ವಿಶ್ವದಾದ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುವ ಟಾಪ್ 5 ಕಾರುಗಳಿವು

2020ರಲ್ಲಿ ಹೆಚ್ಚು ಮಾರಾಟವಾದ ಕಾರುಗಳ ಬಗೆಗಿನ ಅಂಕಿ ಅಂಶಗಳು ಹೊರ ಬರುತ್ತಿವೆ. ಈ ಅಂಕಿ ಅಂಶಗಳ ಪ್ರಕಾರ ಟೊಯೊಟಾ ಕಂಪನಿಯ ಕಾರುಗಳು ವಿಶ್ವದಾದ್ಯಂತ ಹೆಚ್ಚು ಮಾರಾಟವಾದ ಕಾರುಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿವೆ.

ವಿಶ್ವದಾದ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುವ ಟಾಪ್ 5 ಕಾರುಗಳಿವು

ಈ ಸಂದರ್ಭದಲ್ಲಿ ವಿಶ್ವದಲ್ಲಿ ಹೆಚ್ಚು ಮಾರಾಟವಾದ ಎಲೆಕ್ಟ್ರಿಕ್ ಕಾರುಗಳ ಬಗೆಗಿನ ಮಾಹಿತಿಯನ್ನು ಸಹ ಬಿಡುಗಡೆಗೊಳಿಸಲಾಗಿದೆ. ಅಮೆರಿಕಾ ಮೂಲದ ಟೆಸ್ಲಾ ಕಂಪನಿಯ ಎಲೆಕ್ಟ್ರಿಕ್ ಕಾರುಗಳು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿವೆ. ಮಾಡೆಲ್ 3 ಕಂಪನಿಯ ಅತ್ಯಂತ ಜನಪ್ರಿಯ ಎಲೆಕ್ಟ್ರಿಕ್ ಕಾರುಗಳಲ್ಲಿ ಒಂದಾಗಿದೆ. ಈ ಕಾರಿನ ಮಾರಾಟದ ಮೂಲಕವೇ ಕಂಪನಿಯು ಅಗ್ರಸ್ಥಾನದಲ್ಲಿದೆ.

ವಿಶ್ವದಾದ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುವ ಟಾಪ್ 5 ಕಾರುಗಳಿವು

ಟೆಸ್ಲಾ ಮಾಡೆಲ್ 3, ಕೈಗೆಟುಕುವ ಬೆಲೆಯನ್ನು ಹೊಂದಿರುವ ಸೂಪರ್ ಫೀಚರ್ ಎಲೆಕ್ಟ್ರಿಕ್ ಕಾರ್ ಆಗಿದೆ. ಈ ಕಾರಣದಿಂದಾಗಿಯೇ ಈ ಕಾರು ವಿಶ್ವದಾದ್ಯಂತ ಜನಪ್ರಿಯತೆಯನ್ನು ಗಳಿಸುತ್ತಿದೆ. 2020ರಲ್ಲಿ ಟೆಸ್ಲಾ ಮಾಡೆಲ್ 3 ಎಲೆಕ್ಟ್ರಿಕ್ ಕಾರಿನ 3,65,240 ಯುನಿಟ್'ಗಳು ಮಾರಾಟವಾಗಿವೆ.

MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ವಿಶ್ವದಾದ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುವ ಟಾಪ್ 5 ಕಾರುಗಳಿವು

ಈ ಪ್ರಮಾಣವು ಒಟ್ಟಾರೆ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ 12%ನಷ್ಟಿದೆ. ಟೆಸ್ಲಾ ಮಾಡೆಲ್ 3 ಕಾರಿನ ನಂತರ ಉಲಿಂಗ್ ಹಹುವಾಂಗ್ ಮಿನಿ ಎಲೆಕ್ಟ್ರಿಕ್ ಕಾರು ಎರಡನೇ ಸ್ಥಾನದಲ್ಲಿದೆ. ಈ ಕಾರು ಚೀನಾ ದೇಶದಲ್ಲಿ ಹೆಚ್ಚು ಜನಪ್ರಿಯವಾಗಿದೆ.

ವಿಶ್ವದಾದ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುವ ಟಾಪ್ 5 ಕಾರುಗಳಿವು

ಕಳೆದ ವರ್ಷ ಈ ಎಲೆಕ್ಟ್ರಿಕ್ ಕಾರಿನ ಒಟ್ಟು 119,255 ಯುನಿಟ್'ಗಳು ಮಾರಾಟವಾಗಿವೆ. ಮೂರನೇ ಸ್ಥಾನದಲ್ಲಿರುವ ರೆನಾಲ್ಟ್ ಜೋಯಿ ಎಲೆಕ್ಟ್ರಿಕ್ ಕಾರಿನ ಒಟ್ಟು 1,00,431 ಯುನಿಟ್‌ಗಳು 2020ರಲ್ಲಿ ಮಾರಾಟವಾಗಿವೆ.

MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ವಿಶ್ವದಾದ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುವ ಟಾಪ್ 5 ಕಾರುಗಳಿವು

ಟೆಸ್ಲಾ ಕಂಪನಿಯ ಮಾಡೆಲ್ ವೈ ಎಲೆಕ್ಟ್ರಿಕ್ ಕಾರು ನಾಲ್ಕನೇ ಸ್ಥಾನದಲ್ಲಿದ್ದರೆ, ಹ್ಯುಂಡೈ ಕೋನಾ ಎಲೆಕ್ಟ್ರಿಕ್ ಕಾರು ಐದನೇ ಸ್ಥಾನದಲ್ಲಿದೆ. ಟೆಸ್ಲಾ ಮಾಡೆಲ್ ವೈ ಕಾರಿನ 79,734 ಯುನಿಟ್'ಗಳು ಮಾರಾಟವಾಗಿವೆ.

ವಿಶ್ವದಾದ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುವ ಟಾಪ್ 5 ಕಾರುಗಳಿವು

ಐದನೇ ಸ್ಥಾನದಲ್ಲಿರುವ ಹ್ಯುಂಡೈ ಕೋನಾ ಎಲೆಕ್ಟ್ರಿಕ್ ಕಾರಿನ 65,075 ಯುನಿಟ್'ಗಳು ಮಾರಾಟವಾಗಿವೆ. ವಿಶ್ವಾದ್ಯಂತ ಹೆಚ್ಚು ಮಾರಾಟವಾಗುವ ಐದು ಎಲೆಕ್ಟ್ರಿಕ್ ಕಾರುಗಳು ಇವು. ಇತ್ತೀಚಿನ ದಿನಗಳಲ್ಲಿ ಎಲೆಕ್ಟ್ರಿಕ್ ಕಾರುಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ.

MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ವಿಶ್ವದಾದ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುವ ಟಾಪ್ 5 ಕಾರುಗಳಿವು

ಎಲೆಕ್ಟ್ರಿಕ್ ಕಾರುಗಳ ಮಾರಾಟವು 2019ಕ್ಕೆ ಹೋಲಿಸಿದರೆ 2020ರಲ್ಲಿ ಗಮನಾರ್ಹವಾಗಿ ಬೆಳೆದಿದೆ ಎಂಬುದು ಈ ಅಂಕಿ ಅಂಶಗಳಿಂದ ಸ್ಪಷ್ಟವಾಗಿದೆ. ಎಲೆಕ್ಟ್ರಿಕ್ ಕಾರುಗಳು ಪರಿಸರ ಸ್ನೇಹಿಯಾಗಿರುವುದರ ಜೊತೆಗೆ ಪೆಟ್ರೋಲ್, ಡೀಸೆಲ್ ಮೇಲೆ ಅವಲಂಬಿತವಾಗುವುದನ್ನು ತಪ್ಪಿಸುತ್ತವೆ.

Most Read Articles

Kannada
English summary
Top 5 best selling electric cars worldwide in 2020. Read in Kannada.
Story first published: Saturday, February 6, 2021, 9:57 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X