ಏಪ್ರಿಲ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳಿವು!

ದೇಶಿಯ ಮಾರುಕಟ್ಟೆಯಲ್ಲಿ ಕರೋನಾ ವೈರಸ್ ಪರಿಣಾಮ ಭಾರೀ ಕುಸಿತ ಕಂಡಿದ್ದ ಆಟೋ ಉದ್ಯಮವು ಇದೀಗ ನೀರಿಕ್ಷೆಗೂ ಮೀರಿ ಬೆಳವಣಿಗೆ ಸಾಧಿಸುತ್ತಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿರುವ ವಾಹನಗಳ ಜೊತೆಗೆ ಹೊಸದಾಗಿ ಬಿಡುಗಡೆಯಾಗುತ್ತಿರುವ ವಾಹನಗಳಿಗೂ ಭಾರೀ ಬೇಡಿಕೆ ಸಲ್ಲಿಕೆಯಾಗಿರುವುದು ಆಟೋ ಉದ್ಯಮದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದೆ.

ಏಪ್ರಿಲ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳಿವು!

ಕೋವಿಡ್ ಪರಿಣಾಮ ಸತತ ನಷ್ಟ ಅನುಭವಿಸಿದ್ದರಿಂದ ಹೊಸ ವಾಹನಗಳ ಬಿಡುಗಡೆ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಿದ್ದ ಆಟೋ ಕಂಪನಿಗಳು ಇದೀಗ ವಾಹನ ಬಿಡುಗಡೆ ಪ್ರಕ್ರಿಯೆಯನ್ನು ತೀವ್ರಗೊಳಿಸಿದ್ದು, 2021ರ ಅವಧಿಯಲ್ಲಿ ವಿವಿಧ ಕಂಪನಿಗಳು ಹತ್ತಾರು ಹೊಸ ವಾಹನಗಳನ್ನು ಬಿಡುಗಡೆಗೆ ಸಿದ್ದವಾಗಿವೆ. ಬಿಡುಗಡೆಯಾಗಲಿರುವ ಹೊಸ ವಾಹನಗಳಲ್ಲಿ ಎಸ್‌ಯುವಿ ಕಾರು ಮಾದರಿಗಳು ಸಹ ಭಾರೀ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದ್ದು, ಏಪ್ರಿಲ್ ಅವಧಿಯಲ್ಲಿ ಬಿಡುಗಡೆಯಾಗಲಿರುವ ಪ್ರಮುಖ ಐದು ಕಾರುಗಳ ಮಾಹಿತಿ ಇಲ್ಲಿದೆ.

ಏಪ್ರಿಲ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳಿವು!

ಸಿಟ್ರನ್ ಸಿ5 ಏರ್‌ಕ್ರಾಸ್

ಸಿಟ್ರನ್ ಇಂಡಿಯಾ ಕಂಪನಿಯು ತನ್ನ ಹೊಚ್ಚ ಹೊಸ ಸಿ5 ಏರ್‌ಕ್ರಾಸ್ ಮಾದರಿಯೊಂದಿಗೆ ದೇಶಿಯ ಮಾರುಕಟ್ಟೆಯನ್ನು ಏಪ್ರಿಲ್ 7ರಂದು ಅಧಿಕೃತವಾಗಿ ಪ್ರವೇಶಿಸುತ್ತಿದ್ದು, ಹೊಸ ಕಾರು ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರುಗಳಲ್ಲೇ ಅತ್ಯುತ್ತಮ ಫೀಚರ್ಸ್ ಹೊಂದಿದೆ. ಹೊಸ ಕಾರಿನಲ್ಲಿ 2.0-ಲೀಟರ್(1,997ಸಿಸಿ) ಡೀಸೆಲ್ ಎಂಜಿನ್ ಆಯ್ಕೆಯನ್ನು ಮಾತ್ರವೇ ಖರೀದಿಗೆ ಲಭ್ಯಲಿದೆ.

ಏಪ್ರಿಲ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳಿವು!

ಸಿ5 ಏರ್‌ಕ್ರಾಸ್ ಕಾರು 4,500 ಎಂಎಂ ಉದ್ದ, 2,099 ಎಂಎಂ ಅಗಲ, 1,710 ಎಂಎಂ ಎತ್ತರ ಮತ್ತು 2,730 ಎಂಎಂ ವೀಲ್ಹ್‌ಬೆಸ್‌ನೊಂದಿಗೆ ಪ್ರತಿಸ್ಪರ್ಧಿ ಕಾರುಗಳಿಂತಲೂ ಅತ್ಯುತ್ತಮ ಒಳಾಂಗಣ ವಿನ್ಯಾಸ ಹೊಂದಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 25 ಲಕ್ಷದಿಂದ ರೂ. 28 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳುವ ಸಾಧ್ಯತೆಗಳಿವೆ.

ಏಪ್ರಿಲ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳಿವು!

ಹೊಸ ಕಾರಿನಲ್ಲಿ ಡ್ಯುಯಲ್ ಹೆಡ್‌ಲ್ಯಾಂಪ್ ಸೆಟ್ಅಪ್, ಫ್ರಂಟ್ ಗ್ರಿಲ್‌ಗೆ ಹೊಂದಿಕೊಂಡಿರುವ ಸ್ಲಿಕ್ ವಿನ್ಯಾಸದ ಎಲ್ಇಡಿ ಡಿಆರ್‌ಎಲ್ಎಸ್, 18-ಇಂಚಿನ ಡ್ಯುಯಲ್ ಟೋನ್ ಅಲಾಯ್ ವೀಲ್ಹ್, 12.3 ಇಂಚಿನ ಡಿಜಿಟಲ್ ಇನ್‌ಸ್ಟ್ರಮೆಂಟ್ ಕ್ಲಸ್ಟರ್, ಪನೊರಮಿಕ್ ಸನ್‌ರೂಫ್, ಡ್ಯುಯಯಲ್ ಜೋನ್ ಆಟೋ ಕ್ಲೈಮೆಟ್ ಕಂಟ್ರೋಲ್ ಸಿಸ್ಟಂ ಸೇರಿದಂತೆ ಹಲವಾರು ಪ್ರೀಮಿಯಂ ಫೀಚರ್ಸ್‌ಗಳಿವೆ.

ಏಪ್ರಿಲ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳಿವು!

ಕಿಯಾ ಸೆಲ್ಟೊಸ್ ಫೇಸ್‌ಲಿಫ್ಟ್

2019ರ ಮಧ್ಯಂತರದಲ್ಲಿ ಸೆಲ್ಟೊಸ್ ಎಸ್‌ಯುವಿ ಕಾರನ್ನು ಭಾರತದಲ್ಲಿ ಬಿಡುಗಡೆಗೊಳಿಸುವ ಮೂಲಕ ದೇಶಿಯ ಮಾರುಕಟ್ಟೆಯ ಆಟೋ ಉತ್ಪಾದನಾ ವಲಯಕ್ಕೆ ಅಧಿಕೃತವಾಗಿ ಎಂಟ್ರಿ ನೀಡಿದ್ದ ಕಿಯಾ ಮೋಟಾರ್ಸ್ ಕಂಪನಿಯು ಸೆಲ್ಟೊಸ್ ಮೂಲಕ ಭಾರೀ ಜನಪ್ರಿಯತೆ ಗಳಿಸಿದ್ದು, ಕಂಪನಿಯು ಏಪ್ರಿಲ್ ಅಂತ್ಯಕ್ಕೆ ಸೆಲ್ಟೊಸ್ ಫೇಸ್‌ಲಿಫ್ಟ್ ಮಾದರಿಯೊಂದಿಗೆ ಹಲವಾರು ಹೊಸ ಸೌಲಭ್ಯಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದೆ.

ಏಪ್ರಿಲ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳಿವು!

ಸೆಲ್ಟೊಸ್ ಎಸ್‌ಯುವಿ ಬಿಡುಗಡೆಯ ನಂತರ ಕಳೆದ ಒಂದೂವರೆ ವರ್ಷದಲ್ಲಿ ಕಿಯಾ ಮೋಟಾರ್ಸ್ ಕಂಪನಿಯು ಹಲವಾರು ದಾಖಲೆಗಳಿಗೆ ಕಾರಣವಾಗಿದ್ದು, ಶೀಘ್ರದಲ್ಲೇ ಹೆಚ್ಚುವರಿ ಫೀಚರ್ಸ್ ಹೊಂದಿರುವ ಫೇಸ್‌ಲಿಫ್ಟ್ ಮಾದರಿಯನ್ನು ಬಿಡುಗಡೆ ಮಾಡಲಿದೆ.

MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಏಪ್ರಿಲ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳಿವು!

ವಿವಿಧ ಎಂಜಿನ್ ಆಯ್ಕೆಗಳೊಂದಿಗೆ ಹೊಸ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದ್ದು, ಫೇಸ್‌ಲಿಫ್ಟ್ ಮಾದರಿಯು ಹೊಸ ಲೊಗೊ, ಆರಂಭಿಕ ಮಾದರಿಗಳಲ್ಲೂ ಪನೋರಮಿಕ್ ಸನ್‌ರೂಫ್, ಮರು ವಿನ್ಯಾಸಗೊಳಿಸಲಾದ ಗ್ರಿಲ್, ಬ್ಯಾನೆಟ್ ಸೇರಿದಂತೆ ಹಲವಾರು ಬದಲಾವಣೆಗಳನ್ನು ಪಡೆದುಕೊಳ್ಳಲಿದೆ.

ಏಪ್ರಿಲ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳಿವು!

ಫೋಕ್ಸ್‌ವ್ಯಾಗನ್ ಹೊಸ ಟಿ-ರಾಕ್

ಫೋಕ್ಸ್‌ವ್ಯಾಗನ್ ಭಾರತೀಯ ಮಾರುಕಟ್ಟೆಯಲ್ಲಿ ಸದ್ಯ ಹೊಸ ನಾಲ್ಕು ಎಸ್‍ಯುವಿಗಳನ್ನು ಬಿಡುಗಡೆಗೊಳಿಸುವ ಸಿದ್ದತೆಯಲ್ಲಿದ್ದು, ಇದರಲ್ಲಿ 2021ರ ಟಿ-ರಾಕ್ ಮಿಡ್ ಎಸ್‍ಯುವಿಯು ಕೂಡಾ ಒಂದಾಗಿದೆ. ಸಂಪೂರ್ಣವಾಗಿ ವಿದೇಶಿ ಮಾರುಕಟ್ಟೆಯಿಂದಲೇ ಆಮದುಗೊಳ್ಳುವ ಟಿ ರಾಕ್ ಮಾದರಿಯು ಕಳೆದ ವರ್ಷ ಬರೋಬ್ಬರಿ 1 ಸಾವಿರ ಯುನಿಟ್ ಮಾರಾಟಗೊಂಡಿತ್ತು.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಏಪ್ರಿಲ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳಿವು!

ಇದೀಗ ಫೋಕ್ಸ್‌ವ್ಯಾಗನ್ ಕಂಪನಿಯು ಎರಡನೇ ಬ್ಯಾಚ್ ಅನ್ನು ಆಮದುಮಾಡಿಕೊಳ್ಳುತ್ತಿದ್ದು, ಹೊಸ ಬ್ಯಾಚ್‌ನಲ್ಲಿ ಈ ಬಾರಿ 1,500 ಯುನಿಟ್ ಮಾರಾಟ ಮಾಡುವ ಗುರಿಹೊಂದಲಾಗಿದೆ. 148 ಬಿ‍ಹೆಚ್‍ಪಿ ಪ್ರೇರಿತ 1.5-ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿರುವ ಹೊಸ ಕಾರು ತುಸು ದುಬಾರಿ ಎನ್ನಿಸಲಿದ್ದು, 2020ರ ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 19.99 ಲಕ್ಷ ಬೆಲೆ ಹೊಂದಿತ್ತು.

ಏಪ್ರಿಲ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳಿವು!

ಇದೀಗ 2021ರ ಮಾದರಿಯು ತುಸು ದುಬಾರಿಯಾಗುವ ಸಾಧ್ಯತೆಗಳಿದ್ದು, ಪವರ್‌ಫುಲ್ ಎಂಜಿನ್, ಆಕರ್ಷಕ ವಿನ್ಯಾಸ ಮತ್ತು ಐಷಾರಾಮಿ ಸೌಲಭ್ಯಗಳು ಕಾರಿನ ಬೆಲೆ ಹೆಚ್ಚಸುತ್ತವೆ. ಜೊತೆಗೆ ಟಿ ರಾಕ್ ಮಾದರಿಯು ಹೊಸ ಆಮದು ನೀತಿಯಡಿ ಭಾರತಕ್ಕೆ ಸಂಪೂರ್ಣ ಸಿದ್ದ ಮಾದರಿಯಲ್ಲೇ ಬರುವುದರಿಂದಲೇ ತುಸು ದುಬಾರಿಯಾಗಲಿದೆ.

ಏಪ್ರಿಲ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳಿವು!

ಬಿಎಸ್-6 ಇಸುಝು ಡಿ-ಮ್ಯಾಕ್ಸ್ ವಿ-ಕ್ರಾಸ್ ಪಿಕ್ಅಪ್

ಇಸುಝು ಕಂಪನಿಯು ಇದೇ ಏಪ್ರಿಲ್‌ನಲ್ಲಿ ತನ್ನ ಜನಪ್ರಿಯ ಡಿ-ಮ್ಯಾಕ್ಸ್ ವಿ-ಕ್ರಾಸ್ ಪಿಕ್ಅಪ್ ಹೊಸ ಆವೃತ್ತಿಯನ್ನು ಬಿಡುಗಡೆ ಮಾಡಲು ಸಿದ್ದವಾಗುತ್ತಿದ್ದು, ಹೊಸ ಕಾರಿನ ಎಂಜಿನ್ ಕಾರ್ಯಕ್ಷಮತೆ ಕುರಿತಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಏಪ್ರಿಲ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳಿವು!

ಆಟೋ ಉದ್ಯದಲ್ಲಿನ ಏರಿಳಿತದ ಪರಿಣಾಮ ಕಳೆದ ಜೂನ್ ತಿಂಗಳನಲ್ಲೇ ಬಿಡುಗಡೆಯಾಗಬೇಕಿದ್ದ ಬಿಎಸ್-6 ಡಿ-ಕ್ರಾಸ್ ವಿ-ಕ್ರಾಸ್ ಲೈಫ್‌ಸ್ಟೈಲ್ ಪಿಕ್‌ಅಪ್ ಟ್ರಕ್ ಮಾದರಿಯನ್ನು ಇದೀಗ ಬಿಡುಗಡೆಗಾಗಿ ಸಿದ್ದಗೊಳ್ಳುತ್ತಿದ್ದು, ಹೊಸ ಪಿಕ್ಅಪ್ ಮಾದರಿಯು ಹೊಸ ಎಮಿಷನ್ ಪ್ರೇರಿತ ಎಂಜಿನ್ ಜೊತೆಗೆ ಮರುವಿನ್ಯಾಸಗೊಳಿಸಲಾದ ಮುಂಭಾಗದ ಗ್ರಿಲ್, ಟೈಲ್‌ಗೆಟ್, ಇಂಟಿರಿಯರ್ ಬದಲಾವಣೆ ಪಡೆದುಕೊಂಡಿದೆ.

ಏಪ್ರಿಲ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳಿವು!

ಬಿಎಸ್-6 ವಿ-ಕ್ರಾಸ್ ಮಾದರಿಯು ಈ ಬಾರಿ ಬಿಎಸ್-4 ಮಾದರಿಯೆಂತೆ ಎರಡು ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಖರೀದಿಗೆ ಲಭ್ಯವಾಗಲಿದ್ದು, ಗ್ರಾಹಕರ ತಮ್ಮ ಬೇಡಿಕೆಗೆ ಅನುಗುಣವಾಗಿ 1.9-ಲೀಟರ್ ಡೀಸೆಲ್ ಮತ್ತು 2.5-ಲೀಟರ್ ಡೀಸೆಲ್ ಎಂಜಿನ್ ಮಾದರಿಯನ್ನು ಆಯ್ಕೆ ಮಾಡಬಹುದಾಗಿದೆ.

ಏಪ್ರಿಲ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳಿವು!

2021ರ ಸ್ಕೋಡಾ ಆಕ್ಟೀವಿಯಾ

ಸ್ಕೋಡಾ ಇಂಡಿಯಾ ತನ್ನ ನಾಲ್ಕನೇ ತಲೆಮಾರಿನ ಆಕ್ಟೀವಿಯಾ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದ್ದು, ಯುರೋಪ್ ಮಾರುಕಟ್ಟೆಗಳಲ್ಲಿ ಈಗಾಗಲೇ ಈ ನಾಲ್ಕನೇ ತಲೆಮಾರಿನ ಆಕ್ಟೀವಿಯಾ ಕಾರು ಮಾರಾಟವಾಗುತ್ತಿದೆ.

ಏಪ್ರಿಲ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳಿವು!

ಈ ಹಿಂದಿನ ತಲೆಮಾರಿನ ಸ್ಕೋಡಾ ಆಕ್ಟೀವಿಯಾ ಕಾರನ್ನು 2013ರಲ್ಲಿ ಭಾರತದಲ್ಲಿ ಬಿಡುಗಡೆಗೊಳಿಸಿದ್ದ ಸ್ಕೋಡಾ ಕಂಪನಿಯು ಇದೀಗ ಹೊಸ ಎಮಿಷನ್ ಅನುಸಾರವಾಗಿ ಬಿಡುಗಡೆ ಮಾಡುತ್ತಿದ್ದು, ಹೊಸ ಕಾರು 190 ಬಿಎಚ್‌ಪಿ ಪ್ರೇರಿತ 2.0-ಲೀಟರ್ ಟಿಎಸ್‌ಐ ಟರ್ಬೊಚಾರ್ಜ್ಡ್ ಡೈರೆಕ್ಟ್ ಇಂಜೆಕ್ಷನ್ ಪೆಟ್ರೋಲ್ ಮತ್ತು 148 ಬಿಎಚ್‌ಪಿ ಪ್ರೇರಿತ 1.5-ಲೀಟರ್ ಪೆಟ್ರೋಲ್ ಎಂಜಿನ್‌ ಪಡೆದುಕೊಳ್ಳಬಹುದಾಗಿದೆ.

Most Read Articles

Kannada
English summary
Top 5 New Car Launching In April 2021. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X