Just In
- 12 min ago
ಅನಾವರಣವಾಯ್ತು 2021ರ ಹ್ಯುಂಡೈ ಸೊನಾಟಾ ಎನ್ ಲೈನ್ ಪರ್ಫಾಮೆನ್ಸ್ ಕಾರು
- 2 hrs ago
ಕಾರುಗಳ ರಫ್ತಿನಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಮಾರುತಿ ಸುಜುಕಿ
- 4 hrs ago
ವಾರದ ಪ್ರಮುಖ ಸುದ್ದಿ: ಹೊಸ ಸಫಾರಿ ಬಿಡುಗಡೆ, ಟೋಲ್ ಸಂಗ್ರಹ ಹೆಚ್ಚಳ, ಇಳಿಕೆಯಾಗುತ್ತಾ ಪೆಟ್ರೋಲ್ ದರ?
- 14 hrs ago
ಬಿಡುಗಡೆಯಾಗಲಿರುವ ಓಲಾ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ವಿಶೇಷತೆಗಳೇನು?
Don't Miss!
- News
ನೊಂದ ಮಹಿಳೆಯಿಂದ ಪೊಲೀಸ್ ಸ್ಟೇಷನ್ ನಿಂದಲೇ ಫೇಸ್ ಬುಕ್ ಲೈವ್ !
- Movies
ಉಪೇಂದ್ರ ನಟನೆಯ ಕಬ್ಜ ಚಿತ್ರಕ್ಕೆ ಎಂಟ್ರಿ ಕೊಟ್ಟ 'ಕುರುಕ್ಷೇತ್ರ'ದ ಭೀಮ
- Sports
ಆರು ನಗರಗಳಲ್ಲಿ ಐಪಿಎಲ್ ನಡೆಸಲು ಬಿಸಿಸಿಐ ಸಿದ್ಧತೆ: ಅಹ್ಮದಾಬಾದ್ನಲ್ಲಿ ಫೈನಲ್: ವರದಿ
- Finance
ಭಾರತದಲ್ಲಿ ನೋಕಿಯಾ ಪವರ್ ಈಯರ್ಬಡ್ಸ್ ಲೈಟ್ಸ್ ಮಾರಾಟ
- Lifestyle
ವಾರ ಭವಿಷ್ಯ: ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?
- Education
MCL Recruitment 2021: 8 ಸಾಮಾನ್ಯ ವೈದ್ಯಕೀಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹ್ಯುಂಡೈ ಕ್ರೆಟಾ ಮತ್ತು ಕಿಯಾ ಸೆಲ್ಟೊಸ್ ಕಾರಿಗೆ ಪೈಪೋಟಿ ನೀಡಲು ಸಜ್ಜಾದ ಐದು ಹೊಸ ಕಾರುಗಳಿವು..!
ಮಧ್ಯಮ ಗಾತ್ರದ ಎಸ್‌ಯುವಿ ಕಾರುಗಳ ಮಾರಾಟವು ಕಳೆದ ಎರಡು ವರ್ಷಗಳಿಂದ ಸಾಕಷ್ಟು ಬೆಳವಣಿಗೆ ಸಾಧಿಸಿದ್ದು, ಹ್ಯುಂಡೈ ಕ್ರೆಟಾ ಮತ್ತು ಇತ್ತೀಚೆಗೆ ಬಿಡುಗಡೆಯಾದ ಕಿಯಾ ಸೆಲ್ಟೊಸ್ ಕಾರುಗಳು ಸಾಕಷ್ಟು ಬೇಡಿಕೆ ಪಡೆದುಕೊಂಡಿವೆ. ಈ ನಿಟ್ಟಿನಲ್ಲಿ ವಿವಿಧ ಕಾರು ಕಂಪನಿಗಳು ಕ್ರೆಟಾ ಮತ್ತು ಸೆಲ್ಟೊಸ್ ಕಾರುಗಳಿಗಳಿಗೆ ಪೈಪೋಟಿಯಾಗಿ ಹಲವು ಕಾರು ಮಾದರಿಗಳನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದ್ದು, ಹೊಸ ಕಾರುಗಳ ಮಾಹಿತಿಯನ್ನು ಇಲ್ಲಿ ಚರ್ಚಿಸಲಾಗಿದೆ.

ಮಧ್ಯಮ ಗಾತ್ರದ ಎಸ್‌ಯುವಿ ಕಾರುಗಳ ಮಾರಾಟವು ಕಳೆದ ಎರಡು ವರ್ಷಗಳಿಂದ ಸಾಕಷ್ಟು ಬೆಳವಣಿಗೆ ಸಾಧಿಸಿದ್ದು, ಹ್ಯುಂಡೈ ಕ್ರೆಟಾ ಮತ್ತು ಇತ್ತೀಚೆಗೆ ಬಿಡುಗಡೆಯಾದ ಕಿಯಾ ಸೆಲ್ಟೊಸ್ ಕಾರುಗಳು ಸಾಕಷ್ಟು ಬೇಡಿಕೆ ಪಡೆದುಕೊಂಡಿವೆ. ಈ ನಿಟ್ಟಿನಲ್ಲಿ ವಿವಿಧ ಕಾರು ಕಂಪನಿಗಳು ಕ್ರೆಟಾ ಮತ್ತು ಸೆಲ್ಟೊಸ್ ಕಾರುಗಳಿಗಳಿಗೆ ಪೈಪೋಟಿಯಾಗಿ ಹಲವು ಕಾರು ಮಾದರಿಗಳನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದ್ದು, ಹೊಸ ಕಾರುಗಳ ಮಾಹಿತಿಯನ್ನು ಇಲ್ಲಿ ಚರ್ಚಿಸಲಾಗಿದೆ.

ಪ್ರಸ್ತುತ ಮಾರುಕಟ್ಟೆಯಲ್ಲಿ ಹ್ಯುಂಡೈ ಕ್ರೆಟಾ ಮತ್ತು ಸೆಲ್ಟೊಸ್ ಕಾರುಗಳು 1.5-ಲೀಟರ್ ಪೆಟ್ರೋಲ್, 1.4-ಲೀಟರ್ ಟರ್ಬೋ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ಹೊಂದಿದ್ದು, ಹೊಸ ಕಾರುಗಳ ಬೆಲೆಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 9.82 ಲಕ್ಷದಿಂದ ರೂ. 17.45 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳುತ್ತಿವೆ. ಹಾಗಾದ್ರೆ ಈ ಕಾರುಗಳಿಗೆ ಪೈಪೋಟಿಯಾಗಿ ಬಿಡುಗಡೆಯಾಗಲಿರುವ ಹೊಸ ಕಾರು ಬೆಲೆ ಮಾಹಿತಿ ಮತ್ತು ತಾಂತ್ರಿಕ ವೈಶಿಷ್ಟ್ಯತೆಗಳ ಮಾಹಿತಿಯನ್ನು ಇಲ್ಲಿ ತಿಳಿಯೋಣ.

ನ್ಯೂ ಜನರೇಷನ್ ಸ್ಕಾರ್ಪಿಯೋ
ಮಹೀಂದ್ರಾ ಕಂಪನಿಯು ಮುಂದಿನ ಕೆಲವೇ ತಿಂಗಳಿನಲ್ಲಿ ಪ್ರಮುಖ ಕಾರುಗಳ ನ್ಯೂ ಜನರೇಷನ್ ಆವೃತ್ತಿಗಳನ್ನು ಬಿಡುಗಡೆಗೊಳಿಸಲು ಸಜ್ಜಾಗಿದ್ದು, ಬಿಡುಗಡೆಯಾಗಲಿರುವ ಹೊಸ ಕಾರುಗಳಲ್ಲಿ ಸ್ಕಾರ್ಪಿಯೋ ನ್ಯೂ ಜನರೇಷನ್ ಮಾದರಿಯು ಕೂಡಾ ಭಾರೀ ಬದಲಾವಣೆಯೊಂದಿಗೆ ಹಲವು ಪ್ರೀಮಿಯಂ ವೈಶಿಷ್ಟ್ಯತೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸುವ ಸಿದ್ದತೆಯಲ್ಲಿದೆ.

ಸದ್ಯ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 12.44 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 16.31 ಲಕ್ಷ ಬೆಲೆ ಹೊಂದಿರುವ ಸ್ಕಾರ್ಪಿಯೋ ಕಾರು ಮಾದರಿಯು ಹೊಸ ಆವೃತ್ತಿಯೊಂದಿಗೆ ತುಸು ದುಬಾರಿ ಬೆಲೆ ಪಡೆದುಕೊಳ್ಳಲಿದ್ದು, ಹೆಚ್ಚಿನ ಮಟ್ಟದ ಪರ್ಫಾಮೆನ್ಸ್‌ಗೆ ಪೂರಕವಾದ 2.2-ಲೀಟರ್ ಟರ್ಬೋ ಡೀಸೆಲ್ ಎಂಜಿನ್ ಜೊತೆಗೆ ಟರ್ಬೋ ಪೆಟ್ರೋಲ್ ಮಾದರಿಯಲ್ಲೂ ಖರೀದಿಗೆ ಲಭ್ಯವಾಗುವ ಸುಳಿವು ನೀಡಿದೆ.

ಎಂಜಿ ಜೆಡ್ಎಸ್ ಪೆಟ್ರೋಲ್
ಭಾರತದಲ್ಲಿ ಎಂಜಿ ಮೋಟಾರ್ ನಿರ್ಮಾಣದ ಐದನೇ ಕಾರು ಮಾದರಿಯಾಗಿ ಬಿಡುಗಡೆಯಾಗುತ್ತಿರುವ ಜೆಡ್ಎಸ್ ಪೆಟ್ರೋಲ್ ಮಾದರಿಯು ದೇಶಿಯ ಮಾರುಕಟ್ಟೆಯಲ್ಲಿ ಹೊಸ ಸಂಚಲನ ಸೃಷ್ಠಿಸುವ ತವಕದಲ್ಲಿದ್ದು, ಮಧ್ಯಮ ಕ್ರಮಾಂಕದ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯಲ್ಲೇ ಅತಿ ಹೆಚ್ಚು ಐಷಾರಾಮಿ ಫೀಚರ್ಸ್‌ಗಳನ್ನು ಪಡೆದುಕೊಳ್ಳಲಿದೆ.

ಐಷಾರಾಮಿ ಕಾರುಗಳಲ್ಲಿ ಅಳವಡಿಸಲಾಗುವ ಅಡ್ವಾನ್ಸ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಂ(ಎಡಿಎಎಸ್) ಪಡೆದುಕೊಂಡಿರುವುದು ಹೊಸ ಕಾರು 1.5-ಲೀಟರ್ ಪೆಟ್ರೋಲ್ ಮತ್ತು 1.3-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆ ನೀಡುವ ಸಾಧ್ಯತೆಗಳಿವೆ.

ರೂ. 10 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 15 ಲಕ್ಷ ಬೆಲೆಯೊಂದಿಗೆ ಹ್ಯುಂಡೈ ಕ್ರೆಟಾ ಮತ್ತು ಕಿಯಾ ಸೆಲ್ಟೊಸ್ ಕಾರುಗಳಿಗೆ ಉತ್ತಮ ಪೈಪೋಟಿಯಾಗಲಿದೆ.

ಫೋಕ್ಸ್‌ವ್ಯಾಗನ್ ಟೈಗನ್
ಫೋಕ್ಸ್‌ವ್ಯಾಗನ್ ಕಂಪನಿಯು 2020ರ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಂಡಿದ್ದ ತನ್ನ ಹೊಸ ಟೈಗನ್ ಕಂಪ್ಯಾಕ್ಟ್ ಎಸ್‌ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದ್ದು, ಹೊಸ ಟೈಗನ್ ಕಾರು ಮಾದರಿಯು ಕ್ರೆಟಾ ಮತ್ತು ಸೆಲ್ಟೊಸ್ ಕಾರುಗಳಿಗೆ ಉತ್ತಮ ಪೈಪೋಟಿ ನೀಡಲಿದೆ.

1.5-ಲೀಟರ್ ಸಾಮಾನ್ಯ ಪೆಟ್ರೋಲ್ ಮತ್ತು 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಲಿರುವ ಹೊಸ ಟೈಗನ್ ಕಾರು ಮಾದರಿಯು ರೂ.10 ಲಕ್ಷದಿಂದ ರೂ.14 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಲಿದ್ದು, ಹೊಸ ಕಾರು ಇದೇ ಮಾರ್ಚ್ ಅಂತ್ಯಕ್ಕೆ ಬಿಡುಗಡೆಯಾಗಲಿದೆ.

ಸ್ಕೋಡಾ ಕುಶಾಕ್
ಸ್ಕೋಡಾ ಆಟೋ ಇಂಡಿಯಾ ಕಂಪನಿಯು ವಿಷನ್ ಇನ್ ಕಾನ್ಸೆಪ್ಟ್ ಮಾದರಿಯನ್ನು 2020ರ ಆಟೋ ಎಕ್ಸ್ ಪೋದಲ್ಲಿ ಮೊದಲ ಬಾರಿಗೆ ಅನಾವರಣಗೊಳಿಸಿತ್ತು. ಹೊಸ ಕಾನ್ಸೆಪ್ಟ್ ಕಂಪ್ಯಾಕ್ಟ್ ಎಸ್‍ಯುವಿಯನ್ನು ಇದೀಗ ಬಿಡುಗಡೆಗೊಳಿಸಲು ಸಜ್ಜಾಗಿರುವ ಕಂಪನಿಯು ಹೊಸ ವಿಷನ್ ಇನ್ ಕಾನ್ಸೆಪ್ಟ್ ಕಾರು ಮಾದರಿಯನ್ನೇ ಕುಶಾಕ್ ಹೆಸರಿನೊಂದಿಗೆ ಬಿಡುಗಡೆ ಮಾಡುವ ಸುಳಿವು ನೀಡಿದೆ.

ಹೊಸ ಕಾರಿನಲ್ಲಿ ಸಾಮಾನ್ಯ ಮಾದರಿಯು 1.5-ಲೀಟರ್ ಪೆಟ್ರೋಲ್ ಎಂಜಿನ್ ಜೊತೆಗೆ ಟರ್ಬೋ ಮಾದರಿಯು 1.-0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಪರಿಚಯಿಸುವ ಸಾಧ್ಯತೆಗಳಿವೆ.

ಹೊಸ ಕಾರು ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದ್ದು, ಹೊಸ ಕಾರು ಇದೇ ತಿಂಗಳಾಂತ್ಯಕ್ಕೆ ಉತ್ಪಾದನಾ ಮಾದರಿಯೊಂದಿಗೆ ಅನಾವರಣಗೊಳ್ಳಲಿದೆ ಎನ್ನಲಾಗಿದೆ.

ನ್ಯೂ ಜನರೇಷನ್ ಎಕ್ಸ್‌ಯುವಿ 500
ಮಹೀಂದ್ರಾ ಎಕ್ಸ್‌ಯುವಿ500 ಎಸ್‌ಯುವಿ ಕಾರು ಮಾದರಿಯು ಶೀಘ್ರದಲ್ಲೇ ಹೊಸ ತಲೆಮಾರಿನ ವೈಶಿಷ್ಟ್ಯತೆಯೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರಿನ ಕಾರ್ಯಕ್ಷಮತೆ ಕುರಿತಂತೆ ಅಂತಿಮ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆ ನಡೆಸುತ್ತಿದೆ.

ನ್ಯೂ ಜನರೇಷನ್ ಕಾರು ಮಾದರಿಯು 2.2 ಡೀಸೆಲ್ ಎಂಜಿನ್ ಜೊತೆ ಹೊಸ ಥಾರ್‌ನಲ್ಲಿ ನೀಡಲಾಗಿರುವ 2.0-ಲೀಟರ್ ಎಂ-ಸ್ಟಾಲಿನ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಸಹ ಪಡೆದುಕೊಳ್ಳಲಿದೆ.

ಹೊಸ ಕಾರು ವಿವಿಧ ಎಂಜಿನ್ ಆಯ್ಕೆಯೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 13 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 18.50 ಲಕ್ಷ ಬೆಲೆ ಹೊಂದುವ ಸಾಧ್ಯತೆಗಳಿವೆ.