2022ರಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಟಾಪ್ 5 ಕಾರುಗಳಿವು!

ದೇಶಿಯ ಮಾರುಕಟ್ಟೆಯಲ್ಲಿ ಹೊಸ ಕಾರುಗಳ ಮಾರಾಟವು ಉತ್ತಮ ಬೆಳವಣಿಗೆ ಸಾಧಿಸಿದ್ದು, ಬೇಡಿಕೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಶೀಘ್ರದಲ್ಲೇ ಮತ್ತಷ್ಟು ಹೊಸ ಕಾರುಗಳು ಮಾರುಕಟ್ಟೆ ಪ್ರವೇಶಿಸಲು ಸಿದ್ದವಾಗುತ್ತಿವೆ. ಕೋವಿಡ್ ಪರಿಣಾಮ ಬಿಡುಗಡೆಯಿಂದ ಹಿಂದೆ ಸರಿದಿದ್ದ ಕಾರು ಕಂಪನಿಗಳು ತಮ್ಮ ಹೊಸ ಕಾರು ಮಾದರಿಗಳನ್ನು ಹಂತ-ಹಂತವಾಗಿ ಇದೀಗ ಬಿಡುಗಡೆ ಮಾಡುತ್ತಿದ್ದು, ಬಿಡುಗಡೆಯಾಗಲಿರುವ ಟಾಪ್ 5 ಹೊಸ ಕಾರುಗಳ ಮಾಹಿತಿಯಲ್ಲಿ ಇಲ್ಲಿ ತಿಳಿಯೋಣ.

ಹೊಸ ವರ್ಷದ ಆರಂಭದಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಟಾಪ್ 5 ಕಾರುಗಳಿವು!

ಕಿಯಾ ಕಾರೆನ್ಸ್ ಎಸ್‌ಯುವಿ

ಕಿಯಾ ಇಂಡಿಯಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ತನ್ನ ನಾಲ್ಕನೇ ಕಾರು ಮಾದರಿಯಾಗಿ ಕಾರೆನ್ಸ್(Carens) ಎಸ್‌ಯುವಿ ಮಾದರಿಯನ್ನು ಭಾರತದಲ್ಲಿ ಬಿಡುಗಡೆ ಮಾಡುತ್ತಿದ್ದು, ಅತ್ಯುತ್ತಮ ಎಂಜಿನ್ ಆಯ್ಕೆ, ಸೆಗ್ಮೆಂಟ್ ಫಸ್ಟ್ ಫೀಚರ್ಸ್‌ಗಳೊಂದಿಗೆ ಅನಾವರಣಗೊಂಡಿದೆ.

ಹೊಸ ವರ್ಷದ ಆರಂಭದಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಟಾಪ್ 5 ಕಾರುಗಳಿವು!

ಕಾರೆನ್ಸ್ ಹೊಸ ಎಸ್‌ಯುವಿ ಕಾರು ಮಾದರಿಯು ಸೆಲ್ಟೊಸ್ ಪ್ಲ್ಯಾಟ್‌ಫಾರ್ಮ್ ಆಧರಿಸಿ ನಿರ್ಮಾಣಗೊಂಡಿದ್ದು, ಹೊಸ ಕಾರು ಪ್ರಮುಖ ಆರು ವೆರಿಯೆಂಟ್‌ಗಳಲ್ಲಿ ಬಿಡುಗಡೆಯಾಗಲಿದೆ. ಗ್ರಾಹಕರ ಬೇಡಿಕೆಯೆಂತೆ ಹೊಸ ಕಾರು 6 ಸೀಟರ್ ಮತ್ತು 7 ಸೀಟರ್ ಸೌಲಭ್ಯ ಹೊಂದಿರಲಿದ್ದು, ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚು ಐಷಾರಾಮಿ ಫೀಚರ್ಸ್ ಮತ್ತು ವಿಶಾಲವಾದ ಒಳಾಂಗಣವನ್ನು ಹೊಂದಿರಲಿದ್ದು, ಹೊಸ ಕಾರು ಎಸ್‌ಯುವಿ ಜೊತೆಗೆ ಎಂಪಿವಿ ಕಾರು ಖರೀದಿದಾರರನ್ನು ಸಹ ಸೆಳೆಯುವ ಎಲ್ಲಾ ವೈಶಿಷ್ಟ್ಯತೆಗಳನ್ನು ಹೊಂದಿದೆ.

ಹೊಸ ವರ್ಷದ ಆರಂಭದಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಟಾಪ್ 5 ಕಾರುಗಳಿವು!

ಹೊಸ ಕಾರು ಅತ್ಯುತ್ತಮ ಒಳಾಂಗಣ ಸೌಲಭ್ಯದೊಂದಿಗೆ 6 ಸೀಟರ್ ಮತ್ತು 7 ಸೀಟರ್ ಆಸನಗಳ ಆಯ್ಕೆ ಹೊಂದಿದ್ದು, ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ 1.5-ಲೀಟರ್ ಸಾಮಾನ್ಯ ಪೆಟ್ರೋಲ್, 1.4-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ಹೊಂದಿರಲಿದೆ. ಹೊಸ ಕಾರು ಮುಂಬರುವ ಫೆಬ್ರುವರಿಯಲ್ಲಿ ಬಿಡುಗಡೆಯಾಗುವ ನೀರಿಕ್ಷೆಯಿದ್ದು, ಹೊಸ ಕಾರು ಎಕ್ಸ್‌ಶೋರೂಂ ಪ್ರಕಾರ ರೂ.12 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 18 ಲಕ್ಷ ಬೆಲೆ ಹೊಂದಿರಬಹುದಾಗಿದೆ.

ಹೊಸ ವರ್ಷದ ಆರಂಭದಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಟಾಪ್ 5 ಕಾರುಗಳಿವು!

ಸಿಟ್ರನ್‌‌ ಸಿ3 ಕಂಪ್ಯಾಕ್ಟ್ ಎಸ್‌ಯುವಿ

ಬಹುನೀರಿಕ್ಷಿತ ಸಿಟ್ರನ್‌‌(Citroen) ಇಂಡಿಯಾ ನಿರ್ಮಾಣದ ಹೊಸ ಸಿ3 ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೆ ಸಿದ್ದವಾಗಿದ್ದು, ಹೊಸ ಕಾರು 2022ರ ಮೊದಲಾರ್ಧದಲ್ಲಿ ಮಾರುಕಟ್ಟೆ ಪ್ರವೇಶಿಸಲಿದೆ. ಸಬ್ ಫೋರ್ ಮೀಟರ್ ವೈಶಿಷ್ಟ್ಯತೆಯೊಂದಿಗೆ ಅಭಿವೃದ್ದಿಗೊಂಡಿರುವ ಹೊಸ ಕಾರು 1.0-ಲೀಟರ್ ಟರ್ಬೊ ಪೆಟ್ರೋಲ್ ಮತ್ತು ಫ್ಲೆಕ್ಸ್ ಫ್ಯೂಲ್ ತಂತ್ರಜ್ಞಾನ ಹೊಂದಿರುವ 1.2-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಎಂಜಿನ್ ಆಯ್ಕೆ ಪಡೆದುಕೊಳ್ಳಬಹುದಾಗಿದೆ ಎನ್ನಲಾಗಿದೆ.

ಹೊಸ ವರ್ಷದ ಆರಂಭದಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಟಾಪ್ 5 ಕಾರುಗಳಿವು!

ಹೊಚ್ಚ ಹೊಸ ಸಿ3 ಮಾದರಿಯನ್ನು ಸಿಟ್ರನ್ ಕಂಪನಿಯ ಭಾರತದಲ್ಲಿ ಮಾತ್ರವಲ್ಲ ವಿಶ್ವದ ಪ್ರಮುಖ ಮಾರುಕಟ್ಟೆಗಳನ್ನು ಪರಿಚಯಿಸುವ ಸಿದ್ದತೆಯಲ್ಲಿದ್ದು, ಹೊಸ ಕಾರು ಮಾದರಿಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 8 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 13 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗುವ ನೀರಿಕ್ಷೆಯಿದೆ.

ಹೊಸ ವರ್ಷದ ಆರಂಭದಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಟಾಪ್ 5 ಕಾರುಗಳಿವು!

ಸ್ಕೋಡಾ ಸ್ಲಾವಿಯಾ ಸೆಡಾನ್

ಸ್ಕೋಡಾ(Skoda) ಕಂಪನಿಯು ತನ್ನ ಹೊಚ್ಚ ಹೊಸ ಸ್ಲಾವಿಯಾ(Slavia) ಸೆಡಾನ್ ಮಾದರಿಯನ್ನು ಅನಾವರಣಗೊಳಿಸಿ ಬಿಡುಗಡೆಗೆ ಸಿದ್ದವಾಗುತ್ತಿದ್ದು, ಮುಂದಿನ ತಿಂಗಳು ಬಿಡುಗಡೆಯಾಗಲಿರುವ ಹೊಸ ಕಾರು ವಿವಿಧ ಎಂಜಿನ್, ಪ್ರೀಮಿಯಂ ಫೀಚರ್ಸ್ ಮತ್ತು ಆಕರ್ಷಕ ಬೆಲೆಯೊಂದಿಗೆ ಪ್ರತಿಸ್ಪರ್ಧಿ ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

ಹೊಸ ವರ್ಷದ ಆರಂಭದಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಟಾಪ್ 5 ಕಾರುಗಳಿವು!

ರ‍್ಯಾಪಿಡ್ ಸೆಡಾನ್ ಸ್ಥಗಿತಗೊಳಿಸಿ ಸ್ಲಾವಿಯಾ ಮಾದರಿಯ ಮಾರಾಟ ಮಾಡಲು ನಿರ್ಧರಿಸಿರುವ ಸ್ಕೋಡಾ ಕಂಪನಿಯು ಹೊಸ ಕಾರನ್ನು ಪ್ರಮುಖ ಮೂರು ವೆರಿಯೆಂಟ್‌ಗಳೊಂದಿಗೆ 1.0-ಲೀಟರ್ ಟಿಎಸ್ಐ ಮೂರು-ಸಿಲಿಂಡರ್ ಎಂಜಿನ್ ಮತ್ತು 1.5-ಲೀಟರ್ ನಾಲ್ಕು-ಸಿಲಿಂಡರ್ ಟಿಎಸ್ಐ ಎಂಜಿನ್ ಆಯ್ಕೆಯೊಂದಿಗೆ ಮಾರಾಟ ಮಾಡಲಿದೆ.

ಹೊಸ ವರ್ಷದ ಆರಂಭದಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಟಾಪ್ 5 ಕಾರುಗಳಿವು!

ಹೊಸ ಸ್ಲಾವಿಯಾ ಕಾರು ಹೋಂಡಾ ಸಿಟಿ, ಮಾರುತಿ ಸಿಯಾಜ್ ಕಾರುಗಳಿಗೆ ಉತ್ತಮ ಪೈಪೋಟಿ ನೀಡುವ ತವಕದಲ್ಲಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 9 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 16 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗುವ ಸಾಧ್ಯತೆಗಳಿವೆ.

ಹೊಸ ವರ್ಷದ ಆರಂಭದಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಟಾಪ್ 5 ಕಾರುಗಳಿವು!

ನ್ಯೂ ಜನರೇಷನ್ ವಿಟಾರಾ ಬ್ರೆಝಾ

ಹೊಸ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಕಾರು ಮಾರಾಟದಲ್ಲಿ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿರುವ ಮಾರುತಿ ಸುಜುಕಿ ಹೊಸ ವಿಟಾರಾ ಬ್ರೆಝಾ ಮಾದರಿಯು 2022ರ ಮಧ್ಯಂತರದಲ್ಲಿ ಬಿಡುಗಡೆಯಾಗಲಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿನ ಎಂಜಿನ್ ನವೀಕರಣದೊಂದಿಗೆ ಹೊಸ ಎಂಜಿನ್ ಆಯ್ಕೆಯನ್ನು ಸಹ ಪಡೆದುಕೊಳ್ಳುವ ಸಾಧ್ಯತೆಗಳಿವೆ.

ಹೊಸ ವರ್ಷದ ಆರಂಭದಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಟಾಪ್ 5 ಕಾರುಗಳಿವು!

ಹೊಸ ಕಾರಿನ ಉತ್ಪಾದನಾ ಆವೃತ್ತಿಯನ್ನು ಈಗಾಗಲೇ ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ನಡೆಸಲಾಗುತ್ತಿದ್ದು, ಹೊಸ ಕಾರಿನ ಡಿಸೈನ್‌ಗಳು ಎಸ್‌ಯುವಿ ಪ್ರಿಯರನ್ನು ಸೆಳೆಯುವುದರಲ್ಲಿ ಯಾವುದೇ ಅನುಮಾನವಿಲ್ಲ. ಹಾಗೆಯೇ ಹೊಸ ಕಾರಿನಲ್ಲಿ ನವೀಕರಣಗೊಳಿಸಲಾದ ಮುಂಭಾಗದ ವಿನ್ಯಾಸದೊಂದಿಗೆ ಎಲೆಕ್ಟ್ರಿಕ್ ಸನ್‌ರೂಫ್, ಗರಿಷ್ಠ ಸುರಕ್ಷತೆಗಾಗಿ ಹೈ ಎಂಡ್ ಮಾದರಿಗಳಲ್ಲಿ 6 ಏರ್‌ಬ್ಯಾಗ್ ಜೋಡಣೆ ಹೊಂದಿರಲಿದ್ದು, ಹೊಸ ಕಾರು ಮಾರುತಿ ಸುಜುಕಿ ಕಂಪನಿಗೆ ಮತ್ತಷ್ಟು ಬೇಡಿಕೆ ತಂದುಕೊಡಲಿದೆ.

ಹೊಸ ವರ್ಷದ ಆರಂಭದಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಟಾಪ್ 5 ಕಾರುಗಳಿವು!

ಟಿಗೋರ್ ಮತ್ತು ಟಿಯಾಗೋ ಸಿಎನ್‌ಜಿ ವರ್ಷನ್

ಎಲೆಕ್ಟ್ರಿಕ್ ಆವೃತ್ತಿಗಳ ಮಾರಾಟದಲ್ಲಿ ಮುಂಚೂಣಿ ಹೊಂದಿರುವ ಟಾಟಾ ಮೋಟಾರ್ಸ್ ಕಂಪನಿಯು ಇದೀಗ ಟಿಗೋರ್ ಮತ್ತು ಟಿಯಾಗೋ ಮಾದರಿಗಳಲ್ಲಿ ಸಿಎನ್‌ಜಿ(CNG) ಆವೃತ್ತಿಗಳನ್ನು ಮಾರಾಟ ಮಾಡಲು ಯೋಜನೆ ರೂಪಿಸಿದೆ. ಸಂಕುಚಿತ ನೈಸರ್ಗಿಕ ಅನಿಲ (ಸಿಎನ್‍ಜಿ) ತಂತ್ರಜ್ಞಾನವನ್ನು ಅಳವಡಿಸಿ ಈಗಾಗಲೇ ಟಿಗೋರ್ ಮತ್ತು ಟಿಯಾಗೋ ಹೊಸ ಕಾರುಗಳನ್ನು ರೋಡ್ ಟೆಸ್ಟಿಂಗ್ ನಡೆಸಲಾಗುತ್ತಿದ್ದು, ಸಿಎನ್‌ಜಿ ಆವೃತ್ತಿಗಳು ಅತಿ ಕಡಿಮೆ ಮಾಲಿನ್ಯ ಉತ್ಪತ್ತಿಯೊಂದಿಗೆ ಹೆಚ್ಚಿನ ಮಟ್ಟದ ಮೈಲೇಜ್ ಹಿಂದಿರುಗಿಸಲಿವೆ.

ಹೊಸ ವರ್ಷದ ಆರಂಭದಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಟಾಪ್ 5 ಕಾರುಗಳಿವು!

ಟಾಟಾ ಮೋಟಾರ್ಸ್ ಕಂಪನಿಯು ತನ್ನ ಎಂಟ್ರಿ ಲೆವಲ್ ಹ್ಯಾಚ್‌ಬ್ಯಾಕ್ ಮಾದರಿಯಾದ ಟಿಯಾಗೋ ಮತ್ತು ಕಂಪ್ಯಾಕ್ಟ್ ಸೆಡಾನ್ ಮಾದರಿಯಾದ ಟಿಗೋರ್ ಆವೃತ್ತಿಗಳಲ್ಲಿ ಸಿಎನ್‌ಜಿ ತಂತ್ರಜ್ಞಾನವನ್ನು ಅಳವಡಿಸಲು ನಿರ್ಧರಿಸಿದ್ದು, ಹೊಸ ಕಾರುಗಳು 2022ರ ಮೊದಲ ತ್ರೈಮಾಸಿಕ ಅವಧಿಯಲ್ಲಿ ಬಿಡುಗಡೆಯಾಗಲಿವೆ. ಹೊಸ ಸಿಎನ್‌ಜಿ ಟಿಯಾಗೋ ಮತ್ತು ಟಿಗೋರ್ ಕಾರುಗಳ ಖರೀದಿಗಾಗಿ ಟಾಟಾ ಮೋಟಾರ್ಸ್ ಕಂಪನಿಯು ತನ್ನ ಪ್ರಮುಖ ಡೀಲರ್ಸ್‌ಗಳಲ್ಲಿ ಬುಕ್ಕಿಂಗ್ ಆರಂಭಿಸಿದ್ದು, ರೂ. 11 ಸಾವಿರ ಮುಂಗಡದೊಂದಿಗೆ ಬುಕ್ಕಿಂಗ್ ದಾಖಲಿಸಬಹುದಾಗಿದೆ.

Most Read Articles

Kannada
English summary
Top 5 upcoming car launches in india citroen c3 kia carens and more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X