ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಟಾಟಾ ಟಿಯಾಗೊ ಎನ್‌ಆರ್‌ಜಿ ಫೇಸ್‌ಲಿಫ್ಟ್ ಕಾರು

ಕೆಲವು ದಿನಗಳ ಹಿಂದಷ್ಟೇ ಭಾರತೀಯ ಮೂಲದ ಖ್ಯಾತ ಕಾರು ತಯಾರಕ ಕಂಪನಿಯಾದ ಟಾಟಾ ಮೋಟಾರ್ಸ್ ತನ್ನ ಜನಪ್ರಿಯ ಟಾಟಾ ಟಿಯಾಗೊ ಹ್ಯಾಚ್‌ಬ್ಯಾಕ್ ಕಾರಿನ ಎನ್‌ಆರ್‌ಜಿ ಆವೃತ್ತಿಯನ್ನು ಮತ್ತೆ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ ಎಂಬ ಸುದ್ದಿ ಹೊರಬಂದಿತ್ತು.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಟಾಟಾ ಟಿಯಾಗೊ ಎನ್‌ಆರ್‌ಜಿ ಫೇಸ್‌ಲಿಫ್ಟ್ ಕಾರು

ಈಗ ಈ ಕಾರಿನ ಬಿಡುಗಡೆಯ ಬಗ್ಗೆ ಮತ್ತಷ್ಟು ಮಾಹಿತಿಗಳು ಹೊರಬರುತ್ತಿವೆ. ಇತ್ತೀಚಿನ ಮಾಹಿತಿಗಳ ಪ್ರಕಾರ ಹೊಸ ತಲೆಮಾರಿನ ಟಾಟಾ ಟಿಯಾಗೊ ಎನ್‌ಆರ್‌ಜಿ ಕಾರು ಆಗಸ್ಟ್ 4 ರಂದು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿವೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಟಾಟಾ ಟಿಯಾಗೊ ಎನ್‌ಆರ್‌ಜಿ ಫೇಸ್‌ಲಿಫ್ಟ್ ಕಾರು

ಟಾಟಾ ಮೋಟಾರ್ಸ್ ಕಂಪನಿಯು 2020 ರ ಜನವರಿ ತಿಂಗಳಿನಲ್ಲಿ ಟಿಯಾಗೊ ಹ್ಯಾಚ್‌ಬ್ಯಾಕ್‌ ಕಾರಿನ ಎನ್‌ಆರ್‌ಜಿ ಆವೃತ್ತಿಯ ಮಾರಾಟವನ್ನು ಸ್ಥಗಿತಗೊಳಿಸಿತ್ತು. ಈಗ ಒರಟು ಲುಕ್ ಹಾಗೂ ಎಸ್‌ಯುವಿ ಸ್ಟೈಲಿಂಗ್ ಅಂಶಗಳನ್ನು ಹೊಂದಿರುವ ಫೇಸ್‌ಲಿಫ್ಟ್ ಆವೃತ್ತಿಯನ್ನು ಬಿಡುಗಡೆಗೊಳಿಸಲು ಮುಂದಾಗಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಟಾಟಾ ಟಿಯಾಗೊ ಎನ್‌ಆರ್‌ಜಿ ಫೇಸ್‌ಲಿಫ್ಟ್ ಕಾರು

ಹೊಸ ಟಾಟಾ ಟಿಯಾಗೊ ಎನ್‌ಆರ್‌ಜಿ ಆವೃತ್ತಿಯ ಬಗ್ಗೆ ಹೇಳುವುದಾದರೆ ಈ ಕಾರು ಬಾಡಿ ಕ್ಲಾಡಿಂಗ್, ಟೇಲ್‌ಗೇಟ್‌ನಲ್ಲಿ ಬ್ಲಾಕ್ ಪ್ಲಾಸ್ಟಿಕ್ ಅಂಶ ಹಾಗೂಎಸ್‌ಯುವಿಯಂತೆ ಕಾಣಲು ರಿ ಡಿಸೈನ್ ಮಾಡಲಾದ ವ್ಹೀಲ್'ಗಳನ್ನು ಪಡೆಯುವ ಸಾಧ್ಯತೆಗಳಿವೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಟಾಟಾ ಟಿಯಾಗೊ ಎನ್‌ಆರ್‌ಜಿ ಫೇಸ್‌ಲಿಫ್ಟ್ ಕಾರು

ಈ ಆವೃತ್ತಿಯು ಸ್ಟ್ಯಾಂಡರ್ಡ್ ಮಾದರಿಗಿಂತ ಹೆಚ್ಚಿನ ಗ್ರೌಂಡ್ ಕ್ಲಿಯರೆನ್ಸ್ ಹೊಂದಿರಲಿದೆ. ಟಾಟಾ ಟಿಯಾಗೊದ ಸ್ಟ್ಯಾಂಡರ್ಡ್ ಮಾದರಿಯು 170 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಅನ್ನು ಹೊಂದಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಟಾಟಾ ಟಿಯಾಗೊ ಎನ್‌ಆರ್‌ಜಿ ಫೇಸ್‌ಲಿಫ್ಟ್ ಕಾರು

ಈ ಮಾದರಿಯ ವಿನ್ಯಾಸವು ಸ್ಟಾಂಡರ್ಡ್ ಟಾಟಾ ಟಿಯಾಗೊ ಮಾದರಿಯನ್ನು ಹೋಲುತ್ತದೆ. ಆದರೆ ಟಿಯಾಗೊ ಎನ್‌ಆರ್‌ಜಿ ಆವೃತ್ತಿಯು ಎಸಿ ವೆಂಟ್ಸ್ ಹಾಗೂ ಗೇರ್ ಲಿವರ್ ಸುತ್ತ ಕಾಂಟ್ರಾಸ್ಟ್ ಆರೆಂಜ್ ಕಲರ್ ಫಿನಿಶಿಂಗ್ ಹೊಂದುವ ನಿರೀಕ್ಷೆಗಳಿವೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಟಾಟಾ ಟಿಯಾಗೊ ಎನ್‌ಆರ್‌ಜಿ ಫೇಸ್‌ಲಿಫ್ಟ್ ಕಾರು

ಈ ಆವೃತ್ತಿಯಲ್ಲಿ ವಿಭಿನ್ನ ಅಪ್ ಹೊಲೆಸ್ಟರಿ ಇರಲಿದ್ದು, ಫ್ಯಾಬ್ರಿಕ್ ಮೇಲೆ ಟ್ರೈ ಆರೋ ವಿನ್ಯಾಸ ಅಂಶಗಳನ್ನು ಬಳಸಬಹುದು. ಫೀಚರ್'ಗಳ ದೃಷ್ಟಿಯಿಂದಲೂ, ಟಿಯಾಗೊ ಎನ್‌ಆರ್‌ಜಿ ಸ್ಟಾಂಡರ್ಡ್ ಮಾದರಿಯನ್ನು ಹೋಲುತ್ತದೆ ಎಂದು ಹೇಳಲಾಗಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಟಾಟಾ ಟಿಯಾಗೊ ಎನ್‌ಆರ್‌ಜಿ ಫೇಸ್‌ಲಿಫ್ಟ್ ಕಾರು

ಈ ಆವೃತ್ತಿಯು ಆಪಲ್ ಕಾರ್ ಪ್ಲೇ ಹಾಗೂ ಆಂಡ್ರಾಯ್ಡ್ ಆಟೋ, ಆಟೋಮ್ಯಾಟಿಕ್ ಕ್ಲೈಮೇಟ್ ಕಂಟ್ರೋಲ್, ಸ್ಟೀಯರಿಂಗ್ ಮೌಂಟೆಡ್ ಆಡಿಯೊ ಕಂಟ್ರೋಲ್, ಹರ್ಮನ್ ಸೌಂಡ್ ಸಿಸ್ಟಂ, ರಿಮೋಟ್ ಲಾಕಿಂಗ್ / ಅನ್ ಲಾಕಿಂಗ್ ಹೊಂದಿರುವ 7 ಇಂಚಿನ ಟಚ್ ಸ್ಕ್ರೀನ್ ಇನ್ಫೋಟೇನ್ಮೆಂಟ್ ಸಿಸ್ಟಂ ಅನ್ನು ಪಡೆಯಬಹುದು.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಟಾಟಾ ಟಿಯಾಗೊ ಎನ್‌ಆರ್‌ಜಿ ಫೇಸ್‌ಲಿಫ್ಟ್ ಕಾರು

ಇನ್ನು ಸುರಕ್ಷತಾ ಫೀಚರ್'ಗಳ ಬಗ್ಗೆ ಹೇಳುವುದಾದರೆ ಈ ಕಾರು ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ವಿಥ್ ಇಬಿಡಿ, ಕ್ಯಾಮರಾ ಹೊಂದಿರುವ ರೇರ್ ಪಾರ್ಕಿಂಗ್ ಸೆನ್ಸಾರ್'ಗಳನ್ನು ಪಡೆಯುವ ಸಾಧ್ಯತೆಗಳಿವೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಟಾಟಾ ಟಿಯಾಗೊ ಎನ್‌ಆರ್‌ಜಿ ಫೇಸ್‌ಲಿಫ್ಟ್ ಕಾರು

ಟಾಟಾ ಮೋಟಾರ್ಸ್ ಕಂಪನಿಯು ಈ ಮಾದರಿಯ ಮೆಕಾನಿಕಲ್ ಅಂಶಗಳಲ್ಲಿ ಯಾವುದೇ ಬದಲಾವಣೆಗಳನ್ನು ಮಾಡುತ್ತಿಲ್ಲ. ಟಾಟಾ ಟಿಯಾಗೊ ಎನ್‌ಆರ್‌ಜಿ ಫೇಸ್‌ಲಿಫ್ಟ್ ಆವೃತ್ತಿಯು 1.2 ಲೀಟರ್ ರೆವೊಟ್ರಾನ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ ಹೊಂದಿರಲಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಟಾಟಾ ಟಿಯಾಗೊ ಎನ್‌ಆರ್‌ಜಿ ಫೇಸ್‌ಲಿಫ್ಟ್ ಕಾರು

ಈ ಎಂಜಿನ್ 86 ಬಿಹೆಚ್‌ಪಿ ಪವರ್ ಹಾಗೂ 113 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್'ನೊಂದಿಗೆ 5 ಸ್ಪೀಡ್ ಮ್ಯಾನುವಲ್ ಹಾಗೂ ಎಎಂಟಿ ಗೇರ್ ಬಾಕ್ಸ್ ಆಯ್ಕೆಯನ್ನು ನೀಡಬಹುದು.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಟಾಟಾ ಟಿಯಾಗೊ ಎನ್‌ಆರ್‌ಜಿ ಫೇಸ್‌ಲಿಫ್ಟ್ ಕಾರು

ಟಾಟಾ ಟಿಯಾಗೊ ಎನ್‌ಆರ್‌ಜಿ ಫೇಸ್‌ಲಿಫ್ಟ್ ಆವೃತ್ತಿಯ ಬೆಲೆಯನ್ನು ಸದ್ಯಕ್ಕೆ ಬಹಿರಂಗಪಡಿಸಿಲ್ಲ. ಆದರೆ ವಿನ್ಯಾಸದ ಅಪ್ ಡೇಟ್'ಗಳ ಕಾರಣಕ್ಕೆ ಈ ಆವೃತ್ತಿಯ ಬೆಲೆ ಸ್ಟ್ಯಾಂಡರ್ಡ್ ಮಾದರಿಗಿಂತ ಸುಮಾರು ರೂ. 28,000 ಗಳಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ. ಈ ಆವೃತ್ತಿಯ ಬೆಲೆ ಎಕ್ಸ್ ಶೋರೂಂ ದರದಂತೆ ರೂ. 4.99 ಲಕ್ಷಗಳಿಂದ ಆರಂಭವಾಗಲಿದೆ.

Most Read Articles

Kannada
English summary
Tiago NRG facelift car expected to be launched on August 4. Read in Kannada.
Story first published: Saturday, July 24, 2021, 12:07 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X