ಶೀಘ್ರದಲ್ಲೇ ಬಿಡುಗಡೆಯಾಗಲಿರುವ ಟಾಪ್ 5 ಎಸ್‌ಯುವಿ ಕಾರುಗಳಿವು!

ಭಾರತೀಯ ಆಟೋ ಉದ್ಯಮವು ಕೋವಿಡ್ 2ನೇ ಅಲೆಯ ನಂತರ ಪರಿಸ್ಥಿತಿಗೆ ಅನುಗುಣವಾಗಿ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದು, ವೈರಸ್ ಪರಿಣಾಮ ಬಿಡುಗಡೆಯಿಂದ ಹಿಂದೆ ಸರಿದಿದ್ದ ಹಲವು ಹೊಸ ವಾಹನಗಳು ಇದೀಗ ಮಾರುಕಟ್ಟೆ ಪ್ರವೇಶಿಸುತ್ತಿವೆ.

ಶೀಘ್ರದಲ್ಲೇ ಬಿಡುಗಡೆಯಾಗಲಿರುವ ಟಾಪ್ 5 ಎಸ್‌ಯುವಿ ಕಾರುಗಳಿವು!

ಕೋವಿಡ್‌ನಿಂದಾಗಿ ಆರ್ಥಿಕ ಪರಿಸ್ಥಿತಿಯು ಸಾಕಷ್ಟು ಕುಸಿತ ಕಂಡಿದ್ದರೂ ಸೋಂಕಿನ ಭೀತಿಯಿಂದಾಗಿ ಸ್ವಂತ ವಾಹನಗಳ ಬಳಕೆ ಹೆಚ್ಚುತ್ತಿದ್ದು, ಇದು ಹೊಸ ವಾಹನ ಮಾರಾಟದಲ್ಲಿ ತ್ವರಿತವಾಗಿ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ. ಹೀಗಾಗಿ ವಿವಿಧ ಕಾರು ಉತ್ಪಾದನಾ ಕಂಪನಿಗಳು ತಮ್ಮ ಬಹುನೀರಿಕ್ಷಿತ ಕಾರುಗಳನ್ನು ಬಿಡುಗಡೆ ಮಾಡುವ ಸಿದ್ದತೆಯಲ್ಲಿದ್ದು, ಮುಂಬರುವ ಕೆಲವೇ ದಿನಗಳಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಟಾಪ್ 5 ಕಾರುಗಳ ಮಾಹಿತಿಯನ್ನು ಇಲ್ಲಿ ತಿಳಿಯೋಣ.

ಶೀಘ್ರದಲ್ಲೇ ಬಿಡುಗಡೆಯಾಗಲಿರುವ ಟಾಪ್ 5 ಎಸ್‌ಯುವಿ ಕಾರುಗಳಿವು!

ಮಹೀಂದ್ರಾ ಎಕ್ಸ್‌ಯುವಿ700

ಬಹುನೀರಿಕ್ಷಿತ ಮಹೀಂದ್ರಾ ಎಕ್ಸ್‌ಯುವಿ700 ಎಸ್‌ಯುವಿ ಮಾದರಿಯು ಇದೇ ತಿಂಗಳು 15ರಂದು ಉತ್ಪಾದನಾ ಆವೃತ್ತಿಯು ಅನಾವರಣಗೊಳ್ಳಲಿದ್ದು, ಅನಾವರಣಗೊಂಡ ಮುಂದಿನ ಕೆಲವೇ ದಿನಗಳಲ್ಲಿ ಹೊಸ ಕಾರು ಖರೀದಿಗೆ ಲಭ್ಯವಿರಲಿದೆ. ಎಕ್ಸ್‌ಯುವಿ500 ಕಾರಿನ ನ್ಯೂ ಜನರೇಷನ್ ಮಾದರಿಯಾಗಿರುವ ಎಕ್ಸ್‌ಯುವಿ700 ಮಾದರಿಯು ಅತಿಹೆಚ್ಚು ವ್ಹೀಲ್ ಬೆಸ್‌ನೊಂದಿಗೆ 7 ಸೀಟರ್ ಮತ್ತು 6 ಸೀಟರ್ ಮಾದರಿಯಲ್ಲಿ ಮಾರಾಟಗೊಳ್ಳಲಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿರುವ ಟಾಪ್ 5 ಎಸ್‌ಯುವಿ ಕಾರುಗಳಿವು!

ಹೊಸ ಎಕ್ಸ್‌ಯುವಿ700 ಮಾದರಿಯು 2.0-ಲೀಟರ್ ಪೆಟ್ರೋಲ್ ಮತ್ತು 2.2-ಲೀಟರ್ ಡೀಸೆಲ್ ಎಂಜಿನ್‌ ಸೇರಿದಂತೆ ಹೊಸ ಬ್ರಾಂಡ್ ಲೋಗೋದೊಂಗಿಗೆ ಬಿಡುಗಡೆಗಾಗಿ ಸಿದ್ದವಾಗುತ್ತಿದ್ದು, ಹೊಸ ಕಾರು ಎಕ್ಸ್‌ಯುವಿ500 ಮಾದರಿಗಿಂತಲೂ ಬೆಲೆಯಲ್ಲಿ ರೂ. 1 ಲಕ್ಷದಿಂದ ರೂ.2 ಲಕ್ಷದಷ್ಟು ದುಬಾರಿಯಾಗಿರಲಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿರುವ ಟಾಪ್ 5 ಎಸ್‌ಯುವಿ ಕಾರುಗಳಿವು!

ಫೋರ್ಸ್ ಬಿಎಸ್-6 ಗೂರ್ಖಾ

ಫೋರ್ಸ್ ಮೋಟಾರ್ಸ್ ಕಂಪನಿಯ ತನ್ನ ಬಹುನೀರಿಕ್ಷಿತ ಬಿಎಸ್-6 ಗೂರ್ಖಾ ಎಸ್‌ಯುವಿ ಕಾರು ಮಾದರಿಯನ್ನು ಭಾರತದಲ್ಲಿ ಬಿಡುಗಡೆಗಾಗಿ ಅಂತಿಮ ಸಿದ್ದತೆ ನಡೆಸುತ್ತಿದ್ದು, ಹೊಸ ಗೂರ್ಖಾ ಮಾದರಿಯನ್ನು ಕಂಪನಿಯು ಈ ತಿಂಗಳ ಕೊನೆಯಲ್ಲಿ ಬಿಡುಗಡೆ ಮಾಡುವ ಸುಳಿವು ನೀಡಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿರುವ ಟಾಪ್ 5 ಎಸ್‌ಯುವಿ ಕಾರುಗಳಿವು!

ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಗೂರ್ಖಾ ಎಸ್‌ಯುವಿಯನ್ನು ಫೋರ್ಸ್ ಮೋಟಾರ್ಸ್ ಕಂಪನಿಯು ಉನ್ನತೀಕರಿಸಿದ್ದು, ಹೊಸ ಕಾರು ಹಲವಾರು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಹೊರ ಮತ್ತು ಒಳ ವಿನ್ಯಾಸದಲ್ಲಿ ಸಾಕಷ್ಟು ಸುಧಾರಣೆಗೊಂಡಿದೆ. ಬಿಎಸ್-6 ಎಮಿಷನ್ ನಿಯಮದಿಂದಾಗಿ ಹೊಸ ಕಾರಿನ ಎಂಜಿನ್‌ ಆಯ್ಕೆಯಲ್ಲಿ ಮಾತ್ರವಲ್ಲದೇ ಪ್ರೀಮಿಯಂ ಫೀಚರ್ಸ್‌ಗಳು ಮತ್ತು ಪ್ರಯಾಣಿಕ ಸುರಕ್ಷತೆಯಲ್ಲೂ ಸಾಕಷ್ಟು ಬದಲಾವಣೆ ಹೊಂದಿದ್ದು, ಸೆಗ್ಮೆಂಟ್ ಫಸ್ಟ್ ಫೀಚರ್ಸ್‌ನೊಂದಿಗೆ ಆಫ್ ರೋಡ್ ಪ್ರಿಯರನ್ನು ಸೆಳೆಯಲಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿರುವ ಟಾಪ್ 5 ಎಸ್‌ಯುವಿ ಕಾರುಗಳಿವು!

ಫೋಕ್ಸ್‌ವ್ಯಾಗನ್ ಟೈಗನ್

ಫೋಕ್ಸ್‌ವ್ಯಾಗನ್ ಇಂಡಿಯಾ ಕಂಪನಿಯು ತನ್ನ ಹೊಚ್ಚ ಹೊಸ ಟೈಗನ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆಗಾಗಿ ಅಂತಿಮ ಹಂತದ ಸಿದ್ದತೆ ನಡೆಸಿದ್ದು, ಸೆಪ್ಟೆಂಬರ್ ಮೊದಲ ವಾರದಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರು ಖರೀದಿಗೆ ಈಗಾಗಲೇ ಅಧಿಕೃತ ಬುಕ್ಕಿಂಗ್ ಪ್ರಕ್ರಿಯೆಯನ್ನು ಆರಂಭಿಸಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿರುವ ಟಾಪ್ 5 ಎಸ್‌ಯುವಿ ಕಾರುಗಳಿವು!

ಸ್ಟ್ಯಾಂಡರ್ಡ್ ಮತ್ತು ಜಿಟಿ ಆವೃತ್ತಿಗಳಲ್ಲಿ ಖರೀದಿಗೆ ಲಭ್ಯವಿರಲಿರುವ ಹೊಸ ಕಾರಿನಲ್ಲಿ 1.0-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಟಿಎಸ್ಐ ಪೆಟ್ರೋಲ್ ಎಂಜಿನ್ ನೀಡಲಾಗುತ್ತಿದ್ದು, ಸ್ಕೋಡಾ ಕುಶಾಕ್ ಜೊತೆಗೆ ಪ್ಲ್ಯಾಟ್‌ಫಾರ್ಮ್ ಹಂಚಿಕೊಂಡಿರುವ ಟೈಗನ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 10 ಲಕ್ಷದಿಂದ ರೂ. 16.50 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗಬಹುದೆಂದು ನೀರಿಕ್ಷಿಸಲಾಗಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿರುವ ಟಾಪ್ 5 ಎಸ್‌ಯುವಿ ಕಾರುಗಳಿವು!

ಟಾಟಾ ಮೈಕ್ರೊ ಎಸ್‌ಯುವಿ

ಟಾಟಾ ಮೋಟಾರ್ಸ್ ಕಂಪನಿಯು ತನ್ನ ಬಹುನೀರಿಕ್ಷಿತ ಹೆಚ್‌ಬಿಎಕ್ಸ್ ಕಾನ್ಸೆಪ್ಟ್ ಮೈಕ್ರೊ ಎಸ್‌ಯುವಿ ಆವೃತ್ತಿಯನ್ನು ಬಿಡುಗಡೆ ಮಾಡುವ ಅಂತಿಮ ಹಂತದ ಸಿದ್ದತೆಯಲ್ಲಿದ್ದು, ಹೊಸ ಕಾರಿನ ರೋಡ್ ಟೆಸ್ಟಿಂಗ್ ಪೂರ್ಣಗೊಳಿಸಿ ಮೊದಲ ಹಂತದ ಉತ್ಪಾದನಾ ಪ್ರಕ್ರಿಯೆಗೆ ಈಗಾಗಲೇ ಚಾಲನೆ ನೀಡಲಾಗಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿರುವ ಟಾಪ್ 5 ಎಸ್‌ಯುವಿ ಕಾರುಗಳಿವು!

ಹೆಚ್‌ಬಿಎಕ್ಸ್ ಕಾನ್ಸೆಪ್ಟ್ ಮೈಕ್ರೊ ಎಸ್‌ಯುವಿಯು ಎಂಟ್ರಿ ಲೆವಲ್ ಕಾರುಗಳಲ್ಲೇ ವಿಶೇಷ ಸೌಲಭ್ಯಗಳೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದ್ದು, ಇಂಪ್ಯಾಕ್ಟ್ 2.0 ತತ್ವಜ್ಞಾನ ಪ್ರೇರಿತ ಉತ್ಪಾದನಾ ಪ್ಲ್ಯಾಟ್‌ಫಾರ್ಮ್ ಆಧರಿಸಿ ಅಭಿವೃದ್ದಿಗೊಂಡಿರುವ ಹೊಸ ಕಾರು 1.2-ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆಯೊಂದಿಗೆ ಬಜೆಟ್ ಕಾರು ಮಾರಾಟದಲ್ಲಿ ಭಾರೀ ಬೇಡಿಕೆ ಪಡೆದುಕೊಳ್ಳುವ ತವಕದಲ್ಲಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿರುವ ಟಾಪ್ 5 ಎಸ್‌ಯುವಿ ಕಾರುಗಳಿವು!

ಸಿಟ್ರನ್ ಕಂಪ್ಯಾಕ್ಟ್ ಎಸ್‌ಯುವಿ

ಭಾರತದಲ್ಲಿ ಹೊಸದಾಗಿ ಕಾರು ಮಾರಾಟ ಆರಂಭಿಸಿರುವ ಸಿಟ್ರನ್ ಕಂಪನಿಯು ಸಿ5 ಏರ್‌ಕ್ರಾಸ್ ಐಷಾರಾಮಿ ಎಸ್‌ಯುವಿ ಬಿಡುಗಡೆಯ ನಂತರ ಎರಡನೇ ಕಾರು ಮಾದರಿಯಾಗಿ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಸಿ3 ಮಾದರಿಯನ್ನು ಬಿಡುಗಡೆ ಮಾಡಲು ಸಿದ್ದವಾಗಿದ್ದು, ಹೊಸ ಕಾರನ್ನು ಸಿ21 ಹೆಸರಿನೊಂದಿಗೆ ವಿವಿಧ ಎಂಜಿನ್ ಆಯ್ಕೆಗಳೊಂದಿಗೆ ರೋಡ್ ಟೆಸ್ಟಿಂಗ್ ಪೂರ್ಣಗೊಳಿಸುತ್ತಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿರುವ ಟಾಪ್ 5 ಎಸ್‌ಯುವಿ ಕಾರುಗಳಿವು!

ಸಿ3 ಕಂಪ್ಯಾಕ್ಟ್ ಎಸ್‌ಯುವಿಯಲ್ಲಿ 1.2-ಲೀಟರ್ ಸಾಮಾನ್ಯ ಪೆಟ್ರೋಲ್ ಮತ್ತು 1.0-ಲೀಟರ್ ಟರ್ಬೊ ಪೆಟ್ರೋಲ್ ಮಾದರಿಗಳನ್ನು ಪಡೆದುಕೊಳ್ಳುವ ಸಾಧ್ಯತೆಗಳಿದ್ದು, ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಎರಡು ಗೇರ್‌ಬಾಕ್ಸ್ ಆಯ್ಕೆಗಳಿರಲಿವೆ.

Article Published On: Tuesday, August 10, 2021, 11:06 [IST]
English summary
Top 5 upcoming suv cars in 2021. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+