ಬೆಂಗಳೂರು ಸೇರಿ ದೇಶದ ಪ್ರಮುಖ ಮೂರು ನಗರಗಳಲ್ಲಿ ಶೋರೂಂ ತೆರೆಯಲು ಸಿದ್ದವಾದ ಟೆಸ್ಲಾ

ಅಮೆರಿಕ ಜನಪ್ರಿಯ ಎಲೆಕ್ಟ್ರಿಕ್ ಕಾರು ಉತ್ಪಾದನಾ ಕಂಪನಿಯಾಗಿರುವ ಟೆಸ್ಲಾ ಭಾರತದಲ್ಲೂ ತನ್ನ ಉದ್ಯಮ ವ್ಯವಹಾರ ವಿಸ್ತರಿಸುವ ಸಿದ್ದತೆಯಲಿದ್ದು, ಕಾರು ಮಾರಾಟಕ್ಕಾಗಿ ಈಗಾಗಲೇ ಅಗತ್ಯ ನೋಂದಣಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿರುವ ಟೆಸ್ಲಾ ಕಂಪನಿಯು ಇದೀಗ ದೇಶದ ಪ್ರಮುಖ ಮೂರು ನಗರಗಳಲ್ಲಿ ಹೊಸ ಶೋರೂಂ ತೆರೆಯುವ ಯೋಜನೆಗೆ ಚಾಲನೆ ನೀಡಿದೆ.

ಬೆಂಗಳೂರು ಸೇರಿ ದೇಶದ ಪ್ರಮುಖ ಮೂರು ನಗರಗಳಲ್ಲಿ ಶೋರೂಂ ತೆರೆಯಲು ಸಿದ್ದವಾದ ಟೆಸ್ಲಾ

ಬೆಂಗಳೂರಿನಲ್ಲೇ ಹೊಸ ಉದ್ಯಮ ಘಟಕವನ್ನು ತೆರೆಯುವ ಬಗ್ಗೆ ಇತ್ತೀಚೆಗೆ ಮಾಹಿತಿ ಬಹಿರಂಗಪಡಿಸಿದ್ದ ಟೆಸ್ಲಾ ಕಂಪನಿಯು ಇದೀಗ ಬೆಂಗಳೂರು, ಮುಂಬೈ ಮತ್ತು ದೆಹಲಿಯಲ್ಲಿ ಮೂರು ಹೊಸ ಶೋರೂಂಗಳನ್ನು ತೆರೆಯಲು ಸ್ಥಳ ಹುಡುಕಾಟ ನಡೆಸಿರುವ ಬಗ್ಗೆ ರಾಯಿಟರ್ಸ್ ಸುದ್ದಿ ಸಂಸ್ಥೆಯು ವರದಿ ಮಾಡಿದೆ. ಮೂರು ಮಾಹಾನಗರಗಳಲ್ಲಿ 20,000ದಿಂದ 30,000 ಚದರ ಅಡಿ ವಾಣಿಜ್ಯ ಜಾಗವನ್ನು ಹುಡುಕುತ್ತಿರುವ ಕಂಪನಿಯು ಇದಕ್ಕಾಗಿ ಪ್ರತ್ಯೇಕ ಅಧಿಕಾರಿಗಳ ತಂಡವನ್ನು ನೇಮಿಸಿದ್ದು, ಟೆಸ್ಲಾ ತನ್ನ ಮೊದಲ ಎಲೆಕ್ಟ್ರಿಕ್ ಕಾರು ಮಾದರಿಯನ್ನು 2021ರ ಮಧ್ಯಂತರದಲ್ಲಿ ಬಿಡುಗಡೆಗೊಳಿಸಲಿದೆ.

ಬೆಂಗಳೂರು ಸೇರಿ ದೇಶದ ಪ್ರಮುಖ ಮೂರು ನಗರಗಳಲ್ಲಿ ಶೋರೂಂ ತೆರೆಯಲು ಸಿದ್ದವಾದ ಟೆಸ್ಲಾ

ಟೆಸ್ಲಾ ಇಂಡಿಯಾ ಮೋಟಾರ್ಸ್ ಮತ್ತು ಎನರ್ಜಿ ಪ್ರೈವೇಟ್ ಲಿಮಿಟೆಡ್ ಹೆಸರಿನಲ್ಲಿ ಟೆಸ್ಲಾವನ್ನು ಬೆಂಗಳೂರಿನಲ್ಲಿ ನೋಂದಾಯಿಸಲಾಗಿದ್ದು, ಸಂಶೋಧನೆ ಮತ್ತು ಅಭಿವೃದ್ಧಿ(Research and development) ಕೇಂದ್ರಕ್ಕಾಗಿ ಈಗಾಗಲೇ ಸ್ಥಳ ಗುರುತಿಸಲಾಗಿದೆ.

ಬೆಂಗಳೂರು ಸೇರಿ ದೇಶದ ಪ್ರಮುಖ ಮೂರು ನಗರಗಳಲ್ಲಿ ಶೋರೂಂ ತೆರೆಯಲು ಸಿದ್ದವಾದ ಟೆಸ್ಲಾ

ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರವನ್ನು ಬೆಂಗಳೂರಿನ ಲಾವೆಲ್ಲೆ ರಸ್ತೆಯಲ್ಲಿರುವ ಸ್ಕಾವ್ 909 ಕಾರ್ಪೊರೇಟ್ ಕಚೇರಿಯ 14ನೇ ಮಹಡಿಯಲ್ಲಿ ಆರಂಭಿಸಲಾಗಿದ್ದು, ಇದೀಗ ಹೊಸ ಶೋರೂಂಗಳ ಮೂಲಕ ಮಾರಾಟ ಮತ್ತು ಸೇವಾ ಕೇಂದ್ರಗಳನ್ನು ತೆರೆಯಲು ಸಿದ್ದತೆ ನಡೆಸಲಾಗುತ್ತಿದೆ.

ಬೆಂಗಳೂರು ಸೇರಿ ದೇಶದ ಪ್ರಮುಖ ಮೂರು ನಗರಗಳಲ್ಲಿ ಶೋರೂಂ ತೆರೆಯಲು ಸಿದ್ದವಾದ ಟೆಸ್ಲಾ

ಇನ್ನು ಟೆಸ್ಲಾ ಕಂಪನಿಯು ಭಾರತದಲ್ಲಿ ಸಿಕೆಡಿ ಆಮದು ನೀತಿ ಅಡಿಯಲ್ಲಿ ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡಲಿದ್ದು, ಸಿಕೆಡಿ ಆಮದು ನೀತಿ ಅಡಿಯಲ್ಲಿ ವಾಹನ ತಯಾರಕ ಕಂಪನಿಗಳು ವಿದೇಶಿ ಮಾರುಕಟ್ಟೆಗಳಿಂದಲೇ ಬಿಡಿಭಾಗಗಳನ್ನು ಆಮದು ಮಾಡಿಕೊಂಡು ಸ್ಥಳೀಯ ಘಟಕದಲ್ಲಿ ಜೋಡಣೆ ಮಾಡಿ ಮಾರಾಟ ಪ್ರಕ್ರಿಯೆಯನ್ನು ಕೈಗೊಳ್ಳುತ್ತಿವೆ.

ಬೆಂಗಳೂರು ಸೇರಿ ದೇಶದ ಪ್ರಮುಖ ಮೂರು ನಗರಗಳಲ್ಲಿ ಶೋರೂಂ ತೆರೆಯಲು ಸಿದ್ದವಾದ ಟೆಸ್ಲಾ

ಸಂಪೂರ್ಣವಾಗಿ ವಿದೇಶಿ ಮಾರುಕಟ್ಟೆಗಳಲ್ಲೇ ಸಿದ್ದವಾಗಿರುವ ಬರುವ ಸಿಬಿಯು ಆಮದು ನೀತಿಯಡಿಯಲ್ಲಿ ಮಾರಾಟವಾಗುವ ವಾಹನಗಳಿಂತಲೂ ಸಿಕೆಡಿ ಆಮದು ನೀತಿ ಅಡಿಯಲ್ಲಿ ಮಾರಾಟವಾಗುವ ವಾಹನಗಳಿಂದ ಸ್ಥಳೀಯವಾಗಿ ಹೂಡಿಕೆ, ಸ್ಥಳೀಯರಿಗೆ ಉದ್ಯೋಗ ಅವಕಾಶಗಳನ್ನು ಕಲ್ಪಿಸಲು ಸಾಧ್ಯವಾಗಲಿದೆ.

ಬೆಂಗಳೂರು ಸೇರಿ ದೇಶದ ಪ್ರಮುಖ ಮೂರು ನಗರಗಳಲ್ಲಿ ಶೋರೂಂ ತೆರೆಯಲು ಸಿದ್ದವಾದ ಟೆಸ್ಲಾ

ಹೊಸ ವಾಹನ ಉತ್ಪಾದನಾ ಘಟಕವು ಯಾವುದೇ ರಾಜ್ಯದಲ್ಲಿ ಸ್ಥಾಪನೆಯಾಗುವುದಾದರೇ ಸ್ಥಳೀಯ ಸರ್ಕಾರಗಳೊಂದಿಗೆ ಮೂಲಭೂತ ಸೌಕರ್ಯಗಳಿಗಾಗಿ ಒಪ್ಪಂದ ಮಾಡಿಕೊಳ್ಳುವ ಅನಿವಾರ್ಯತೆಯಿದ್ದು, ಮೂಲಭೂತ ಸೌಕರ್ಯಗಳಿಗೆ ಪರ್ಯಾಯವಾಗಿ ಸ್ಥಳೀಯರಿಗೆ ಹೆಚ್ಚಿನ ಮಟ್ಟದ ಉದ್ಯೋಗ ಅವಕಾಶವನ್ನು ನೀಡಬೇಕಾಗುತ್ತದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಬೆಂಗಳೂರು ಸೇರಿ ದೇಶದ ಪ್ರಮುಖ ಮೂರು ನಗರಗಳಲ್ಲಿ ಶೋರೂಂ ತೆರೆಯಲು ಸಿದ್ದವಾದ ಟೆಸ್ಲಾ

ಈ ಹಿನ್ನಲೆಯಲ್ಲಿ ಸಿಕೆಡಿ ಮೂಲಕ ಭಾರತದಲ್ಲಿ ಕಾರು ಮಾರಾಟ ಪ್ರಕ್ರಿಯೆ ಆರಂಭಿಸುತ್ತಿರುವ ಟೆಸ್ಲಾ ಕಂಪನಿಯ ಹೊಸ ಯೋಜನೆಗಾಗಿ ಕರ್ನಾಟಕವನ್ನು ಆಯ್ದಕೊಂಡಿರುವುದು ರಾಜ್ಯದಲ್ಲಿ ಬೃಹತ್ ಪ್ರಮಾಣದ ಬಂಡವಾಳ ಹೂಡಿಕೆ ಮತ್ತು ಸ್ಥಳೀಯರಿಗೆ ಹೆಚ್ಚಿನ ಮಟ್ಟದ ಉದ್ಯೋಗ ಅವಕಾಶಗಳನ್ನು ಕಲ್ಪಿಸಲು ಸಹಕಾರಿಯಾಗಲಿದೆ ಎನ್ನಬಹುದು.

ಬೆಂಗಳೂರು ಸೇರಿ ದೇಶದ ಪ್ರಮುಖ ಮೂರು ನಗರಗಳಲ್ಲಿ ಶೋರೂಂ ತೆರೆಯಲು ಸಿದ್ದವಾದ ಟೆಸ್ಲಾ

ಟೆಸ್ಲಾ ಕಂಪನಿಯು ಹೊಸ ಎಲೆಕ್ಟ್ರಿಕ್ ಕಾರು ಖರೀದಿಗಾಗಿ ಶೀಘ್ರದಲ್ಲೇ ಅಧಿಕೃತ ಬುಕ್ಕಿಂಗ್ ಪ್ರಕ್ರಿಯೆ ಆರಂಭಿಸಲಿದ್ದು, ಜೂನ್ ಅಥವಾ ಜುಲೈ ಆರಂಭದಲ್ಲಿ ಕಾರು ವಿತರಣೆಗೆ ಅಧಿಕೃತ ಚಾಲನೆ ನೀಡುವುದಾಗಿ ಖಚಿತಪಡಿಸಿದೆ. ಭಾರತದಲ್ಲಿ ಟೆಸ್ಲಾ ನಿರ್ಮಾಣದ ಮಾಡೆಲ್ 3 ಕಾರು ಮಾದರಿಯು ಮೊದಲ ಹಂತದಲ್ಲಿ ಬಿಡುಗಡೆಯಾಗಲಿದ್ದು, ಮಾಡೆಲ್ 3 ನಂತರ ಮಾಡೆಲ್ ಎಸ್, ಮಾಡೆಲ್ ವೈ ಸರಣಿ ಎಲೆಕ್ಟ್ರಿಕ್ ಕಾರು ಮಾದರಿಗಳು ಭಾರತವನ್ನು ಪ್ರವೇಶಿಸಲಿವೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಬೆಂಗಳೂರು ಸೇರಿ ದೇಶದ ಪ್ರಮುಖ ಮೂರು ನಗರಗಳಲ್ಲಿ ಶೋರೂಂ ತೆರೆಯಲು ಸಿದ್ದವಾದ ಟೆಸ್ಲಾ

ಮಾಡೆಲ್ 3 ಕಾರು ಮಾದರಿಯು ಪ್ರತಿ ಚಾರ್ಜ್‌ಗೆ 500ಕಿ.ಮೀ ಗೂ ಹೆಚ್ಚು ಮೈಲೇಜ್ ಹೊಂದಿದ್ದು, ಬೆಲೆಯಲ್ಲೂ ಇದು ತುಸು ದುಬಾರಿಯಾಗಿರಲಿದೆ. ಹೊಸ ಕಾರು ಎಕ್ಸ್‌ಶೋರೂಂ ಪ್ರಕಾರ ರೂ. 45 ಲಕ್ಷದಿಂದ ರೂ. 55 ಲಕ್ಷ ಇರಬಹುದೆಂದು ನೀರಿಕ್ಷಿಸಲಾಗಿದೆ. ಆರಂಭಿಕವಾಗಿ ಸಿಬಿಯು ಆಮದು ನೀತಿಯಡಿಯಲ್ಲಿ ಹೊಸ ಎಲೆಕ್ಟ್ರಿಕ್ ಕಾರುಗಳನ್ನ ಮಾರಾಟ ಮಾಡಲಿರುವ ಟೆಸ್ಲಾ ಕಂಪನಿಯು 2023ರ ವೇಳೆಗೆ ಭಾರತದಲ್ಲಿ ಕಾರು ಉತ್ಪಾದನೆಯನ್ನು ಆರಂಭಿಸುವ ಸಿದ್ದತೆಯಲ್ಲಿದೆ.

Most Read Articles

Kannada
Read more on ಟೆಸ್ಲಾ tesla
English summary
Tesla to set up electric car showrooms in Bangalore, Delhi & Mumbai. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X