ಮೇ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಮಾರುತಿ ಸುಜುಕಿ ಕಾರುಗಳಿವು

ಭಾರತೀಯ ಮಾರುಕಟ್ಟೆಯಲ್ಲಿ ಕಾರು ಮಾರಾಟದಲ್ಲಿ ಮಾರುತಿ ಸುಜುಕಿ ಕಂಪನಿಯು ಪಾರುಪತ್ಯ ಸಾಧಿಸುತ್ತಿದೆ. ಇನ್ನು ಭಾರತೀಯ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಮಾರಾಟವಾಗುವ ಕಾರುಗಳ ಟಾಪ್-10 ಪಟ್ಟಿಯಲ್ಲಿ ಮಾರುತಿ ಸುಜುಕಿ ಕಾರುಗಳೇ ಹೆಚ್ಚಾಗಿ ಕಾಣಸಿಗುತ್ತದೆ.

ಮೇ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಮಾರುತಿ ಸುಜುಕಿ ಕಾರುಗಳಿವು

ದೇಶದ ಅತಿದೊಡ್ಡ ಕಾರು ತಯಾರಕರಾದ ಮಾರುತಿ ಸುಜುಕಿ ಕಳೆದ ತಿಂಗಳು ಮಾರಾಟದಲ್ಲಿ ಗಣನೀಯ ಕುಸಿತ ಕಂಡಿದೆ. ಉತ್ಪಾದನೆಯಲ್ಲಿ 50 ಪ್ರತಿಶತದಷ್ಟು ಕುಸಿತವು ಕಳೆದ ತಿಂಗಳು ಸೀಮಿತ ರವಾನೆಗೆ ಕಾರಣವಾಗಿದೆ. ಕಳೆದ ತಿಂಗಳು ಸೀಮಿತ ಉತ್ಪಾದನೆಯನ್ನು ಗಮನಿಸಿದರೆ, ಕಂಪನಿಯ ಸತತ ಬೆಸ್ಟ್ ಸೆಲ್ಲರ್ ಕಾರ್ ಆದ ಸ್ವಿಫ್ಟ್ ಅನ್ನು ಹ್ಯುಂಡೈ ಕ್ರೆಟಾ ಮಾರಾಟದಲ್ಲಿ ಹಿಂದಿಕ್ಕಿದೆ, ಇನ್ನು ಮಾರುತಿ ಸುಜುಕಿ ಕಂಪನಿಯು ಕಳೆದ ಅತಿ ಹೆಚ್ಚು ಮಾರಾಟ ಮಾಡಿದ ಟಾಪ್-3 ಕಾರುಗಳ ಮಾಹಿತಿ ಇಲ್ಲಿದೆ.

ಮೇ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಮಾರುತಿ ಸುಜುಕಿ ಕಾರುಗಳಿವು

ಮಾರುತಿ ಸುಜುಕಿ ಸ್ವಿಫ್ಟ್

ಸ್ವಿಫ್ಟ್ ಕಾರು ಯಾವಗಲು ಮಾರುತಿ ಸುಜುಕಿ ಕಂಪನಿಗೆ ಮಾರಾಟದಲ್ಲಿ ದೊಡ್ಡ ಕೊಡುಗೆಯನ್ನು ನೀಡುತ್ತ ಬಂದಿದೆ, ಕಳೆದ ತಿಂಗಳು ಮಾರುತಿ ಸುಜುಕಿ ಕಂಪನಿಯು ಸ್ವಿಫ್ಟ್‌ನ 7,005 ಯುನಿಟ್‌ಗಳನ್ನು ಮಾರಾಟ ಮಾಡಿದೆ.

ಮೇ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಮಾರುತಿ ಸುಜುಕಿ ಕಾರುಗಳಿವು

2021ರ ಸ್ಪಿಫ್ಟ್ ಕಾರು ಮಾದರಿಯು ಎಲ್ಎಕ್ಸ್ಐ, ವಿಎಕ್ಸ್ಐ, ಜೆಡ್ಎಕ್ಸ್ಐ ಮತ್ತು ಜೆಡ್ಎಕ್ಸ್ಐ ಪ್ಲಸ್ ಎನ್ನುವ ಪ್ರಮುಖ ನಾಲ್ಕು ವೆರಿಯೆಂಟ್ ಮಾರಾಟವಾಗುತ್ತಿದೆ. ಗ್ರಿಲ್ ಡಿಸೈನ್ ಹೊರತುಪಡಿಸಿ ಹೊಸ ಕಾರಿನ ಹೊರಭಾಗದ ವಿನ್ಯಾಸಗಳನ್ನು ಈ ಹಿಂದಿನ ಮಾದರಿಯಂತೆಯೇ ಮುಂದುವರಿಸಲಾಗಿದ್ದು, ಒಳಭಾಗದ ತಾಂತ್ರಿಕ ಅಂಶಗಳಲ್ಲಿ ಕೆಲವು ಬದಲಾವಣೆಗಳನ್ನು ಪರಿಚಯಿಸಲಾಗಿದೆ.

ಮೇ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಮಾರುತಿ ಸುಜುಕಿ ಕಾರುಗಳಿವು

ಹೊಸ ಕಾರಿನಲ್ಲಿರುವ ಹೊಸ ಎಂಜಿನ್ ಮೊದಲಿಗಿಂತ ಹೆಚ್ಚು ಶಕ್ತಿಶಾಲಿಯಾಗಿದೆ. ಸ್ವಿಫ್ಟ್ ಫೇಸ್‌ಲಿಫ್ಟ್‌ ಕಾರಿನಲ್ಲಿ 1.2-ಲೀಟರ್ ಡ್ಯುಯಲ್ ಜೆಟ್ 12 ಎನ್ ಪೆಟ್ರೋಲ್ ಎಂಜಿನ್ ಅಳವಡಿಸಲಾಗಿದೆ. ಈ ಎಂಜಿನ್ 89 ಬಿಹೆಚ್‌ಪಿ ಪವರ್ ಮತ್ತು 113 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ಮೇ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಮಾರುತಿ ಸುಜುಕಿ ಕಾರುಗಳಿವು

ಮಾರುತಿ ಸುಜುಕಿ ಡಿಜೈರ್

2021ರ ಮೇ ತಿಂಗಳಿನಲ್ಲಿ ಮಾರುತಿ ಸುಜುಕಿ ಡಿಜೈರ್ ಕಂಪನಿಯ ಎರಡನೇ ಬೆಸ್ಟ್ ಸೆಲ್ಲರ್ ಆಗಿದೆ. ಕಳೆದ ತಿಂಗಳಿನಲ್ಲಿ ಭಾರತದಲ್ಲಿ ಮಾರಾಟವಾದ ಟಾಪ್ -10 ಕಾರುಗಳ ಪಟ್ಟಿಯಲ್ಲಿ ಸ್ಥಾನ ಪಡೆದ ಏಕೈಕ ಡಿಜೈರ್ ಕಾಂಪ್ಯಾಕ್ಟ್ ಸೆಡಾನ್ ಇದಾಗಿದೆ. ಇನ್ನು ಮಾರುತಿ ಸುಜುಕಿ ಕಂಪನಿಯು ಡಿಜೈರ್ ಮಾದರಿಯ 5,819 ಯುನಿಟ್ ಗಳನ್ನು ಕಳೆದ ತಿಂಗಳು ಮಾರಟ ಮಾಡಿದೆ.

ಮೇ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಮಾರುತಿ ಸುಜುಕಿ ಕಾರುಗಳಿವು

ಫೇಸ್‌ಲಿಫ್ಟ್ ವರ್ಷನ್ ನಂತರ ಡಿಜೈರ್ ಆವೃತ್ತಿಯಲ್ಲಿ ಸದ್ಯಕ್ಕೆ ಪೆಟ್ರೋಲ್ ಎಂಜಿನ್ ಆಯ್ಕೆಯಲ್ಲಿ ಮಾತ್ರವೇ ಖರೀದಿಗೆ ಲಭ್ಯವಿದ್ದು, ನ್ಯೂ ಜನರೇಷನ್ ಬಲೆನೊದಲ್ಲಿ ಬಳಕೆ ಮಾಡಲಾಗಿರುವ ಕೆ12ಸಿ ಡ್ಯುಯಲ್ ಜೆಟ್ ಎಂಜಿನ್ ಮಾದರಿಯನ್ನೇ ಡಿಜೈರ್‌ನಲ್ಲೂ ಅಳವಡಿಸಲಾಗಿದೆ.

ಮೇ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಮಾರುತಿ ಸುಜುಕಿ ಕಾರುಗಳಿವು

ಇದು 1.2-ಲೀಟರ್ ಫೋರ್ ಸಿಲಿಂಡರ್ ಕೆ12ಸಿ ಡ್ಯುಯಲ್‌ಜೆಟ್ ಪೆಟ್ರೋಲ್ ಎಂಜಿನ್ ಆಗಿದ್ದು. ಈ ಎಂಜಿನ್ 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 90-ಬಿಎಚ್‌ಪಿ ಉತ್ಪಾದಿಸುತ್ತದೆ

ಮೇ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಮಾರುತಿ ಸುಜುಕಿ ಕಾರುಗಳಿವು

ಮಾರುತಿ ಸುಜುಕಿ ಬಲೆನೊ

ಕಳೆದ ತಿಂಗಳು ಭಾರತದಲ್ಲಿ 4,803-ಯುನಿಟ್ ಮಾರಾಟದೊಂದಿಗೆ ಬಲೆನೊ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ವಿಶೇಷವೆಂದರೆ, ಮಾರುತಿ ಸುಜುಕಿ ಬಲೆನೊ ದೇಶದಲ್ಲಿ ಹೆಚ್ಚು ಮಾರಾಟವಾಗುವ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಆಗಿದೆ. ಇನ್ನು ಕಳೆದ ತಿಂಗಳು ಭಾರತದಲ್ಲಿ ಮಾರಾಟವಾದ ಟಾಪ್ -10 ಕಾರುಗಳಲ್ಲಿ ಬಲೆನೊ ಏಳನೇ ಸ್ಥಾನಕ್ಕೆ ಇಳಿದಿದೆ.

ಮೇ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಮಾರುತಿ ಸುಜುಕಿ ಕಾರುಗಳಿವು

ಬಲೆನೊ ಹ್ಯಾಚ್‌ಬ್ಯಾಕ್‌ ಮಾರುತಿ ಸುಜುಕಿ ಕಾರುಗಳ ಸರಣಿಯಲ್ಲಿ ಅತ್ಯಂತ ಯಶಸ್ವಿ ಮಾದರಿಗಳಲ್ಲಿ ಒಂದಾಗಿದೆ. ಇದು ಪ್ರೀಮಿಯಂ ಹ್ಯಾಚ್‌ಬ್ಯಾಕ್ ಆಗಿದ್ದು, ಈ ವಿಭಾಗದಲ್ಲಿ ಹ್ಯುಂಡೈ ಐ20, ಟಾಟಾ ಆಲ್ಟ್ರೊಜ್, ಹೋಂಡಾ ಜಾಝ್, ಫೋಕ್ಸ್‌ವ್ಯಾಗನ್ ಪೊಲೊ ಕಾರುಗಳಿಗೆ ಪೈಪೋಟಿ ನೀಡುತ್ತದೆ.

ಮೇ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಮಾರುತಿ ಸುಜುಕಿ ಕಾರುಗಳಿವು

ಮಾರುತಿ ಸುಜುಕಿ 2015 ರಲ್ಲಿ ಮೊದಲ ಬಾರಿಗೆ ಬಲೆನೊ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತ್ತು. ಅಂದಿನಿಂದ ತಯಾರಕರು ಹ್ಯಾಚ್‌ಬ್ಯಾಕ್‌ನಲ್ಲಿ ಸಣ್ಣ ಕಾಸ್ಮೆಟಿಕ್ ಬದಲಾವಣೆಗಳನ್ನು ಮಾಡುತ್ತಾ ಬಂದಿದ್ದಾರೆ. ಬಿಎಸ್ 6 ಮಾಲಿನ್ಯ ನಿಮಕ್ಕೆ ಅನುಗುಣವಾಗಿ ನವೀಕರಣಗೊಂಡ ಮೊದಲ ಹ್ಯಾಚ್‌ಬ್ಯಾಕ್ ಕೂಡ ಬಲೆನೊ ಆಗಿದೆ.

Most Read Articles

Kannada
English summary
Top-three Maruti Suzuki Cars Sold In May 2021. Read In Kannada.
Story first published: Saturday, June 5, 2021, 20:39 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X