Just In
- 2 hrs ago
ಹೊಸ ರೂಪದೊಂದಿಗೆ ರಸ್ತೆಗಿಳಿಯಲಿವೆ ತೆರೆಮರೆಗೆ ಸರಿದ ಜಟಕಾ ಬಂಡಿ
- 3 hrs ago
ಫೆಬ್ರವರಿ ತಿಂಗಳಿನಲ್ಲಿ 12 ಸಾವಿರಕ್ಕೂ ಹೆಚ್ಚು ಎಂಪಿವಿಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ
- 4 hrs ago
ಸಿಎನ್ಜಿ ವರ್ಷನ್ನಲ್ಲೂ ಬಿಡುಗಡೆಯಾಗಲಿದೆ ಸ್ಕೋಡಾ ರ್ಯಾಪಿಡ್ ಸೆಡಾನ್
- 4 hrs ago
ಸ್ಕ್ರ್ಯಾಪೇಜ್ ನೀತಿ ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಸಿಹಿಸುದ್ದಿ ನೀಡಿದ ಕೇಂದ್ರ ಸರ್ಕಾರ
Don't Miss!
- News
ಪೆಟ್ರೋಲ್, ಡೀಸೆಲ್ ದರ ಏರಿಕೆ: ಕೇಂದ್ರಕ್ಕೆ ಬಿಸಿ ಮುಟ್ಟಿಸಿದ ಮಲ್ಲಿಕಾರ್ಜುನ್ ಖರ್ಗೆ
- Movies
ಬಿಗ್ಬಾಸ್: ಪ್ರಶಾಂತ್ ಸಂಬರ್ಗಿ ಮೇಲೆ ಉರಿದು ಬಿದ್ದ ಮನೆ ಸದಸ್ಯರು
- Education
UAS Dharwad Recruitment 2021: ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಮಾ.10ಕ್ಕೆ ನೇರ ಸಂದರ್ಶನ
- Sports
ಐಎಸ್ಎಲ್: ಫೈನಲ್ಗಾಗಿ ನಾರ್ಥ್ ಈಸ್ಟ್, ಬಾಗನ್ ನಡುವೆ ಫೈನಲ್ ಫೈಟ್
- Lifestyle
ಮಾ.11ಕ್ಕೆ ಕುಂಭ ರಾಶಿಗೆ ಬುಧನ ಪ್ರವೇಶ: ನಿಮ್ಮ ಬದುಕಿನಲ್ಲಿ ಆಗಲಿದೆ ಈ ಬದಲಾವಣೆ
- Finance
ಅಡಿಕೆ, ಕಾಫೀ, ಮೆಣಸು ಹಾಗೂ ರಬ್ಬರ್ನ ಮಾ. 08ರ ಮಾರುಕಟ್ಟೆ ದರ ಇಲ್ಲಿದೆ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಇದೇ ತಿಂಗಳಾಂತ್ಯಕ್ಕೆ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳಿವು..
ಕೋವಿಡ್ 19 ಪರಿಣಾಮ ತಗ್ಗಿದ್ದ ಹೊಸ ವಾಹನಗಳ ಮಾರಾಟವು ಇದೀಗ ಸುಧಾರಣೆ ಕಂಡಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿರುವ ವಾಹನಗಳ ಮಾರಾಟದ ಜೊತೆಗೆ ಹೊಸ ವಾಹನಗಳ ಬಿಡುಗಡೆ ಪ್ರಕ್ರಿಯೆ ಕೂಡಾ ಜೋರಾಗಿದೆ.

ಸತತ ಆರ್ಥಿಕ ಹಿಂಜರಿತ ಮತ್ತು ಕೋವಿಡ್ 19 ಪರಿಣಾಮ ವಾಹನಗಳ ಬಿಡುಗಡೆ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಮುಂದೂಡಿದ್ದ ಹಲವು ಆಟೋ ಉತ್ಪಾದನಾ ಕಂಪನಿಗಳು ಇದೀಗ ಬಿಡುಗಡೆಗೆ ಪ್ರಕ್ರಿಯೆಯನ್ನು ತೀವ್ರಗೊಳಿಸಿದ್ದು, ಹಲವು ಹೊಸ ವಾಹನ ಮಾದರಿಗಳು ಮಾರುಕಟ್ಟೆ ಪ್ರವೇಶಿಸುತ್ತಿವೆ. ಹಾಗಾದ್ರೆ ಜನವರಿ ತಿಂಗಳಿನಲ್ಲಿ ಬಿಡುಗಡೆಗಾಗಿ ಸಿದ್ದವಾಗಿರುವ ಪ್ರಮುಖ ಕಾರು ಮಾದರಿಗಳ ಮಾಹಿತಿಯನ್ನು ಇಲ್ಲಿ ತಿಳಿಯೋಣ.

ಟಾಟಾ ಆಲ್‌ಟ್ರೊಜ್ ಐಟರ್ಬೊ
ಆಲ್‌ಟ್ರೊಜ್ ಹ್ಯಾಚ್‌ಬ್ಯಾಕ್ ಕಾರು ಮಾದರಿಯಲ್ಲಿ ಹೊಸದಾಗಿ ಪೆಟ್ರೋಲ್ ಐಟರ್ಬೋ ಆವೃತ್ತಿಯನ್ನು ಬಿಡುಗಡೆ ಮಾಡಲು ಅಂತಿಮ ಸಿದ್ದತೆಯಲ್ಲಿರುವ ಟಾಟಾ ಮೋಟಾರ್ಸ್ ಕಂಪನಿಯು ಹೊಸ ಕಾರಿನ ಉತ್ಪಾದನಾ ಮಾದರಿಯನ್ನು ಅನಾವರಣಗೊಳಿಸಿದೆ.

ಐಟರ್ಬೋ ಮಾದರಿಯನ್ನು ಅನಾವರಣಗೊಳಿಸುವ ಮೂಲಕ ಬುಕ್ಕಿಂಗ್ ಪ್ರಕ್ರಿಯೆಯನ್ನು ಆರಂಭಿಸಿರುವ ಟಾಟಾ ಕಂಪನಿಯು ಇದೇ ತಿಂಗಳು 22ರಂದು ಅಧಿಕೃತವಾಗಿ ಬಿಡುಗಡೆಗೊಳಿಸಲಿದ್ದು, ಹೊಸ ಐ-ಟರ್ಬೋ ಆಲ್‌ಟ್ರೊಜ್ ಕಾರು ಮಾದರಿಯು ಆಕರ್ಷಕ ಬೆಲೆಯೊಂದಿಗೆ ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಉತ್ತಮ ಪರ್ಫಾಮೆನ್ಸ್ ಮತ್ತು ವಿವಿಧ ಹೊಸ ತಾಂತ್ರಿಕ ಅಂಶಗಳನ್ನು ಹೊಂದಿರಲಿದೆ.

ಹೊಸ ಟಾಟಾ ಆಲ್‌ಟ್ರೊಜ್ ಐಟರ್ಬೋ ಪೆಟ್ರೋಲ್ ಆವೃತ್ತಿಯಲ್ಲಿ 1.2-ಲೀಟರ್ ಟರ್ಬೋ-ಪೆಟ್ರೋಲ್ ಎಂಜಿನ್ ಅನ್ನು ಬಿಡುಗಡೆ ಮಾಡಲಾಗುತ್ತಿದ್ದು, ಗರಿಷ್ಠ 108-ಬಿಹೆಚ್‍ಪಿ ಮತ್ತು 140-ಎನ್ಎಂ ಟಾರ್ಕ್ ಅನ್ನು ಉತ್ಪಾದಿಸಲಾಗುತ್ತದೆ. ಆಲ್‌ಟ್ರೊಜ್ ಐಟರ್ಬೊ ಪೆಟ್ರೋಲ್ ಆವೃತ್ತಿಯು ಪ್ರಮುಖ ಮೂರು ವೆರಿಯೆಂಟ್‌ಗಳಲ್ಲಿ ಲಭ್ಯವಿರಲಿದ್ದು, ಹಾರ್ಬಲ್ ಬ್ಲ್ಯೂ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯೊಂದಿಗೆ ಅತ್ಯುತ್ತಮ ಲೆದರ್ ಆಸನಗಳು, ಕನೆಕ್ಟೆಡ್ ಟೆಕ್ನಾಲಜಿ, ಐರಾ ವಾಯ್ಸ್ ಅಸಿಸ್ಟಂಟ್, ಬ್ಲ್ಯಾಕ್ ಆ್ಯಂಡ್ ಗ್ರೆ ಇಂಟಿರಿಯರ್ ಮತ್ತು ಎಕ್ಸ್‌ಪ್ರೆಸ್ ಕೂಲ್ ಸೌಲಭ್ಯ ಪಡೆದುಕೊಂಡಿದೆ.

ಟಾಟಾ ಸಫಾರಿ ಎಸ್‌ಯುವಿ
ಜನವರಿ 26ರಂದು ಅನಾವರಣಗೊಳ್ಳಲಿರುವ ಹೊಸ ತಲೆಮಾರಿನ ಸಫಾರಿ ಎಸ್‌ಯುವಿ ಕಾರು ಮಾದರಿಯ ಉತ್ಪಾದನಾ ಪ್ರಕ್ರಿಯೆಗೆ ಟಾಟಾ ಮೋಟಾರ್ಸ್ ಕಂಪನಿಯು ಪುಣೆಯ ಚಾಕನ್ ಘಟಕದಲ್ಲಿ ಅಧಿಕೃತ ಚಾಲನೆ ನೀಡಿದ್ದು, ಹೊಸ ಕಾರು ದೇಶಿಯ ಮಾರುಕಟ್ಟೆಯಲ್ಲಿನ ಎಸ್‌ಯುವಿ ಮಾರಾಟದಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

2020ರ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನಗೊಂಡಿದ್ದ ಗ್ರಾವಿಟಾಸ್ ಎಸ್‌ಯುವಿ ಮಾದರಿಯನ್ನೇ ಇದೀಗ ಸಫಾರಿ ಹೆಸರಿನೊಂದಿಗೆ ರೀ ಬ್ರಾಂಡ್ ಮಾದರಿಯಾಗಿ ರಸ್ತೆಗಿಳಿಸಲಾಗುತ್ತಿದ್ದು, ಎಸ್‌ಯುವಿ ಕಾರು ಮಾರಾಟದಲ್ಲಿ ತನ್ನದೆ ಜನಪ್ರಿಯತೆ ಹೊಂದಿದ್ದ ಸಫಾರಿ ಕಾರು ಮಾದರಿಯನ್ನೇ ಇದೀಗ ಹೊಸ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆ ಮಾಡಲಾಗುತ್ತಿದೆ. ಅನಾವರಣಗೊಂಡ ನಂತರ ಕೆಲವೇ ದಿನಗಳಲ್ಲಿ ಬಿಡುಗಡೆಯಾಗಲಿರುವ ಹೊಸ ಸಫಾರಿ ಕಾರು 2.0-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಹ್ಯಾರಿಯರ್ ಮಾದರಿಗಿಂತಲೂ ತುಸು ದುಬಾರಿ ಬೆಲೆ ಹೊಂದಿರಲಿದೆ.

ರೆನಾಲ್ಟ್ ಕಿಗರ್
ರೆನಾಲ್ಟ್ ಇಂಡಿಯಾ ಕಂಪನಿಯು ನಿಸ್ಸಾನ್ ಮಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಯಶಸ್ವಿ ನಂತರ ಕಿಗರ್ ಕಾರಿನ ಬಿಡುಗಡೆಗೆ ಅಂತಿಮ ಹಂತದ ಸಿದ್ದತೆ ನಡೆಸಿದ್ದು, ಹೊಸ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಇದೇ ತಿಂಗಳು 28ರಂದು ಉತ್ಪಾದನಾ ಮಾದರಿಯೊಂದಿಗೆ ಅನಾವರಣಗೊಳ್ಳಲಿದೆ.

ಹೊಸ ಕಾರು ಮಾದರಿಗಳನ್ನು ಒಂದೇ ಪ್ಲ್ಯಾಟ್‌ಫಾರ್ಮ್ ಅಡಿ ಅಭಿವೃದ್ದಿಗೊಳಿಸುತ್ತಿರುವ ರೆನಾಲ್ಟ್ ಮತ್ತು ನಿಸ್ಸಾನ್ ಕಂಪನಿಗಳು ದೇಶಿಯ ಮಾರುಕಟ್ಟೆಯಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ನಿಸ್ಸಾನ್ ಮ್ಯಾಗ್ನೈಟ್ ನಂತರ ರೆನಾಲ್ಟ್ ಕಿಗರ್ ಕಾರು ಕೂಡಾ ಭರ್ಜರಿ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ. ಸದ್ಯ ಕಾನ್ಸೆಪ್ಟ್ ಮಾದರಿಯಲ್ಲಿ ಅನಾವರಣಗೊಂಡಿರುವ ಕಿಗರ್ ಕಾರು ಶೀಘ್ರದಲ್ಲೇ ಉತ್ಪಾದನಾ ಮಾದರಿಯೊಂದಿಗೆ ಅನಾವರಣಗೊಳ್ಳುತ್ತಿದ್ದು, ಕಾನ್ಸೆಪ್ಟ್ ಮಾದರಿಯಲ್ಲೇ ಉತ್ಪಾದನಾ ಆವೃತ್ತಿಯು ಕೂಡಾ ಅಭಿವೃದ್ದಿಗೊಳ್ಳುವ ಸುಳಿವು ನೀಡಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ವಿಭಿನ್ನವಾದ ಹೊರ ವಿನ್ಯಾಸಗಳನ್ನು ಹೊಂದಿರುವ ಮ್ಯಾಗ್ನೈಟ್ ಮತ್ತು ಕಿಗರ್ ಕಾರುಗಳು ಒಂದೇ ಮಾದರಿಯು ತಾಂತ್ರಿಕ ಅಂಶಗಳು ಮತ್ತು ಎಂಜಿನ್ ಆಯ್ಕೆ ಪಡೆದುಕೊಂಡಿದ್ದರೂ ಪ್ರತ್ಯೇಕ ಮಾರಾಟ ಸೌಲಭ್ಯದೊಂದಿಗೆ ಗ್ರಾಹಕರನ್ನು ಸೆಳೆಯಲಿವೆ.

ಜೀಪ್ ಕಂಪಾಸ್ ಫೇಸ್‌ಲಿಫ್ಟ್
ಜೀಪ್ ಇಂಡಿಯಾ ಕಂಪನಿಯು ತನ್ನ ಹೊಸ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದ್ದು, ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯನ್ನು ಇದೇ ತಿಂಗಳು 27ರಂದು ಬಿಡುಗಡೆ ಮಾಡಲು ಸಿದ್ದತೆ ನಡೆಸಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಭಾರತದಲ್ಲಿ ಜೀಪ್ ಕಂಪಾಸ್ ಬಿಡುಗಡೆಯಾದ ಮೂರು ವರ್ಷಗಳ ನಂತರ ಮೊದಲ ಬಾರಿಗೆ ಹೊಸ ಕಾರಿನಲ್ಲಿ ನವೀಕರಣ ತರುತ್ತಿರುವ ಕಂಪನಿಯು ಹೊಸ ಕಾರಿನ ಮೂಲಕ ಎಸ್‌ಯುವಿ ಕಾರು ಮಾರಾಟದಲ್ಲಿ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಸ್ಕೋಡಾ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ
ಸ್ಕೋಡಾ ಆಟೋ ಇಂಡಿಯಾ ಕಂಪನಿಯು ವಿಷನ್ ಇನ್ ಕಾನ್ಸೆಪ್ಟ್ ಮಾದರಿಯನ್ನು 2020ರ ಆಟೋ ಎಕ್ಸ್ ಪೋದಲ್ಲಿ ಮೊದಲ ಬಾರಿಗೆ ಅನಾವರಣಗೊಳಿಸಿತ್ತು. ಹೊಸ ಕಾನ್ಸೆಪ್ಟ್ ಕಂಪ್ಯಾಕ್ಟ್ ಎಸ್‍ಯುವಿಯನ್ನು ಇದೀಗ ಬಿಡುಗಡೆಗೊಳಿಸಲು ಸಜ್ಜಾಗಿರುವ ಸ್ಕೋಡಾ ಕಂಪನಿಯು ಹೊಸ ಕಾರನ್ನು ಕುಶಾಕ್ ಹೆಸರಿನೊಂದಿಗೆ ಬಿಡುಗಡೆ ಮಾಡುವ ಸುಳಿವು ನೀಡಿದೆ.

ಹೊಸ ಕಾರಿನಲ್ಲಿ ಸಾಮಾನ್ಯ ಮಾದರಿಯು 1.5-ಲೀಟರ್ ಪೆಟ್ರೋಲ್ ಎಂಜಿನ್ ಜೊತೆಗೆ ಟರ್ಬೋ ಮಾದರಿಯು 1.-0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಪರಿಚಯಿಸುವ ಸಾಧ್ಯತೆಗಳಿವೆ. ಹೊಸ ಕಾರು ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದ್ದು, ಹೊಸ ಕಾರು ಇದೇ ತಿಂಗಳಾಂತ್ಯಕ್ಕೆ ಉತ್ಪಾದನಾ ಮಾದರಿಯೊಂದಿಗೆ ಅನಾವರಣಗೊಳ್ಳಲಿದೆ ಎನ್ನಲಾಗಿದೆ.