ಭಾರತದಲ್ಲಿ ಬಿಡುಗಡೆಗಾಗಿ ಸಿದ್ದವಾಗಿರುವ ಟಾಪ್ 5 ಹೊಸ ಕಾರು ಮಾದರಿಗಳಿವು!

ಭಾರತೀಯ ಆಟೋ ಉದ್ಯಮವು ಕೋವಿಡ್ ಸಂಕಷ್ಟದ ನಂತರ ಸಾಕಷ್ಟು ಬೆಳವಣಿಗೆ ಸಾಧಿಸಿದ್ದು, ಹೊಸ ವಾಹನ ಮಾರಾಟ ಪ್ರಕ್ರಿಯೆ ಜೊತೆಗೆ ಬಿಡುಗಡೆಯೂ ಕೂಡಾ ಜೋರಾಗಿದೆ. ಹಾಗಾದರೆ ಬಿಡುಗಡೆಗೆ ಸಿದ್ದವಾಗಿರುವ ಪ್ರಮುಖ ಕಾರುಗಳು ಯಾವುವು ಎಂಬುವುದನ್ನು ಈ ಲೇಖನದಲ್ಲಿ ಚರ್ಚಿಸೋಣ.

ಭಾರತದಲ್ಲಿ ಬಿಡುಗಡೆಗಾಗಿ ಸಿದ್ದವಾಗಿರುವ ಟಾಪ್ 5 ಹೊಸ ಕಾರು ಮಾದರಿಗಳಿವು!

ದೇಶಿಯ ಮಾರುಕಟ್ಟೆಯಲ್ಲಿ ಈಗಾಗಲೇ ಹಲವಾರು ಹೊಸ ಕಾರು ಮಾದರಿಗಳು ಮಾರುಕಟ್ಟೆ ಪ್ರವೇಶಿಸಿದ್ದು, ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ಜನಪ್ರಿಯತೆ ಗಳಿಸಿರುವ ಮತ್ತಷ್ಟು ಹೊಸ ಕಾರುಗಳು ಬಿಡುಗಡೆಗೆ ಸಿದ್ದವಾಗಿದೆ. ಹೊಸ ವಾಹನ ಮಾದರಿಗಳೊಂದಿಗೆ ಫೇಸ್‌ಲಿಫ್ಟ್ ಮಾದರಿಗಳು ಗ್ರಾಹಕರ ಬೇಡಿಕೆಯೆಂತೆ ಭಾರೀ ಬದಲಾವಣೆಯೊಂದಿಗೆ ಅಭಿವೃದ್ದಿಗೊಂಡಿದ್ದು, ಶೀಘ್ರದಲ್ಲೇ ಖರೀದಿಗೆ ಲಭ್ಯವಾಗಲಿವೆ.

ಭಾರತದಲ್ಲಿ ಬಿಡುಗಡೆಗಾಗಿ ಸಿದ್ದವಾಗಿರುವ ಟಾಪ್ 5 ಹೊಸ ಕಾರು ಮಾದರಿಗಳಿವು!

ನ್ಯೂ ಜನರೇಷನ್ ಮಾರುತಿ ಸುಜುಕಿ ಸೆಲೆರಿಯೊ

ಮಾರುತಿ ಸುಜುಕಿಯು ತನ್ನ ಜನಪ್ರಿಯ ಸೆಲೆರಿಯೊ(Celerio) ಹೊಸ ತಲೆಮಾರಿನ ಆವೃತ್ತಿಯನ್ನು ಇದೇ 10ರಂದು ಬಿಡುಗಡೆ ಮಾಡಲಾಗುತ್ತಿದ್ದು, ಹೊಸ ಮಾದರಿಯು ಹಲವಾರು ಹೊಸ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆಯಾಗುತ್ತಿದೆ.

ಭಾರತದಲ್ಲಿ ಬಿಡುಗಡೆಗಾಗಿ ಸಿದ್ದವಾಗಿರುವ ಟಾಪ್ 5 ಹೊಸ ಕಾರು ಮಾದರಿಗಳಿವು!

ಹೊಸ ಸೆಲೆರಿಯೊ ಕಾರು ಖರೀದಿಗೆ ಮಾರುತಿ ಸುಜುಕಿ ಕಂಪನಿಯು ರೂ. 11 ಸಾವಿರ ಮುಂಗಡದೊಂದಿಗೆ ಬುಕ್ಕಿಂಗ್ ಆರಂಭಿಸಿದ್ದು, ಹೊಸ ಕಾರು ಆರಂಭಿಕ ಪೆಟ್ರೋಲ್ ಮಾದರಿಗಳಲ್ಲಿಯೇ ಅತಿ ಮೈಲೇಜ್ ನೀಡುವುದಾಗಿ ಹೇಳಿಕೊಂಡಿದೆ. ಆಕರ್ಷಕ ವಿನ್ಯಾಸ ಮತ್ತು ಹೊಸ ಫೀಚರ್ಸ್ ಗಳೊಂದಿಗೆ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಲಿರುವ ಹೊಸ ಸೆಲೆರಿಯೊ ಕಾರು ಹ್ಯಾಚ್‌ಬ್ಯಾಕ್ ಮಾದರಿಗಳಲ್ಲಿಯೇ ಹೆಚ್ಚಿನ ಇಂಧನ ದಕ್ಷತೆ ಹೊಂದಿದ್ದು, ಹೊಸ ಕಾರು ಪೆಟ್ರೋಲ್ ಮತ್ತು ಸಿಎನ್‌ಜಿ ಎರಡು ಮಾದರಿಗಳಲ್ಲೂ ಖರೀದಿಗೆ ಲಭ್ಯವಿರಲಿದೆ.

ಭಾರತದಲ್ಲಿ ಬಿಡುಗಡೆಗಾಗಿ ಸಿದ್ದವಾಗಿರುವ ಟಾಪ್ 5 ಹೊಸ ಕಾರು ಮಾದರಿಗಳಿವು!

ಟಿಯಾಗೋ ಸಿಎನ್‌ಜಿ ಮಾದರಿ

ಹೊಸ ಕಾರುಗಳ ಮಾರಾಟದಲ್ಲಿ ಈಗಾಗಲೇ ಹಲವಾರು ಬದಲಾವಣೆಗಳನ್ನು ಪರಿಚಯಿಸುವ ಮೂಲಕ ಮಾರುಕಟ್ಟೆಯಲ್ಲಿ ಮುಂಚೂಣಿ ಸಾಧಿಸುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ತನ್ನ ಪ್ರಮುಖ ಕಾರುಗಳಲ್ಲಿ ಡೀಸೆಲ್ ಮತ್ತು ಪೆಟ್ರೋಲ್ ಮಾದರಿಗಳ ಜೊತೆಗೆ ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲೂ ಗಮನಸೆಳೆಯುತ್ತಿದ್ದು, ಇದೀಗ ಮೊದಲ ಬಾರಿಗೆ ಸಿಎನ್‌ಜಿ ಮಾದರಿಗಳನ್ನು ಸಹ ಬಿಡುಗಡೆಗಾಗಿ ಸಿದ್ದತೆ ನಡೆಸಿದೆ.

ಭಾರತದಲ್ಲಿ ಬಿಡುಗಡೆಗಾಗಿ ಸಿದ್ದವಾಗಿರುವ ಟಾಪ್ 5 ಹೊಸ ಕಾರು ಮಾದರಿಗಳಿವು!

ಮಾರುಕಟ್ಟೆಯಲ್ಲಿ ಸಿಎನ್‌ಜಿ ಕಾರುಗಳಿಗೆ ಬೇಡಿಕೆ ಹರಿದುಬರುತ್ತಿರುವ ಹಿನ್ನಲೆಯಲ್ಲಿ ಕಂಪನಿಯು ಟಿಯಾಗೋ ಹ್ಯಾಚ್‌ಬ್ಯಾಕ್ ಮಾದರಿಯಲ್ಲಿ ಸಿಎನ್‌ಜಿ ತಂತ್ರಜ್ಞಾನವನ್ನು ಅಳವಡಿಸಲು ನಿರ್ಧರಿಸಿದ್ದು, ಈ ತಿಂಗಳಾಂತ್ಯಕ್ಕೆ ಹೊಸ ಕಾರು ಬಿಡುಗಡೆಯಾಗಲಿದೆ. ಟಿಯಾಗೋ ನಂತರ ಟಿಗೋರ್ ಕೂಡಾ ಸಿಎನ್‌ಜಿ ಮಾದರಿಯು ಬಿಡುಗಡೆಯಾಗಲಿದ್ದು, ಹೊಸ ಕಾರುಗಳು ಪೆಟ್ರೋಲ್ ಮಾದರಿಗಳಿಂತಲೂ ಹೆಚ್ಚಿನ ಮಟ್ಟದ ಮೈಲೇಜ್ ಹೊಂದಿದೆ.

ಭಾರತದಲ್ಲಿ ಬಿಡುಗಡೆಗಾಗಿ ಸಿದ್ದವಾಗಿರುವ ಟಾಪ್ 5 ಹೊಸ ಕಾರು ಮಾದರಿಗಳಿವು!

ಸ್ಕೋಡಾ ಸ್ಲಾವಿಯಾ ಸೆಡಾನ್

ಹೊಸ ಸ್ಕೋಡಾ ಸ್ಲಾವಿಯಾ ಕಾರು ಮಾದರಿಯು ಪ್ರಸ್ತುತ ಮಾರುಕಟ್ಟೆಯಲ್ಲಿನ ರ‍್ಯಾಪಿಡ್ ಸೆಡಾನ್ ಬದಲಾಗಿ ಮಾರುಕಟ್ಟೆ ಪ್ರವೇಶಿಸುತ್ತಿದ್ದು, ಇದೇ ತಿಂಗಳು 18ರಂದು ಹೊಸ ಕಾರು ಉತ್ಪಾದನಾ ಮಾದರಿಯೊಂದಿಗೆ ಅನಾವರಣಗೊಳ್ಳುತ್ತಿದೆ. ಸಿ ಸೆಗ್ಮೆಂಟ್ ಸೆಡಾನ್ ಮಾದರಿಯಲ್ಲಿ ಪ್ರಸ್ತುತ ಮಾರುಕಟ್ಟೆಯಲ್ಲಿರುವ ರ‍್ಯಾಪಿಡ್ ಸ್ಥಗಿತಗೊಳಿಸಿ ರ‍್ಯಾಪಿಡ್‌ಗಿಂತಲೂ ಉತ್ತಮ ವಿನ್ಯಾಸದ ಸ್ಲಾವಿಯಾ ಬಿಡುಗಡೆ ಮಾಡುತ್ತಿದೆ.

ಭಾರತದಲ್ಲಿ ಬಿಡುಗಡೆಗಾಗಿ ಸಿದ್ದವಾಗಿರುವ ಟಾಪ್ 5 ಹೊಸ ಕಾರು ಮಾದರಿಗಳಿವು!

ಹೊಸ ಕಾರು ಕುಶಾಕ್ ಮಾದರಿಯಲ್ಲಿ 1.0-ಲೀಟರ್ ಟಿಎಸ್ಐ ಮೂರು-ಸಿಲಿಂಡರ್ 1.5-ಲೀಟರ್ ಟರ್ಬೊ ಟಿಎಸ್ಐ ಎಂಜಿನ್ ಆಯ್ಕೆ ಹೊಂದಿರಲಿದ್ದು, ಹೋಂಡಾ ಸಿಟಿ ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುವ ತವಕದಲ್ಲಿದೆ. ಸಿಟಿ ಸೆಡಾನ್ ಮಾದರಿಗಿಂತಲೂ ಹೆಚ್ಚು ಉದ್ದಳತೆಯೊಂದಿಗೆ ಅತ್ಯುತ್ತಮ ಒಳಾಂಗಣ ಮತ್ತು ಪ್ರೀಮಿಯಂ ಫೀಚರ್ಸ್ ಹೊಂದಿರುವ ಸ್ಲಾವಿಯಾ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.9 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 16 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗುವ ಸಾಧ್ಯತೆಗಳಿವೆ.

ಭಾರತದಲ್ಲಿ ಬಿಡುಗಡೆಗಾಗಿ ಸಿದ್ದವಾಗಿರುವ ಟಾಪ್ 5 ಹೊಸ ಕಾರು ಮಾದರಿಗಳಿವು!

ಆಡಿ ಕ್ಯೂ5 ಫೇಸ್‌ಲಿಫ್ಟ್

ಆಡಿ ಇಂಡಿಯಾ ತನ್ನ ಬಹುನಿರೀಕ್ಷಿತ ಕ್ಯೂ5 ಫೇಸ್‌ಲಿಫ್ಟ್ ಎಸ್‍ಯುವಿಯನ್ನು ಇದೇ ತಿಂಗಳಾಂತ್ಯಕ್ಕೆ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದ್ದು, ಫೇಸ್‌ಲಿಫ್ಟ್ ಮಾದರಿಯು ಸುಧಾರಿತ ಸ್ಟೈಲಿಂಗ್, ಟೆಕ್-ಲೋಡೆನ್ ಇಂಟಿರಿಯರ್ ಮತ್ತು ಟರ್ಬೊ ಪೆಟ್ರೋಲ್ ಎಂಜಿನ್ ಪಡೆದುಕೊಳ್ಳಲಿದೆ.

ಭಾರತದಲ್ಲಿ ಬಿಡುಗಡೆಗಾಗಿ ಸಿದ್ದವಾಗಿರುವ ಟಾಪ್ 5 ಹೊಸ ಕಾರು ಮಾದರಿಗಳಿವು!

ಬಿಎಸ್ 6 ಜಾರಿ ನಂತರ ಕ್ಯೂ5 ಎಸ್‌ಯುವಿಯನ್ನು ಸ್ಥಗಿತಗೊಳಿಸಿದ್ದ ಆಡಿ ಕಂಪನಿಯು ಇದೀಗ ಹೊಸ ಬದಲಾವಣೆಗಳೊಂದಿಗೆಹ ಬಿಡುಗಡೆಗೆ ಸಿದ್ದವಾಗಿದ್ದು, ಹೊಸ ಕಾರು ಈ ಬಾರಿ ಸಂಪೂರ್ಣವಾಗಿ ಭಾರತದಲ್ಲಿ ನಿರ್ಮಾಣಗೊಳ್ಳುತ್ತಿದೆ. ಹೊಸ ಕಾರಿನ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ. 55 ಲಕ್ಷದಿಂದ ಆರಂಭಗೊಳ್ಳುವ ಸಾಧ್ಯತೆಗಳಿದ್ದು, 2.0 ಲೀಟರ್ ಟಿಎಫ್ಎಸ್ಐ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರಲಿದೆ.

ಭಾರತದಲ್ಲಿ ಬಿಡುಗಡೆಗಾಗಿ ಸಿದ್ದವಾಗಿರುವ ಟಾಪ್ 5 ಹೊಸ ಕಾರು ಮಾದರಿಗಳಿವು!

ಮಿನಿ ಕೂಪರ್ ಎಸ್ಇ ಎಲೆಕ್ಟ್ರಿಕ್ ಕಾರು

ಬಿಎಂಡಬ್ಲ್ಯ ಸಹಭಾಗಿತ್ವ ಸಂಸ್ಥೆಯಾಗಿರುವ ಮಿನಿ ಇಂಡಿಯಾ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಮೊದಲ ಎಲೆಕ್ಟ್ರಿಕ್ ಕಾರು ಕೂಪರ್ ಎಸ್ಇ ಎಲೆಕ್ಟ್ರಿಕ್ ಕಾರು ಮಾದರಿಯನ್ನು ಬಿಡುಗಡೆ ಮಾಡಲು ಸಿದ್ದವಾಗಿದ್ದು, ಹೊಸ ಕಾರು ಖರೀದಿಗಾಗಿ ಈಗಾಗಲೇ ಅಧಿಕೃತ ಬುಕ್ಕಿಂಗ್ ಆರಂಭಿಸಲಾಗಿದೆ.

ಭಾರತದಲ್ಲಿ ಬಿಡುಗಡೆಗಾಗಿ ಸಿದ್ದವಾಗಿರುವ ಟಾಪ್ 5 ಹೊಸ ಕಾರು ಮಾದರಿಗಳಿವು!

ಮಿನಿ ಕಂಪನಿಯು ಭಾರತದಲ್ಲಿ ಮೊದಲ ಬ್ಯಾಚ್‌ನಲ್ಲಿ ಕೇವಲ 30 ಯುನಿಟ್‌ಗಳನ್ನು ಮಾತ್ರ ಮಾರಾಟ ಮಾಡಲು ನಿರ್ಧರಿಸಿದ್ದು, ಸಂಪೂರ್ಣವಾಗಿ ಬಿಲ್ಟ್ ಯುನಿಟ್ ಅಗಿ (ಸಿಬಿಯು) ಬರುತ್ತದೆ.

ಫ್ರಂಟ್ ವ್ಹೀಲ್ ಡ್ರೈವ್ ಸೇರಿದಂತೆ ಹಲವಾರು ಹೊಸ ವೈಶಿಷ್ಟ್ಯತೆಗಳನ್ನು ಹೊಂದಿರುವ ಹೊಸ ಕಾರು 32.6 ಕಿವ್ಯಾಟ್ ಬ್ಯಾಟರಿ ಪ್ಯಾಕ್‌ ಅನ್ನು ಹೊಂದಿರಲಿದ್ದು, ಪ್ರತಿ ಚಾರ್ಜ್‌ಗೆ ಗರಿಷ್ಠ 250 ಕಿ.ಮೀ ನಿಂದ 270 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ. ಜೊತಗೆ ಹಲವಾರು ಐಷಾರಾಮಿ ಫೀಚರ್ಸ್ ಹೊಂದಲಿರುವ ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.35 ಲಕ್ಷದಿಂದ ರೂ.40 ಲಕ್ಷ ಬೆಲೆ ಅಂತದಲ್ಲಿ ಬಿಡುಗಡೆಯಾಗಬಹುದಾಗಿದೆ.

Most Read Articles

Kannada
English summary
Top 5 upcoming cars in india maruti suzuki celerio tata tiago cng skoda slavia details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X