇಕಾಗುತ್ತದೆ.

ಈ ಹಿನ್ನಲೆಯಲ್ಲಿ ಸಿಕೆಡಿ ಮೂಲಕ ಭಾರತದಲ್ಲಿ ಕಾರು ಮಾರಾಟ ಪ್ರಕ್ರಿಯೆ ಆರಂಭಿಸುತ್ತಿರುವ ಟೆಸ್ಲಾ ಕಂಪನಿಯ ಹೊಸ ಯೋಜನೆಗಾಗಿ ಕರ್ನಾಟಕವನ್ನು ಆಯ್ದಕೊಂಡಿರುವುದು ರಾಜ್ಯದಲ್ಲಿ ಬೃಹತ್ ಪ್ರಮಾಣದ ಬಂಡವಾಳ ಹೂಡಿಕೆ ಮತ್ತು ಸ್ಥಳೀಯರಿಗೆ ಹೆಚ್ಚಿನ ಮಟ್ಟದ ಉದ್ಯೋಗ ಅವಕಾಶಗಳನ್ನು ಕಲ್ಪಿಸಲು ಸಹಕಾರಿಯಾಗಲಿದೆ ಎನ್ನಬಹುದು.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಟೆಸ್ಲಾ ಕಂಪನಿಯು ಹೊಸ ಎಲೆಕ್ಟ್ರಿಕ್ ಕಾರು ಖರೀದಿಗಾಗಿ ಶೀಘ್ರದಲ್ಲೇ ಅಧಿಕೃತ ಬುಕ್ಕಿಂಗ್ ಪ್ರಕ್ರಿಯೆ ಆರಂಭಿಸಲಿದ್ದು, ಜೂನ್ ಅಥವಾ ಜುಲೈ ಆರಂಭದಲ್ಲಿ ಕಾರು ವಿತರಣೆಗೆ ಅಧಿಕೃತ ಚಾಲನೆ ನೀಡುವುದಾಗಿ ಖಚಿತಪಡಿಸಿದೆ.

ಭಾರತದಲ್ಲಿ ಟೆಸ್ಲಾ ನಿರ್ಮಾಣದ ಮಾಡೆಲ್ 3 ಕಾರು ಮಾದರಿಯು ಮೊದಲ ಹಂತದಲ್ಲಿ ಬಿಡುಗಡೆಯಾಗಲಿದ್ದು, ಮಾಡೆಲ್ 3 ನಂತರ ಮಾಡೆಲ್ ಎಸ್, ಮಾಡೆಲ್ ವೈ ಸರಣಿ ಎಲೆಕ್ಟ್ರಿಕ್ ಕಾರು ಮಾದರಿಗಳು ಭಾರತವನ್ನು ಪ್ರವೇಶಿಸಲಿವೆ.
MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಮಾಡೆಲ್ 3 ಕಾರು ಮಾದರಿಯು ಪ್ರತಿ ಚಾರ್ಜ್‌ಗೆ 500ಕಿ.ಮೀ ಗೂ ಹೆಚ್ಚು ಮೈಲೇಜ್ ಹೊಂದಿದ್ದು, ಬೆಲೆಯಲ್ಲೂ ಇದು ತುಸು ದುಬಾರಿಯಾಗಿರಲಿದೆ. ಹೊಸ ಕಾರು ಎಕ್ಸ್‌ಶೋರೂಂ ಪ್ರಕಾರ ರೂ. 45 ಲಕ್ಷದಿಂದ ರೂ. 55 ಲಕ್ಷ ಇರಬಹುದೆಂದು ನೀರಿಕ್ಷಿಸಲಾಗಿದೆ. ಆರಂಭಿಕವಾಗಿ ಸಿಬಿಯು ಆಮದು ನೀತಿಯಡಿಯಲ್ಲಿ ಹೊಸ ಎಲೆಕ್ಟ್ರಿಕ್ ಕಾರುಗಳನ್ನ ಮಾರಾಟ ಮಾಡಲಿರುವ ಟೆಸ್ಲಾ ಕಂಪನಿಯು 2023ರ ವೇಳೆಗೆ ಭಾರತದಲ್ಲಿ ಕಾರು ಉತ್ಪಾದನೆಯನ್ನು ಆರಂಭಿಸುವ ಸಿದ್ದತೆಯಲ್ಲಿದೆ.


Click it and Unblock the Notifications








