Just In
- 2 hrs ago
ಅನಾವರಣವಾಯ್ತು ಫೋಕ್ಸ್ವ್ಯಾಗನ್ ಗಾಲ್ಫ್ ಜಿಟಿಐ ಕ್ಲಬ್ಸ್ಪೋರ್ಟ್ 45 ಕಾರು
- 4 hrs ago
35 ಸಾವಿರಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ಉಚಿತ ಲಸಿಕೆ ನೀಡಲು ಮುಂದಾದ ಟಿವಿಎಸ್ ಕಂಪನಿ
- 6 hrs ago
ವಾರದ ಪ್ರಮುಖ ಸುದ್ದಿ: ಏರ್ಬ್ಯಾಗ್ ಕಡ್ಡಾಯ, ಬಿಡುಗಡೆಗೆ ಸಜ್ಜಾದ ಸಿಟ್ರನ್, ಟೊಯೊಟಾ ನೌಕರರ ಮುಷ್ಕರ ಅಂತ್ಯ!
- 16 hrs ago
ವೆಂಟೊ ಟ್ರೆಂಡ್ಲೈನ್ ವೆರಿಯೆಂಟ್ ಬುಕ್ಕಿಂಗ್ ಪ್ರಕ್ರಿಯೆಗೆ ಸ್ಥಗಿತಗೊಳಿಸಿದ ಫೋಕ್ಸ್ವ್ಯಾಗನ್
Don't Miss!
- Movies
ರಾಖಿ ಸಾವಂತ್ ಬಯೋಪಿಕ್ ಈ ಸ್ಟಾರ್ ನಟಿಯೇ ಮಾಡಬೇಕಂತೆ
- News
Breaking: ರಮೇಶ್ ಜಾರಕಿಹೊಳಿ ವಿರುದ್ಧ ನೀಡಿದ್ದ ದೂರು ವಾಪಸ್ ಪಡೆದ ದಿನೇಶ್ ಕಲ್ಲಹಳ್ಳಿ?
- Sports
ಐಪಿಎಲ್ 2021: ಈ ಬಾರಿಯ ಆವೃತ್ತಿಯ ಕೆಲ ಗಮನಾರ್ಹ ಬದಲಾವಣೆಗಳು
- Finance
ದಕ್ಷಿಣ ಭಾರತದ ಅತಿದೊಡ್ಡ ಆಭರಣ ರೀಟೈಲರ್ ಮೇಲೆ ಐಟಿ ದಾಳಿ
- Lifestyle
"ವಾರ ಭವಿಷ್ಯ: ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?"
- Education
Mandya District Court Recruitment 2021: 10 ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ನಮ್ಮ ಬೆಂಗಳೂರಿನಲ್ಲೇ ನಿರ್ಮಾಣಗೊಳ್ಳಲಿದೆ ಟೆಸ್ಲಾ ಹೊಸ ಎಲೆಕ್ಟಿಕ್ ಕಾರು ಉತ್ಪಾದನಾ ಘಟಕ
ಐಷಾರಾಮಿ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆ ಮತ್ತು ಮಾರಾಟದಲ್ಲಿ ಜನಪ್ರಿಯತೆ ಸಾಧಿಸಿರುವ ಅಮೆರಿಕದ ದೈತ್ಯ ಕಾರು ಕಂಪನಿಯಾದ ಟೆಸ್ಲಾ ಗ್ರಾಹಕರ ಬೇಡಿಕೆಯೆಂತೆ ವಿಶ್ವದ ಪ್ರಮುಖ ಮಾರುಕಟ್ಟೆಗಳಲ್ಲಿ ತನ್ನ ಹೊಸ ವಾಹನಗಳ ಮಾರಾಟ ಜಾಲವನ್ನು ವಿಸ್ತರಿಸುತ್ತಿದ್ದು, ಭಾರತದಲ್ಲೂ ತನ್ನ ವಿವಿಧ ಎಲೆಕ್ಟ್ರಿಕ್ ಕಾರು ಮಾರಾಟ ಆರಂಭಿಸಲು ಅಂತಿಮ ಹಂತದ ಸಿದ್ದತೆಯಲ್ಲಿದೆ.

ಮಾಲಿನ್ಯ ತಡೆಗಾಗಿ ಭಾರತ ಸೇರಿದಂತೆ ವಿಶ್ವಾದ್ಯಂತ ಬಹುತೇಕ ರಾಷ್ಟ್ರಗಳಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಹಲವಾರು ಹೊಸ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಗ್ರಾಹಕರ ಬೇಡಿಕೆಯೆಂತೆ ಹಲವು ಹೊಸ ಮಾದರಿಯ ಎಲೆಕ್ಟ್ರಿಕ್ ವಾಹನಗಳು ಮಾರುಕಟ್ಟೆ ಪ್ರವೇಶಿಸುತ್ತಿವೆ. ಮುಂದಿನ ಕೆಲವೇ ದಿನಗಳಲ್ಲಿ ಹಲವು ಆಟೋ ಉತ್ಪಾದನಾ ಕಂಪನಿಗಳು ತಮ್ಮ ಬಹುನೀರಿಕ್ಷಿತ ಇವಿ ವಾಹನ ಮಾದರಿಗಳನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದ್ದು, ಜಾಗತಿಕ ಮನ್ನಣೆ ಪಡೆದಿರುವ ಟೆಸ್ಲಾ ಕೂಡಾ ಇದೀಗ ಭಾರತದಲ್ಲಿ ಮೊದಲ ಇವಿ ಕಾರುಗಳ ಮಾರಾಟಕ್ಕೆ ಚಾಲನೆ ನೀಡುತ್ತಿದೆ.

ಮುಂಬರುವ ಜೂನ್ ಮಧ್ಯಂತರದಲ್ಲಿ ತನ್ನ ಮೊದಲ ಎಲೆಕ್ಟ್ರಿಕ್ ಕಾರು ಮಾದರಿಯಾಗಿ ಮಾಡೆಲ್ 3 ಆವೃತ್ತಿಯನ್ನು ಭಾರತದಲ್ಲಿ ಬಿಡುಗಡೆ ಮಾಡುತ್ತಿರುವ ಟೆಸ್ಲಾ ಕಂಪನಿಯು ಬೆಂಗಳೂರಿನಲ್ಲಿ ಈಗಾಗಲೇ ಸಂಶೋಧನೆ ಮತ್ತು ಅಭಿವೃದ್ಧಿ(Research and development) ಕೇಂದ್ರವನ್ನು ತೆರೆಯುವುದಾಗಿ ಹೇಳಿಕೊಂಡಿದ್ದು, ಇದೀಗ ಟೆಸ್ಲಾ ಕಂಪನಿಯ ಉತ್ಪಾದನಾ ಘಟಕವು ಸಹ ಬೆಂಗಳೂರಿನಲ್ಲಿಯೇ ನಿರ್ಮಾಣವಾಗುವುದು ಬಹುತೇಕ ಖಚಿತವಾಗಿದೆ.

ಈ ಮೊದಲು ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರವನ್ನು ಬೆಂಗಳೂರಿನಲ್ಲಿ ಮತ್ತು ಅಸೆಂಬ್ಲಿ ಘಟಕವನ್ನು ಚೆನ್ನೈ ಅಥವಾ ಪುಣೆಯಲ್ಲಿ ತೆರೆಯುವ ಯೋಜನೆಯಿತ್ತು. ಆದರೆ ಹೊಸ ಕಾರು ಕಂಪನಿಯೊಂದಿಗೆ ಸರ್ಕಾರದ ಮಾತುಕತೆಯು ಸಫಲಾದ ಕಾರಣ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರದ ಜೊತೆಗೆ ಉತ್ಪಾದನಾ ಘಟಕವನ್ನು ಸಹ ಬೆಂಗಳೂರಿನಲ್ಲೇ ನಿರ್ಮಾಣ ಮಾಡಲು ಟೆಸ್ಲಾ ಕಂಪನಿಯು ಒಪ್ಪಿಗೆ ಸೂಚಿಸಿದೆ.

ಟೆಸ್ಲಾ ಕಂಪನಿಯು ಭಾರತದಲ್ಲಿ ಟೆಸ್ಲಾ ಇಂಡಿಯಾ ಮೋಟಾರ್ಸ್ ಆ್ಯಂಡ್ ಎನರ್ಜಿ ಪ್ರವೈಟ್ ಲಿಮಿಟೆಡ್ ಹೆಸರಿನಲ್ಲಿ ನೋಂದಣಿ ಮಾಡಿದ್ದು, ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರವನ್ನು ಬೆಂಗಳೂರಿನ ಲಾವೆಲ್ಲೆ ರಸ್ತೆಯಲ್ಲಿರುವ ಸ್ಕಾವ್ 909 ಕಾರ್ಪೊರೇಟ್ ಕಚೇರಿಯ 14ನೇ ಮಹಡಿಯಲ್ಲಿ ಆರಂಭವಾಗಿದೆ.

ಆದರೆ ಉತ್ಪಾದನಾ ಘಟಕವನ್ನು ಎಲ್ಲಿ ನಿರ್ಮಾಣ ಮಾಡುತ್ತದೆ ಎನ್ನುವ ಬಗೆಗೆ ಯಾವುದೇ ಲಭ್ಯವಾಗಿಲ್ಲವಾದರೂ ಹೊಸ ಕಾರು ಉತ್ಪಾದನಾ ಘಟಕಕ್ಕೆ ಹೆಚ್ಚಿನ ಮಟ್ಟದ ಸ್ಥಳಾವಕಾಶ ಅವಶ್ಯವಿರುವುದರಿಂದ ಬೆಂಗಳೂರಿನ ಹೊರವಲಯದಲ್ಲಿ ನಿರ್ಮಾಣವಾಗಬಹುದಾಗಿದೆ.

ಟೆಸ್ಲಾ ಕಂಪನಿಯು ಕರ್ನಾಟಕದಲ್ಲೇ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರದ ಜೊತೆಗೆ ಉತ್ಪಾದನಾ ಘಟಕವನ್ನು ತೆರೆಯಲು ಕರ್ನಾಟಕದಲ್ಲೇ ಹೂಡಿಕೆ ಮಾಡುತ್ತಿರುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಖಚಿತಪಡಿಸಿದ್ದು, ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಮತ್ತು ಬಳಕೆಯಲ್ಲಿ ರಾಜ್ಯವು ಪ್ರಮುಖ ಪಾತ್ರ ವಹಿಸಲಿದೆ ಎಂದಿದ್ದಾರೆ.

ಇನ್ನು ಟೆಸ್ಲಾ ಕಂಪನಿಯು ಭಾರತದಲ್ಲಿ ಸಿಕೆಡಿ ಆಮದು ನೀತಿ ಅಡಿಯಲ್ಲಿ ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡಲಿದ್ದು, ಸಿಕೆಡಿ ಆಮದು ನೀತಿ ಅಡಿಯಲ್ಲಿ ವಾಹನ ತಯಾರಕ ಕಂಪನಿಗಳು ವಿದೇಶಿ ಮಾರುಕಟ್ಟೆಗಳಿಂದಲೇ ಬಿಡಿಭಾಗಗಳನ್ನು ಆಮದು ಮಾಡಿಕೊಂಡು ಸ್ಥಳೀಯ ಘಟಕದಲ್ಲಿ ಜೋಡಣೆ ಮಾಡಿ ಮಾರಾಟ ಪ್ರಕ್ರಿಯೆಯನ್ನು ಕೈಗೊಳ್ಳುತ್ತಿವೆ.

ಸಂಪೂರ್ಣವಾಗಿ ವಿದೇಶಿ ಮಾರುಕಟ್ಟೆಗಳಲ್ಲೇ ಸಿದ್ದವಾಗಿರುವ ಬರುವ ಸಿಬಿಯು ಆಮದು ನೀತಿಯಡಿಯಲ್ಲಿ ಮಾರಾಟವಾಗುವ ವಾಹನಗಳಿಂತಲೂ ಸಿಕೆಡಿ ಆಮದು ನೀತಿ ಅಡಿಯಲ್ಲಿ ಮಾರಾಟವಾಗುವ ವಾಹನಗಳಿಂದ ಸ್ಥಳೀಯವಾಗಿ ಹೂಡಿಕೆ, ಸ್ಥಳೀಯರಿಗೆ ಉದ್ಯೋಗ ಅವಕಾಶಗಳನ್ನು ಕಲ್ಪಿಸಲು ಸಾಧ್ಯವಾಗಲಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಹೊಸ ವಾಹನ ಉತ್ಪಾದನಾ ಘಟಕವು ಯಾವುದೇ ರಾಜ್ಯದಲ್ಲಿ ಸ್ಥಾಪನೆಯಾಗುವುದಾದರೇ ಸ್ಥಳೀಯ ಸರ್ಕಾರಗಳೊಂದಿಗೆ ಮೂಲಭೂತ ಸೌಕರ್ಯಗಳಿಗಾಗಿ ಒಪ್ಪಂದ ಮಾಡಿಕೊಳ್ಳುವ ಅನಿವಾರ್ಯತೆಯಿದ್ದು, ಮೂಲಭೂತ ಸೌಕರ್ಯಗಳಿಗೆ ಪರ್ಯಾಯವಾಗಿ ಸ್ಥಳೀಯರಿಗೆ ಹೆಚ್ಚಿನ ಮಟ್ಟದ ಉದ್ಯೋಗ ಅವಕಾಶವನ್ನು ನೀಡಬೇಕಾಗುತ್ತದೆ.

ಈ ಹಿನ್ನಲೆಯಲ್ಲಿ ಸಿಕೆಡಿ ಮೂಲಕ ಭಾರತದಲ್ಲಿ ಕಾರು ಮಾರಾಟ ಪ್ರಕ್ರಿಯೆ ಆರಂಭಿಸುತ್ತಿರುವ ಟೆಸ್ಲಾ ಕಂಪನಿಯ ಹೊಸ ಯೋಜನೆಗಾಗಿ ಕರ್ನಾಟಕವನ್ನು ಆಯ್ದಕೊಂಡಿರುವುದು ರಾಜ್ಯದಲ್ಲಿ ಬೃಹತ್ ಪ್ರಮಾಣದ ಬಂಡವಾಳ ಹೂಡಿಕೆ ಮತ್ತು ಸ್ಥಳೀಯರಿಗೆ ಹೆಚ್ಚಿನ ಮಟ್ಟದ ಉದ್ಯೋಗ ಅವಕಾಶಗಳನ್ನು ಕಲ್ಪಿಸಲು ಸಹಕಾರಿಯಾಗಲಿದೆ ಎನ್ನಬಹುದು.
MOST READ: 2021ರಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಎಸ್‌ಯುವಿ ಕಾರುಗಳಿವು..!

ಇನ್ನು ಟೆಸ್ಲಾ ಕಂಪನಿಯು ಹೊಸ ಎಲೆಕ್ಟ್ರಿಕ್ ಕಾರು ಖರೀದಿಗಾಗಿ ಶೀಘ್ರದಲ್ಲೇ ಅಧಿಕೃತ ಬುಕ್ಕಿಂಗ್ ಪ್ರಕ್ರಿಯೆ ಆರಂಭಿಸಲಿದ್ದು, ಜೂನ್ ಆರಂಭದಲ್ಲಿ ಕಾರು ವಿತರಣೆಗೆ ಅಧಿಕೃತ ಚಾಲನೆ ನೀಡುವುದಾಗಿ ಖಚಿತಪಡಿಸಿದೆ. ಭಾರತದಲ್ಲಿ ಟೆಸ್ಲಾ ನಿರ್ಮಾಣದ ಮಾಡೆಲ್ 3 ಕಾರು ಮಾದರಿಯು ಮೊದಲ ಹಂತದಲ್ಲಿ ಬಿಡುಗಡೆಯಾಗಲಿದ್ದು, ಮಾಡೆಲ್ 3 ನಂತರ ಮಾಡೆಲ್ ಎಸ್, ಮಾಡೆಲ್ ವೈ ಸರಣಿ ಎಲೆಕ್ಟ್ರಿಕ್ ಕಾರು ಮಾದರಿಗಳು ಭಾರತವನ್ನು ಪ್ರವೇಶಿಸಲಿವೆ.

ಮಾಡೆಲ್ 3 ಕಾರು ಮಾದರಿಯು ಪ್ರತಿ ಚಾರ್ಜ್‌ಗೆ 500ಕಿ.ಮೀ ಗೂ ಹೆಚ್ಚು ಮೈಲೇಜ್ ಹೊಂದಿದ್ದು, ಬೆಲೆಯಲ್ಲೂ ಇದು ತುಸು ದುಬಾರಿಯಾಗಿರಲಿದ್ದು, ಹೊಸ ಕಾರು ಎಕ್ಸ್‌ಶೋರೂಂ ಪ್ರಕಾರ ರೂ. 45 ಲಕ್ಷದಿಂದ ರೂ. 55 ಲಕ್ಷ ಇರಬಹುದೆಂದು ನೀರಿಕ್ಷಿಸಲಾಗಿದೆ. ಆರಂಭಿಕವಾಗಿ ಸಿಬಿಯು ಆಮದು ನೀತಿಯಡಿಯಲ್ಲಿ ಹೊಸ ಎಲೆಕ್ಟ್ರಿಕ್ ಕಾರುಗಳನ್ನ ಮಾರಾಟ ಮಾಡಲಿರುವ ಟೆಸ್ಲಾ ಕಂಪನಿಯು 2023ರ ವೇಳೆಗೆ ಭಾರತದಲ್ಲಿ ಕಾರು ಉತ್ಪಾದನೆಯನ್ನು ಆರಂಭಿಸುವ ಸಿದ್ದತೆಯಲ್ಲಿದೆ.