ನವೆಂಬರ್ ತಿಂಗಳಿನಲ್ಲಿ ಭಾರತದಲ್ಲಿ ಬಿಡುಗಡೆಯಾದ ಟಾಪ್ ಹತ್ತು ಕಾರುಗಳಿವು!

ಕೋವಿಡ್ ಭೀತಿಯ ನಡುವೆಯೂ ಭಾರತೀಯ ಆಟೋ ಉದ್ಯಮವು ಸಾಕಷ್ಟು ಸುಧಾರಣೆ ಕಂಡಿದ್ದು, ವೈರಸ್ ಪರಿಣಾಮ ಬಿಡುಗಡೆ ಪ್ರಕ್ರಿಯೆಯಿಂದ ಹಿಂದೆ ಸರಿದಿದ್ದ ಪ್ರಮುಖ ಆಟೋ ಉತ್ಪಾದನಾ ಕಂಪನಿಗಳು ತಮ್ಮ ವಿವಿಧ ಹೊಸ ವಾಹನಗಳನ್ನು ಇದೀಗ ಹಂತ ಹಂತವಾಗಿ ಮಾರುಕಟ್ಟೆಗೆ ಪರಿಚಯಿಸುತ್ತಿವೆ.

ನವೆಂಬರ್ ತಿಂಗಳಿನಲ್ಲಿ ಭಾರತದಲ್ಲಿ ಬಿಡುಗಡೆಯಾದ ಟಾಪ್ ಹತ್ತು ಕಾರುಗಳಿವು!

ಹೊಸ ವಾಹನ ಮಾರಾಟವು ಕಳೆದ ಕೆಲ ತಿಂಗಳಿನಿಂದ ತ್ವರಿತವಾಗಿ ಹೆಚ್ಚಳವಾಗಿದ್ದು, ಗ್ರಾಹಕರ ಬೇಡಿಕೆಯನ್ನು ಆಧರಿಸಿ ನವೆಂಬರ್ ತಿಂಗಳಿನಲ್ಲಿ ವಿವಿಧ ಕಾರು ಉತ್ಪಾದನಾ ಕಂಪನಿಗಳು ತಮ್ಮ ಬಹುನೀರಿಕ್ಷಿತ ಕಾರುಗಳನ್ನು ಮಾದರಿಗಳನ್ನು ಬಿಡುಗಡೆ ಮಾಡಿವೆ. ಹಾಗಾದರೆ ನವೆಂಬರ್ ತಿಂಗಳಿನಲ್ಲಿ ಬಿಡುಗಡೆಯಾಗಿರುವ ಹೊಸ ಕಾರುಗಳು ಯಾವುವು? ಮತ್ತು ಅವುಗಳ ವಿಶೇಷತೆ, ಬೆಲೆ ಮತ್ತು ಎಂಜಿನ್ ಮಾಹಿತಿಯನ್ನು ಇಲ್ಲಿ ತಿಳಿಯೋಣ.

ನವೆಂಬರ್ ತಿಂಗಳಿನಲ್ಲಿ ಭಾರತದಲ್ಲಿ ಬಿಡುಗಡೆಯಾದ ಟಾಪ್ ಹತ್ತು ಕಾರುಗಳಿವು!

ನ್ಯೂ ಜನರೇಷನ್ ಮಾರುತಿ ಸೆಲೆರಿಯೊ

ಹೊಸ ಕಾರುಗಳ ಉತ್ಪಾದನೆಯಲ್ಲಿ ಸಾಕಷ್ಟು ಹೊಸ ಬದಲಾವಣೆಗಳನ್ನು ಪರಿಚಯಿಸುತ್ತಿರುವ ಮಾರುತಿ ಸುಜುಕಿ ಕಂಪನಿಯು ಇದೀಗ ಎರಡನೇ ತಲೆಮಾರಿನ ಸೆಲೆರಿಯೊ ಹ್ಯಾಚ್‌ಬ್ಯಾಕ್ ಮಾದರಿಯನ್ನು ಬಿಡುಗಡೆ ಮಾಡಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 4.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 6.94 ಲಕ್ಷ ಬೆಲೆಯೊಂದಿಗೆ ವಿವಿಧ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದೆ.

ನವೆಂಬರ್ ತಿಂಗಳಿನಲ್ಲಿ ಭಾರತದಲ್ಲಿ ಬಿಡುಗಡೆಯಾದ ಟಾಪ್ ಹತ್ತು ಕಾರುಗಳಿವು!

ಹೊಸ ಕಾರಿನಲ್ಲಿ ಇಂಧನ ದಕ್ಷತೆ ಹೆಚ್ಚಲು ಮಾರುತಿ ಸುಜುಕಿಯು ಸ್ಮಾರ್ಟ್ ಸ್ಟಾರ್ಟ್/ಸ್ಟಾಪ್ ಸಿಸ್ಟಂ ಜೋಡಿಸಿದ್ದು, ಟ್ರಾಫಿಕ್ ದಟ್ಟಣೆಯಲ್ಲಿ ಇಂಧನ ದಹಿಸುವಿಕೆಯನ್ನು ನಿಯಮಿತಗೊಳಿಸಿ ಮೈಲೇಜ್ ಮೇಲೆ ಪರಿಣಾಮ ಬೀರದಂತೆ ತಡೆಯಲು ಹೊಸ ತಂತ್ರಜ್ಞಾನವು ಸಾಕಷ್ಟು ಸಹಕಾರಿಯಾಗಿದೆ. ಹೊಸ ಕಾರು ಮಾದರಿಯು ಪ್ರತಿ ಲೀಟರ್‌ಗೆ ಗರಿಷ್ಠ 26 ಕಿ.ಮೀ ಮೈಲೇಜ್ ನೀಡಲಿದ್ದು, ಅತ್ಯುತ್ತಮ ಫೀಚರ್ಸ್ ಒಳಗೊಂಡಿದೆ.

ನವೆಂಬರ್ ತಿಂಗಳಿನಲ್ಲಿ ಭಾರತದಲ್ಲಿ ಬಿಡುಗಡೆಯಾದ ಟಾಪ್ ಹತ್ತು ಕಾರುಗಳಿವು!

520 ಕಿ.ಮೀ ಮೈಲೇಜ್ ನೀಡುವ ಬಿವೈಡಿ ಇ6

ಬಿವೈಡಿ ಇವಿ ಎಲೆಕ್ಟ್ರಿಕ್ ಎಂಪಿವಿ ಕಾರು ಮಾದರಿಯು ಎಕ್ಸ್‌ಶೋರೂಂ ಪ್ರಕಾರ ರೂ. 29.15 ಲಕ್ಷ ಬೆಲೆ ಹೊಂದಿದ್ದು, ಹೊಸ ಎಲೆಕ್ಟ್ರಿಕ್ ಕಾರನ್ನು ಕಂಪನಿಯು ಆರಂಭಿಕವಾಗಿ ಬಿ2ಬಿ ಉದ್ದೇಶಗಳಿಗೆ ಮಾತ್ರ ಮಾರಾಟ ಮಾಡಲಿದೆ. ಬಿ2ಬಿ(ಬ್ಯುಸಿನೆಸ್ ಟು ಬ್ಯುಸಿನೆಸ್) ಉದ್ದೇಶಗಳಿಗಾಗಿ ಪರಿಚಯಿಸಲಾಗಿರುವ ಹೊಸ ಇ6 ಕಾರನ್ನು ಸದ್ಯಕ್ಕೆ ಫ್ಲೀಟ್ ಆಪರೇಟರ್‌ಗಳು ಮತ್ತು ಇತರೆ ಕಾರ್ಪೊರೇಟ್ ಸಂಸ್ಥೆಗಳು ಮಾತ್ರ ಖರೀದಿಸಬಹುದಾಗಿದ್ದು, ಮುಂಬರುವ ಕೆಲ ತಿಂಗಳ ನಂತರ ಹೊಸ ಕಾರನ್ನು ವ್ಯಯಕ್ತಿಕ ಕಾರು ಬಳಕೆದಾರರು ಕೂಡಾ ಖರೀದಿಸಬಹುದಾಗಿದೆ.

ನವೆಂಬರ್ ತಿಂಗಳಿನಲ್ಲಿ ಭಾರತದಲ್ಲಿ ಬಿಡುಗಡೆಯಾದ ಟಾಪ್ ಹತ್ತು ಕಾರುಗಳಿವು!

ಹೊಸ ಕಾರಿನಲ್ಲಿ ಬ್ಲೇಡ್ ಲಿಥಿಯಂ ಫೆರೋ ಫಾಸ್ಫೇಟ್ ಬ್ಯಾಟರಿ ಪ್ಯಾಕ್‌ AC ಮತ್ತು DC ಚಾರ್ಜಿಂಗ್ ಮಾನದಂಡಗಳನ್ನು ಬೆಂಬಲಿಸಲಿದ್ದು, WLTP ಮಾನದಂಡಗಳ ಪ್ರಕಾರ ಹೊಸ ಕಾರು ಪ್ರತಿ ಚಾರ್ಜ್‌ಗೆ ಕನಿಷ್ಠ 415 ಕಿ.ಮೀ ನಿಂದ ಗರಿಷ್ಠ 520 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ. ಹೊಸ ಕಾರನ್ನು ದೆಹಲಿ ಎನ್‌ಸಿಆರ್, ಬೆಂಗಳೂರು, ಹೈದರಾಬಾದ್, ಮುಂಬೈ, ಚೆನ್ನೈ, ವಿಜಯವಾಡ, ಕೊಚ್ಚಿ ಮತ್ತು ಅಹಮದಾಬಾದ್‌ನಲ್ಲಿರುವ ಬಿವೈಡಿ ಶೋರೂಂಗಳಲ್ಲಿ ಖರೀದಿಸಬಹುದಾಗಿದೆ.

ನವೆಂಬರ್ ತಿಂಗಳಿನಲ್ಲಿ ಭಾರತದಲ್ಲಿ ಬಿಡುಗಡೆಯಾದ ಟಾಪ್ ಹತ್ತು ಕಾರುಗಳಿವು!

ಆಡಿ ಕ್ಯೂ5 ಫೇಸ್‌ಲಿಫ್ಟ್ ಎಸ್‍ಯುವಿ

ಐಷಾರಾಮಿ ಕಾರು ತಯಾರಕ ಕಂಪನಿಯಾದ ಆಡಿ ಇಂಡಿಯಾ ತನ್ನ ಬಹುನಿರೀಕ್ಷಿತ ಕ್ಯೂ5 ಫೇಸ್‌ಲಿಫ್ಟ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ ಆಡಿ ಕ್ಯೂ5 ಫೇಸ್‌ಲಿಫ್ಟ್ ಎಸ್‍ಯುವಿಯ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ. 58.93 ಲಕ್ಷಗಳಾಗಿದೆ.

ನವೆಂಬರ್ ತಿಂಗಳಿನಲ್ಲಿ ಭಾರತದಲ್ಲಿ ಬಿಡುಗಡೆಯಾದ ಟಾಪ್ ಹತ್ತು ಕಾರುಗಳಿವು!

ಹೊಸ ಆಡಿ ಕ್ಯೂ5 ಫೇಸ್‌ಲಿಫ್ಟ್ ಎಸ್‍ಯುವಿಯ ಟಾಪ್-ಎಂಡ್ ರೂಪಾಂತರದ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ. 63.77 ಲಕ್ಷಗಳಾಗಿದೆ. ಈ ಹೊಸ ಆಡಿ ಕ್ಯೂ5 ಫೇಸ್‌ಲಿಫ್ಟ್ ಅನ್ನು ಭಾರತದಲ್ಲಿ ಸಂಪೂರ್ಣವಾಗಿ ನಾಕ್ಡ್ ಡೌನ್ ಯುನಿಟ್ ಆಗಿ ನೀಡಲಾಗುವುದು ಮತ್ತು ಔರಂಗಾಬಾದ್‌ನಲ್ಲಿರುವ ಅದರ ಮೂಲ ಕಂಪನಿಯಾದ ವಿಡಬ್ಲ್ಯು ಗ್ರೂಪ್‌ನ ಸ್ಕೋಡಾ ಆಟೋ ಫೋಕ್ಸ್‌ವ್ಯಾಗನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸ್ಥಾವರದಲ್ಲಿ ಸ್ಥಳೀಯವಾಗಿ ಜೋಡಿಸಲಾಗುತ್ತದೆ.

ನವೆಂಬರ್ ತಿಂಗಳಿನಲ್ಲಿ ಭಾರತದಲ್ಲಿ ಬಿಡುಗಡೆಯಾದ ಟಾಪ್ ಹತ್ತು ಕಾರುಗಳಿವು!

ಮರ್ಸಿಡಿಸ್-ಎಎಂಜಿ ಎ 45 ಎಸ್ 4ಮ್ಯಾಟಿಕ್ ಪ್ಲಸ್

ಮರ್ಸಿಡಿಸ್ ಬೆಂಝ್ ಇಂಡಿಯಾ ಕಂಪನಿಯು ತನ್ನ ಬಹುನೀರಿಕ್ಷಿತ ಮರ್ಸಿಡಿಸ್-ಎಎಂಜಿ ಎ 45 ಎಸ್ 4ಮ್ಯಾಟಿಕ್ ಪ್ಲಸ್ ಪರ್ಫಾಮೆನ್ಸ್ ಆವೃತ್ತಿಯನ್ನು ಭಾರತದಲ್ಲೂ ಬಿಡುಗಡೆ ಮಾಡಿದ್ದು, ಪವರ್‌ಫುಲ್ ಎಂಜಿನ್ ಪ್ರೇರಿತ ಹೊಸ ಕಾರು ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ರೂ. 79.50 ಲಕ್ಷ ಬೆಲೆ ಹೊಂದಿದೆ.

ನವೆಂಬರ್ ತಿಂಗಳಿನಲ್ಲಿ ಭಾರತದಲ್ಲಿ ಬಿಡುಗಡೆಯಾದ ಟಾಪ್ ಹತ್ತು ಕಾರುಗಳಿವು!

ಮರ್ಸಿಡಿಸ್-ಎಎಂಜಿ ಎ 45 ಎಸ್ ಮಾದರಿಯು ಮರ್ಸಿಡಿಸ್ ಬೆಂಝ್ ಕಂಪನಿಯ ಅತ್ಯಂತ ಶಕ್ತಿಯುತವಾದ ಫೋರ್ ಸಿಲಿಂಡರ್ ಮೋಟಾರ್ ಪ್ರೇರಿತ 2.0-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಹೊಂದಿದ್ದು, ಇದು 8-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ 412 ಬಿಎಚ್‌ಪಿ ಮತ್ತು 500 ಎನ್ಎಂ ಟಾರ್ಕ್ ಉತ್ಪಾದಿಸಬಲ್ಲದು.

ನವೆಂಬರ್ ತಿಂಗಳಿನಲ್ಲಿ ಭಾರತದಲ್ಲಿ ಬಿಡುಗಡೆಯಾದ ಟಾಪ್ ಹತ್ತು ಕಾರುಗಳಿವು!

ಪೋರ್ಷೆ ಟೇಕಾನ್ ಇವಿ ಸೂಪರ್ ಕಾರು

ಪೋರ್ಷೆ ತನ್ನ ಐಷಾರಾಮಿ ಟೇಕಾನ್ ಎಲೆಕ್ಟ್ರಿಕ್ ಸೂಪರ್‌ ಕಾರ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದ್ದು, ಹೊಸಎಲೆಕ್ಟ್ರಿಕ್ ಕಾರಿನ ಆರಂಭಿಕ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ. 1.50 ಕೋಟಿಯಾಗಿದೆ.

ನವೆಂಬರ್ ತಿಂಗಳಿನಲ್ಲಿ ಭಾರತದಲ್ಲಿ ಬಿಡುಗಡೆಯಾದ ಟಾಪ್ ಹತ್ತು ಕಾರುಗಳಿವು!

ಟೇಕಾನ್ ಎಲೆಕ್ಟ್ರಿಕ್ ಕಾರು 76kWh ಮತ್ತು 93.4kWh ಜೊತೆಗೆ ಎರಡು ಬ್ಯಾಟರಿ ಪ್ಯಾಕ್ ಆಯ್ಕೆಗಳನ್ನು ಹೊಂದಿದ್ದು, 484 ಕಿ.ಮೀ ರೇಂಜ್ ಅನ್ನು ನೀಡುತ್ತದೆ. ಟರ್ಬೊ ಮತ್ತು ಟರ್ಬೊ ಎಸ್ ರೂಪಾಂತರಗಳು ದೊಡ್ಡ 93.4kWh ಬ್ಯಾಟರಿ ಪ್ಯಾಕ್ ಅನ್ನು ಹೊಂದಿವೆ. ಮೊದಲನೆಯದು 671 ಬಿಹೆಚ್‌ಪಿ ಪವರ್ ಮತ್ತು 850 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ. ಇನ್ನು ಎರಡನೆಯದು 751 ಬಿಹೆಚ್‍ಪಿ ಪವರ್ ಮತ್ತು 1,050 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ನವೆಂಬರ್ ತಿಂಗಳಿನಲ್ಲಿ ಭಾರತದಲ್ಲಿ ಬಿಡುಗಡೆಯಾದ ಟಾಪ್ ಹತ್ತು ಕಾರುಗಳಿವು!

ಮೈಲ್ಡ್ ಹೈಬ್ರಿಡ್ ವೊಲ್ವೊ ಎಕ್ಸ್‌ಸಿ90

ಮಾಲಿನ್ಯ ತಗ್ಗಿಸುವ ಉದ್ದೇಶದಿಂದ ಡೀಸೆಲ್ ಕಾರುಗಳ ಮಾರಾಟವನ್ನು ಹಂತ-ಹಂತವಾಗಿ ಕಡಿತಗೊಳಿಸುತ್ತಿರುವ ವೊಲ್ವೊ ಕಂಪನಿಯು ಪ್ರಮುಖ ಕಾರುಗಳನ್ನು ಹೊಸ ಪೆಟ್ರೋಲ್ ಹೈಬ್ರಿಡ್ ಎಂಜಿನ್‌ಗೆ ಉನ್ನತೀಕರಿಸುತ್ತಿದ್ದು, ಇದೀಗ ಹೊಸದಾಗಿ ಬಿಡುಗಡೆಯಾಗಿರುವ ಎಕ್ಸ್‌ಸಿ90 ಕಾರು ಮಾದರಿಯಲ್ಲೂ ಕೂಡಾ ಕಂಪನಿಯು ಕೇವಲ 2.0 ಲೀಟರ್ ಮೈಲ್ಡ್ ಹೈಬ್ರಿಡ್ ಪೆಟ್ರೋಲ್ ಎಂಜಿನ್ ಮಾತ್ರ ನೀಡಿದೆ.

ನವೆಂಬರ್ ತಿಂಗಳಿನಲ್ಲಿ ಭಾರತದಲ್ಲಿ ಬಿಡುಗಡೆಯಾದ ಟಾಪ್ ಹತ್ತು ಕಾರುಗಳಿವು!

ಹೊಸ ಪ್ಲ್ಯಾಟ್‌ಫಾರ್ಮ್ ಆಧರಿಸಿರುವ ಎಕ್ಸ್‌ಸಿ90 ಎಸ್‌ಯುವಿ ಮಾದರಿಯು ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ರೂ. 89.90 ಲಕ್ಷ ಬೆಲೆ ಹೊಂದಿದ್ದು, ಹೊಸ ಕಾರಿನಲ್ಲಿ ಕಂಪನಿಯು 2.0 ಲೀಟರ್ (1,969 ಸಿಸಿ) 48 ವಿ ಮೈಲ್ಡ್ ಹೈಬ್ರಿಡ್ ಟೆಕ್ನಾಲಜಿ ಹೊಂದಿರುವ ಪೆಟ್ರೋಲ್ ಎಂಜಿನ್ ನೀಡಿದೆ.

ನವೆಂಬರ್ ತಿಂಗಳಿನಲ್ಲಿ ಭಾರತದಲ್ಲಿ ಬಿಡುಗಡೆಯಾದ ಟಾಪ್ ಹತ್ತು ಕಾರುಗಳಿವು!

ನವೀಕೃತ ಪೋರ್ಷೆ ಮಕಾನ್ ಫೇಸ್‌ಲಿಫ್ಟ್

ಜರ್ಮನ್ ಐಷಾರಾಮಿ ಕಾರು ಉತ್ಪಾದನಾ ಕಂಪನಿಯಾಗಿರುವ ಪೋರ್ಷೆ ತನ್ನ ಜನಪ್ರಿಯ ಎಂಟ್ರಿ ಲೆವಲ್ ಸ್ಪೋರ್ಟ್ ಎಸ್‌ಯುವಿ ಮಾದರಿಯಾದ ಮಕಾನ್ ಫೇಸ್‌ಲಿಫ್ಟ್ ಬಿಡುಗಡೆಗೊಳಿಸಿದ್ದು, ಹೊಸ ಕಾರು ಈ ಬಾರಿ ಸುಧಾರಿತ ಎಂಜಿನ್ ಮತ್ತು ನವೀಕೃತ ಸ್ಪೋರ್ಟಿ ವಿನ್ಯಾಸದಲ್ಲಿ ಮಾರುಕಟ್ಟೆ ಪ್ರವೇಶಿಸಿದೆ.

ನವೆಂಬರ್ ತಿಂಗಳಿನಲ್ಲಿ ಭಾರತದಲ್ಲಿ ಬಿಡುಗಡೆಯಾದ ಟಾಪ್ ಹತ್ತು ಕಾರುಗಳಿವು!

ಹೊಸ ಪೋರ್ಷೆ ಮಕಾನ್ ಫೇಸ್‌ಲಿಫ್ಟ್ ಎಸ್‍ಯುವಿಯು ಗ್ರಾಹಕರ ಬೇಡಿಕೆ ತಾಂತ್ರಿಕ ಅಂಶಗಳಿಗೆ ಅನುಗುಣವಾಗಿ ಸ್ಟ್ಯಾಂಡರ್ಡ್ ಮಕಾನ್, ಮಕಾನ್ ಎಸ್ ಮತ್ತು ಮಕಾನ್ ಜಿಟಿಎಸ್ ಎಂಬ ಮೂರು ರೂಪಾಂತರಗಳನ್ನು ಪಡೆದುಕೊಂಡಿದ್ದು, ಹೊಸ ಕಾರು 2.0-ಲೀಟರ್ ಮತ್ತು 2.9 ಲೀಟರ್ ಎಂಜಿನ್ ಆಯ್ಕೆಯೊಂದಿಗೆ ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ರೂ. 83.21 ಲಕ್ಷ ಆರಂಭಿಕ ಬೆಲೆ ಹೊಂದಿದೆ.

ನವೆಂಬರ್ ತಿಂಗಳಿನಲ್ಲಿ ಭಾರತದಲ್ಲಿ ಬಿಡುಗಡೆಯಾದ ಟಾಪ್ ಹತ್ತು ಕಾರುಗಳಿವು!

ಸ್ಕೋಡಾ ಸ್ಲಾವಿಯಾ ಅನಾವರಣ

ಹೊಸ ಸ್ಲಾವಿಯಾ ಕಾರು ಮಾದರಿಯನ್ನು ಸ್ಕೋಡಾ ಕಂಪನಿಯು ಫೋಕ್ಸ್‌ವ್ಯಾಗನ್ ಕಂಪನಿ ಜೊತೆಗಿನ ಇಂಡಿಯಾ 2.0 ಪ್ರೊಜೆಕ್ಟ್ ಯೋಜನೆ ಅಡಿಯಲ್ಲಿ ಅಭಿವೃದ್ದಿಗೊಳಿಸುತ್ತಿದ್ದು, ಹೊಸ ಯೋಜನೆಯೊಂದಿಗೆ ಎರಡು ಕಂಪನಿಗಳು ಒಟ್ಟು ನಾಲ್ಕು ಹೊಸ ಕಾರು ಮಾದರಿಗಳನ್ನು ಬಿಡುಗಡೆಗೊಳಿಸಲು ಯೋಜಿಸಿವೆ. ಸ್ಲಾವಿಯಾ ಸೆಡಾನ್ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿನ ಹೋಂಡಾ ಸಿಟಿ, ಮಾರುತಿ ಸುಜುಕಿ ಸಿಯಾಜ್, ಹ್ಯುಂಡೈ ವೆರ್ನಾ ಕಾರುಗಳಿಗೆ ಉತ್ತಮ ಪೈಪೋಟಿ ನೀಡಲಿದ್ದು, ರ‍್ಯಾಪಿಡ್‌ಗಿಂತಲೂ ಆಕರ್ಷಕ ವಿನ್ಯಾಸದೊಂದಿಗೆ ಲಾಂಗ್‌ವೀಲ್ಹ್ ಬೆಸ್ ಪಡೆದುಕೊಂಡಿದೆ.

ನವೆಂಬರ್ ತಿಂಗಳಿನಲ್ಲಿ ಭಾರತದಲ್ಲಿ ಬಿಡುಗಡೆಯಾದ ಟಾಪ್ ಹತ್ತು ಕಾರುಗಳಿವು!

ಸ್ಲಾವಿಯಾ ಕಾರು ಕುಶಾಕ್ ಮಾದರಿಯಂತೆ ಪ್ರಮುಖ ಮೂರು ವೆರಿಯೆಂಟ್‌ಗಳೊಂದಿಗೆ 1.0-ಲೀಟರ್ ಟಿಎಸ್ಐ ಮೂರು-ಸಿಲಿಂಡರ್ ಎಂಜಿನ್ ಮತ್ತು 1.5-ಲೀಟರ್ ನಾಲ್ಕು-ಸಿಲಿಂಡರ್ ಟಿಎಸ್ಐ ಎಂಜಿನ್ ಜೊತೆಗೆ ಎರಡೂ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಆಯ್ಕೆ ಪಡೆದುಕೊಂಡಿರಲಿದೆ.

ನವೆಂಬರ್ ತಿಂಗಳಿನಲ್ಲಿ ಭಾರತದಲ್ಲಿ ಬಿಡುಗಡೆಯಾದ ಟಾಪ್ ಹತ್ತು ಕಾರುಗಳಿವು!

ಹೊಸ ವೆರಿಯೆಂಟ್ ಪಡೆದುಕೊಂಡ ಟಾಟಾ ಆಲ್‌ಟ್ರೊಜ್

ಆಲ್‌ಟ್ರೊಜ್ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಮಾದರಿಯಲ್ಲಿ ಇದೀಗ ಹೊಸದಾಗಿ ಎಕ್ಸ್ಇ ಪ್ಲಸ್ ರೂಪಾಂತರವನ್ನು ಬಿಡುಗಡೆ ಮಾಡಲಾಗಿದೆ. ಆಲ್‌ಟ್ರೊಜ್ ಕಾರಿನ ಎಕ್ಸ್ಇ ಮತ್ತು ಈ ಹಿಂದಿನ ಎಕ್ಸ್ಎಂ ರೂಪಾಂತರದ ನಡುವೆ ಗಮನಾರ್ಹ ಬೆಲೆಯ ಅಂತರವಿದ್ದ ಕಾರಣ ಟಾಟಾ ಮೋಟಾರ್ಸ್ ಕಂಪನಿಯು ಹೊಸ ಹೆಚ್ಚು ಕೈಗೆಟುಕುವ ಬೆಲೆಯ ಎಕ್ಸ್ಇ ಪ್ಲಸ್ ಆವೃತ್ತಿಯನ್ನು ಪರಿಚಯಿಸಿದೆ.

ನವೆಂಬರ್ ತಿಂಗಳಿನಲ್ಲಿ ಭಾರತದಲ್ಲಿ ಬಿಡುಗಡೆಯಾದ ಟಾಪ್ ಹತ್ತು ಕಾರುಗಳಿವು!

ಹೊಸ ಆಲ್‌ಟ್ರೊಜ್ ಎಕ್ಸ್ಇ ಪ್ಲಸ್ ರೂಪಾಂತದ ಪೆಟ್ರೋಲ್ ಆವೃತ್ತಿಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 6.35 ಲಕ್ಷ ಮತ್ತು ಡೀಸೆಲ್ ರೂಪಾಂತರವು ಆರಂಭಿಕವಾಗಿ ರೂ. 7.55 ಲಕ್ಷ ಬೆಲೆ ಪಡೆದುಕೊಂಡಿವೆ. ಹೊಸ ಮಾದರಿಯನ್ನು ಹೆಚ್ಚು ಕೈಗೆಟುಕುವಂತೆ ಮಾಡಲು ಖರೀದಿ ನಿರ್ಧಾರಗಳ ಮೇಲೆ ಪರಿಣಾಮ ಬೀರದ ಕೆಲವು ವೈಶಿಷ್ಟ್ಯಗಳನ್ನು ತೆಗೆದುಹಾಕಲಾಗಿದ್ದು, ಪ್ರಮುಖ ಪ್ರೀಮಿಯಂ ಫೀಚರ್ಸ್‌ಗಳನ್ನು ಕೈಬಿಡಲಾಗಿದೆ.

ನವೆಂಬರ್ ತಿಂಗಳಿನಲ್ಲಿ ಭಾರತದಲ್ಲಿ ಬಿಡುಗಡೆಯಾದ ಟಾಪ್ ಹತ್ತು ಕಾರುಗಳಿವು!

2021ರ ಜಾಗ್ವಾರ್ ಎಕ್ಸ್ಎಫ್

ಐಷಾರಾಮಿ ಕಾರು ತಯಾರಕ ಕಂಪನಿಯಾದ ಜಾಗ್ವಾರ್ ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಎಕ್ಸ್ಎಫ್ ಐಷಾರಾಮಿ ಸೆಡಾನ್ ಅನ್ನು ಬಿಡುಗಡೆಗೊಳಿಸಿದೆ. ಈ ಹೊಸ ಜಾಗ್ವಾರ್ ಎಕ್ಸ್ಎಫ್ (Jaguar XF) ಐಷಾರಾಮಿ ಸೆಡಾನ್ ಕಾರಿನ ಆರಂಭಿಕ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.71.60 ಲಕ್ಷಗಳಾಗಿದೆ.

ನವೆಂಬರ್ ತಿಂಗಳಿನಲ್ಲಿ ಭಾರತದಲ್ಲಿ ಬಿಡುಗಡೆಯಾದ ಟಾಪ್ ಹತ್ತು ಕಾರುಗಳಿವು!

ಹೊಸ ಜಾಗ್ವಾರ್ ಎಕ್ಸ್ಎಫ್ ಸೆಡಾನ್‌ನ ಫೇಸ್‌ಲಿಫ್ಟ್ ಮಾದರಿಯು ಪೆಟ್ರೋಲ್ ಮತ್ತು ಡೀಸೆಲ್ ಆವೃತ್ತಿಗಳಲ್ಲಿ ಆರ್-ಡೈನಾಮಿಕ್ ಮತ್ತು ಎಸ್ ಎಂದು ಕರೆಯಲ್ಪಡುವ ಎರಡು ರೂಪಂತರಗಳಲ್ಲಿ ಲಭ್ಯವಿರಲಿದೆ. ಈ ಜಾಗ್ವಾರ್ ಎಕ್ಸ್ಎಫ್ ಸೆಡಾನ್ 2.0-ಲೀಟರ್ ಪೆಟ್ರೋಲ್ ಎಂಜಿನ್‌ನೊಂದಿಗೆ ಮುಂದುವರಿಯುತ್ತದೆ. ಈ ಎಂಜಿನ್ 247 ಬಿಹೆಚ್‍ಪಿ ಪವರ್ ಮತ್ತು 365 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

Most Read Articles

Kannada
English summary
Top 10 cars launched in november 2021 new celerio q5 facelift mercedes amg a 45 s and more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X