2021ರ ಮಾರ್ಚ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು

2021ರ ಮಾರ್ಚ್ ತಿಂಗಳಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳ ಪಟ್ಟಿ ಬಹಿರಂಗವಾಗಿದೆ. ಭಾರತದಲ್ಲಿ ಅತಿ ಹೆಚ್ಚು ಮಾರಾಟವಾದ ಕಾರುಗಳ ಪಟ್ಟಿಯಲ್ಲಿ ಮಾರುತಿ ಸುಜುಕಿ ತನ್ನ ಪ್ರಾಬಲ್ಯವನ್ನು ಮುಂದುವರೆಸಿದೆ. 2021ರ ಮಾರ್ಚ್ ತಿಂಗಳಲ್ಲಿ ಭಾರತದಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳ ಪಟ್ಟಿ ಇಲ್ಲಿವೆ.

2021ರ ಮಾರ್ಚ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು

ಮಾರುತಿ ಸುಜುಕಿ ಸ್ವಿಫ್ಟ್

2021ರ ಮಾರ್ಚ್ ತಿಂಗಳಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳ ಪಟ್ಟಿಯಲ್ಲಿ ಮಾರುತಿ ಸುಜುಕಿ ಸ್ವಿಫ್ಟ್ ಅಗ್ರಸ್ಥಾನವನ್ನು ಪಡೆದುಕೊಂಡಿದೆ. 2021ರ ಮಾರ್ಚ್ ತಿಂಗಳಲ್ಲಿ ಮಾರುತಿ ಸುಜುಕಿ ಸ್ವಿಫ್ಟ್ 21,714ಯುನಿಟ್‌ಗಳು ಮಾರಾಟವಾಗಿವೆ. ಆದರೆ 2020ರ ಮಾರ್ಚ್ ತಿಂಗಳಲ್ಲಿ ಮಾರುತಿ ಸುಜುಕಿ ಸ್ವಿಫ್ಟ್ 8,575 ಯುನಿಟ್‌ಗಳು ಮಾರಾಟವಾಗಿತ್ತು.

2021ರ ಮಾರ್ಚ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು

ಇದನ್ನು ಕಳೆದ ತಿಂಗಳ ಮಾರಟಕ್ಕೆ ಹೋಲಿಸಿದರೆ ಮಾರಾಟದಲ್ಲಿ ಶೇ.153 ರಷ್ಟು ಹೆಚ್ಚಳವಾಗಿದೆ. ಭಾರತೀಯ ಮಾರುಕಟ್ಟೆಯಲ್ಲಿ ಇತರ ಕಾರುಗಳನ್ನು ಹಿಂದಿಕ್ಕಿ ಸತತವಾಗಿ ಅತಿ ಹೆಚ್ಚು ಮಾರಾಟವಾದ ಕಾರುಗಳ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಪಡೆದುಕೊಂಡಿದೆ.

MOST READ: ಫೆಬ್ರವರಿ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಡೀಸೆಲ್ ಕಾರುಗಳಿವು

2021ರ ಮಾರ್ಚ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು

ಮಾರುತಿ ಸುಜುಕಿ ಬಲೆನೊ

ಮಾರುತಿ ಸುಜುಕಿ ಬಲೆನೊ ಕಾರು ಸತತವಾಗಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳ ಪಟ್ಟಿಯಲ್ಲಿ ತನ್ನ ಸ್ಥಾನವನ್ನು ಪಡೆದುಕೊಂಡಿದೆ. ಕಳೆದ ತಿಂಗಳು ಬಲೆನೊ ಪ್ರೀಮಿಯಂ ಹ್ಯಾಚ್‌ಬ್ಯಾಕ್ 21,217 ಯುನಿಟ್‌ಗಳು ಮಾರಾಟವಾಗಿವೆ. ಈ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಅನ್ನು ನೆಕ್ಸಾ ಡೀಲರ್ಸ್‌ಗಳ ಮೂಲಕ ಪ್ರತ್ಯೇಕವಾಗಿ ಮಾರಾಟ ಮಾಡಲಾಗುತ್ತದೆ.

2021ರ ಮಾರ್ಚ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು

ಮಾರುತಿ ಸುಜುಕಿ ವ್ಯಾಗನ್ಆರ್

ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳ ಪಟ್ಟಿ ಮಾರುತಿ ಸುಜುಕಿಯ ವ್ಯಾಗನ್ಆರ್ ಕಾರು ಮೂರನೇ ಸ್ಥಾನವನ್ನು ಪಡೆದುಕೊಂಡಿದೆ. 2021ರ ಮಾರ್ಚ್ ತಿಂಗಳಲ್ಲಿ ಮಾರುತಿ ಸುಜುಕಿ ವ್ಯಾಗನ್ಆರ್ 18,757 ಯುನಿಟ್‌ಗಳು ಮಾರಾಟವಾಗಿವೆ.

MOST READ: 2020ರ ಡಿಸೆಂಬರ್‌ ತಿಂಗಳ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದ ಟೊಯೊಟಾ

2021ರ ಮಾರ್ಚ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು

ಮಾರುತಿ ಸುಜುಕಿ ಆಲ್ಟೋ

ಮಾರುತಿ ಸುಜುಕಿ ಆಲ್ಟೋ ಮಾದರಿಯು ಎಂಟ್ರಿ ಲೆವೆಲ್ ಹ್ಯಾಚ್‌ಬ್ಯಾಕ್ ಆಗಿದೆ. ಕೆಲವು ತಿಂಗಳ ಕಾಲ ಆಲ್ಟೋ ದೇಶದಲ್ಲಿ ಅತಿ ಹೆಚ್ಚು ಮಾರಾಟವಾಗುವ ಹ್ಯಾಚ್‌ಬ್ಯಾಕ್ ಆಗಿತ್ತು. ಕಳೆದ ತಿಂಗಳು ಆಲ್ಟೋ 18,757 ಯುನಿಟ್‌ಗಳು ಮಾರಾಟವಾಗಿವೆ. ವಾರ್ಷಿಕ ಮರಾಟದಲ್ಲಿ ಶೇ.105 ರಷ್ಟು ಹೆಚ್ಚಳವಾಗಿದೆ.

2021ರ ಮಾರ್ಚ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು

ಹ್ಯುಂಡೈ ಕ್ರೆಟಾ

ಹ್ಯುಂಡೈ ಕ್ರೆಟಾ ಮಿಡ್ ಎಸ್‍ಯುವಿಯು ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳ ಪಟ್ಟಿಯಲ್ಲಿ ಐದನೇ ಸ್ಥಾನವನ್ನು ಪಡೆದುಕೊಂಡಿದೆ. ಹ್ಯುಂಡೈ ಕ್ರೆಟಾ ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯೊಂದಿಗೆ ಮಾರಾಟವಾಗುವ ಎಸ್‍ಯುವಿಯಾಗಿದೆ. ಕಳೆದ ತಿಂಗಳು ಹ್ಯುಂಡೈ ಕ್ರೆಟಾ 112,640 ಯುನಿಟ್‌ಗಳು ಮಾರಾಟವಾಗಿವೆ.

MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

2021ರ ಮಾರ್ಚ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು

ಮಾರುತಿ ಸುಜುಕಿ ಇಕೋ

ಕಳೆದ ತಿಂಗಳು ಮಾರುತಿ ಸುಜುಕಿ ಇಕೋ ಮಾದರಿಯ 11,547 ಯುನಿಟ್‌ಗಳು ಮಾರಾಟವಾಗಿವೆ. 2020ರ ಮಾರ್ಚ್ ತಿಂಗಳಿನಲ್ಲಿ 5,966 ಯುನಿಟ್‌ಗಳು ಮಾರಾಟವಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.94 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ.

2021ರ ಮಾರ್ಚ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು

ಮಾರುತಿ ಸುಜುಕಿ ಡಿಜೈರ್

ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳ ಪಟ್ಟಿಯಲ್ಲಿ ಏಳನೇ ಸ್ಥಾನವನ್ನು ಕೂಡ ಮಾರುತಿ ಸುಜುಕಿ ಆಕ್ರಮಿಸಿಕೊಂಡಿದೆ. ಕಳೆದ ತಿಂಗಳು ಮಾರುತಿ ಸುಜುಕಿ ಡಿಜೈರ್ 11,434 ಯುನಿಟ್‌ಗಳು ಮಾರಾಟವಾಗಿವೆ.

2021ರ ಮಾರ್ಚ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು

ಮಾರುತಿ ಸುಜುಕಿ ಬ್ರೆಝಾ

ಮಾರುತಿ ಸುಜುಕಿ ಬ್ರೆಝಾ ಮಾದರಿಯು 2021ರ ಮಾರ್ಚ್ ತಿಂಗಳಲ್ಲಿ ಅತಿ ಹೆಚ್ಚು ಮಾರಾಟವಾದ ಕಾಂಪ್ಯಾಕ್ಟ್ ಎಸ್‌ಯುವಿಯಾಗಿದೆ. ಇನ್ನು ಕಳೆದ ತಿಂಗಳಿನಲ್ಲಿ ಬ್ರೆಝಾದ 11,274 ಯುನಿಟ್‌ಗಳು ಮಾರಾಟವಾಗಿವೆ. ವಾರ್ಷಿಕ ಮಾರಟದಲ್ಲಿ ಶೇ.104 ರಷ್ಟು ಬೆಳವಣಿಗೆ ಸಾಧಿಸಿದೆ.

2021ರ ಮಾರ್ಚ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು

ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್

ಕಳೆದ ತಿಂಗಳಿನಲ್ಲಿ ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್ ಮಾದರಿಯ 11,020 ಯುನಿಟ್‌ಗಳು ಮಾರಾಟವಾಗಿವೆ. ಇದನ್ನು ಕಳೆದ ವರ್ಷದ ಮಾರ್ಚ್ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.157 ರಷ್ಟು ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದೆ.

2021ರ ಮಾರ್ಚ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು

ಹ್ಯುಂಡೈ ವೆನ್ಯೂ

2021ರ ಮಾರ್ಚ್ ತಿಂಗಳಿನಲ್ಲಿ ಹ್ಯುಂಡೈ ವೆನ್ಯೂ ಮಾದರಿಯ 10,722 ಯುನಿಟ್‌ಗಳು ಮಾರಾಟವಾಗಿವೆ. ಇದನ್ನು ಕಳೆದ ವರ್ಷದ ಮಾರ್ಚ್ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.75 ರಷ್ಟು ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದೆ.

Article Published On: Friday, April 2, 2021, 15:54 [IST]
English summary
Top 10 Most Sold Cars In March 2021. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+