ಕೋವಿಡ್ ಅಬ್ಬರದ ನಡುವೆಯೂ 2021ರಲ್ಲಿ ಬಿಡುಗಡೆಯಾದ ಟಾಪ್ 10 ಜನಪ್ರಿಯ ಕಾರುಗಳಿವು!

ದೇಶಾದ್ಯಂತ ವರ್ಷದ ಆರಂಭದಿಂದಲೇ ಆರ್ಥಿಕ ಚಟುವಟಿಕೆಗಳಿಗೆ ಭಾರೀ ಹೊಡೆತ ನೀಡಿದ ಕೋವಿಡ್ 2ನೇ ಅಲೆ ಭೀತಿಯ ನಡುವೆಯೂ ದೇಶಿಯ ಆಟೋ ಉದ್ಯಮವು ಸಾಕಷ್ಟು ಸುಧಾರಣೆ ಕಂಡಿದ್ದು, ವೈರಸ್ ಭೀತಿ ನಡುವೆಯೇ ಪ್ರಮುಖ ಆಟೋ ಉತ್ಪಾದನಾ ಕಂಪನಿಗಳು ತಮ್ಮ ವಿವಿಧ ಹೊಸ ಕಾರು ಮಾದರಿಯನ್ನು ಬಿಡುಗಡೆ ಮಾಡಿವೆ.

ಕೋವಿಡ್ ಅಬ್ಬರದ ನಡುವೆಯೂ 2021ರಲ್ಲಿ ಬಿಡುಗಡೆಯಾದ ಟಾಪ್ 10 ಜನಪ್ರಿಯ ಕಾರುಗಳಿವು!

ಕೋವಿಡ್ ಪರಿಣಾಮ ಈ ವರ್ಷದ ಮಧ್ಯಂತರದಲ್ಲಿ ನೆಲಕಚ್ಚಿದ್ದ ಹೊಸ ವಾಹನ ಮಾರಾಟವು ಕಳೆದ ಕೆಲ ತಿಂಗಳಿನಿಂದ ತ್ವರಿತವಾಗಿ ಹೆಚ್ಚಳವಾಗಿದ್ದು, ಗ್ರಾಹಕರ ಬೇಡಿಕೆಯನ್ನು ಆಧರಿಸಿ ವಿವಿಧ ಕಾರು ಉತ್ಪಾದನಾ ಕಂಪನಿಗಳು ತಮ್ಮ ಬಹುನೀರಿಕ್ಷಿತ ಕಾರುಗಳನ್ನು ಮಾದರಿಗಳನ್ನು ಬಿಡುಗಡೆ ಮಾಡಿವೆ. ಹಾಗಾದರೆ ಈ ವರ್ಷ ಬಿಡುಗಡೆಯಾಗಿ ಜನಪ್ರಿಯವಾಗಿರುವ ಟಾಪ್ 10 ಕಾರುಗಳು ಯಾವುವು? ಮತ್ತು ಅವುಗಳ ವಿಶೇಷತೆ, ಬೆಲೆ ಮತ್ತು ಎಂಜಿನ್ ಮಾಹಿತಿಯನ್ನು ಇಲ್ಲಿ ತಿಳಿಯೋಣ.

ಕೋವಿಡ್ ಅಬ್ಬರದ ನಡುವೆಯೂ 2021ರಲ್ಲಿ ಬಿಡುಗಡೆಯಾದ ಟಾಪ್ 10 ಜನಪ್ರಿಯ ಕಾರುಗಳಿವು!

ಟಾಟಾ ಪಂಚ್

ಪಂಚ್ ಕಾರು ಮಾದರಿಯು ಪ್ಯೂರ್, ಅಡ್ವೆಂಚರ್, ಅಕಾಂಪ್ಲಿಶೆಡ್ ಮತ್ತು ಕ್ರಿಯೆಟಿವ್ ಎನ್ನುವ ನಾಲ್ಕು ವೆರಿಯೆಂಟ್‌ಗಳೊಂದಿಗೆ ಖರೀದಿಗೆ ಲಭ್ಯವಿದ್ದು, ವಿವಿಧ ಮಾದರಿಗಳ ತಾಂತ್ರಿಕ ಸೌಲಭ್ಯಗಳಿಗೆ ಅನುಗುಣವಾಗಿ ಹೊಸ ಕಾರು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.49 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 9.09 ಲಕ್ಷ ಬೆಲೆ ಹೊಂದಿದೆ.

ಕೋವಿಡ್ ಅಬ್ಬರದ ನಡುವೆಯೂ 2021ರಲ್ಲಿ ಬಿಡುಗಡೆಯಾದ ಟಾಪ್ 10 ಜನಪ್ರಿಯ ಕಾರುಗಳಿವು!

ಸೆಗ್ಮೆಂಟ್ ಬೆಸ್ಟ್ ಫಿಚರ್ಸ್‌ಗಳೊಂದಿಗೆ ಅತ್ಯುತ್ತಮ ಎಂಜಿನ್ ಆಯ್ಕೆ ಹೊಂದಿರುವ ಟಾಟಾ ಪಂಚ್ ಕಾರಿನಲ್ಲಿ ಕಂಪನಿಯು 1.2-ಲೀಟರ್ ರಿವೊಟ್ರಾನ್ ತ್ರಿ ಸಿಲಿಂಡರ್ ನ್ಯಾಚುರಲ್ ಆಸ್ಪೆರೆಟೆಡ್ ಪೆಟ್ರೋಲ್ ಎಂಜಿನ್ ಪರಿಚಯಿಸಿದೆ. 1.2-ಲೀಟರ್ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 83 ಬಿಎಚ್‌ಪಿ ಉತ್ಪಾದನಾ ಗುಣಹೊಂದಿದೆ.

ಕೋವಿಡ್ ಅಬ್ಬರದ ನಡುವೆಯೂ 2021ರಲ್ಲಿ ಬಿಡುಗಡೆಯಾದ ಟಾಪ್ 10 ಜನಪ್ರಿಯ ಕಾರುಗಳಿವು!

ಮಹೀಂದ್ರಾ ಎಕ್ಸ್‌ಯುವಿ700

ಸಂಪೂರ್ಣವಾಗಿ ಹೊಸ ಪ್ಲ್ಯಾಟ್‌ಫಾರ್ಮ್ ಆಧರಿಸಿರುವ ಎಕ್ಸ್‌ಯುವಿ700 ಕಾರು ಮಾದರಿಯು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಆಕರ್ಷಕ ಬೆಲೆಯೊಂದಿಗೆ ಗ್ರಾಹಕರನ್ನು ಸೆಳೆಯುತ್ತಿದ್ದು, ಪ್ರತಿಸ್ಪರ್ಧಿ ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದೆ. ಹೊಸ ಕಾರು ಗ್ರಾಹಕರ ಬೇಡಿಕೆಯೆಂತೆ 5 ಸೀಟರ್ ಮತ್ತು 7 ಸೀಟರ್ ಮಾದರಿಗಳಲ್ಲಿ ಖರೀದಿಗೆ ಲಭ್ಯವಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11.99 ಲಕ್ಷಕ್ಕೆ ಮತ್ತು ಹೆಚ್ಚಿನ ಮಟ್ಟದ ಫೀಚರ್ಸ್ ಹೊಂದಿರುವ ಟಾಪ್ ಎಂಡ್ ಮಾದರಿಯನ್ನು ರೂ. 22.89 ಲಕ್ಷ ಬೆಲೆ ಹೊಂದಿದೆ.

ಕೋವಿಡ್ ಅಬ್ಬರದ ನಡುವೆಯೂ 2021ರಲ್ಲಿ ಬಿಡುಗಡೆಯಾದ ಟಾಪ್ 10 ಜನಪ್ರಿಯ ಕಾರುಗಳಿವು!

ಹೊಸ ಕಾರಿನಲ್ಲಿ 7 ಸೀಟರ್ ಮಾದರಿಯು 2+3+2 ಮಾದರಿಯ ಆಸನ ಸೌಲಭ್ಯ ಹೊಂದಿದ್ದರೆ 5 ಸೀಟರ್ ಮಾದರಿಯು 2+3 ಆಸನ ಸೌಲಭ್ಯ ಹೊಂದಿದ್ದು, ಹೊಸ ಕಾರಿನಲ್ಲಿ ಕಂಪನಿಯು 2.0-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 2.2-ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಆಯ್ಕೆ ನೀಡಿದೆ. ಜೊತೆಗೆ ಹೆಚ್ಚಿನ ಮಟ್ಟದ ಸುರಕ್ಷಾ ಫೀಚರ್ಸ್‌ಗಳೊಂದಿಗೆ ಕ್ರ್ಯಾಶ್ ಟೆಸ್ಟಿಂಗ್ 5 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಪಡೆದುಕೊಂಡಿದೆ.

ಕೋವಿಡ್ ಅಬ್ಬರದ ನಡುವೆಯೂ 2021ರಲ್ಲಿ ಬಿಡುಗಡೆಯಾದ ಟಾಪ್ 10 ಜನಪ್ರಿಯ ಕಾರುಗಳಿವು!

ಟಾಟಾ ಸಫಾರಿ

ಸಫಾರಿ ಕಾರು ಮಾದರಿಯು ಎಕ್ಸ್ಇ, ಎಕ್ಸ್ಎಂ, ಎಕ್ಸ್‌ಟಿ, ಎಕ್ಸ್‌ಟಿ ಪ್ಲಸ್, ಎಕ್ಸ್‌ಜೆಡ್, ಎಕ್ಸ್‌ಜೆಡ್ ಪ್ಲಸ್, ಎಕ್ಸ್‌ಜೆಡ್ ಪ್ಲಸ್ ಅಡ್ವೆಂಚರ್ ಪೆರಸೊನಾ ಮತ್ತು ಗೋಲ್ಡ್ ಎಡಿಷನ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಹೊಸ ಕಾರು ಗ್ರಾಹಕರ ಬೇಡಿಕೆಯೆಂತೆ 6 ಸೀಟರ್ ಮತ್ತು 7 ಸೀಟರ್ ಆಯ್ಕೆಯೊಂದಿಗೆ ಎಕ್ಸ್‌ಶೋರೂಂ ಪ್ರಕಾರ ರೂ.14.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 23.19 ಲಕ್ಷ ಬೆಲೆ ಹೊಂದಿದೆ.

ಕೋವಿಡ್ ಅಬ್ಬರದ ನಡುವೆಯೂ 2021ರಲ್ಲಿ ಬಿಡುಗಡೆಯಾದ ಟಾಪ್ 10 ಜನಪ್ರಿಯ ಕಾರುಗಳಿವು!

ಹೊಸ ಸಫಾರಿ ಎಸ್‌ಯುವಿಯಲ್ಲಿ ಆರು ಸ್ಪೀಡ್ ಮ್ಯಾನುವಲ್ ಅಥವಾ ಆರು ಸ್ಪೀಡ್ ಆಟೋಮ್ಯಾಟಿಕ್ ಟಾರ್ಕ್ ಕನ್ವರ್ಟರ್ ಗೇರ್‌ಬಾಕ್ಸ್ ಆಯ್ಕೆ ಹೊಂದಿರುವ 2.0-ಲೀಟರ್ ಕ್ರಿಯೊಟೆಕ್ ಡೀಸೆಲ್ ಎಂಜಿನ್ ಆಯ್ಕೆ ನೀಡಲಾಗಿದ್ದು, ಫ್ರಂಟ್ ವೀಲ್ಹ್ ಡ್ರೈವ್ ಸಿಸ್ಟಂನೊಂದಿಗೆ 168-ಬಿಎಚ್‌ಪಿ ಮತ್ತು 350-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದೆ.

ಕೋವಿಡ್ ಅಬ್ಬರದ ನಡುವೆಯೂ 2021ರಲ್ಲಿ ಬಿಡುಗಡೆಯಾದ ಟಾಪ್ 10 ಜನಪ್ರಿಯ ಕಾರುಗಳಿವು!

ಎಂಜಿ ಆಸ್ಟರ್

ಹೊಸ ಎಂಜಿ ಆಸ್ಟರ್ ಕಾರು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಅತ್ಯುತ್ತಮ ಫೀಚರ್ಸ್, ವಿವಿಧ ಎಂಜಿನ್ ಆಯ್ಕೆ ಮತ್ತು ಆಕರ್ಷಕ ಬೆಲೆಗಳನ್ನು ಪಡೆದುಕೊಂಡಿದ್ದು, ಸುಧಾರಿತ ತಂತ್ರಜ್ಞಾನ ಪ್ರೇರಿತ ತಾಂತ್ರಿಕ ಸೌಲಭ್ಯಗಳು ಮತ್ತು ಬಲಿಷ್ಠ ಎಂಜಿನ್ ಆಯ್ಕೆಯೊಂದಿಗೆ ವಿವಿಧ ವೆರಿಯೆಂಟ್‌ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 9.78 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 17.38 ಲಕ್ಷ ಬೆಲೆ ಹೊಂದಿದೆ.

ಕೋವಿಡ್ ಅಬ್ಬರದ ನಡುವೆಯೂ 2021ರಲ್ಲಿ ಬಿಡುಗಡೆಯಾದ ಟಾಪ್ 10 ಜನಪ್ರಿಯ ಕಾರುಗಳಿವು!

ಹೊಸ ಕಾರು ಸ್ಟೈಲ್, ಸೂಪರ್, ಸ್ಮಾರ್ಟ್, ಸ್ಯಾವಿ ಮತ್ತು ಶಾರ್ಪ್ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಸ್ಪೋರ್ಟಿ ವಿನ್ಯಾಸದೊಂದಿಗೆ ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್‌ಗಳನ್ನು ಜೋಡಣೆ ಹೊಂದಿದೆ. ಹೊಸ ಕಾರಿನಲ್ಲಿ 1.5-ಲೀಟರ್ ಪೆಟ್ರೋಲ್, 1.3-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಲಾಗಿದ್ದು, ವ್ಯಯಕ್ತಿಕರಣಗೊಳಿಸಿದ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಸೌಲಭ್ಯ ಹೊಂದಿರುವ ಭಾರತದ ಮೊದಲ ಕಾರು ಮಾದರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಕೋವಿಡ್ ಅಬ್ಬರದ ನಡುವೆಯೂ 2021ರಲ್ಲಿ ಬಿಡುಗಡೆಯಾದ ಟಾಪ್ 10 ಜನಪ್ರಿಯ ಕಾರುಗಳಿವು!

ನ್ಯೂ ಜನರೇಷನ್ ಮಾರುತಿ ಸೆಲೆರಿಯೊ

ಹೊಸ ಕಾರುಗಳ ಉತ್ಪಾದನೆಯಲ್ಲಿ ಸಾಕಷ್ಟು ಹೊಸ ಬದಲಾವಣೆಗಳನ್ನು ಪರಿಚಯಿಸುತ್ತಿರುವ ಮಾರುತಿ ಸುಜುಕಿ ಕಂಪನಿಯು ಇದೀಗ ಎರಡನೇ ತಲೆಮಾರಿನ ಸೆಲೆರಿಯೊ ಹ್ಯಾಚ್‌ಬ್ಯಾಕ್ ಮಾದರಿಯನ್ನು ಬಿಡುಗಡೆ ಮಾಡಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 4.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 6.94 ಲಕ್ಷ ಬೆಲೆಯೊಂದಿಗೆ ವಿವಿಧ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದೆ.

ಕೋವಿಡ್ ಅಬ್ಬರದ ನಡುವೆಯೂ 2021ರಲ್ಲಿ ಬಿಡುಗಡೆಯಾದ ಟಾಪ್ 10 ಜನಪ್ರಿಯ ಕಾರುಗಳಿವು!

ಹೊಸ ಕಾರಿನಲ್ಲಿ ಇಂಧನ ದಕ್ಷತೆ ಹೆಚ್ಚಲು ಮಾರುತಿ ಸುಜುಕಿಯು ಸ್ಮಾರ್ಟ್ ಸ್ಟಾರ್ಟ್/ಸ್ಟಾಪ್ ಸಿಸ್ಟಂ ಜೋಡಿಸಿದ್ದು, ಟ್ರಾಫಿಕ್ ದಟ್ಟಣೆಯಲ್ಲಿ ಇಂಧನ ದಹಿಸುವಿಕೆಯನ್ನು ನಿಯಮಿತಗೊಳಿಸಿ ಮೈಲೇಜ್ ಮೇಲೆ ಪರಿಣಾಮ ಬೀರದಂತೆ ತಡೆಯಲು ಹೊಸ ತಂತ್ರಜ್ಞಾನವು ಸಾಕಷ್ಟು ಸಹಕಾರಿಯಾಗಿದೆ. ಹೊಸ ಕಾರು ಮಾದರಿಯು ಪ್ರತಿ ಲೀಟರ್‌ಗೆ ಗರಿಷ್ಠ 26 ಕಿ.ಮೀ ಮೈಲೇಜ್ ನೀಡಲಿದ್ದು, ಅತ್ಯುತ್ತಮ ಫೀಚರ್ಸ್ ಒಳಗೊಂಡಿದೆ.

ಕೋವಿಡ್ ಅಬ್ಬರದ ನಡುವೆಯೂ 2021ರಲ್ಲಿ ಬಿಡುಗಡೆಯಾದ ಟಾಪ್ 10 ಜನಪ್ರಿಯ ಕಾರುಗಳಿವು!

ರೆನಾಲ್ಟ್ ಕಿಗರ್

ಹೊಸ ಕಿಗರ್ ಕಾರು ಮಾದರಿಯು ಆರ್‌ಎಕ್ಸ್ಇ, ಆರ್‌ಎಕ್ಸ್ಎಲ್, ಆರ್‌ಎಕ್ಸ್‌ಟಿ ಮತ್ತು ಆರ್‌ಎಕ್ಸ್‌ಜೆಡ್ ಎನ್ನುವ ನಾಲ್ಕು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.5.64 ಲಕ್ಷದಿಂದ ಟಾಪ್ ಎಂಡ್ ರೂ.10.09 ಲಕ್ಷ ಹೊಂದಿದೆ.

ಕೋವಿಡ್ ಅಬ್ಬರದ ನಡುವೆಯೂ 2021ರಲ್ಲಿ ಬಿಡುಗಡೆಯಾದ ಟಾಪ್ 10 ಜನಪ್ರಿಯ ಕಾರುಗಳಿವು!

ಪ್ರತಿಸ್ಪರ್ಧಿ ಕಾರುಗಳಿಗೆ ಸಮನಾಗಿ ಹಲವಾರು ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿರುವ ರೆನಾಲ್ಟ್ ಕಿಗರ್ ಕಾರು ಮಾದರಿಯು ಆಕರ್ಷಕ ಬೆಲೆಯೊಂದಿಗೆ ಕಂಪ್ಯಾಕ್ಟ್ ಎಸ್‌ಯುವಿ ಜೊತೆಗೆ ಹ್ಯಾಚ್‌ಬ್ಯಾಕ್ ಕಾರು ಖರೀದಿದಾರರನ್ನು ಸೆಳೆಯುತ್ತಿದ್ದು, ಹೊಸ ಕಾರಿನಲ್ಲಿ 1.0-ಲೀಟರ್ ಸಾಮರ್ಥ್ಯದ ನ್ಯಾಚುರಲಿ ಆಸ್ಪರೆಟೆಡ್ ಪೆಟ್ರೋಲ್ ಮತ್ತು 1.0-ಲೀಟರ್ ಸಾಮರ್ಥ್ಯದ ಟರ್ಬೊ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಲಾಗಿದೆ.

ಕೋವಿಡ್ ಅಬ್ಬರದ ನಡುವೆಯೂ 2021ರಲ್ಲಿ ಬಿಡುಗಡೆಯಾದ ಟಾಪ್ 10 ಜನಪ್ರಿಯ ಕಾರುಗಳಿವು!

ಹ್ಯುಂಡೈ ಅಲ್ಕಾಜರ್ ಎಸ್‌ಯುವಿ

ಹ್ಯುಂಡೈ ಇಂಡಿಯಾ ಕಂಪನಿಯು ತನ್ನ ಬಹುನೀರಿಕ್ಷಿತ ಅಲ್ಕಾಜರ್ ಎಸ್‌ಯುವಿ ಮಾದರಿಯನ್ನು ಬಿಡುಗಡೆ ಮಾಡಿದ್ದು, 6 ಸೀಟರ್ ಮತ್ತು 7 ಸೀಟರ್ ಸೌಲಭ್ಯ ಹೊಂದಿರುವ ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 16.30 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ. 20.14 ಲಕ್ಷ ಬೆಲೆ ಹೊಂದಿದೆ.

ಕೋವಿಡ್ ಅಬ್ಬರದ ನಡುವೆಯೂ 2021ರಲ್ಲಿ ಬಿಡುಗಡೆಯಾದ ಟಾಪ್ 10 ಜನಪ್ರಿಯ ಕಾರುಗಳಿವು!

ಪ್ಲ್ಯಾಟಿನಂ, ಪ್ರೆಸ್ಟೀಜ್, ಸಿಗ್ನೆಚೆರ್, ಪ್ಲ್ಯಾಟಿನಂ ಆಪ್ಷನ್, ಪ್ರೆಸ್ಟೀಜ್ ಆಪ್ಷನ್ ಮತ್ತು ಸಿಗ್ನೆಚೆರ್ ಆಪ್ಷನ್ ಎನ್ನುವ ಆರು ವೆರಿಯೆಂಟ್‌ಗಳೊಂದಿಗೆ ಹೊಸ ಅಲ್ಕಾಜರ್ ಕಾರು ಅತ್ಯುತ್ತಮ ಫೀಚರ್ಸ್‌, ಬಲಿಷ್ಠ ಎಂಜಿನ್ ಆಯ್ಕೆ ಮತ್ತು ಆಕರ್ಷಕ ಬೆಲೆ ಹೊಂದಿದ್ದು, ಹೈ ಎಂಡ್ ಮಾದರಿಗಳಲ್ಲಿ 2.0-ಲೀಟರ್ ಪೆಟ್ರೋಲ್ ಎಂಜಿನ್ ಮತ್ತು ಆರಂಭಿಕ ಮಾದರಿಗಳಲ್ಲಿ 1.5-ಲೀಟರ್ ಡೀಸೆಲ್ ಎಂಜಿನ್ ಜೋಡಣೆ ಮಾಡಲಾಗಿದೆ.

ಕೋವಿಡ್ ಅಬ್ಬರದ ನಡುವೆಯೂ 2021ರಲ್ಲಿ ಬಿಡುಗಡೆಯಾದ ಟಾಪ್ 10 ಜನಪ್ರಿಯ ಕಾರುಗಳಿವು!

ಸ್ಕೋಡಾ ಕುಶಾಕ್

ಸ್ಕೋಡಾ ಇಂಡಿಯಾ ಕಂಪನಿಯು ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಹ್ಯುಂಡೈ ಕ್ರೆಟಾ ಮತ್ತು ಕಿಯಾ ಸೆಲ್ಟೊಸ್‌ಗೆ ಪೈಪೋಟಿಯಾಗಿ ಭಾರತದಲ್ಲಿ ಬಿಡುಗಡೆ ಮಾಡಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 10.79 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯು ರೂ.17.99 ಲಕ್ಷ ಬೆಲೆ ಹೊಂದಿದೆ.

ಕೋವಿಡ್ ಅಬ್ಬರದ ನಡುವೆಯೂ 2021ರಲ್ಲಿ ಬಿಡುಗಡೆಯಾದ ಟಾಪ್ 10 ಜನಪ್ರಿಯ ಕಾರುಗಳಿವು!

ಹೊಸ ಕುಶಾಕ್ ಕಾರಿನಲ್ಲಿ ಸ್ಕೋಡಾ ಕಂಪನಿಯು ಆರಂಭಿಕವಾಗಿ 1.-0-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಮತ್ತು ಹೈ ಎಂಡ್ ಮಾದರಿಯಲ್ಲಿ 1.5-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಲಾಗಿದ್ದು, ಪ್ರತಿ ವೆರಿಯೆಂಟ್‌ನಲ್ಲೂ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಮತ್ತು ಹೈ ಎಂಡ್ ಮಾದರಿಯಲ್ಲಿ 7-ಸ್ಪೀಡ್ ಡಿಎಸ್‌ಜಿ ಗೇರ್‌ಬಾಕ್ಸ್ ಆಯ್ಕೆ ಹೊಂದಿದೆ.

ಕೋವಿಡ್ ಅಬ್ಬರದ ನಡುವೆಯೂ 2021ರಲ್ಲಿ ಬಿಡುಗಡೆಯಾದ ಟಾಪ್ 10 ಜನಪ್ರಿಯ ಕಾರುಗಳಿವು!

ಫೋಕ್ಸ್‌ವ್ಯಾಗನ್ ಟೈಗುನ್

ಟೈಗುನ್ ಹೊಸ ಕಾರು ಗ್ರಾಹಕರ ಬೇಡಿಕೆ ಅನುಸಾರವಾಗಿ ಡೈನಾಮಿಕ್ ಲೈನ್(ಕಂಫರ್ಟ್ ಲೈನ್, ಹೈ ಲೈನ್ ಮತ್ತು ಟಾಪ್ ಲೈನ್) ಮತ್ತು ಜಿಟಿ ಲೈನ್(ಜಿಟಿ ಮತ್ತು ಜಿಟಿ ಪ್ಲಸ್) ಆವೃತ್ತಿಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ವಿವಿಧ ವೆರಿಯೆಂಟ್‌ಗಳಲ್ಲಿರುವ ತಾಂತ್ರಿಕ ಸೌಲಭ್ಯಕ್ಕೆ ಅನುಗುಣವಾಗಿ ಹೊಸ ಕಾರು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.10.54 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 17.54 ಲಕ್ಷ ಬೆಲೆ ಹೊಂದಿದೆ.

ಕೋವಿಡ್ ಅಬ್ಬರದ ನಡುವೆಯೂ 2021ರಲ್ಲಿ ಬಿಡುಗಡೆಯಾದ ಟಾಪ್ 10 ಜನಪ್ರಿಯ ಕಾರುಗಳಿವು!

ಹೊಸ ಟೈಗುನ್ ಕಾರು ಸಹಭಾಗೀತ್ವ ಸಂಸ್ಥೆಯಾದ ಸ್ಕೋಡಾ ಹೊಸ ಕುಶಾಕ್ ಕಾರು ಮಾದರಿಯಲ್ಲಿರುವಂತೆ ಎರಡು ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿದ್ದು, ಡೈನಾಮಿಕ್ ಮಾದರಿಗಳಲ್ಲಿ 1.0-ಲೀಟರ್ ಟಿಎಸ್ಐ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಿದ್ದಲ್ಲಿ ಟಾಪ್ ಎಂಡ್ ಮಾದರಿಯಾದ ಜಿಟಿ ಲೈನ್‌ನಲ್ಲಿ 1.5-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಲಾಗಿದೆ.

ಕೋವಿಡ್ ಅಬ್ಬರದ ನಡುವೆಯೂ 2021ರಲ್ಲಿ ಬಿಡುಗಡೆಯಾದ ಟಾಪ್ 10 ಜನಪ್ರಿಯ ಕಾರುಗಳಿವು!

ಸಿಟ್ರನ್ ಸಿ5 ಏರ್‌ಕ್ರಾಸ್ ಎಸ್‌ಯುವಿ

ಸಿಟ್ರನ್ ಹೊಸ ಸಿ5 ಏರ್‌ಕ್ರಾಸ್ ಕಾರು ಮಾದರಿಯು ಮಧ್ಯಮ ಕ್ರಮಾಂಕದ ಐಷಾರಾಮಿ ಎಸ್‌ಯುವಿ ಮಾದರಿಯಾಗಿ ಬಿಡುಗಡೆಯಾಗಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 31.30 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 32.80 ಲಕ್ಷ ಬೆಲೆ ಹೊಂದಿದೆ.

ಕೋವಿಡ್ ಅಬ್ಬರದ ನಡುವೆಯೂ 2021ರಲ್ಲಿ ಬಿಡುಗಡೆಯಾದ ಟಾಪ್ 10 ಜನಪ್ರಿಯ ಕಾರುಗಳಿವು!

ಫೀಲ್ ಮತ್ತು ಶೈನ್ ಎನ್ನುವ ಎರಡು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರಲಿರುವ ಹೊಸ ಕಾರು 2.0-ಲೀಟರ್(1,997ಸಿಸಿ) ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ 8-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಮೂಲಕ 177-ಬಿಎಚ್‌ಪಿ ಮತ್ತು 400ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಹ್ಯುಂಡೈ ಟ್ಯುಸಾನ್ ಮತ್ತು ಜೀಪ್ ಕಂಪಾಸ್ ಕಾರುಗಳಿಗೆ ಪೈಪೋಟಿ ನೀಡುವ ತವಕದಲ್ಲಿದೆ.

ಕೋವಿಡ್ ಅಬ್ಬರದ ನಡುವೆಯೂ 2021ರಲ್ಲಿ ಬಿಡುಗಡೆಯಾದ ಟಾಪ್ 10 ಜನಪ್ರಿಯ ಕಾರುಗಳಿವು!

ನ್ಯೂ ಜನರೇಷನ್ ಫೋರ್ಸ್ ಗೂರ್ಖಾ

ನವೀಕೃತ ಗೂರ್ಖಾ ಎಸ್‌ಯುವಿ ಕಾರು ಮಾದರಿಯು ಪ್ರತಿಸ್ಪರ್ಧಿ ಮಾದರಿಗಿಂತಲೂ ಹಲವಾರು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಿದ್ದು,ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 13.59 ಲಕ್ಷ ಬೆಲೆ ಹೊಂದಿದೆ.

ಕೋವಿಡ್ ಅಬ್ಬರದ ನಡುವೆಯೂ 2021ರಲ್ಲಿ ಬಿಡುಗಡೆಯಾದ ಟಾಪ್ 10 ಜನಪ್ರಿಯ ಕಾರುಗಳಿವು!

ಹೊಸ ಗೂರ್ಖಾ ಮಾದರಿಯು ನ್ಯೂ ಜನರೇಷನ್ ಆಫ್-ರೋಡ್ ಪ್ರಿಯರನ್ನು ಸೆಳೆಯಲಿದ್ದು, 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 90 ಬಿಎಚ್‌ಪಿ ಮತ್ತು 250 ಎನ್ಎಂ ಟಾರ್ಕ್ ಉತ್ಪಾದನಾ ವೈಶಿಷ್ಟ್ಯತೆಯ 2.6 ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಆಯ್ಕೆ ಪಡೆದುಕೊಂಡಿದೆ. ಫೋರ್ಸ್ ಮೋಟಾರ್ಸ್ ಕಂಪನಿಯು ಸ್ಟ್ಯಾಂಡರ್ಡ್ ಆಕ್ಸೆಸರಿಸ್ ಫೀಚರ್ಸ್ ಹೊರತುಪಡಿಸಿ ಹೆಚ್ಚುವರಿ ಮೊತ್ತದಲ್ಲಿ ಆಫ್-ರೋಡ್ ಚಾಲನೆ ಪೂರಕವಾದ ಮತ್ತಷ್ಟು ಹೊಸ ಸೌಲಭ್ಯಗಳನ್ನು ಆಕ್ಸೆಸರಿಸ್ ಪ್ಯಾಕೇಜ್ ಮೂಲಕ ಪಡೆದುಕೊಳ್ಳಬಹುದು.

Most Read Articles

Kannada
English summary
Top 10 cars launched in 2021 tata punch new celerio mg astor mahindra xuv700 and more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X