ಹೊಸ ವರ್ಷದ ಸಂಭ್ರಮದಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಟಾಟಾ ಗ್ರಾವಿಟಾಸ್ ವಿಶೇಷತೆಗಳೇನು?

ಕರೋನಾ ವೈರಸ್ ಪರಿಣಾಮ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಬುಹುತೇಕ ಆಟೋ ಉತ್ಪಾದನಾ ಕಂಪನಿಯಗಳು ಇದೀಗ ಪರಿಸ್ಥಿತಿಗೆ ಅನುಗುಣವಾಗಿ ಚೇತರಿಕೆಯ ಹಾದಿಯಲ್ಲಿದ್ದು, ಹೊಸ ವರ್ಷದ ಸಂಭ್ರಮದಲ್ಲಿ ಮತ್ತಷ್ಟು ಹೊಸ ಕಾರುಗಳ ಮೂಲಕ ಗ್ರಾಹಕರನ್ನು ಸೆಳೆಯಲು ಸಿದ್ದವಾಗಿವೆ.

ಬಿಡುಗಡೆಗೆ ಸಿದ್ದವಾಗಿರುವ ಟಾಟಾ ಗ್ರಾವಿಟಾಸ್ ವಿಶೇಷತೆಗಳೇನು?

ದೇಶದ ಜನಪ್ರಿಯ ಕಾರು ಕಂಪನಿಯಾದ ಟಾಟಾ ಮೋಟಾರ್ಸ್ ಕೂಡಾ ಇದೀಗ ತನ್ನ ಬಹುನೀರಿಕ್ಷಿತ ಹೊಸ ಕಾರುಗಳ ಬಿಡುಗಡೆಗೆ ಅಂತಿಮ ಹಂತದ ಸಿದ್ದತೆ ನಡೆಸಿದ್ದು, ಇದರಲ್ಲಿ ಗ್ರಾವಿಟಾಸ್ ಎಸ್‌ಯುವಿ ಕಾರು ಮಾದರಿಯನ್ನು ಇದೇ ತಿಂಗಳು 26ರಂದು ಅನಾವರಣಗೊಳಿಸಲಿದೆ ಎನ್ನಲಾಗಿದೆ. 2020ರ ಫೆಬ್ರುವರಿಯಲ್ಲಿ ನಡೆದಿದ್ದ ಆಟೋ ಎಕ್ಸ್‌ಪೋದಲ್ಲಿ ಮೊದಲ ಬಾರಿಗೆ ಪ್ರದರ್ಶನಗೊಳಿಸಲಾಗಿದ್ದ ಗ್ರಾವಿಟಾಸ್ ಎಸ್‌ಯುವಿ ಮಾದರಿಯು ಕರೋನಾ ವೈರಸ್ ಪರಿಣಾಮ ಬಿಡುಗಡೆಯಲ್ಲಿ ವಿಳಂಬವಾಗುವ ಮೂಲಕ ಇದೀಗ ಮಾರುಕಟ್ಟೆ ಪ್ರವೇಶಿಸುತ್ತಿದೆ.

ಬಿಡುಗಡೆಗೆ ಸಿದ್ದವಾಗಿರುವ ಟಾಟಾ ಗ್ರಾವಿಟಾಸ್ ವಿಶೇಷತೆಗಳೇನು?

ಹೊಸ ಕಾರು ಅನಾವರಣಗೊಂಡ ನಂತರ ಬುಕ್ಕಿಂಗ್ ಪ್ರಕ್ರಿಯೆ ಜೊತೆಗೆ ಟೆಸ್ಟ್ ಡ್ರೈವ್ ಪ್ರಕ್ರಿಯೆಗಳನ್ನು ಆರಂಭಿಸಲಿರುವ ಟಾಟಾ ಕಂಪನಿಯು ಫೆಬ್ರುವರಿ ಮಧ್ಯಂತರದಲ್ಲಿ ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಲಿದೆ.

ಬಿಡುಗಡೆಗೆ ಸಿದ್ದವಾಗಿರುವ ಟಾಟಾ ಗ್ರಾವಿಟಾಸ್ ವಿಶೇಷತೆಗಳೇನು?

ಎಸ್‌ಯುವಿ ಕಾರು ಮಾದರಿಯಲ್ಲೇ ಅತ್ಯುತ್ತಮ ಫೀಚರ್ಸ್‌ಗಳನ್ನು ಒಳಗೊಂಡಿರಲಿದ್ದು, ಹ್ಯಾರಿಯರ್ ಮುಂದುವರಿದ ಭಾಗವಾಗಿರುವ ಗ್ರಾವಿಟಾಸ್ ಕಾರು ಮೂರನೇ ಸಾಲಿನ ಆಸದೊಂದಿಗೆ ಫುಲ್ ಸೈಜ್ ಎಸ್‌ಯುವಿ ಪ್ರಿಯರನ್ನು ಸೆಳೆಯಲಿದೆ.

ಬಿಡುಗಡೆಗೆ ಸಿದ್ದವಾಗಿರುವ ಟಾಟಾ ಗ್ರಾವಿಟಾಸ್ ವಿಶೇಷತೆಗಳೇನು?

OMEGA ಕಾರು ಉತ್ಪಾದನಾ ತಂತ್ರಜ್ಞಾನದ ಮೂಲಕ ಹೊಸ ಕಾರುಗಳ ಅಭಿವೃದ್ದಿಯಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗಿರುವ ಟಾಟಾ ಕಂಪನಿಯು ಹೊಸ ಪ್ಲ್ಯಾಟ್‌ಫಾರ್ಮ್ ಮೂಲಕ ಕಾರುಗಳಲ್ಲಿ ಐಷಾರಾಮಿ ವಿನ್ಯಾಸ, ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ನೀಡುವುದರ ಜೊತೆಗೆ ಎಂಜಿನ್ ಕಾರ್ಯಕ್ಷಮತೆಯಲ್ಲೂ ಗಮನಸೆಳಯುತ್ತಿವೆ. ಹೀಗಾಗಿ ಗ್ರಾವಿಟಾಸ್ ಎಸ್‌ಯುವಿ ಹೊಸ ಕಾರು ಕೂಡಾ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ 6 ಸೀಟರ್ ಮತ್ತು 7 ಸೀಟರ್ ಸೌಲಭ್ಯದೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸಲಿದ್ದು, ಪ್ರೀಮಿಯಂ ಫೀಚರ್ಸ್‌ನಲ್ಲೂ ಗಮನಸೆಳೆಯಲಿದೆ.

ಬಿಡುಗಡೆಗೆ ಸಿದ್ದವಾಗಿರುವ ಟಾಟಾ ಗ್ರಾವಿಟಾಸ್ ವಿಶೇಷತೆಗಳೇನು?

ಗ್ರಾವಿಟಾಸ್‌ನಲ್ಲಿ 6 ಸೀಟರ್ ಮಾದರಿಯು 2+2+2 ಮಾದರಿಯ ಆಸನ ಸೌಲಭ್ಯದೊಂದಿಗೆ ಮತ್ತು 7 ಸೀಟರ್ ಮಾದರಿಯು 2+3+2 ಮಾದರಿಯಲ್ಲಿ ಆಸನ ಸೌಲಭ್ಯಗಳನ್ನು ಹೊಂದಿರಲಿದ್ದು, 6 ಆಸನಗಳ ಮಾದರಿಯಲ್ಲಿ ಮಧ್ಯದ ಸಾಲಿನಲ್ಲಿರುವ ಆಸನಗಳು ಕ್ಯಾಪ್ಟನ್ ಆಸನಗಳಾಗಿರುತ್ತವೆ.

ಬಿಡುಗಡೆಗೆ ಸಿದ್ದವಾಗಿರುವ ಟಾಟಾ ಗ್ರಾವಿಟಾಸ್ ವಿಶೇಷತೆಗಳೇನು?

ಹಾಗೆಯೇ 7 ಸೀಟರ್ ಮಾದರಿಯಲ್ಲಿ ಮಧ್ಯದ ಸಾಲಿನ ಆಸನವು 60:40 ಮಾದರಿಯಲ್ಲಿ ಮಡಿಕೆ ಮಾಡಬಹುದಾಗಿದ್ದು, ಮೂರನೇ ಸಾಲಿನಲ್ಲಿ ಇಬ್ಬರು ಪ್ರಯಾಣಿಕರು ಅರಾಮವಾಗಿ ಪ್ರಯಾಣ ಮಾಡಬಹುದಾಗಿದೆ.

ಬಿಡುಗಡೆಗೆ ಸಿದ್ದವಾಗಿರುವ ಟಾಟಾ ಗ್ರಾವಿಟಾಸ್ ವಿಶೇಷತೆಗಳೇನು?

ಇನ್ನು ಹೊಸ ಕಾರಿನಲ್ಲಿ ಸ್ಪೋರ್ಟಿ ಮಾದರಿಯ ಆಸನಗಳೊಂದಿಗೆ ಮಲ್ಟಿ ಫಂಕ್ಷನ್ ಸ್ಟೀರಿಂಗ್ ವೀಲ್ಹ್ ಮೌಂಟೆಡ್, ತ್ರೀ ಜೋನ್ ಕ್ಲೈಮೆಟ್ ಕಂಟ್ರೋಲ್, ವಿವಿಧ ಡ್ರೈವ್ ಮೋಡ್, ಕನ್ವರ್ಷನಲ್ ಸನ್‌ರೂಫ್ ಸೇರಿದಂತೆ ಹಲವು ಪ್ರೀಮಿಯಂ ಫೀಚರ್ಸ್‌ಗಳಿವೆ.

MOST READ: 2020 ಫ್ಲ್ಯಾಶ್‌ಬ್ಯಾಕ್: ಭಾರತೀಯ ಆಟೋ ಉದ್ಯಮದಲ್ಲಿ ನಡೆದ ಪ್ರಮುಖ ಘಟನೆಗಳಿವು..

ಬಿಡುಗಡೆಗೆ ಸಿದ್ದವಾಗಿರುವ ಟಾಟಾ ಗ್ರಾವಿಟಾಸ್ ವಿಶೇಷತೆಗಳೇನು?

ಈ ಮೂಲಕ ಹೊಸ ಕಾರು ಆವೃತ್ತಿಯು ಪ್ರತಿಸ್ಪರ್ಧಿ ಕಾರು ಮಾದರಿಗಳಾದ ಹ್ಯುಂಡೈ ಟ್ಯೂಸಾನ್, ಮಹೀಂದ್ರಾ ಅಲ್ಟುರಾಸ್ ಜಿ4, ಫೋರ್ಡ್ ಎಂಡೀವರ್ ಜೊತೆಗೆ ಟೊಯೊಟಾ ಫಾರ್ಚೂನರ್‌ ಕಾರಿಗೂ ಪೈಪೋಟಿ ನೀಡಲಿದ್ದು, ಉತ್ತಮ ಸ್ಥಳಾವಕಾಶದೊಂದಿಗೆ ಎಸ್‌ಯುವಿ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಲಿದೆ.

ಬಿಡುಗಡೆಗೆ ಸಿದ್ದವಾಗಿರುವ ಟಾಟಾ ಗ್ರಾವಿಟಾಸ್ ವಿಶೇಷತೆಗಳೇನು?

ಹೊಸ ಕಾರಿನಲ್ಲಿ ಹ್ಯಾರಿಯರ್ ಮಾದರಿಯಲ್ಲೇ 2.0-ಲೀಟರ್(1,956 ಸಿಸಿ) 4 ಸಿಲಿಂಡರ್, ಕ್ರೆಯೊಟೆಕ್ ಡೀಸೆಲ್ ಎಂಜಿನ್ ಆಯ್ಕೆ ಹೊಂದಿದ್ದು, 6 ಸ್ಪೀಡ್ ಮ್ಯಾನುವಲ್ ಗೇರ್‍‍ಬಾಕ್ಸ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ 170-ಬಿಹೆಚ್‍ಪಿ, 350-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಬಿಡುಗಡೆಗೆ ಸಿದ್ದವಾಗಿರುವ ಟಾಟಾ ಗ್ರಾವಿಟಾಸ್ ವಿಶೇಷತೆಗಳೇನು?

ಎಸ್‌ಯುವಿ ಕಾರುಗಳ ಮಾರಾಟದಲ್ಲಿ ಗಮನಸೆಳೆಯಲಿರುವ ಹೊಸ ಗ್ರಾವಿಟಾಸ್ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 19 ಲಕ್ಷದಿಂದ ಟಾಪ್ ಎಂಡ್ ಆವೃತ್ತಿಯು ರೂ.23 ಲಕ್ಷ ಬೆಲೆ ಹೊಂದಿರಬಹುದೆಂದು ನೀರಿಕ್ಷಿಸಲಾಗಿದೆ.

Most Read Articles

Kannada
English summary
Important things about Tata Gravitas 7 seater SUV. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X