ಭಾರತದಲ್ಲಿ ರೂ.20 ಲಕ್ಷಕ್ಕಿಂತ ಕಡಿಮೆ ಬೆಲೆಯಲ್ಲಿ ಸಿಗುವ 7-ಸೀಟರ್ ಎಸ್‍ಯುವಿಗಳಿವು

ಭಾರತೀಯ ಮಾರುಕಟ್ತೆಯಲ್ಲಿ ದಿನದಂದ ದಿನಕ್ಕೆ 7-ಸೀಟರ್ ಎಸ್‍ಯುವಿಗಳ ಬೇಡಿಕೆ ಹೆಚ್ಚಾಗುತ್ತಿದೆ. ಹಲವು ಜನಪ್ರಿಯ ಕಾರು ತಯಾರಕ ಕಂಪನಿಗಳು 7-ಸೀಟರ್ ಎಸ್‍ಯುವಿಗಳನ್ನು ಬಿಡುಗಡೆಗೊಳಿಸುತ್ತಿದ್ದಾರೆ. ಇದರಿಂದ ಭಾರತದಲ್ಲಿ 7-ಸೀಟರ್ ಎಸ್‍ಯುವಿ ವಿಭಾಗದಲ್ಲಿ ಗ್ರಾಹಕರಿಗೆ ಹಲವು ಆಯ್ಕೆಗಳಿವೆ.

ಭಾರತದಲ್ಲಿ ರೂ.20 ಲಕ್ಷಕ್ಕಿಂತ ಕಡಿಮೆ ಬೆಲೆಯಲ್ಲಿ ಸಿಗುವ 7-ಸೀಟರ್ ಎಸ್‍ಯುವಿಗಳಿವು

ಸ್ವದೇಶಿ ಕಾರು ತಯಾರಕ ಕಂಪನಿಯಾದ ಟಾಟಾ ಮೋಟಾರ್ಸ್ ತನ್ನ ಹ್ಯಾರಿಯರ್ ಎಸ್‍ಯುವಿಯ 7-ಸೀಟರ್ ಮಾದರಿಯಾಗಿ ಸಫಾರಿ ಹೆಸರಿನಲ್ಲಿ ಬಿಡುಗಡೆಗೊಳಿಸಲಾಗಿದೆ. ಇದೇ ಸಾಲಿಗೆ ಹೆಕ್ಟರ್ ಪ್ಲಸ್ ಎಸ್‍ಯುವಿಯು ಕೂಡ ಸೇರುತ್ತದೆ. ಭಾರತದಲ್ಲಿ ಹೆಚ್ಚಿನ ಸದಸ್ಯರನ್ನು ಒಳಗೊಂಡಿರುವ ದೊಡ್ಡ ಕುಟುಂಬಗಳು ಹೆಚ್ಚು ಇವೆ. ಎಲ್ಲರೂ ಒಟ್ಟಿಗೆ ಪ್ರಯಾಣ ಮಾಡಲು 7-ಸೀಟರ್ಎಸ್‍ಯುವಿಗಳನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ಆದರೆ 7-ಸೀಟರ್ ಎಸ್‍ಯುವಿ ಹೆಚ್ಚು ದುಬಾರಿ ಎಂದುಕೊಂಡು ಹೆಚ್ಚಿನ ಜನರು ಖರೀದಿಸಲು ಹಿಂದೇಟು ಹಾಕುತ್ತಾರೆ.

ಭಾರತದಲ್ಲಿ ರೂ.20 ಲಕ್ಷಕ್ಕಿಂತ ಕಡಿಮೆ ಬೆಲೆಯಲ್ಲಿ ಸಿಗುವ 7-ಸೀಟರ್ ಎಸ್‍ಯುವಿಗಳಿವು

ಆದರೆ ಬಾರತೀಯ ಮಾರುಕಟ್ಟೆಯಲ್ಲಿ ಕೆಲವು ಜನಪ್ರಿಯ ಕಾರು ತಯಾರಕ ಕಂಪನಿಗಳ 7-ಸೀಟರ್ ಎಸ್‍ಯುವಿಗಳು ಕೈಗೆಡುಕುವ ದರದಲ್ಲಿ ಲಭ್ಯವಿದೆ. ಭಾರತದಲ್ಲಿ ಲಭ್ಯವಿರುವ 20 ಲಕ್ಷಕ್ಕಿಂತ ಕಡಿಮೆ ಬೆಲೆಯಲ್ಲಿ ಲಭ್ಯವಿರುವ 7-ಸೀಟರ್ ಕಾರುಗಳ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.

ಭಾರತದಲ್ಲಿ ರೂ.20 ಲಕ್ಷಕ್ಕಿಂತ ಕಡಿಮೆ ಬೆಲೆಯಲ್ಲಿ ಸಿಗುವ 7-ಸೀಟರ್ ಎಸ್‍ಯುವಿಗಳಿವು

ಟಾಟಾ ಸಫಾರಿ

ನ್ಯೂ ಜನರೇಷನ್ ಟಾಟಾ ಸಫಾರಿ ಎಸ್‍ಯುವಿಯನ್ನು ಈ ವರ್ಷ ಫೆಬ್ರವರಿಯಲ್ಲಿ ಭಾರತದಲ್ಲಿ ಬಿಡುಗಡೆಗೊಳಿಸಲಾಗಿತ್ತು. ಈ ಹೊಸ ಟಾಟಾ ಸಫಾರಿ ಎಸ್‍ಯುವಿಯ ಆರಂಭಿಕ ಬೆಲೆ ರೂ.14.99 ಲಕ್ಷಗಳಾಗಿದೆ. ಈ ಎಸ್‍ಯುವಿಯು 7-ಸೀಟರ್ ಮತ್ತು 6-ಸೀಟರ್ ಸಂರಚನೆಯಲ್ಲಿ ಲಭ್ಯವಿದೆ.

ಭಾರತದಲ್ಲಿ ರೂ.20 ಲಕ್ಷಕ್ಕಿಂತ ಕಡಿಮೆ ಬೆಲೆಯಲ್ಲಿ ಸಿಗುವ 7-ಸೀಟರ್ ಎಸ್‍ಯುವಿಗಳಿವು

ಈ ಹೊಸ ಟಾಟಾ ಸಫಾರಿ ಎಸ್‍ಯುವಿಯಲ್ಲಿ 2.0-ಲೀಟರ್ ಟರ್ಬೊ-ಡೀಸೆಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 170 ಬಿಹೆಚ್‍ಪಿ ಪವರ್ ಮತ್ತು 350 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಟಾರ್ಕ್-ಕರ್ನವಾಟರ್ ಅನ್ನು ಜೋಡಿಸಲಾಗಿದೆ.

ಭಾರತದಲ್ಲಿ ರೂ.20 ಲಕ್ಷಕ್ಕಿಂತ ಕಡಿಮೆ ಬೆಲೆಯಲ್ಲಿ ಸಿಗುವ 7-ಸೀಟರ್ ಎಸ್‍ಯುವಿಗಳಿವು

ಹ್ಯುಂಡೈ ಅಲ್ಕಾಜರ್

ಹ್ಯುಂಡೈ ಕಂಪನಿಯು ಈ ಹೊಸ ಅಲ್ಕಾಜರ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಈ ಎಸ್‍ಯುವಿಯು 6 ಮತ್ತು 7 ಸೀಟುಗಳ ಆಯ್ಕೆಗಳನ್ನು ಹೊಂದಿವೆ. ಹೊಸ ಹ್ಯುಂಡೈ ಅಲ್ಕಾಜರ್ ಎಸ್‍ಯುವಿ ಆರಂಭಿಕ ಬೆಲೆಯು ಪೆಟ್ರೋಲ್ ಮಾದರಿಗೆ ರೂ.16.30 ಲಕ್ಷಗಳಾದರೆ. ಡೀಸೆಲ್ ಮಾದರಿಗೆ ರೂ,16.53 ಲಕ್ಷಗಳಾಗಿದೆ.

ಭಾರತದಲ್ಲಿ ರೂ.20 ಲಕ್ಷಕ್ಕಿಂತ ಕಡಿಮೆ ಬೆಲೆಯಲ್ಲಿ ಸಿಗುವ 7-ಸೀಟರ್ ಎಸ್‍ಯುವಿಗಳಿವು

ಈ ಹ್ಯುಂಡೈ ಅಲ್ಕಾಜರ್ ಎಸ್‍ಯುವಿಯಲ್ಲಿ 2.0-ಲೀಟರ್ ಎನ್ಎ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 159 ಬಿಹೆ‍ಪಿ ಪವರ್ ಮತ್ತು 191 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇದರೊಂದಿಗೆ 1.5-ಲೀಟರ್ ಟರ್ಬೊ-ಡೀಸೆಲ್ ಎಂಜಿನ್ ಅನ್ನು ಹೊಂದಿದ್ದು, ಈ ಎಂಜಿನ್ 115 ಬಿಹೆಚ್‍ಪಿ ಪವರ್ ಮತ್ತು 250 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಭಾರತದಲ್ಲಿ ರೂ.20 ಲಕ್ಷಕ್ಕಿಂತ ಕಡಿಮೆ ಬೆಲೆಯಲ್ಲಿ ಸಿಗುವ 7-ಸೀಟರ್ ಎಸ್‍ಯುವಿಗಳಿವು

ಮಹೀಂದ್ರಾ ಎಕ್ಸ್‌ಯುವಿ500

ಸ್ವದೇಶಿ ಮಹೀಂದ್ರಾ ಎಕ್ಸ್‌ಯುವಿ500 ಎಸ್‍ಯುವಿಯ ಆರಂಬಿಕ ಬೆಲೆಯು ರೂ,15.52 ಲಕ್ಷಗಳಾಗಿದೆ. ಈ ಮಹೀಂದ್ರಾ ಎಕ್ಸ್‌ಯುವಿ500 ಎಸ್‍ಯುವಿಯಲ್ಲಿ 2.2-ಲೀಟರ್ ಟರ್ಬೊ-ಡೀಸೆಲ್ ಎಂಜಿನ್‌ ಅನ್ನು ಹೊಂದಿದ್ದು, ಇದು 155 ಬಿಹೆಚ್‍ಪಿ ಪವರ್ ಮತ್ತು 360 ಎನ್‌ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಭಾರತದಲ್ಲಿ ರೂ.20 ಲಕ್ಷಕ್ಕಿಂತ ಕಡಿಮೆ ಬೆಲೆಯಲ್ಲಿ ಸಿಗುವ 7-ಸೀಟರ್ ಎಸ್‍ಯುವಿಗಳಿವು

ಮಹೀಂದ್ರಾ ಸ್ಕಾರ್ಪಿಯೋ

ಈ ಮಹೀಂದ್ರಾ ಸ್ಕಾರ್ಪಿಯೋ ಎಸ್‍ಯುವಿಯ ಆರಂಭಿಕ ಬೆಲೆಯು ರೂ,12.31 ಲಕ್ಷಗಳಾಗಿದೆ. ಸ್ಕಾರ್ಪಿಯೋದಲ್ಲಿ 2.2 ನಾಲ್ಕು ಸಿಲಿಂಡರ್ ಡೀಸೆಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 140 ಬಿಹೆಚ್‍ಪಿ ಪವರ್ ಮತ್ತು 320 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 6-ಸ್ಪೀಡ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ.

ಭಾರತದಲ್ಲಿ ರೂ.20 ಲಕ್ಷಕ್ಕಿಂತ ಕಡಿಮೆ ಬೆಲೆಯಲ್ಲಿ ಸಿಗುವ 7-ಸೀಟರ್ ಎಸ್‍ಯುವಿಗಳಿವು

ಎಂಜಿ ಹೆಕ್ಟರ್ ಪ್ಲಸ್

ಹೊಸ ಎಂಜಿ ಹೆಕ್ಟರ್ ಪ್ಲಸ್ ಎಸ್‍ಯುವಿಯು 7 ಮತ್ತು 6 ಸಂರಚನೆಗಳ ಆಯ್ಕೆಯಲ್ಲಿ ಲಭ್ಯವಿದೆ. ಈ ಎಂಜಿ ಹೆಕ್ಟರ್ ಪ್ಲಸ್ ಎಸ್‍ಯುವಿಯ ಆರಂಭಿಕ ಬೆಲೆಯು ಪೆಟ್ರೋಲ್ ಮಾದರಿಗೆ ರೂ.13.62 ಲಕ್ಷಗಳಾದರೆ, ಡೀಸೆಲ್ ಮಾದರಿಗೆ ರೂ,15.03 ಲಕ್ಷಗಳಾಗಿದೆ.

ಭಾರತದಲ್ಲಿ ರೂ.20 ಲಕ್ಷಕ್ಕಿಂತ ಕಡಿಮೆ ಬೆಲೆಯಲ್ಲಿ ಸಿಗುವ 7-ಸೀಟರ್ ಎಸ್‍ಯುವಿಗಳಿವು

ಈ ಎಂಜಿ ಹೆಕ್ಟರ್ ಪ್ಲಸ್ ಎಸ್‍ಯುವಿಯು ಎರಡು ಎಂಜಿನ್ ಆಯ್ಕೆಗಳನ್ನು ಹೊಂದಿದೆ. ಇದರಲ್ಲಿ .5-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ 143 ಬಿಹೆಚ್‍ಪಿ ಪವರ್ ಮತ್ತು 50 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇದರೊಂದಿಗೆ 2.0-ಲೀಟರ್ ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್ ಅನ್ನು ಅಳವಡಿಸಲಾಗಿದೆ.

Most Read Articles

Kannada
English summary
Top-5 7-Seater SUVs Under Rs.20 Lakh. Read In Kananda.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X