ಐಷಾರಾಮಿ ಲ್ಯಾಂಬೊರ್ಗಿನಿ ಉರುಸ್ ಕಾರನ್ನು ಖರೀದಿಸಿದ ನಟ ಜೂನಿಯರ್ ಎನ್​ಟಿಆರ್

ದಕ್ಷಿಣ ಭಾರತದ ಚಲನಚಿತ್ರೋದ್ಯಮದಲ್ಲಿ ಜನಪ್ರಿಯ ನಟ ಜೂನಿಯರ್ ಎನ್​ಟಿಆರ್ ಹಲವಾರು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಈ ಜನಪ್ರಿಯ ನಟ ಹೆಚ್ಚು ಕಾರು ಕ್ರೇಜ್ ಹೊಂದಿದ್ದು, ಇವರ ಬಳಿ ಹಲವಾರು ಐಷಾರಾಮಿ ಮತ್ತು ದುಬಾರಿ ಕಾರುಗಳಿವೆ.

ಐಷಾರಾಮಿ ಲ್ಯಾಂಬೊರ್ಗಿನಿ ಉರುಸ್ ಕಾರನ್ನು ಖರೀದಿಸಿದ ನಟ ಜೂನಿಯರ್ ಎನ್​ಟಿಆರ್

ನಟ ಜೂನಿಯರ್ ಎನ್​ಟಿಆರ್ ಅವರು ಇತ್ತೀಚೆಗೆ ಹೊಸ ಲ್ಯಾಂಬೊರ್ಗಿನಿ ಉರುಸ್ ಕಾರನ್ನು ಖರೀದಿಸಿದ್ದಾರೆ. ಜೂನಿಯರ್ ಎನ್‌ಟಿಆರ್ ಇಟಲಿಯಿಂದ ಪ್ರೀಮಿಯಂ ಸ್ಪೋರ್ಟ್ಸ್ ಕಾರನ್ನು ಆಮದು ಮಾಡಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಜನತಾ ಗ್ಯಾರೇಜ್ ಖ್ಯಾತಿಯ ನಟ ಜೂನಿಯರ್ ಎನ್​ಟಿಆರ್ ಹಲವಾರು ಐಷಾರಾಮಿ ಕಾರುಗಳನ್ನು ಹೊಂದಿದ್ದಾರೆ. ಈ ನಟ ಐಷಾರಾಮಿ ಜೀವನಶೈಲಿಗೆ ಹೆಸರುವಾಸಿಯಾಗಿದ್ದಾರೆ.

ಐಷಾರಾಮಿ ಲ್ಯಾಂಬೊರ್ಗಿನಿ ಉರುಸ್ ಕಾರನ್ನು ಖರೀದಿಸಿದ ನಟ ಜೂನಿಯರ್ ಎನ್​ಟಿಆರ್

ಇನ್ನು ನಟ ಜೂನಿಯರ್ ಎನ್​ಟಿಆರ್ ಅವರು ಖರೀದಿಸಿದ ಲ್ಯಾಂಬೊರ್ಗಿನಿ ಉರುಸ್ ಕಾರಿನ ಬಗ್ಗೆ ಹೇಳುವುದಾದರೆ, ಇದು ಕಂಪನಿಯ ಹೆಚ್ಚು ಮಾರಾಟವಾಗುವ ಕಾರುಗಳಲ್ಲಿ ಒಂದಾಗಿದೆ. ಲ್ಯಾಂಬೊರ್ಗಿನಿ ಉರುಸ್ ಭಾರತದಲ್ಲಿಯೂ ಗಮನಾರ್ಹ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಐಷಾರಾಮಿ ಲ್ಯಾಂಬೊರ್ಗಿನಿ ಉರುಸ್ ಕಾರನ್ನು ಖರೀದಿಸಿದ ನಟ ಜೂನಿಯರ್ ಎನ್​ಟಿಆರ್

ಕಂಪನಿಯು 2018ರಲ್ಲಿ ಉರುಸ್ ಎಸ್‌ಯುವಿ ಉತ್ಪಾದನೆಯನ್ನು ಮೊದಲ ಬಾರಿಗೆ ಆರಂಭಿಸಿತು. ಅಂದಿನಿಂದ ಈ ಕಾರು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗಿದೆ. ಉರುಸ್ ಕಾರಿನಲ್ಲಿ 4.0 ಲೀಟರಿನ 8-ಸಿಲಿಂಡರ್ ಟ್ವಿನ್-ಟರ್ಬೊ ವಿ 8 ಎಂಜಿನ್ ಅಳವಡಿಸಲಾಗಿದೆ.

ಐಷಾರಾಮಿ ಲ್ಯಾಂಬೊರ್ಗಿನಿ ಉರುಸ್ ಕಾರನ್ನು ಖರೀದಿಸಿದ ನಟ ಜೂನಿಯರ್ ಎನ್​ಟಿಆರ್

ಈ ಎಂಜಿನ್ 641 ಬಿಹೆಚ್‌ಪಿ ಪವರ್ ಹಾಗೂ 850 ಎನ್‌ಎಂ ಟಾರ್ಕ್ ಉತ್ಪಾದಿಸುತ್ತದೆ. ಉರುಸ್ ಲ್ಯಾಂಬೊರ್ಗಿನಿ ಕಂಪನಿಯ ಅತ್ಯಂತ ಶಕ್ತಿಶಾಲಿ ಕಾರುಗಳಲ್ಲಿ ಒಂದು. ಈ ಕಾರು ಕೇವಲ 3.6 ಸೆಕೆಂಡುಗಳಲ್ಲಿ 0-100 ಕಿ.ಮೀ ವೇಗವನ್ನು ಪಡೆದುಕೊಳ್ಳುತ್ತದೆ.

MOST READ: ಐಷಾರಾಮಿ ಬಿಎಂಡಬ್ಲ್ಯು ಎಕ್ಸ್7 ಕಾರು ಚಾಲನೆ ವೇಳೆ ಕಾಣಿಸಿಕೊಂಡ ಬಾಲಿವುಡ್ ಸ್ಟಾರ್

ಐಷಾರಾಮಿ ಲ್ಯಾಂಬೊರ್ಗಿನಿ ಉರುಸ್ ಕಾರನ್ನು ಖರೀದಿಸಿದ ನಟ ಜೂನಿಯರ್ ಎನ್​ಟಿಆರ್

ಈ ಕಾರಿನ ಟಾಪ್ ಸ್ಪೀಡ್ ಪ್ರತಿ ಗಂಟೆಗೆ 305 ಕಿ.ಮೀಗಳಾಗಿದೆ. ಭಾರತದಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್, ಉದ್ಯಮಿ ಮುಖೇಶ್ ಅಂಬಾನಿ ಸೇರಿದಂತೆ ಹಲವಾರು ಗಣ್ಯರು ಲ್ಯಾಂಬೊರ್ಗಿನಿ ಉರುಸ್ ಕಾರನ್ನು ಹೊಂದಿದ್ದಾರೆ. ಇದೀಗ ಈ ಸಾಲಿಗೆ ಜೂನಿಯರ್ ಎನ್​ಟಿಆರ್ ಕೂಡ ಸೇರಿದ್ದಾರೆ.

ಐಷಾರಾಮಿ ಲ್ಯಾಂಬೊರ್ಗಿನಿ ಉರುಸ್ ಕಾರನ್ನು ಖರೀದಿಸಿದ ನಟ ಜೂನಿಯರ್ ಎನ್​ಟಿಆರ್

ಲ್ಯಾಂಬೊರ್ಗಿನಿ ಉರುಸ್ ಫೋಕ್ಸ್‌ವ್ಯಾಗನ್ ಗ್ರೂಪ್‌ನ ಎಂಎಲ್‌ಬಿ ಇವೊ ಪ್ಲಾಟ್‌ಫಾರಂ ಅನ್ನು ಆಧರಿಸಿದೆ. ಲ್ಯಾಂಬೊರ್ಗಿನಿ ಉರುಸ್ ಕಾರು ಸ್ಲಿಮ್ ಆಗಿರುವ ಎಲ್‌ಇಡಿ ಹೆಡ್‌ಲೈಟ್ ಹಾಗೂ ಟೇಲ್ ಲೈಟ್‌ಗಳನ್ನು ಹೊಂದಿದೆ.

MOST READ: ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ

ಐಷಾರಾಮಿ ಲ್ಯಾಂಬೊರ್ಗಿನಿ ಉರುಸ್ ಕಾರನ್ನು ಖರೀದಿಸಿದ ನಟ ಜೂನಿಯರ್ ಎನ್​ಟಿಆರ್

ಈ ಕಾರಿನ ವಿನ್ಯಾಸವು ಲ್ಯಾಂಬೊರ್ಗಿನಿ ಹುರಾಕನ್ ಸೂಪರ್ ಕಾರ್ ನಿಂದ ಸ್ಫೂರ್ತಿ ಪಡೆದಿದೆ. ಲ್ಯಾಂಬೊರ್ಗಿನಿ ಉರುಸ್ ಕಾರಿನಲ್ಲಿ 21 ಇಂಚಿನ ಅಲಾಯ್ ವ್ಹೀಲ್ ಗಳನ್ನು ಅಳವಡಿಸಲಾಗಿದೆ.

ಐಷಾರಾಮಿ ಲ್ಯಾಂಬೊರ್ಗಿನಿ ಉರುಸ್ ಕಾರನ್ನು ಖರೀದಿಸಿದ ನಟ ಜೂನಿಯರ್ ಎನ್​ಟಿಆರ್

ರಸ್ತೆಯಲ್ಲಿ ಸಾಗುವಾಗ ತನ್ನತ್ತ ಜನರನ್ನು ಸೆಳೆಯುವ ಸಾಮರ್ಥ್ಯ ಹೊಂದಿರುವ ಲ್ಯಾಂಬೊರ್ಗಿನಿ ಉರುಸ್ ಚಿಕ್ಕ ಒವರ್‍‍ಹ್ಯಾಂಗ್‍‍ಗಳನ್ನು ಹೊಂದಿರುವ ಕೂಪೆ ಸಿಲೋಟ್, ಹೆಚ್ಚಿನ ಗ್ರೌಂಡ್ ಕ್ಲಿಯರೆನ್ಸ್ ಹಾಗೂ ದೊಡ್ಡ ಗಾತ್ರದ ಬಂಪರ್‍‍ಗಳನ್ನು ಹೊಂದಿದೆ. ಲ್ಯಾಂಬೊರ್ಗಿನಿ ಉರುಸ್ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬಹುಬೇಡಿಕೆಯ ಕಾರುಗಳಲ್ಲಿ ಒಂದಾಗಿದೆ.

Article Published On: Thursday, March 4, 2021, 12:43 [IST]
English summary
Jr NTR Buys A Lamborghini Car. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+