2021ರಲ್ಲಿ ಬಿಡುಗಡೆಯಾದ ಟಾಪ್ ಹತ್ತು ಎಲೆಕ್ಟ್ರಿಕ್ ಕಾರುಗಳಿವು!

ಇಂಧನ ಚಾಲಿತ ವಾಹನಗಳಿಂದಾಗಿ ಹೆಚ್ಚುತ್ತಿರುವ ಮಾಲಿನ್ಯ ಮತ್ತು ಇಂಧನಗಳ ಬೆಲೆ ಏರಿಕೆ ಪರಿಣಾಮ ವಿವಿಧ ರಾಷ್ಟ್ರಗಳು 2030ರಿಂದಲೇ ಡೀಸೆಲ್ ಮತ್ತು ಪೆಟ್ರೋಲ್ ವಾಹನಗಳ ಮಾರಾಟವನ್ನು ಶೇ.50 ರಷ್ಟು ತಗ್ಗಿಸುವ ನಿರ್ಣಯ ಕೈಗೊಂಡಿದ್ದು, ಇದಕ್ಕೆ ಪೂರಕವಾಗಿ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸುತ್ತಿರುವುದು ಮಹತ್ವದ ಬದಲಾವಣೆಗೆ ಕಾರಣವಾಗುತ್ತಿದೆ.

2021ರಲ್ಲಿ ಬಿಡುಗಡೆಯಾದ ಟಾಪ್ ಹತ್ತು ಎಲೆಕ್ಟ್ರಿಕ್ ಕಾರುಗಳಿವು!

ಭಾರತದಲ್ಲೂ ಈಗಾಗಲೇ ಪ್ರಮುಖ ಕಾರು ಕಂಪನಿಗಳು ಪರಿಸರ ವಾಹನಗಳ ಮಾರಾಟದತ್ತ ಆದ್ಯತೆ ನೀಡುತ್ತಿದ್ದು, ಕಳೆದ ಕೆಲ ದಿನಗಳಲ್ಲಿ ವಿವಿಧ ಮಾದರಿಯ ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಬಿಡುಗಡೆಗೊಳಿಸಿ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿವೆ. 2021ರಲ್ಲಿ ಇವಿ ವಾಹನಗಳು ಉತ್ತಮ ಬೇಡಿಕೆಪಡೆದುಕೊಳ್ಳುತ್ತಿದ್ದು, ಇವಿ ಕಾರುಗಳು ಹೊಸ ವಾಹನ ಖರೀದಿ ಮಾಡುವ ಯೋಜನೆಯಲ್ಲಿರುವ ಗ್ರಾಹಕರ ಪ್ರಮುಖ ಆಕರ್ಷಣೆಯಾಗಿವೆ. ಹಾಗಾದ್ರೆ ಈ ವರ್ಷ ಬಿಡುಗಡೆಯಾಗಿರುವ ಪ್ರಮುಖ ಐದು ಇವಿ ಕಾರುಗಳು ಯಾವುವು? ಅವುಗಳ ವಿಶೇಷತೆ ಏನು ಎನ್ನುವುದನ್ನು ಈ ಲೇಖನದಲ್ಲಿ ತಿಳಿಯೋಣ.

2021ರಲ್ಲಿ ಬಿಡುಗಡೆಯಾದ ಟಾಪ್ ಹತ್ತು ಎಲೆಕ್ಟ್ರಿಕ್ ಕಾರುಗಳಿವು!

520 ಕಿ.ಮೀ ಮೈಲೇಜ್ ನೀಡುವ ಬಿವೈಡಿ ಇ6

ಬಿವೈಡಿ ಇವಿ ಎಲೆಕ್ಟ್ರಿಕ್ ಎಂಪಿವಿ ಕಾರು ಮಾದರಿಯು ಎಕ್ಸ್‌ಶೋರೂಂ ಪ್ರಕಾರ ರೂ. 29.15 ಲಕ್ಷ ಬೆಲೆ ಹೊಂದಿದ್ದು, ಹೊಸ ಎಲೆಕ್ಟ್ರಿಕ್ ಕಾರನ್ನು ಕಂಪನಿಯು ಆರಂಭಿಕವಾಗಿ ಬಿ2ಬಿ ಉದ್ದೇಶಗಳಿಗೆ ಮಾತ್ರ ಮಾರಾಟ ಮಾಡಲಿದೆ. ಬಿ2ಬಿ(ಬ್ಯುಸಿನೆಸ್ ಟು ಬ್ಯುಸಿನೆಸ್) ಉದ್ದೇಶಗಳಿಗಾಗಿ ಪರಿಚಯಿಸಲಾಗಿರುವ ಹೊಸ ಇ6 ಕಾರನ್ನು ಸದ್ಯಕ್ಕೆ ಫ್ಲೀಟ್ ಆಪರೇಟರ್‌ಗಳು ಮತ್ತು ಇತರೆ ಕಾರ್ಪೊರೇಟ್ ಸಂಸ್ಥೆಗಳು ಮಾತ್ರ ಖರೀದಿಸಬಹುದಾಗಿದ್ದು, ಮುಂಬರುವ ಕೆಲ ತಿಂಗಳ ನಂತರ ಹೊಸ ಕಾರನ್ನು ವ್ಯಯಕ್ತಿಕ ಕಾರು ಬಳಕೆದಾರರು ಕೂಡಾ ಖರೀದಿಸಬಹುದಾಗಿದೆ.

2021ರಲ್ಲಿ ಬಿಡುಗಡೆಯಾದ ಟಾಪ್ ಹತ್ತು ಎಲೆಕ್ಟ್ರಿಕ್ ಕಾರುಗಳಿವು!

ಹೊಸ ಕಾರಿನಲ್ಲಿ ಬ್ಲೇಡ್ ಲಿಥಿಯಂ ಫೆರೋ ಫಾಸ್ಫೇಟ್ ಬ್ಯಾಟರಿ ಪ್ಯಾಕ್‌ AC ಮತ್ತು DC ಚಾರ್ಜಿಂಗ್ ಮಾನದಂಡಗಳನ್ನು ಬೆಂಬಲಿಸಲಿದ್ದು, WLTP ಮಾನದಂಡಗಳ ಪ್ರಕಾರ ಹೊಸ ಕಾರು ಪ್ರತಿ ಚಾರ್ಜ್‌ಗೆ ಕನಿಷ್ಠ 415 ಕಿ.ಮೀ ನಿಂದ ಗರಿಷ್ಠ 520 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ. ಹೊಸ ಕಾರನ್ನು ದೆಹಲಿ ಎನ್‌ಸಿಆರ್, ಬೆಂಗಳೂರು, ಹೈದರಾಬಾದ್, ಮುಂಬೈ, ಚೆನ್ನೈ, ವಿಜಯವಾಡ, ಕೊಚ್ಚಿ ಮತ್ತು ಅಹಮದಾಬಾದ್‌ನಲ್ಲಿರುವ ಬಿವೈಡಿ ಶೋರೂಂಗಳಲ್ಲಿ ಖರೀದಿಸಬಹುದಾಗಿದೆ.

2021ರಲ್ಲಿ ಬಿಡುಗಡೆಯಾದ ಟಾಪ್ ಹತ್ತು ಎಲೆಕ್ಟ್ರಿಕ್ ಕಾರುಗಳಿವು!

ಆಡಿ ಇ-ಟ್ರಾನ್

ಆಡಿ ಇಂಡಿಯಾ ಕಂಪನಿಯು ತನ್ನ ಮೊದಲ ಎಲೆಕ್ಟ್ರಿಕ್ ಕಾರು ಮಾದರಿಯಾದ ಇ-ಟ್ರಾನ್ ಎಸ್‌ಯುವಿಯನ್ನು ದೇಶಿಯ ಮಾರುಕಟ್ಟೆಗೂ ಪರಿಚಯಿಸಿದ್ದು, ಹೊಸ ಕಾರು ಹಲವಾರು ಹೊಸ ತಂತ್ರಜ್ಞಾನ ಸೌಲಭ್ಯಗಳೊಂದಿಗೆ ಬಿಡುಗಡೆಯಾಗಿದೆ. ಹೊಸ ಇ-ಟ್ರಾನ್ ಕಾರು ಗ್ರಾಹಕರ ಬೇಡಿಕೆಯೆಂತೆ ಇ-ಟ್ರಾನ್ 50, ಇ-ಟ್ರಾನ್ 55 ಮತ್ತು ಇ-ಟ್ರಾನ್ 55 ಸ್ಪೋರ್ಟ್‌ಬ್ಯಾಕ್ ಎನ್ನುವ ಮೂರು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದೆ.

2021ರಲ್ಲಿ ಬಿಡುಗಡೆಯಾದ ಟಾಪ್ ಹತ್ತು ಎಲೆಕ್ಟ್ರಿಕ್ ಕಾರುಗಳಿವು!

ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ಇ-ಟ್ರಾನ್ 50 ಮಾದರಿಗೆ ರೂ.99.99 ಲಕ್ಷ, ಇ-ಟ್ರಾನ್ 55 ಮಾದರಿಗೆ ರೂ. 1.16 ಕೋಟಿ ಮತ್ತು ಇ-ಟ್ರಾನ 55 ಸ್ಪೋರ್ಟ್‌ಬ್ಯಾಕ್ ಮಾದರಿಗೆ ರೂ. 1.17 ಕೋಟಿ ಬೆಲೆ ನಿಗದಿಪಡಿಸಲಾಗಿದೆ. ಹೊಸ ಕಾರು 71 ಕಿ.ವ್ಯಾಟ್ ಬ್ಯಾಟರಿ ಪ್ಯಾಕ್‌ ಜೋಡಣೆಯೊಂದಿಗೆ 308 ಬಿಹೆಚ್‌ಪಿ ಹಾಗೂ 540 ಎನ್ಎಂ ಟಾರ್ಕ್ ಉತ್ಪಾದಿಸುವ ಮೂಲಕ ಪ್ರತಿ ಚಾರ್ಜ್‌ಗೆ ಗರಿಷ್ಠ 380 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

2021ರಲ್ಲಿ ಬಿಡುಗಡೆಯಾದ ಟಾಪ್ ಹತ್ತು ಎಲೆಕ್ಟ್ರಿಕ್ ಕಾರುಗಳಿವು!

ಬಿಎಂಡಬ್ಲ್ಯು ಐಎಕ್ಸ್

ಹೊಚ್ಚ ಹೊಸ ಬಿಎಂಡಬ್ಲ್ಯು ಐಎಕ್ಸ್(iX) ಎಲೆಕ್ಟ್ರಿಕ್ ಎಸ್‌ಯುವಿಯು ಭಾರತೀಯ ಗ್ರಾಹಕರ ಬೇಡಿಕೆ ಹಲವಾರು ಹೊಸ ವೈಶಿಷ್ಟ್ಯತೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದ್ದು, ಎಕ್ಸ್‌ಡ್ರೈವ್40 ಎನ್ನುವ ಒಂದೇ ವೆರಿಯೆಂಟ್‌ನಲ್ಲಿ ಖರೀದಿಗೆ ಲಭ್ಯವಿರುವ ಹೊಸ ಕಾರು ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ರೂ. 1.16 ಕೋಟಿ ಬೆಲೆ ಹೊಂದಿದೆ.

2021ರಲ್ಲಿ ಬಿಡುಗಡೆಯಾದ ಟಾಪ್ ಹತ್ತು ಎಲೆಕ್ಟ್ರಿಕ್ ಕಾರುಗಳಿವು!

ಬಿಎಂಡಬ್ಲ್ಯು ಕಂಪನಿಯು ಐಎಕ್ಸ್ ಎಕ್ಸ್‌ಡ್ರೈವ್40 ಮಾದರಿಯಲ್ಲಿ ಆಲ್ ವ್ಹೀಲ್ ಡ್ರೈವ್ ಸಿಸ್ಟಂ ಜೊತೆ ಡ್ಯುಯಲ್ ಎಲೆಕ್ಟ್ರಿಕ್ ಮೋಟಾರ್ ಜೋಡಣೆ ಮಾಡಿದ್ದು, ಇದಕ್ಕಾಗಿ ಕಂಪನಿಯು ಹೊಸ ಕಾರಿನಲ್ಲಿ 76.6kWh ಬ್ಯಾಟರಿ ಪ್ಯಾಕ್ ನೀಡಲಾಗಿದೆ. ಎಕ್ಸ್‌ಡ್ರೈವ್40 ಮಾದರಿಯು 76.6kWh ಬ್ಯಾಟರಿ ಪ್ಯಾಕ್ ಮೂಲಕ ಗರಿಷ್ಠ 425 ಕಿ.ಮೀ ಮೈಲೇಜ್ ರೇಂಜ್ ಹೊಂದಿದ್ದು, ಐಎಕ್ಸ್ ನಂತರ ಕಂಪನಿಯು ಮತ್ತೆರಡು ಹೊಸ ಇವಿ ಕಾರುಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

2021ರಲ್ಲಿ ಬಿಡುಗಡೆಯಾದ ಟಾಪ್ ಹತ್ತು ಎಲೆಕ್ಟ್ರಿಕ್ ಕಾರುಗಳಿವು!

ಪೋರ್ಷೆ ಟೇಕಾನ್ ಇವಿ ಸೂಪರ್ ಕಾರು

ಪೋರ್ಷೆ ತನ್ನ ಐಷಾರಾಮಿ ಟೇಕಾನ್ ಎಲೆಕ್ಟ್ರಿಕ್ ಸೂಪರ್‌ ಕಾರ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದ್ದು, ಹೊಸಎಲೆಕ್ಟ್ರಿಕ್ ಕಾರಿನ ಆರಂಭಿಕ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ. 1.50 ಕೋಟಿಯಾಗಿದೆ.

2021ರಲ್ಲಿ ಬಿಡುಗಡೆಯಾದ ಟಾಪ್ ಹತ್ತು ಎಲೆಕ್ಟ್ರಿಕ್ ಕಾರುಗಳಿವು!

ಟೇಕಾನ್ ಎಲೆಕ್ಟ್ರಿಕ್ ಕಾರು 76kWh ಮತ್ತು 93.4kWh ಜೊತೆಗೆ ಎರಡು ಬ್ಯಾಟರಿ ಪ್ಯಾಕ್ ಆಯ್ಕೆಗಳನ್ನು ಹೊಂದಿದ್ದು, 484 ಕಿ.ಮೀ ರೇಂಜ್ ಅನ್ನು ನೀಡುತ್ತದೆ. ಟರ್ಬೊ ಮತ್ತು ಟರ್ಬೊ ಎಸ್ ರೂಪಾಂತರಗಳು ದೊಡ್ಡ 93.4kWh ಬ್ಯಾಟರಿ ಪ್ಯಾಕ್ ಅನ್ನು ಹೊಂದಿವೆ. ಮೊದಲನೆಯದು 671 ಬಿಹೆಚ್‌ಪಿ ಪವರ್ ಮತ್ತು 850 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ. ಇನ್ನು ಎರಡನೆಯದು 751 ಬಿಹೆಚ್‍ಪಿ ಪವರ್ ಮತ್ತು 1,050 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

2021ರಲ್ಲಿ ಬಿಡುಗಡೆಯಾದ ಟಾಪ್ ಹತ್ತು ಎಲೆಕ್ಟ್ರಿಕ್ ಕಾರುಗಳಿವು!

ಆಡಿ ಇ-ಟ್ರಾನ್ ಜಿಟಿ

ಜರ್ಮನಿ ಮೂಲದ ಐಷಾರಾಮಿ ಕಾರು ತಯಾರಕ ಕಂಪನಿಯಾದ ಆಡಿ(Audi) ದೇಶಿಯ ಮಾರುಕಟ್ಟೆಯಲ್ಲಿ ತನ್ನ ನಾಲ್ಕು ಡೋರುಗಳ ಇ-ಟ್ರಾನ್ ಜಿಟಿ (e-tron GT) ಎಲೆಕ್ಟ್ರಿಕ್ ಕಾರ್ ಅನ್ನು ಬಿಡುಗಡೆಗೊಳಿಸಿದೆ. ಹೊಸ ಕಾರಿನ ಬೆಲೆ ಎಕ್ಸ್ ಶೋರೂಂ ದರವು ಆರಂಭಿಕವಾಗಿ ರೂ. 1.80 ಕೋಟಿಗಳಾದರೆ ಟಾಪ್ ಎಂಡ್ ಆರ್‌ಎಸ್ (RS) ಮಾದರಿಯ ಬೆಲೆಯು ಎಕ್ಸ್ ಶೋರೂಂ ದರದಂತೆ ರೂ. 2.05 ಕೋಟಿಗಳಾಗಿದೆ.

2021ರಲ್ಲಿ ಬಿಡುಗಡೆಯಾದ ಟಾಪ್ ಹತ್ತು ಎಲೆಕ್ಟ್ರಿಕ್ ಕಾರುಗಳಿವು!

85 ಕಿ.ವ್ಯಾ ಲಿಥಿಯಂ ಐಯಾನ್ ಬ್ಯಾಟರಿ ಪ್ಯಾಕ್‌ ಮೂಲಕ ಸ್ಟ್ಯಾಂಡರ್ಡ್ e-tron GT ಕ್ವಾಟ್ರೊ ಮಾದರಿಯು 350 ಕಿ.ವ್ಯಾ ಅಥವಾ 469 ಬಿಹೆಚ್‌ಪಿ ಪವರ್ ಹಾಗೂ ಗರಿಷ್ಠ ಟಾರ್ಕ್ 630 ಎನ್ಎಂ ಉತ್ಪಾದಿಸುತ್ತದೆ. ಇನ್ನು e-tron GT RS ಮಾದರಿಯು 490 ಕಿ.ವ್ಯಾ ಅಥವಾ 590 ಬಿಹೆಚ್‌ಪಿ ಪವರ್ ಹಾಗೂ 830 ಎನ್ಎಂ ಗರಿಷ್ಠ ಟಾರ್ಕ್ ಉತ್ಪಾದಿಸುತ್ತದೆ.

2021ರಲ್ಲಿ ಬಿಡುಗಡೆಯಾದ ಟಾಪ್ ಹತ್ತು ಎಲೆಕ್ಟ್ರಿಕ್ ಕಾರುಗಳಿವು!

ಜಾಗ್ವಾರ್ ಐ-ಪೇಸ್

ಜಾಗತಿಕ ಮಾರುಕಟ್ಟೆಗಳಲ್ಲಿ ಈಗಾಗಲೇ ಖರೀದಿಗೆ ಲಭ್ಯವಿರುವ ಐ-ಪೇಸ್ ಎಲೆಕ್ಟ್ರಿಕ್ ಎಸ್‌ಯುವಿ ಮಾದರಿಯು ಇದೀಗ ಭಾರತದಲ್ಲೂ ಬಿಡುಗಡೆಗೊಂಡಿದ್ದು, ಹೊಸ ಕಾರು ಎಸ್, ಎಸ್ಇ ಮತ್ತು ಹೆಚ್ಎಸ್ಇ ಎಂಬ ಮೂರು ವೆರಿಯೆಂಟ್‌ಗಳಲ್ಲಿ ಲಭ್ಯವಿರುತ್ತದೆ. ಹೊಸ ಕಾರಿನ ತಾಂತ್ರಿಕ ಅಂಶಗಳಿಗೆ ಅನುಗುಣವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 1.06 ಕೋಟಿಯಿಂದ ಟಾಪ್ ಎಂಡ್ ಮಾದರಿಯು ರೂ. 1.12 ಕೋಟಿ ಬೆಲೆ ಪಡೆದುಕೊಂಡಿದೆ.

2021ರಲ್ಲಿ ಬಿಡುಗಡೆಯಾದ ಟಾಪ್ ಹತ್ತು ಎಲೆಕ್ಟ್ರಿಕ್ ಕಾರುಗಳಿವು!

ಡ್ಯುಯಲ್ ಎಲೆಕ್ಟ್ರಿಕ್ ಮೋಟಾರ್ ಮೂಲಕ ಗರಿಷ್ಠ 400-ಬಿಎಚ್‌ಪಿ ಮತ್ತು 696-ಎನ್ಎಂ ಟಾರ್ಕ್ ಉತ್ಪಾದನೆ ಮಾಡುವ ಐ-ಪೇಸ್ ಕಾರು ಮಾದರಿಯು 90kWh ಬ್ಯಾಟರಿ ಪ್ಯಾಕ್ ಮೂಲಕ ಪ್ರತಿ ಚಾರ್ಜ್‌ಗೆ 470 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

2021ರಲ್ಲಿ ಬಿಡುಗಡೆಯಾದ ಟಾಪ್ ಹತ್ತು ಎಲೆಕ್ಟ್ರಿಕ್ ಕಾರುಗಳಿವು!

ನವೀಕೃತ ಟಾಟಾ ಟಿಗೋರ್ ಇವಿ

ಟಿಗೋರ್ ಇವಿ ಮಾದರಿಯನ್ನು ಇತ್ತೀಚೆಗೆ ಹೊಸ ತಂತ್ರಜ್ಞಾನ ಪ್ರೇರಣೆಯೊಂದಿಗೆ ಟಾಟಾ ಮೋಟಾರ್ಸ್ ಬಿಡುಗಡೆ ಮಾಡಲಾಗಿದ್ದು, ಟಿಗೋರ್ ಇವಿ ಕಾರು ನೆಕ್ಸಾನ್ ಇವಿ ಮಾದರಿಯಲ್ಲೇ ಅತ್ಯುತ್ತಮ ಮೈಲೇಜ್, ಪರ್ಫಾಮೆನ್ಸ್ ಮೂಲಕ ಗ್ರಾಹಕರನ್ನು ಸೆಳೆಯುತ್ತಿದೆ. 55kW ಎಲೆಕ್ಟ್ರಿಕ್ ಮೋಟಾರ್‌ ಮತ್ತು 26kWh ಲೀಥಿಯಂ ಅಯಾನ್ ಬ್ಯಾಟರಿ ಜೋಡಣೆಯು ಕಾರಿನ ಕಾರ್ಯಕ್ಷಮತೆ ಹೆಚ್ಚಳದೊಂದಿಗೆ ಮೈಲೇಜ್‌ನಲ್ಲೂ ಸಾಕಷ್ಟು ಸುಧಾರಣೆಗೊಂಡಿದ್ದು, ಹೊಸ ಕಾರು ಪ್ರತಿ ಚಾರ್ಜ್‌ಗೆ ಗರಿಷ್ಠ 306 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

2021ರಲ್ಲಿ ಬಿಡುಗಡೆಯಾದ ಟಾಪ್ ಹತ್ತು ಎಲೆಕ್ಟ್ರಿಕ್ ಕಾರುಗಳಿವು!

2021ರ ಟಿಗೋರ್ ಇವಿ ಕಾರು ಈ ಹಿಂದಿನ ಆವೃತ್ತಿಗಿಂತಲೂ ಹೆಚ್ಚು ಪ್ರೀಮಿಯಂ, ಪವರ್‌ಪುಲ್ ಪವರ್‌ಟ್ರೈನ್ ಸೇರಿದಂತೆ ಹಲವಾರು ಹೊಸ ಬದಲಾವಣೆಗಳೊಂದಿಗೆ ಅಭಿವೃದ್ದಿಗೊಂಡಿದ್ದು, ಎಕ್ಸ್ಇ, ಎಕ್ಸ್ಎಂ, ಎಕ್ಸ್‌ಜೆಡ್ ಪ್ಲಸ್ ಮತ್ತು ಎಕ್ಸ್‌ಜೆಡ್ ಪ್ಲಸ್ ಡ್ಯುಯಲ್ ಟೋನ್ ವೆರಿಯೆಂಟ್‌ಗಳೊಂದಿಗೆ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11.99 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯು ರೂ. 13.14 ಲಕ್ಷ ಬೆಲೆ ಹೊಂದಿದೆ.

2021ರಲ್ಲಿ ಬಿಡುಗಡೆಯಾದ ಟಾಪ್ ಹತ್ತು ಎಲೆಕ್ಟ್ರಿಕ್ ಕಾರುಗಳಿವು!

ಟಾಟಾ ಎಕ್ಸ್‌ಪ್ರೆಸ್ ಟಿ

ಟಾಟಾ ಮೋಟಾರ್ಸ್(Tata Motors) ಕಂಪನಿಯು ವಾಣಿಜ್ಯ ಬಳಕೆಗಾಗಿಯೇ ವಿಶೇಷವಾಗಿ ಎಕ್ಸ್‌ಪ್ರೆಸ್ ಟಿ(Express T) ಎಂಬ ಹೊಸ ಎಲೆಕ್ಟ್ರಿಕ್ ಕಾರ್ ಅನ್ನು ಬಿಡುಗಡೆಗೊಳಿಸಿದೆ. ಈ ಹೊಸ ಎಲೆಕ್ಟ್ರಿಕ್ ಕಾರಿನ ಆರಂಭಿಕ ಬೆಲೆ ಎಕ್ಸ್ ಶೋರೂಂ ದರದಂತೆ ರೂ. 9.54 ಲಕ್ಷಗಳಾಗಿದೆ.

2021ರಲ್ಲಿ ಬಿಡುಗಡೆಯಾದ ಟಾಪ್ ಹತ್ತು ಎಲೆಕ್ಟ್ರಿಕ್ ಕಾರುಗಳಿವು!

21.5 ಕಿ.ವ್ಯಾ ಬ್ಯಾಟರಿ ಹೊಂದಿರುವ ಇತರ ಎರಡು ಮಾದರಿಗಳ ಬೆಲೆ ಕ್ರಮವಾಗಿ ರೂ. 10.14 ಲಕ್ಷ ಹಾಗೂ ರೂ.10.64 ಲಕ್ಷಗಳಾಗಿದೆ. 16.5 ಕಿ.ವ್ಯಾ ಬ್ಯಾಟರಿಯನ್ನು ಹೊಂದಿರುವ ಮಾದರಿಯು ಪೂರ್ತಿಯಾಗಿ ಚಾರ್ಜ್ ಆದ ನಂತರ 165 ಕಿ.ಮೀಗಳವರೆಗೆ ಚಲಿಸುತ್ತದೆ. ಇನ್ನು 21.5 ಕಿ.ವ್ಯಾ ಬ್ಯಾಟರಿಯನ್ನು ಹೊಂದಿರುವ ಮಾದರಿಯು ಪೂರ್ತಿಯಾಗಿ ಚಾರ್ಜ್ ಆದ ನಂತರ 213 ಕಿ.ಮೀಗಳವರೆಗೆ ಚಲಿಸುತ್ತದೆ.

2021ರಲ್ಲಿ ಬಿಡುಗಡೆಯಾದ ಟಾಪ್ ಹತ್ತು ಎಲೆಕ್ಟ್ರಿಕ್ ಕಾರುಗಳಿವು!

ಟಾಟಾ ನೆಕ್ಸಾನ್ ಇವಿ ಡಾರ್ಕ್ ಎಡಿಷನ್

ನೆಕ್ಸಾನ್ ಇವಿ ಕಾರು ಮಾದರಿಯು ಸದ್ಯ ಇವಿ ಕಾರು ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದು, ಟಾಟಾ ಕಂಪನಿಯು ಇತ್ತೀಚೆಗೆ ನೆಕ್ಸಾನ್ ಇವಿ ಡಾರ್ಕ್ ಎಡಿಷನ್ ಬಿಡುಗಡೆ ಮಾಡಿತು. ನೆಕ್ಸಾನ್ ಇವಿ ಸದ್ಯ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 14.24 ಲಕ್ಷದಿಂದ ಮತ್ತು ಟಾಪ್ ಎಂಡ್ ಮಾದರಿಯು ರೂ. 16.65 ಲಕ್ಷ ಬೆಲೆ ಪಡೆದುಕೊಂಡಿದ್ದು, ಇದರಲ್ಲಿ ಕಪ್ಪು ಬಣ್ಣದ ಆಯ್ಕೆ ಹೊಂದಿರುವ ಡಾರ್ಕ್ ಎಡಿಷನ್ ಮಾದರಿಯು ರೂ. 15.99 ಲಕ್ಷ ಬೆಲೆ ಹೊಂದಿದೆ.

2021ರಲ್ಲಿ ಬಿಡುಗಡೆಯಾದ ಟಾಪ್ ಹತ್ತು ಎಲೆಕ್ಟ್ರಿಕ್ ಕಾರುಗಳಿವು!

ಮೂರು ಪ್ರಮುಖ ವೆರಿಯೆಂಟ್‌ಗಳೊಂದಿಗೆ ಹಲವಾರು ಹೊಸ ಪ್ರೀಮಿಯಂ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ಪಡೆದುಕೊಂಡಿರುವ ನೆಕ್ಸಾನ್ ಇವಿ ಕಾರು ಜಿಪ್‌ಟ್ರಾನ್ ತಂತ್ರಜ್ಞಾನ ಪ್ರೇರಿತ 95kW ಎಲೆಕ್ಟ್ರಿಕ್ ಮೋಟಾರ್ ಜೋಡಣೆ ಹೊಂದಿದ್ದು, 30kWh ಲಿಥೀಯಂ ಅಯಾನ್ ಬ್ಯಾಟರಿ ಮೂಲಕ ಇಕೋ ಡ್ರೈವ್ ಮೋಡ್‌ನಲ್ಲಿ ಗರಿಷ್ಠ 312 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

2021ರಲ್ಲಿ ಬಿಡುಗಡೆಯಾದ ಟಾಪ್ ಹತ್ತು ಎಲೆಕ್ಟ್ರಿಕ್ ಕಾರುಗಳಿವು!

ಅತ್ಯಧಿಕ ಮೈಲೇಜ್ ಪ್ರೇರಿತ ಎಂಜಿ ಜೆಡ್ಎಸ್ ಇವಿ ಕಾರು

ಎಂಜಿ ಕಂಪನಿಯು ಹೊಸ ಜೆಡ್ಎಸ್ ಎಲೆಕ್ಟ್ರಿಕ್ ಎಸ್‌ಯುವಿ ಆವೃತ್ತಿಯಲ್ಲಿ ಎಕ್ಸೈಟ್ ಮತ್ತು ಎಕ್ಸ್‌ಕ್ಲೂಸಿವ್ ಎನ್ನುವ ಎರಡು ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, 44.5 kWh ಬ್ಯಾಟರಿ ಪ್ಯಾಕ್ ಜೋಡಣೆ ಹೊಂದಿರುವ ಹೊಸ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಮಾದರಿಯು ಸುಧಾರಿತ ಬ್ಯಾಟರಿ ಪ್ಯಾಕ್ ಜೋಡಣೆಯ ನಂತರ ಮೈಲೇಜ್ ಪ್ರಮಾಣವು ಪ್ರತಿ ಚಾರ್ಜ್‌ಗೆ ಈ ಹಿಂದಿನ 340 ಕಿಮೀ ನಿಂದ 419 ಕಿಮೀ ಗೆ ಏರಿಕೆಯಾಗಿದೆ.

2021ರಲ್ಲಿ ಬಿಡುಗಡೆಯಾದ ಟಾಪ್ ಹತ್ತು ಎಲೆಕ್ಟ್ರಿಕ್ ಕಾರುಗಳಿವು!

ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕ ಎಕ್ಸೈಟ್ ಮಾದರಿಯು ರೂ. 20,99,800 ಮತ್ತು ಎಕ್ಸ್‌ಕ್ಲೂಸಿವ್ ಮಾದರಿಯು ರೂ. 24,68,000 ಬೆಲೆ ಹೊಂದಿದ್ದು, ಹೊಸ ಬ್ಯಾಟರಿಯು ಸುಧಾರಿತ ತಂತ್ರಜ್ಞಾನದೊಂದಿಗೆ ಅಭಿವೃದ್ದಿಗೊಂಡಿರುವುದರಿಂದ ಪ್ರತಿ ಚಾರ್ಜ್‌ಗೆ ಈ ಹಿಂದಿಗಿಂತಲೂ 79 ಕಿ.ಮೀ ಹೆಚ್ಚು ಮೈಲೇಜ್ ನೀಡುತ್ತದೆ.

Most Read Articles

Kannada
English summary
Top 10 electric cars launched in 2021 bmw ix audi tron porsche taycan and more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X