ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ 2021ರ ಹೊಸ ಕಾರುಗಳು!

ಪ್ರಯಾಣಿಕ ವಾಹನಗಳ ಸುರಕ್ಷತೆಯನ್ನು ಸುಧಾರಿಸುವ ನಿಟ್ಟಿನಲ್ಲಿ ಜಾಗತಿಕ ಮಟ್ಟದಲ್ಲಿ ಹೊಸ ಅಭಿಯಾನ ಕೈಗೊಂಡಿರುವ ಗ್ಲೊಬಲ್ ಎಸ್‌ಸಿಎಪಿ ಸಂಸ್ಥೆಯು ಭಾರತದಲ್ಲಿ #SAFERCARSFORINDIA ಅಭಿಯಾನದೊಂದಿಗೆ ಹೊಸ ಕಾರುಗಳ ಕ್ರ್ಯಾಶ್ ಟೆಸ್ಟ್ ನಡೆಸುತ್ತಿದ್ದು, ಗ್ಲೊಬಲ್ ಎನ್‌ಸಿಎಪಿ ಕ್ರ್ಯಾಶ್‌ ಟೆಸ್ಟಿಂಗ್‌ನಲ್ಲಿ 2021ರ ಪ್ರಮುಖ ಕಾರುಗಳು ಹೊಸ ದಾಖಲೆಗೆ ಕಾರಣವಾಗಿವೆ.

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ 2021ರ ಹೊಸ ಕಾರುಗಳು!

ಭಾರತದಲ್ಲಿ ಇತ್ತೀಚಿಗೆ ಬಿಡುಗಡೆಯಾಗುತ್ತಿರುವ ಹೊಸ ಕಾರುಗಳಲ್ಲಿ ಕಾರು ಉತ್ಪಾದನಾ ಕಂಪನಿಗಳು ಸುರಕ್ಷತೆಗೆ ಹೆಚ್ಚಿನ ಒತ್ತು ನೀಡುತ್ತಿದ್ದು, ಗ್ರಾಹಕರು ಕೂಡಾ ಹೆಚ್ಚು ಸುರಕ್ಷಿತ ಕಾರುಗಳ ಮಾದರಿಗಳ ಖರೀದಿಗೆ ಆದ್ಯತೆ ನೀಡುತ್ತಿದ್ದಾರೆ. ಈ ಹಿಂದೆ ಐಷಾರಾಮಿ ಕಾರುಗಳಲ್ಲಿ ಮಾತ್ರ ಕಂಡುಬರುತ್ತಿದ್ದ ಪ್ರಮುಖ ಸೇಫ್ಟಿ ಫೀಚರ್ಸ್‌ಗಳು ಇದೀಗ ಮಧ್ಯಮ ಕ್ರಮಾಂಕದ ಕಾರುಗಳಲ್ಲೂ ಜೋಡಣೆ ಮಾಡಲಾಗುತ್ತಿದ್ದು, ಈ ವರ್ಷ ಬಿಡುಗಡೆಯಾಗಿರುವ ಪ್ರಮುಖ ಸೇಫ್ಟಿ ಕಾರುಗಳ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ 2021ರ ಹೊಸ ಕಾರುಗಳು!

ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಉತ್ತಮ ಸುರಕ್ಷಾ ಕಾರು ಮಾದರಿಯಾಗಿ ಗುರುತಿಸಲು ಕನಿಷ್ಠ 3 ಅಂಕಗಳ ಅವಶ್ಯಕತೆಯಿದ್ದು, 5 ಅಂಕಗಳನ್ನು ಗಿಟ್ಟಿಸಿಕೊಂಡಿರುವ ಕಾರುಗಳು ಅತ್ಯುತ್ತಮ ಕಾರು ಮಾದರಿಯಾಗಿ ಹೊರಹೊಮ್ಮಿವೆ. 5 ಅಂಕಗಳನ್ನು ಪಡೆಯುವಲ್ಲಿ ಬಜೆಟ್ ಬೆಲೆಯ ಕಾರುಗಳು ಸಹ ಯಶಸ್ವಿಯಾಗಿದ್ದು, ಸುರಕ್ಷಿತ ಕಾರುಗಳ ವಿಚಾರದಲ್ಲಿ ದೇಶದ ಜನಪ್ರಿಯ ಕಾರು ಉತ್ಪಾದನಾ ಕಂಪನಿಗಳಾದ ಮಹೀಂದ್ರಾ ಮತ್ತು ಟಾಟಾ ಅಗ್ರಸ್ಥಾನದಲ್ಲಿವೆ. ಹಾಗಾದ್ರೆ ಹೆಚ್ಚು ಸುರಕ್ಷಿತವಾಗಿರುವ ಕಾರುಗಳ ಪಟ್ಟಿಯಲ್ಲಿ ಯಾವೆಲ್ಲಾ ಕಾರುಗಳಿವೆ ಎಂದು ಇಲ್ಲಿ ತಿಳಿಯೋಣ.

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ 2021ರ ಹೊಸ ಕಾರುಗಳು!

ಮಹೀಂದ್ರಾ ಎಕ್ಸ್‌ಯುವಿ700

ಮಹೀಂದ್ರಾ ನಿರ್ಮಾಣದ ಹೊಸ ಕಾರುಗಳು ಗ್ಲೊಬಲ್ ಎನ್‌ಸಿಎಪಿ ಕ್ರ್ಯಾಶ್‌ಟೆಸ್ಟಿಂಗ್‌ನಲ್ಲಿ ಹೊಸ ದಾಖಲೆಗೆ ಕಾರಣವಾಗುತ್ತಿದ್ದು, ಈ ವರ್ಷ ಬಿಡುಗಡೆಯಾದ ಎಕ್ಸ್‌ಯುವಿ700 ಮಾದರಿಯು ವಯಸ್ಕ ಪ್ರಯಾಣಿಕರ ಸುರಕ್ಷತೆಗಾಗಿ ನೀಡುವ 17 ಅಂಕಗಳಲ್ಲಿ 16.03 ಅಂಕಗಳನ್ನು ಮತ್ತು ಮಕ್ಕಳ ಸುರಕ್ಷತೆಗಾಗಿ ನೀಡಲಾಗುವ 49 ಅಂಕಗಳಲ್ಲಿ 41.66 ಅಂಕಗಳೊಂದಿಗೆ 5 ಸ್ಟಾರ್ ರೇಟಿಂಗ್ಸ್ ಪಡೆದುಕೊಂಡಿದೆ.

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ 2021ರ ಹೊಸ ಕಾರುಗಳು!

ಹೊಸ ಎಕ್ಸ್‌ಯುವಿ700 ಮಾದರಿಯಲ್ಲಿ ಸ್ಟ್ಯಾಂಡರ್ಡ್ ಏರ್‌ಬ್ಯಾಗ್, ಎಬಿಎಸ್ ಜೊತೆಗೆ ಇಬಿಡಿ, ಎಲೆಕ್ಟ್ರಾನಿಕ್ ಲಾಕಿಂಗ್, ಟ್ರಾಕ್ಷನ್ ಕಂಟ್ರೋಲ್, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಆಟೋ ಹೆಡ್‌ಲ್ಯಾಂಪ್ ಬೂಸ್ಟರ್, ವ್ಯಯಕ್ತಿಕರಣಗೊಳಿಸಿದ ಸೇಫ್ಟಿ ಅಲರ್ಟ್, ಡ್ರೈವರ್ ಡ್ರಾಸಿನೆಸ್ ಅಲರ್ಟ್, ಲೆನ್ ಕಿಪ್ ಅಸಿಸ್ಟ್ ಸೌಲಭ್ಯದೊಂದಿಗೆ ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ಖಾತ್ರಿಪಡಿಸಿದೆ.

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ 2021ರ ಹೊಸ ಕಾರುಗಳು!

ಟಾಟಾ ಪಂಚ್

ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ನಂತರ ಎಲ್ಲಾ ಕಾರು ಮಾದರಿಗಳಲ್ಲೂ ಗರಿಷ್ಠ ಸುರಕ್ಷಾ ಫೀಚರ್ಸ್‌ಗಳೊಂದಿಗೆ ಅಭಿವೃದ್ದಿಗೊಳಿಸಿದ್ದು,ಇದೀಗ ಹೊಸದಾಗಿ ಬಿಡುಗಡೆಯಾಗಿರುವ ಪಂಚ್ ಮೈಕ್ರೊ ಎಸ್‌ಯುವಿ ಮಾದರಿಯಲ್ಲೂ ಸಹ ಗರಿಷ್ಠ ಮಟ್ಟದ ಸುರಕ್ಷಾ ಫೀಚರ್ಸ್ ಅಳವಡಿಸಿದೆ

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ 2021ರ ಹೊಸ ಕಾರುಗಳು!

ವಯಸ್ಕ ಪ್ರಯಾಣಿಕರ ಸುರಕ್ಷತೆಗಾಗಿ ಹೊಸ ಪಂಚ್ ಕಾರಿಗೆ 5 ಅಂಕಗಳನ್ನು ನೀಡಲಾಗಿದ್ದು, ಮಕ್ಕಳ ಸುರಕ್ಷತೆಗಾಗಿ 4 ಅಂಕಗಳನ್ನು ನೀಡಲಾಗಿದೆ. ಮಕ್ಕಳ ಸುರಕ್ಷತೆಗಾಗಿ ಹೊಸ ಕಾರಿನಲ್ಲಿ ಇನ್ನು ಕೆಲವು ಸುರಕ್ಷಾ ಸೌಲಭ್ಯಗಳನ್ನು ಅಳವಡಿಸಕೊಳ್ಳಬೇಕಿದ್ದು, ವಯಸ್ಕ ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆಯನ್ನು ಖಾತ್ರಿಪಡಿಸಿರುವುದು ಕಾರು ಮಾರಾಟ ಹೆಚ್ಚಳಕ್ಕೆ ಸಹಕಾರಿಯಾಗಲಿದೆ.

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ 2021ರ ಹೊಸ ಕಾರುಗಳು!

2021ರ ಟಾಟಾ ಟಿಗೋರ್ ಇವಿ

ಗ್ಲೋಬಲ್ ಎನ್‌ಸಿಎಪಿ ಸಂಸ್ಥೆಯು ಟಾಟಾ ಹೊಸ ಟಿಗೋರ್ ಇವಿ ಕಾರು ಮಾದರಿಗೆ ಗರಿಷ್ಠ 4 ಸ್ಟಾರ್ ಸೇಫ್ಟಿ ರೇಟಿಂಗ್ಸ್ ನೀಡಿದ್ದು, ಹೊಸ ಕಾರು ಮಾದರಿಯು ವಯಸ್ಕ ಪ್ರಯಾಣಿಕರ ಸುರಕ್ಷತೆಯಲ್ಲಿ 17 ಅಂಕಗಳಿಗೆ 12 ಅಂಕಗಳನ್ನು ಮತ್ತು ಮಕ್ಕಳ ಸುರಕ್ಷತೆಗಾಗಿ 49 ಅಂಕಗಳಲ್ಲಿ 37.24 ಅಂಕ ಗಳಿಸಿದೆ.

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ 2021ರ ಹೊಸ ಕಾರುಗಳು!

ಪ್ರತಿ ಚಾರ್ಜ್‌ಗೆ ಗರಿಷ್ಠ 306 ಕಿ.ಮೀ ಮೈಲೇಜ್ ಹಿಂದಿರುಗಿಸುವ ಹೊಸ ಕಾರಿನಲ್ಲಿ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಪ್ರೀಮಿಯಂ ಫೀಚರ್ಸ್‌‌ನೊಂದಿಗೆ ರಿಮೋಟ್ ಲಾಕಿಂಗ್, ಡ್ಯುಯಲ್ ಏರ್‌ಬ್ಯಾಗ್, ರಿಯರ್ ಪಾರ್ಕಿಂಗ್ ಸೆನ್ಸಾರ್, ಎಬಿಎಸ್ ಜೊತೆ ಇಬಿಡಿ, ಸ್ಟ್ಯಾಬಿಲಿಟಿ ಕಂಟ್ರೋಲ್, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್ ಮತ್ತು ಸೀಟ್ ಬೆಲ್ಟ್ ರಿಮೆಂಡರ್ ಸೌಲಭ್ಯ ಹೊಂದಿದೆ.

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ 2021ರ ಹೊಸ ಕಾರುಗಳು!

2021ರ ರೆನಾಲ್ಟ್ ಟ್ರೈಬರ್

ಗ್ಲೋಬಲ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಒಟ್ಟು ಐದು ಅಂಕಗಳಿಗೆ ನಾಲ್ಕು ಅಂಕ ಪಡೆದುಕೊಂಡಿರುವ ಟ್ರೈಬರ್ ಮಿನಿ ಎಂಪಿವಿ ಕಾರು ಮಾದರಿಯು ವಯಸ್ಕ ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ಖಾತ್ರಿಪಡಿಸಿದ್ದಲ್ಲಿ ಮಕ್ಕಳ ಸುರಕ್ಷಾ ವಿಚಾರವಾಗಿ ಒಟ್ಟು ಐದು ಅಂಕಗಳಲ್ಲಿ ಮೂರು ಅಂಕಗಳನ್ನು ಪಡೆದುಕೊಂಡಿದೆ.

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ 2021ರ ಹೊಸ ಕಾರುಗಳು!

ರೆನಾಲ್ಟ್ ಟ್ರೈಬರ್ ಕಾರು ಹಲವಾರು ಸ್ಟ್ಯಾಂಡರ್ಡ್ ಸೇಫ್ಟಿ ಫೀಚರ್ಸ್‌ಗಳೊಂದಿಗೆ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಒಟ್ಟು ನಾಲ್ಕು ಅಂಕಗಳೊಂದಿಗೆ ಉತ್ತಮ ಮಾದರಿಯಾಗಿ ಹೊರಹೊಮ್ಮಿದ್ದು, ಟ್ರೈಬರ್ ಕಾರು ಗ್ರಾಹಕರ ಬೇಡಿಕೆಯೆಂತೆ ಆರ್‌ಎಕ್ಸ್ಇ, ಆರ್‌ಎಕ್ಸ್ಎಲ್, ಆರ್‍ಎಕ್ಸ್‌ಟಿ, ಆರ್‌ಎಕ್ಸ್‌ಜೆಡ್ ಆವೃತ್ತಿಗಳೊಂದಿಗೆ ಉತ್ತಮ ಸೇಫ್ಟಿ ಫೀಚರ್ಸ್ ಹೊಂದಿದೆ.

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ 2021ರ ಹೊಸ ಕಾರುಗಳು!

ಫೋಕ್ಸ್‌ವ್ಯಾಗನ್ ಪೊಲೊ

ಸುರಕ್ಷಿತ ಕಾರುಗಳ ಪಟ್ಟಿಯಲ್ಲಿ 2021ರ ಫೋಕ್ಸ್‌ವ್ಯಾಗನ್ ಪೊಲೊ ಹ್ಯಾಚ್‌ಬ್ಯಾಕ್ ಕೂಡಾ ಒಂದಾಗಿದ್ದು, ಪ್ರಯಾಣಿಕರ ಸುರಕ್ಷತೆಯಲ್ಲಿ ಈ ಕಾರು 4 ಸ್ಟಾರ್ ರೇಟಿಂಗ್ಸ್ ಪಡೆದುಕೊಂಡಿವೆ.

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ 2021ರ ಹೊಸ ಕಾರುಗಳು!

ಕಳೆದ ಒಂದು ದಶಕದ ಅವಧಿಯಲ್ಲಿ ಪ್ರಯಾಣಿಕ ಕಾರುಗಳಲ್ಲಿ ಹಲವಾರು ಸುರಕ್ಷಾ ಮಾನದಂಡಗಳು ಸಾಕಷ್ಟು ಸುಧಾರಣೆಗೊಂಡಿದ್ದು, ಹೊಸ ವಾಹನಗಳಲ್ಲಿ ಗರಿಷ್ಠ ಸುರಕ್ಷತೆಗಾಗಿ ಅಂತರ್‌ರಾಷ್ಟ್ರೀಯ ಮಾನದಂಡಗಳನ್ನು ಅಳವಡಿಸಿಕೊಳ್ಳಲಾಗುತ್ತಿದೆ.

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ 2021ರ ಹೊಸ ಕಾರುಗಳು!

ಪ್ರಸ್ತುತ ಮಾರುಕಟ್ಟೆಯಲ್ಲಿ ಬೆಲೆ ಆಧಾರದ ಮೇಲೆ ಅತ್ಯುತ್ತಮ ಸುರಕ್ಷಾ ಫೀಚರ್ಸ್ ಹೊಂದಿರುವ ಹಲವಾರು ಪ್ರಯಾಣಿಕ ಬಳಕೆಯ ವಾಹನಗಳು ಖರೀದಿಗೆ ಲಭ್ಯವಿದ್ದರೂ ಎಂಟ್ರಿ ಲೆವಲ್ ಮತ್ತು ಮಧ್ಯಮ ಗಾತ್ರದ ಕೆಲವು ವಾಹನಗಳಲ್ಲಿ ಪ್ರಯಾಣಿಕರ ಸುರಕ್ಷತೆಯನ್ನು ಕಡೆಗಣಿಸಿರುವುದು ದುರದೃಷ್ಟಕರ.

Article Published On: Monday, December 20, 2021, 20:10 [IST]
English summary
Top 5 2021 safest cars in india rated by global ncap
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+