ಭಾರತದಲ್ಲಿ ಅತಿ ಹೆಚ್ಚು ರೇಂಜ್ ಹೊಂದಿರುವ ಎಲೆಕ್ಟ್ರಿಕ್ ಕಾರುಗಳಿವು

ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಗಗನಕ್ಕೇರಿದೆ, ಇದರಿಂದ ಪಾರಾಗಲು ಹೆಚ್ಚಿನ ಜನರು ಎಲೆಕ್ಟ್ರಿಕ್ ವಾಹನಗಳ ಮೊರೆ ಹೋಗುತ್ತಿದ್ದಾರೆ. ಇದರಿಂದ ದೇಶಿಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಭರ್ಜರಿ ಬೇಡಿಕೆಯನ್ನು ಪಡೆದುಕೊಂಡಿದೆ. ವಾಹನ ತಯಾರಕ ಕಂಪನಿಗಳು ಕೂಡ ಪೈಪೋಟಿಗೆ ಬಿದ್ದಂತೆ ಎಲೆಕ್ಟ್ರಿಕ್ ವಾಹನಗಳನ್ನು ತಯಾರಿಸುತ್ತಿದೆ.

ಭಾರತದಲ್ಲಿ ಅತಿ ಹೆಚ್ಚು ರೇಂಜ್ ಹೊಂದಿರುವ ಎಲೆಕ್ಟ್ರಿಕ್ ಕಾರುಗಳಿವು

ಎಲೆಕ್ಟ್ರಿಕ್ ರೇಂಜ್, ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವಾಗ ಪರಿಗಣಿಸಬೇಕಾದ ಪ್ರಮುಖ ಅಂಶಗಳಲ್ಲಿ ಒಂದಾಗಿದೆ. ಎಲೆಕ್ಟ್ರಿಕ್ ವಾಹನ ಎಷ್ಟು ದೂರ ಹೋಗಬಹುದು? ಇದರ ಬ್ಯಾಟರಿ ಸಾಮರ್ಥ್ಯ ಮತ್ತು ಗಾತ್ರ, ಎಲೆಕ್ಟ್ರಿಕ್ ಮೋಟರ್‌ಗಳ ಪವರ್ ಉತ್ಪಾದನೆ ಮತ್ತು ವಾಹನದ ತೂಕ ಸೇರಿದಂತೆ ಹಲವಾರು ಅಂಶಗಳನ್ನು ಅವಲಂಬಿಸಿರುತ್ತದೆ. ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಲು ಬಯಸುವವರಿಗಾಗಿ ಪ್ರಸ್ತುತ ಭಾರತದಲ್ಲಿ ಮಾರಾಟದಲ್ಲಿರುವ ಅಧಿಕ ರೇಂಜ್ ಹೊಂದಿರುವ ಎಲೆಕ್ಟ್ರಿಕ್ ಕಾರುಗಳ ಬಗ್ಗೆ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಅತಿ ಹೆಚ್ಚು ರೇಂಜ್ ಹೊಂದಿರುವ ಎಲೆಕ್ಟ್ರಿಕ್ ಕಾರುಗಳಿವು

ಆಡಿ ಇ-ಟ್ರಾನ್

ಈ ವರ್ಷದ ಜುಲೈ ತಿಂಗಳಿನಲ್ಲಿ ಬಿಡುಗಡೆಗೊಂಡ ಆಡಿ ಇ-ಟ್ರಾನ್ ಭಾರತೀಯ ಮಾರುಕಟ್ಟೆಯಲ್ಲಿ ಬ್ರಾಂಡ್‌ನ ಮೊದಲ ಎಲೆಕ್ಟ್ರಿಕ್ ಕಾರು. ಇದು ಇ-ಟ್ರಾನ್ 50, ಇ-ಟ್ರಾನ್ 55 ಮತ್ತು ಇ-ಟ್ರಾನ್ ಸ್ಪೋರ್ಟ್‌ಬ್ಯಾಕ್ ರೂಪಾಂತರಗಳಲ್ಲಿ ಲಭ್ಯವಿದೆ, ಈ ಎಲೆಕ್ಟ್ರಿಕ್ ಕಾರಿನ ಆರಂಭಿಕ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.99.99 ಲಕ್ಷವಾಗಿದೆ.

ಭಾರತದಲ್ಲಿ ಅತಿ ಹೆಚ್ಚು ರೇಂಜ್ ಹೊಂದಿರುವ ಎಲೆಕ್ಟ್ರಿಕ್ ಕಾರುಗಳಿವು

ಇ-ಟ್ರಾನ್ 50 71kWh ಬ್ಯಾಟರಿ ಪ್ಯಾಕ್‌ನೊಂದಿಗೆ ಬರುತ್ತದೆ, ಇದು 373 ಕಿಮೀ ರೇಂಜ್ ಅನ್ನು ನೀಡುತ್ತದೆ, ಇದು 313 ಬಿಹೆಚ್‍ಪಿ ಪವರ್ ಮತ್ತು 408 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇ-ಟ್ರಾನ್ 55 ಮತ್ತು ಇ-ಟ್ರಾನ್ ಸ್ಪೋರ್ಟ್‌ಬ್ಯಾಕ್ 91kWh ಬ್ಯಾಟರಿ ಪ್ಯಾಕ್‌ ಅನ್ನು ಹೊಂದಿದ್ದು, ಇದು 484 ಕಿ.ಮೀ ರೇಂಜ್ ಅನ್ನು ನೀಡುತ್ತದೆ. ಇದು 404 ಬಿಎಚ್‌ಪಿ ಪವರ್ ಮತ್ತು 664 ಎನ್ಎಂ ಟಾರ್ಕ್ ಅನ್ನು ಹೊರಹಾಕುತ್ತದೆ. ಆಡಿಯ ಎಲೆಕ್ಟ್ರಿಕ್ ಎಸ್‌ಯುವಿಗೆ ಎಸಿ ಪವರ್ ಸಾಕೆಟ್ ಮೂಲಕ 80% ಚಾರ್ಜ್ ಆಗಲು 8.5 ಗಂಟೆ ತೆಗೆದುಕೊಂಡರೆ ಮತ್ತು ಡಿಸಿ ಫಾಸ್ಟ್ ಚಾರ್ಜರ್ ಮೂಲಕ 30 ನಿಮಿಷ ಚಾರ್ಜ್ ಆಗಲು ತೆಗೆದುಕೊಳ್ಳುತ್ತದೆ.

ಭಾರತದಲ್ಲಿ ಅತಿ ಹೆಚ್ಚು ರೇಂಜ್ ಹೊಂದಿರುವ ಎಲೆಕ್ಟ್ರಿಕ್ ಕಾರುಗಳಿವು

ಜಾಗ್ವಾರ್ ಐ-ಪೇಸ್

ಜಾಗ್ವಾರ್ ಐ-ಪೇಸ್ ಭಾರತದ ಎರಡನೇ ಟಾಪ್ ಇವಿ ಆಗಿದ್ದು, ಒಂದೇ ಚಾರ್ಜ್‌ನಲ್ಲಿ 470 ಕಿ.ಮೀ ಚಲಿಸುತ್ತದೆ. ಇದರ ಪವರ್‌ಟ್ರೇನ್ ವ್ಯವಸ್ಥೆಯು 90kWh ಲಿಥಿಯಂ-ಐಯಾನ್ ಬ್ಯಾಟರಿ ಮತ್ತು ಎರಡು ಸಿಂಕ್ರೊನಸ್ ಶಾಶ್ವತ ಮ್ಯಾಗ್ನೆಟ್ ಎಲೆಕ್ಟ್ರಿಕ್ ಮೋಟಾರ್‌ಗಳನ್ನು ಒಳಗೊಂಡಿದೆ. ಇದರ ಶಕ್ತಿ ಮತ್ತು ಟಾರ್ಕ್ ಉತ್ಪಾದನೆಗಳು ಕ್ರಮವಾಗಿ 400bhp ಮತ್ತು 696Nm ನಲ್ಲಿ ನಿಂತಿವೆ

ಭಾರತದಲ್ಲಿ ಅತಿ ಹೆಚ್ಚು ರೇಂಜ್ ಹೊಂದಿರುವ ಎಲೆಕ್ಟ್ರಿಕ್ ಕಾರುಗಳಿವು

ಐ-ಪೇಸ್ 4.8 ಸೆಕೆಂಡುಗಳಲ್ಲಿ 0 ರಿಂದ 100 ಕಿ.ಮ್ ವೇಗವನ್ನು ಪಡೆದುಕೊಳ್ಳಲು ಸಮರ್ಥವಾಗಿದೆ. ಇದರ ಬ್ಯಾಟರಿಯನ್ನು ಫಾಸ್ಟ್ ವೇಗದ ಚಾರ್ಜರ್ ಮೂಲಕ 45 ನಿಮಿಷಗಳಲ್ಲಿ ಮತ್ತು ಸುಮಾರು 10 ಗಂಟೆಗಳಲ್ಲಿ 7kW AC ವಾಲ್ ಬಾಕ್ಸ್ ಮೂಲಕ 80% ವರೆಗೆ ಚಾರ್ಜ್ ಮಾಡಬಹುದು. ಜಾಗ್ವಾರ್ ಐ-ಪೇಸ್ ಪ್ರಸ್ತುತ ಎಸ್, ಎಸ್‌ಇ ಮತ್ತು ಎಚ್‌ಎಸ್‌ಇ ರೂಪಾಂತರಗಳಲ್ಲಿ ಲಭ್ಯವಿದೆ.

ಭಾರತದಲ್ಲಿ ಅತಿ ಹೆಚ್ಚು ರೇಂಜ್ ಹೊಂದಿರುವ ಎಲೆಕ್ಟ್ರಿಕ್ ಕಾರುಗಳಿವು

ಹ್ಯುಂಡೈ ಕೋನಾ

ಹ್ಯುಂಡೈ ಕೋನಾ ದೇಶದ ದಕ್ಷಿಣ ಕೊರಿಯಾದ ಕಾರು ತಯಾರಕರಿಂದ ಮೊದಲ ಎಲೆಕ್ಟ್ರಿಕ್ ಮಾಡೆಲ್ ಆಗಿದೆ 2019 ರಲ್ಲಿ ಬಿಡುಗಡೆಯಾದ ಎಲೆಕ್ಟ್ರಿಕ್ ಎಸ್‌ಯುವಿಯನ್ನು ಪ್ರಸ್ತುತ ಎರಡು ರೂಪಾಂತರಗಳಲ್ಲಿ ನೀಡಲಾಗಿದೆ. ಪ್ರೀಮಿಯಂ ಮತ್ತು ಪ್ರೀಮಿಯಂ ಡ್ಯುಯಲ್-ಟೋನ್-ಇವುಗಳ ಬೆಲೆ ಕ್ರಮವಾಗಿ ರೂ.23.79 ಲಕ್ಷ ಮತ್ತು ರೂ.23.97 ಲಕ್ಷಗಳಾಗ್ಗಿದೆ. ಎಲ್ಲಾ ಬೆಲೆಗಳು ಎಕ್ಸ್ ಶೋರೂಂ ಪ್ರಕಾರವಾಗಿದೆ.

ಭಾರತದಲ್ಲಿ ಅತಿ ಹೆಚ್ಚು ರೇಂಜ್ ಹೊಂದಿರುವ ಎಲೆಕ್ಟ್ರಿಕ್ ಕಾರುಗಳಿವು

ಕೋನಾ ಇವಿಯಲ್ಲಿ 39.3 ಕಿಲೋವ್ಯಾಟ್ ಬ್ಯಾಟರಿ ಮತ್ತು ಶಾಶ್ವತ ಮ್ಯಾಗ್ನೆಟ್ ಸಿಂಕ್ರೊನಸ್ ಮೋಟಾರ್ ಹೊಂದಿದ್ದು, ಇದು 136 ಬಿಹೆಚ್‌ಪಿ ಮತ್ತು 395 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ, ಈ ಎಲೆಕ್ಟ್ರಿಕ್ ಕಾರು 9.7 ಸೆಕೆಂಡುಗಳಲ್ಲಿ 0 ರಿಂದ 100 ಕಿ.ಮೀ ವೇಗವನ್ನು ಪಡೆದುಕೊಳ್ಳುತ್ತದೆ. ಇನ್ನು ಪೂರ್ಣ ಚಾರ್ಜ್‌ನಲ್ಲಿ ARAI- ಪ್ರಮಾಣಿತ 452 ಕಿಮೀ ರೇಂಜ್ ಅನ್ನು ನೀಡುತ್ತದೆ.

ಭಾರತದಲ್ಲಿ ಅತಿ ಹೆಚ್ಚು ರೇಂಜ್ ಹೊಂದಿರುವ ಎಲೆಕ್ಟ್ರಿಕ್ ಕಾರುಗಳಿವು

ಎಂಜಿ ಜೆಡ್ಎಸ್

ಸದ್ಯ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಮಾದರಿಯ ಆರಂಭಿಕ ಬೆಲೆಯು ರೂ, 20.99 ಲಕ್ಷಗಳಾಗಿದೆ, ಈ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಎಸ್‍ಯುವಿ ಮಾದರಿಯು ಹ್ಯುಂಡೈ ಕ್ರೆಟಾದಷ್ಟು ದೊಡ್ಡದಾಗಿದೆ, ಇದರ ಉದ್ದ 4,314 ಎಂಎಂ, ಅಗಲ 1,809 ಎಂಎಂ ಮತ್ತು ಎತ್ತರ 1,644 ಎಂಎಂ ಆಗಿದೆ.

ಭಾರತದಲ್ಲಿ ಅತಿ ಹೆಚ್ಚು ರೇಂಜ್ ಹೊಂದಿರುವ ಎಲೆಕ್ಟ್ರಿಕ್ ಕಾರುಗಳಿವು

ಈ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಮಾದರಿಯಲ್ಲಿ 4.5 ಕಿಲೋವ್ಯಾಟ್ ಬ್ಯಾಟರಿ ಪ್ಯಾಕ್ ಅನ್ನು ಅಳವಡಿಸಲಾಗಿ. ಇದನ್ನು ಮೂರು-ಹಂತದ ಪರ್ಮನೆಂಟ್ ಮ್ಯಾಗ್ನೆಟ್ ಸಿಂಕ್ರೊನಸ್ ಮೋಟರ್‌ಗೆ ಜೋಡಿಸಲಾಗಿದೆ. ಇದು ಒಟ್ಟು 142.7 ಬಿಹೆಚ್‍ಪಿ ಮತ್ತು ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿ ಝಡ್ಎಸ್ ಇವಿ ಎಸ್‍ಯುವಿಯು 419 ಕಿ.ಮೀ ರೇಂಜ್ ಅನ್ನು ನೀಡುತ್ತದೆ.

ಭಾರತದಲ್ಲಿ ಅತಿ ಹೆಚ್ಚು ರೇಂಜ್ ಹೊಂದಿರುವ ಎಲೆಕ್ಟ್ರಿಕ್ ಕಾರುಗಳಿವು

ಈ ಎಲೆಕ್ಟ್ರಿಕ್ ಕಾರು ಅತ್ಯಾಧುನಿಕ ಸುರಕ್ಷತಾ ಫೀಚರ್ಸ್ ಗಳನ್ನು ಹೊಂದಿವೆ. ಇದರಲ್ಲಿ 6 ಏರ್‌ಬ್ಯಾಗ್‌ಗಳು, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್, ಇಬಿಡಿ ಯೊಂದಿಗೆ ಎಬಿಎಸ್, ಹಿಲ್ ಸ್ಟಾರ್ಟ್ ಅಸಿಸ್ಟ್, ರಿಯರ್ ಡಿಸ್ಕ್ ಬ್ರೇಕ್, ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್, ಎಲೆಕ್ಟ್ರಿಕ್ ಪಾರ್ಕಿಂಗ್ ಬ್ರೇಕ್, ಹೀಟೆಡ್ ಒಆರ್ವಿಎಂ ಮತ್ತು ರಿವರ್ಸ್ ಪಾರ್ಕಿಂಗ್ ಸೆನ್ಸಾರ್, ಕ್ಯಾಮರಾವನ್ನು ಒಳಗೊಂಡಿವೆ.

ಭಾರತದಲ್ಲಿ ಅತಿ ಹೆಚ್ಚು ರೇಂಜ್ ಹೊಂದಿರುವ ಎಲೆಕ್ಟ್ರಿಕ್ ಕಾರುಗಳಿವು

ಮರ್ಸಿಡಿಸ್ ಬೆಂಝ್ ಇಕ್ಯೂಸಿ

ಐಷಾರಾಮಿ ಕಾರು ತಯಾರಕ ಕಂಪನಿಯಾದ ಮರ್ಸಿಡಿಸ್ ಬೆಂಝ್ ತನ್ನ ಮೊದಲ ಪ್ರೀಮಿಯಂ ಎಲೆಕ್ಟ್ರಿಕ್ ಎಸ್‍ಯುವಿಯಾದ ಇಕ್ಯೂಸಿ(EQC) ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಕಳೆದ ವರ್ಷ ಬಿಡುಗಡೆಗೊಳಿಸಿತ್ತು. ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿಯಲ್ಲಿ ಎರಡು ಎಲೆಕ್ಟ್ರಿಕ್ ಮೋಟಾರ್ ಅನ್ನು ಹೊಂದಿದೆ.

ಭಾರತದಲ್ಲಿ ಅತಿ ಹೆಚ್ಚು ರೇಂಜ್ ಹೊಂದಿರುವ ಎಲೆಕ್ಟ್ರಿಕ್ ಕಾರುಗಳಿವು

ಒಂದು ಮೋಟಾರ್ ಈ ಎಲೆಕ್ಟ್ರಿಕ್ ಎಸ್‍ಯುವಿಯು ಮುಂಭಾಗದ ಆಕ್ಸಲ್ ಅನ್ನು ಚಾಲನೆ ಮಾಡುತ್ತದೆ ಮತ್ತು ಇನ್ನೊಂದು ಮೋಟಾರ್ ಹಿಂಭಾಗದ ಫ್ಹೋರ್ ವ್ಹೀಲ್ ಡ್ರೈವ್ ಸಿಸ್ಟಂ ಅನ್ನು ಹೊಂದಿದೆ. ಈ ಸಂಯೋಜಿತ ಎಲೆಕ್ಟ್ರಿಕ್ ಮೋಟಾರ್ 408 ಬಿಹೆಚ್‍ಪಿ ಪವರ್ ಮತ್ತು 765 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮಥ್ಯವನ್ನು ಹೊಂದಿದೆ. ಇನ್ನು ಈ ಎಲೆಕ್ಟ್ರಿಕ್ ಎಸ್‍ಯುವಿ 370 ಕಿಮೀ-414 ಕಿಮೀ ನಡುವೆ ರೇಂಜ್ ಅನ್ನು ನೀಡುತ್ತದೆ.

ಭಾರತದಲ್ಲಿ ಅತಿ ಹೆಚ್ಚು ರೇಂಜ್ ಹೊಂದಿರುವ ಎಲೆಕ್ಟ್ರಿಕ್ ಕಾರುಗಳಿವು

ಟಾಟಾ ನೆಕ್ಸಾನ್ ಇವಿ

ಈ ನೆಕ್ಸಾನ್ ಎಲೆಕ್ಟ್ರಿಕ್ ಕಾರಿನಲ್ಲಿ ಸಿಂಕ್ರೊನಸ್ ಮೋಟರ್ ಅನ್ನು ಹೊಂದಿದೆ. ಇದರಲ್ಲಿ 30.2 ಕಿಲೋವ್ಯಾಟ್ ಲಿಥಿಯಂ-ಐಯಾನ್ ಬ್ಯಾಟರಿಯನ್ನು ಹೊಂದಿದೆ. ಈ ಇವಿ ಮಾದರಿಯು ಒಟ್ಟು 127 ಬಿಹೆಚ್‌ಪಿ ಮತ್ತು 245 ಎನ್‌ಎಂ ಗರಿಷ್ಠ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಲೆಕ್ಟ್ರಿಕ್ ಕಾರು ಕೇವಲ 9.9 ಸೆಕೆಂಡುಗಳಲ್ಲಿ 100 ಕಿ.ಮೀ ವೇಗವನ್ನು ಕ್ರಮಿಸುವ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಎಆರ್ಎಐ ಪ್ರಕಾರ ಈ ನೆಕ್ಸಾನ್ ಇವಿ ಮಾದರಿಯು 312 ಕಿ.ಮೀ ರೇಂಜ್ ಅನ್ನು ಹೊಂದಿದೆ.

ಭಾರತದಲ್ಲಿ ಅತಿ ಹೆಚ್ಚು ರೇಂಜ್ ಹೊಂದಿರುವ ಎಲೆಕ್ಟ್ರಿಕ್ ಕಾರುಗಳಿವು

ಈ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರಿನಲ್ಲಿ ಆಟೋಮ್ಯಾಟಿಕ್ ಕ್ಲೈಮೆಂಟ್ ಕಂಟ್ರೋಲ್, ಸನ್‌ರೂಫ್, ರೈನ್ ಸೆನ್ಸಾಸಿಂಗ್, ಇಂಟಿಗ್ರೇಟೆಡ್ ಟರ್ನ್ ಇಂಡೀಕೇಟರ್, ಎಲ್ಲಾ ಪವರ್ ವಿಂಡೋಸ್, ಕೀಲೆಸ್ ಎಂಟ್ರಿ ಅಂಡ್ ಗೋ, ಕೂಲ್ಡ್ ಗ್ಲೋವ್ ಬಾಕ್ಸ್, ಹ್ಯಾಂಡ್ಸ್-ಫ್ರೀ ಟೈಲ್‌ಗೇಟ್, ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲೈಟ್‌ಗಳು ಮತ್ತು ಎಲ್ಇಡಿ ಟೈಲ್‌ಲ್ಯಾಂಪ್‌ಗಳನ್ನು ಹೊಂದಿವೆ,

ಭಾರತದಲ್ಲಿ ಅತಿ ಹೆಚ್ಚು ರೇಂಜ್ ಹೊಂದಿರುವ ಎಲೆಕ್ಟ್ರಿಕ್ ಕಾರುಗಳಿವು

ಈ ಎಲೆಕ್ಟ್ರಿಕ್ ಕಾರಿನಲ್ಲಿ ಸುರಕ್ಷತೆಗಾಗಿ ಹೆಚ್ಚಿನ ಪ್ರಮುಖ್ಯತೆಯನ್ನು ನೀಡಿದ್ದು, ಇದಕ್ಕಾಗಿ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್ ವಿಥ್ ಇಬಿಡಿ, ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್ ಸಿಸ್ಟಂ, ರಿಯರ್ ಪಾರ್ಕಿಂಗ್ ಕ್ಯಾಮೆರಾ ಮತ್ತು ಐಎಸ್‌ಒಫಿಕ್ಸ್ ಚೈಲ್ಡ್ ಸೀಟ್ ಅನ್ನು ನೀಡಿದ್ದಾರೆ. ಈ ನೆಕ್ಸಾನ್ ಎಲೆಕ್ಟ್ರಿಕ್ ಕಾಂಪ್ಯಾಕ್ಟ್ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಹ್ಯುಂಡೈ ಕೋನಾ ಎಲೆಕ್ಟ್ರಿಕ್ ಮತ್ತು ಎಂಜಿ ಝಡ್ ಎಲೆಕ್ಟ್ರಿಕ್ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ.

ಭಾರತದಲ್ಲಿ ಅತಿ ಹೆಚ್ಚು ರೇಂಜ್ ಹೊಂದಿರುವ ಎಲೆಕ್ಟ್ರಿಕ್ ಕಾರುಗಳಿವು

ಟಾಟಾ ಟಿಗೋರ್ ಇವಿ

ಟಾಟಾ ಮೋಟಾರ್ಸ್ ಈ ಹೊಸ ಟಿಗೋರ್ ಎಲೆಕ್ಟ್ರಿಕ್ ಕಾರನ್ನು ಇತ್ತೀಚೆಗೆ ದೇಶದಲ್ಲಿ ಬಿಡುಗಡೆಗೊಳಿಸಿತು. ಹೊಸ ಟಿಗೋರ್ ಇವಿ ಮಾದರಿಯು ಎಕ್ಸ್ಇ, ಎಕ್ಸ್ಎಂ, ಎಕ್ಸ್‌ಜೆಡ್ ಪ್ಲಸ್ ಮತ್ತು ಎಕ್ಸ್‌ಜೆಡ್ ಪ್ಲಸ್ ಡ್ಯುಯಲ್ ಟೋನ್ ಎಂಬ ವೆರಿಯೆಂಟ್ ಗಳಲ್ಲಿ ಲಭ್ಯವಿದೆ,ಈ ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.11.99 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯು ರೂ.13.14 ಲಕ್ಷ ಬೆಲೆ ಹೊಂದಿದೆ.

ಭಾರತದಲ್ಲಿ ಅತಿ ಹೆಚ್ಚು ರೇಂಜ್ ಹೊಂದಿರುವ ಎಲೆಕ್ಟ್ರಿಕ್ ಕಾರುಗಳಿವು

ಟಾಟಾದ ಸುಧಾರಿತ ಜಿಪ್‌ಟ್ರಾನ್ ಟೆಕ್‌ನಿಂದ ಇದು ಪ್ರಯೋಜನ ಪಡೆದಿದೆ, ಇದು 75 ಬಿಹೆಚ್‍ಪಿ ಪವರ್ ಮತ್ತು 170 ಎನ್ಎಂ ಟಾರ್ಕ್ ಉತ್ಪಾದಿಸುವ ಶಾಶ್ವತ ಮ್ಯಾಗ್ನೆಟ್ ಸಿಂಕ್ರೊನಸ್ ಎಲೆಕ್ಟ್ರಿಕ್ ಮೋಟಾರ್ ಅನ್ನು ಒಳಗೊಂಡಿದೆ. ಇನ್ನು 26kWh ಲಿಥಿಯಂ-ಐಯಾನ್ ಬ್ಯಾಟರಿಯನ್ನು IP67 ರೇಟೆಡ್ ಎಲೆಕ್ಟ್ರಿಕ್ ಮೋಟಾರ್ ಹೊಂದಿದೆ. ನವೀಕರಿಸಿದ ಮಾದರಿಯು 306 ಕಿ.ಮೀ ರೇಂಜ್ ಅನ್ನು ನೀಡುತ್ತದೆ.ಇ ದು ಹಳೆಯದಕ್ಕಿಂತ ಗಮನಾರ್ಹವಾಗಿ ಹೆಚ್ಚಾಗಿದೆ. ಇದನ್ನು 60 ನಿಮಿಷಗಳಲ್ಲಿ (80%ವರೆಗೆ). ವೇಗವಾಗಿ ಚಾರ್ಜ್ ಮಾಡಬಹುದು.

Most Read Articles

Kannada
English summary
The best longest range electric cars in india find here all details
Story first published: Friday, September 10, 2021, 18:56 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X