Just In
- 4 min ago ಹ್ಯುಂಡೈನ ಈ ಕಾರಿಗೆ ಭಾರತದಲ್ಲಿ ಭರ್ಜರಿ ಡಿಸ್ಕೌಂಟ್: ಇದಕ್ಕಿಂತ ಉತ್ತಮ ಆಫರ್ ಸದ್ಯಕ್ಕಿಲ್ಲ!
- 13 min ago ರೈತರ ವಿಶ್ವಾಸದೊಂದಿಗೆ 40 ಲಕ್ಷ ಟ್ರ್ಯಾಕ್ಟರ್ ಮಾರಾಟ ಮೈಲಿಗಲ್ಲು ಸಾಧಿಸಿದ ಮಹೀಂದ್ರಾ
- 52 min ago Bangaluru: ನಮ್ಮ ಯಾತ್ರಿ ಕ್ಯಾಬ್ ಸೇವೆ ಆರಂಭ.. ಎಷ್ಟಿದೆ ದರ?
- 2 hrs ago ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್: JLR ಇವಿ ಹಬ್ಗೆ ಸಿದ್ದವಾದ ನೆರೆ-ರಾಜ್ಯ!
Don't Miss!
- News EPFO: ಪಿಎಫ್ ನಿಯಮದಲ್ಲಿ ಭಾರೀ ಬದಲಾವಣೆ, 1 ಲಕ್ಷದವರೆಗೂ ಹಣ ಬಿಡಿಸಿಕೊಳ್ಳಬಹುದು!
- Movies ತಾರಕ್ ಪೊನ್ನಪ್ಪ 'ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ' ಧಾರಾವಾಹಿಯಿಂದ ಹೊರಬಂದಿದ್ದೇಕೆ?
- Lifestyle 5 ನಿಮಿಷದಲ್ಲಿ ಪಾತ್ರೆಯನ್ನು ಹೊಳೆಯುವಂತೆ ಮಾಡಿ..! ಸುಲಭದ ಟಿಪ್ಸ್ ಇಲ್ಲಿದೆ
- Technology oneplus: ಒನ್ಪ್ಲಸ್ನಿಂದ ಫ್ಲ್ಯಾಗ್ಶಿಪ್ ಕ್ಯಾಮೆರಾ ಸೌಲಭ್ಯದೊಂದಿಗೆ ಫ್ಲಿಪ್ ಫೋನ್!
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಐಷಾರಾಮಿ ಲ್ಯಾಂಬೊರ್ಗಿನಿ ಉರುಸ್ ಕಾರನ್ನು ಖರೀದಿಸಿದ ನಟ ಜೂನಿಯರ್ ಎನ್ಟಿಆರ್
ದಕ್ಷಿಣ ಭಾರತದ ಚಲನಚಿತ್ರೋದ್ಯಮದಲ್ಲಿ ಜನಪ್ರಿಯ ನಟ ಜೂನಿಯರ್ ಎನ್ಟಿಆರ್ ಹಲವಾರು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಈ ಜನಪ್ರಿಯ ನಟ ಹೆಚ್ಚು ಕಾರು ಕ್ರೇಜ್ ಹೊಂದಿದ್ದು, ಇವರ ಬಳಿ ಹಲವಾರು ಐಷಾರಾಮಿ ಮತ್ತು ದುಬಾರಿ ಕಾರುಗಳಿವೆ.
ನಟ ಜೂನಿಯರ್ ಎನ್ಟಿಆರ್ ಅವರು ಇತ್ತೀಚೆಗೆ ಹೊಸ ಲ್ಯಾಂಬೊರ್ಗಿನಿ ಉರುಸ್ ಕಾರನ್ನು ಖರೀದಿಸಿದ್ದಾರೆ. ಜೂನಿಯರ್ ಎನ್ಟಿಆರ್ ಇಟಲಿಯಿಂದ ಪ್ರೀಮಿಯಂ ಸ್ಪೋರ್ಟ್ಸ್ ಕಾರನ್ನು ಆಮದು ಮಾಡಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಜನತಾ ಗ್ಯಾರೇಜ್ ಖ್ಯಾತಿಯ ನಟ ಜೂನಿಯರ್ ಎನ್ಟಿಆರ್ ಹಲವಾರು ಐಷಾರಾಮಿ ಕಾರುಗಳನ್ನು ಹೊಂದಿದ್ದಾರೆ. ಈ ನಟ ಐಷಾರಾಮಿ ಜೀವನಶೈಲಿಗೆ ಹೆಸರುವಾಸಿಯಾಗಿದ್ದಾರೆ.
ಇನ್ನು ನಟ ಜೂನಿಯರ್ ಎನ್ಟಿಆರ್ ಅವರು ಖರೀದಿಸಿದ ಲ್ಯಾಂಬೊರ್ಗಿನಿ ಉರುಸ್ ಕಾರಿನ ಬಗ್ಗೆ ಹೇಳುವುದಾದರೆ, ಇದು ಕಂಪನಿಯ ಹೆಚ್ಚು ಮಾರಾಟವಾಗುವ ಕಾರುಗಳಲ್ಲಿ ಒಂದಾಗಿದೆ. ಲ್ಯಾಂಬೊರ್ಗಿನಿ ಉರುಸ್ ಭಾರತದಲ್ಲಿಯೂ ಗಮನಾರ್ಹ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್
ಕಂಪನಿಯು 2018ರಲ್ಲಿ ಉರುಸ್ ಎಸ್ಯುವಿ ಉತ್ಪಾದನೆಯನ್ನು ಮೊದಲ ಬಾರಿಗೆ ಆರಂಭಿಸಿತು. ಅಂದಿನಿಂದ ಈ ಕಾರು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗಿದೆ. ಉರುಸ್ ಕಾರಿನಲ್ಲಿ 4.0 ಲೀಟರಿನ 8-ಸಿಲಿಂಡರ್ ಟ್ವಿನ್-ಟರ್ಬೊ ವಿ 8 ಎಂಜಿನ್ ಅಳವಡಿಸಲಾಗಿದೆ.
ಈ ಎಂಜಿನ್ 641 ಬಿಹೆಚ್ಪಿ ಪವರ್ ಹಾಗೂ 850 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಉರುಸ್ ಲ್ಯಾಂಬೊರ್ಗಿನಿ ಕಂಪನಿಯ ಅತ್ಯಂತ ಶಕ್ತಿಶಾಲಿ ಕಾರುಗಳಲ್ಲಿ ಒಂದು. ಈ ಕಾರು ಕೇವಲ 3.6 ಸೆಕೆಂಡುಗಳಲ್ಲಿ 0-100 ಕಿ.ಮೀ ವೇಗವನ್ನು ಪಡೆದುಕೊಳ್ಳುತ್ತದೆ.
MOST READ: ಐಷಾರಾಮಿ ಬಿಎಂಡಬ್ಲ್ಯು ಎಕ್ಸ್7 ಕಾರು ಚಾಲನೆ ವೇಳೆ ಕಾಣಿಸಿಕೊಂಡ ಬಾಲಿವುಡ್ ಸ್ಟಾರ್
ಈ ಕಾರಿನ ಟಾಪ್ ಸ್ಪೀಡ್ ಪ್ರತಿ ಗಂಟೆಗೆ 305 ಕಿ.ಮೀಗಳಾಗಿದೆ. ಭಾರತದಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್, ಉದ್ಯಮಿ ಮುಖೇಶ್ ಅಂಬಾನಿ ಸೇರಿದಂತೆ ಹಲವಾರು ಗಣ್ಯರು ಲ್ಯಾಂಬೊರ್ಗಿನಿ ಉರುಸ್ ಕಾರನ್ನು ಹೊಂದಿದ್ದಾರೆ. ಇದೀಗ ಈ ಸಾಲಿಗೆ ಜೂನಿಯರ್ ಎನ್ಟಿಆರ್ ಕೂಡ ಸೇರಿದ್ದಾರೆ.
ಲ್ಯಾಂಬೊರ್ಗಿನಿ ಉರುಸ್ ಫೋಕ್ಸ್ವ್ಯಾಗನ್ ಗ್ರೂಪ್ನ ಎಂಎಲ್ಬಿ ಇವೊ ಪ್ಲಾಟ್ಫಾರಂ ಅನ್ನು ಆಧರಿಸಿದೆ. ಲ್ಯಾಂಬೊರ್ಗಿನಿ ಉರುಸ್ ಕಾರು ಸ್ಲಿಮ್ ಆಗಿರುವ ಎಲ್ಇಡಿ ಹೆಡ್ಲೈಟ್ ಹಾಗೂ ಟೇಲ್ ಲೈಟ್ಗಳನ್ನು ಹೊಂದಿದೆ.
MOST READ: ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್ಯುವಿ
ಈ ಕಾರಿನ ವಿನ್ಯಾಸವು ಲ್ಯಾಂಬೊರ್ಗಿನಿ ಹುರಾಕನ್ ಸೂಪರ್ ಕಾರ್ ನಿಂದ ಸ್ಫೂರ್ತಿ ಪಡೆದಿದೆ. ಲ್ಯಾಂಬೊರ್ಗಿನಿ ಉರುಸ್ ಕಾರಿನಲ್ಲಿ 21 ಇಂಚಿನ ಅಲಾಯ್ ವ್ಹೀಲ್ ಗಳನ್ನು ಅಳವಡಿಸಲಾಗಿದೆ.
ರಸ್ತೆಯಲ್ಲಿ ಸಾಗುವಾಗ ತನ್ನತ್ತ ಜನರನ್ನು ಸೆಳೆಯುವ ಸಾಮರ್ಥ್ಯ ಹೊಂದಿರುವ ಲ್ಯಾಂಬೊರ್ಗಿನಿ ಉರುಸ್ ಚಿಕ್ಕ ಒವರ್ಹ್ಯಾಂಗ್ಗಳನ್ನು ಹೊಂದಿರುವ ಕೂಪೆ ಸಿಲೋಟ್, ಹೆಚ್ಚಿನ ಗ್ರೌಂಡ್ ಕ್ಲಿಯರೆನ್ಸ್ ಹಾಗೂ ದೊಡ್ಡ ಗಾತ್ರದ ಬಂಪರ್ಗಳನ್ನು ಹೊಂದಿದೆ. ಲ್ಯಾಂಬೊರ್ಗಿನಿ ಉರುಸ್ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬಹುಬೇಡಿಕೆಯ ಕಾರುಗಳಲ್ಲಿ ಒಂದಾಗಿದೆ.