ವಾರದ ಸುದ್ದಿ: ನವೀಕೃತ ಸೆಲೆರಿಯೊ ಬಿಡುಗಡೆ, ಇವಿ ವಾಹನ ಮಾಹಿತಿಗಾಗಿ ಕೇಂದ್ರದಿಂದ ಹೊಸ ವೆಬ್‌ಸೈಟ್..

ದುಬಾರಿ ಇಂಧನಗಳ ಪರಿಣಾಮ ಹೈರಾಣಾಗಿದ್ದ ವಾಹನ ಮಾಲೀಕರಿಗೆ ಬೆಲೆ ಇಳಿಕೆ ತುಸು ಸಮಾಧಾನ ತಂದಿದ್ದರೂ ಪ್ರಸ್ತುತ ಮಾರುಕಟ್ಟೆಯಲ್ಲಿನ ಇಂಧನ ಬೆಲೆಯು ಸಹ ದುಬಾರಿಯಾಗಿ ಪರಿಣಮಿಸಿದ್ದು, ಹೊಸ ವಾಹನ ಖರೀದಿದಾರರು ಇವಿ ವಾಹನಗಳತ್ತ ಮುಖಮಾಡುತ್ತಿದ್ದಾರೆ. ಇವಿ ವಾಹನಗಳನ್ನು ಉತ್ತೇಜಿಸಲು ಕೇಂದ್ರ ಸರ್ಕಾರವು ಸಹ ಹೆಚ್ಚಿನ ಪ್ರೋತ್ಸಾಹ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಗ್ರಾಹಕರ ಬೇಡಿಕೆಯೆಂತೆ ಹಲವಾರು ಇವಿ ವಾಹನಗಳು ಇದೀಗ ಮಾರುಕಟ್ಟೆ ಪ್ರವೇಶಿಸಿವೆ. ಈ ವಾರದ ಪ್ರಮುಖ ಸುದ್ದಿಗಳಲ್ಲಿ ಇವಿ ವಾಹನಗಳ ಕುರಿತಾದ ಹೆಚ್ಚಿನ ಮಾಹಿತಿಗಳಿದ್ದು, ಪ್ರಮುಖ ಸುದ್ದಿಗಳ ಹೈಲೆಟ್ಸ್ ಇಲ್ಲಿ ನೋಡೋಣ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಎಲೆಕ್ಟ್ರಿಕ್ ವಾಹನಗಳ ಮಾಹಿತಿಗೆ ಕೇಂದ್ರದಿಂದ ಹೊಸ ಪೋರ್ಟಲ್

ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳಿಗಾಗಿಯೇ ಒಂದೇ ಸೂರಿನಡಿ ಹಲವಾರು ಮಾಹಿತಿಗಳನ್ನು ಒಳಗೊಂಡ ಇ-ಅಮೃತ್ ಎಂಬ ವೆಬ್ ಪೋರ್ಟಲ್ ತೆರೆದಿದೆ. ಹೊಸ ವೆಬ್‌ಸೈಟ್ ನಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿ, ಹೂಡಿಕೆ ಅವಕಾಶ, ಇವಿ ನೀತಿಗಳು ಹಾಗೂ ಸಬ್ಸಿಡಿ ಮಾಹಿತಿಗಳಿಗಾಗಿ ನೀತಿ ಆಯೋಗವು ಹೊಸ ವೆಬ್‌ಸೈಟ್ ಆರಂಭಿಸಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಇದಲ್ಲದೆ ಇ-ಅಮೃತ್ ಪೋರ್ಟಲ್ ಅನ್ನು ಹೆಚ್ಚು ಸಂವಾದಾತ್ಮಕ ಹಾಗೂ ಬಳಕೆದಾರ ಸ್ನೇಹಿಯನ್ನಾಗಿ ಮಾಡಲು ಹೆಚ್ಚಿನ ಫೀಚರ್ ಗಳನ್ನು ಸೇರಿಸಲು ಹಾಗೂ ಹೊಸ ಪರಿಕರಗಳನ್ನು ಪರಿಚಯಿಸಲು ನೀತಿ ಆಯೋಗ ಉದ್ದೇಶಿಸಿದೆ. ಇ-ಅಮೃತ್ ಪೋರ್ಟಲ್ ಅನ್ನು ನೀತಿ ಆಯೋಗವು ಬ್ರಿಟನ್ ಸರ್ಕಾರದ ಸಹಯೋಗದ ಜ್ಞಾನ ವಿನಿಮಯ ಕಾರ್ಯಕ್ರಮದ ಭಾಗವಾಗಿ ಅಭಿವೃದ್ಧಿಪಡಿಸಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ವಿವಿಧ ಎಲೆಕ್ಟ್ರಿಕ್ ಕಾರುಗಳಿಗೆ ಭರ್ಜರಿ ಬೇಡಿಕೆ

ಎಲೆಕ್ಟ್ರಿಕ್ ಮಾರಾಟವು ದೇಶಿಯ ಮಾರುಕಟ್ಟೆಯಲ್ಲಿ ತೀವ್ರ ಬೆಳವಣಿಗೆ ಸಾಧಿಸುತ್ತಿದ್ದು, 2021-22ರ ಆರ್ಥಿಕ ವರ್ಷದ ಮೊದಲಾರ್ಧದಲ್ಲಿ ಒಟ್ಟು 6261 ಯುನಿಟ್‌ ಇವಿ ಕಾರುಗಳು ಮಾರಾಟಗೊಂಡಿವೆ. ಇದು ಕಳೆದ ಆರ್ಥಿಕ ವರ್ಷದ ಮೊದಲಾರ್ಧದಲ್ಲಿನ ಇವಿ ಮಾರಾಟಕ್ಕಿಂತ ಶೇ. 234ರಷ್ಟು ಬೆಳವಣಿಗೆ ಸಾಧಿಸಿದ್ದು, ಮುಂಬರುವ ದಿನಗಳಲ್ಲಿ ಇವಿ ವಾಹನಗಳ ಮಾರಾಟವು ಇನ್ನಷ್ಟು ಹೆಚ್ಚಳವಾಗುವ ನೀರಿಕ್ಷೆಯಿವೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಹೆಚ್ಚುತ್ತಿರುವ ಇಂಧನಗಳ ಬೆಲೆ ಪರಿಣಾಮ ದೇಶಾದ್ಯಂತ ಎಲೆಕ್ಟ್ರಿಕ್ ವಾಹನಗಳ ಮಾರಾಟವು ನಿಧಾನವಾಗಿ ಬೆಳವಣಿಗೆ ಸಾಧಿಸುತ್ತಿದ್ದು, ಕಳೆದ ವರ್ಷಕ್ಕಿಂತಲೂ ಇದೀಗ ಹೆಚ್ಚಿನ ಮಟ್ಟದ ಎಲೆಕ್ಟ್ರಿಕ್ ಕಾರುಗಳ ಮಾರಾಟವು ದಾಖಲಾಗಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಪೋರ್ಷೆ ಟೇಕಾನ್ ಇವಿ ಸೂಪರ್ ಕಾರು ಬಿಡುಗಡೆ

ಪೋರ್ಷೆ ತನ್ನ ಐಷಾರಾಮಿ ಟೇಕಾನ್ ಎಲೆಕ್ಟ್ರಿಕ್ ಸೂಪರ್‌ ಕಾರ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದ್ದು, ಹೊಸಎಲೆಕ್ಟ್ರಿಕ್ ಕಾರಿನ ಆರಂಭಿಕ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ. 1.50 ಕೋಟಿಯಾಗಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಟೇಕಾನ್ ಎಲೆಕ್ಟ್ರಿಕ್ ಕಾರು 76kWh ಮತ್ತು 93.4kWh ಜೊತೆಗೆ ಎರಡು ಬ್ಯಾಟರಿ ಪ್ಯಾಕ್ ಆಯ್ಕೆಗಳನ್ನು ಹೊಂದಿದ್ದು, 484 ಕಿ.ಮೀ ರೇಂಜ್ ಅನ್ನು ನೀಡುತ್ತದೆ. ಟರ್ಬೊ ಮತ್ತು ಟರ್ಬೊ ಎಸ್ ರೂಪಾಂತರಗಳು ದೊಡ್ಡ 93.4kWh ಬ್ಯಾಟರಿ ಪ್ಯಾಕ್ ಅನ್ನು ಹೊಂದಿವೆ. ಮೊದಲನೆಯದು 671 ಬಿಹೆಚ್‌ಪಿ ಪವರ್ ಮತ್ತು 850 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ. ಇನ್ನು ಎರಡನೆಯದು 751 ಬಿಹೆಚ್‍ಪಿ ಪವರ್ ಮತ್ತು 1,050 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಮೈಲ್ಡ್ ಹೈಬ್ರಿಡ್ ವೊಲ್ವೊ ಎಕ್ಸ್‌ಸಿ90 ಬಿಡುಗಡೆ

ಮಾಲಿನ್ಯ ತಗ್ಗಿಸುವ ಉದ್ದೇಶದಿಂದ ಡೀಸೆಲ್ ಕಾರುಗಳ ಮಾರಾಟವನ್ನು ಹಂತ-ಹಂತವಾಗಿ ಕಡಿತಗೊಳಿಸುತ್ತಿರುವ ವೊಲ್ವೊ ಕಂಪನಿಯು ಪ್ರಮುಖ ಕಾರುಗಳನ್ನು ಹೊಸ ಪೆಟ್ರೋಲ್ ಹೈಬ್ರಿಡ್ ಎಂಜಿನ್‌ಗೆ ಉನ್ನತೀಕರಿಸುತ್ತಿದ್ದು, ಇದೀಗ ಹೊಸದಾಗಿ ಬಿಡುಗಡೆಯಾಗಿರುವ ಎಕ್ಸ್‌ಸಿ90 ಕಾರು ಮಾದರಿಯಲ್ಲೂ ಕೂಡಾ ಕಂಪನಿಯು ಕೇವಲ 2.0 ಲೀಟರ್ ಮೈಲ್ಡ್ ಹೈಬ್ರಿಡ್ ಪೆಟ್ರೋಲ್ ಎಂಜಿನ್ ಮಾತ್ರ ನೀಡಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಹೊಸ ಪ್ಲ್ಯಾಟ್‌ಫಾರ್ಮ್ ಆಧರಿಸಿರುವ ಎಕ್ಸ್‌ಸಿ90 ಎಸ್‌ಯುವಿ ಮಾದರಿಯು ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ರೂ. 89.90 ಲಕ್ಷ ಬೆಲೆ ಹೊಂದಿದ್ದು, ಹೊಸ ಕಾರಿನಲ್ಲಿ ಕಂಪನಿಯು 2.0 ಲೀಟರ್ (1,969 ಸಿಸಿ) 48 ವಿ ಮೈಲ್ಡ್ ಹೈಬ್ರಿಡ್ ಟೆಕ್ನಾಲಜಿ ಹೊಂದಿರುವ ಪೆಟ್ರೋಲ್ ಎಂಜಿನ್ ನೀಡಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಎಂಟು ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿದೆ ಮಹೀಂದ್ರಾ

ಮಹೀಂದ್ರಾ ಕಂಪನಿಯು ಮುಂದಿನ ಐದು ವರ್ಷಗಳಲ್ಲಿ ಒಟ್ಟು 13 ಕಾರುಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದ್ದು, ಇದರಲ್ಲಿ ಒಟ್ಟು ಎಂಟು ಎಲೆಕ್ಟ್ರಿಕ್ ಕಾರುಗಳು ಬಿಡುಗಡೆಯಾಗುವ ಬಗ್ಗೆ ಕಂಪನಿಯೇ ಮಾಹಿತಿ ಹಂಚಿಕೊಂಡಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಹೊಸ ಇವಿ ಕಾರುಗಳು 2022ರಿಂದ ಹಂತ-ಹಂತವಾಗಿ ಮಾರುಕಟ್ಟೆ ಪ್ರವೇಶಿಸಲಿದ್ದು, ಆರಂಭಿಕವಾಗಿ ಇಕೆಯುವಿ100 ನಂತರ ಇಎಕ್ಸ್‌ಯುವಿ300 ಬಿಡುಗಡೆ ಮಾಡಲಿರುವ ಕಂಪನಿಯು ತದನಂತರ ಮಾರುಕಟ್ಟೆಯಲ್ಲಿನ ಇತರೆ ಜನಪ್ರಿಯ ಕಾರುಗಳ ಮಾದರಿಗಳ ಎಲೆಕ್ಟ್ರಿಕ್ ಆವೃತ್ತಿಗಳನ್ನು ಪರಿಚಯಿಸಲಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ನ್ಯೂ ಜನರೇಷನ್ ಮಾರುತಿ ಸೆಲೆರಿಯೊ ಬಿಡುಗಡೆ

ಹೊಸ ಕಾರುಗಳ ಉತ್ಪಾದನೆಯಲ್ಲಿ ಸಾಕಷ್ಟು ಹೊಸ ಬದಲಾವಣೆಗಳನ್ನು ಪರಿಚಯಿಸುತ್ತಿರುವ ಮಾರುತಿ ಸುಜುಕಿ ಕಂಪನಿಯು ಇದೀಗ ಎರಡನೇ ತಲೆಮಾರಿನ ಸೆಲೆರಿಯೊ ಹ್ಯಾಚ್‌ಬ್ಯಾಕ್ ಮಾದರಿಯನ್ನು ಬಿಡುಗಡೆ ಮಾಡಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 4.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 6.94 ಲಕ್ಷ ಬೆಲೆಯೊಂದಿಗೆ ವಿವಿಧ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಹೊಸ ಕಾರಿನಲ್ಲಿ ಇಂಧನ ದಕ್ಷತೆ ಹೆಚ್ಚಲು ಮಾರುತಿ ಸುಜುಕಿಯು ಸ್ಮಾರ್ಟ್ ಸ್ಟಾರ್ಟ್/ಸ್ಟಾಪ್ ಸಿಸ್ಟಂ ಜೋಡಿಸಿದ್ದು, ಟ್ರಾಫಿಕ್ ದಟ್ಟಣೆಯಲ್ಲಿ ಇಂಧನ ದಹಿಸುವಿಕೆಯನ್ನು ನಿಯಮಿತಗೊಳಿಸಿ ಮೈಲೇಜ್ ಮೇಲೆ ಪರಿಣಾಮ ಬೀರದಂತೆ ತಡೆಯಲು ಹೊಸ ತಂತ್ರಜ್ಞಾನವು ಸಾಕಷ್ಟು ಸಹಕಾರಿಯಾಗಿದೆ. ಹೊಸ ಕಾರು ಮಾದರಿಯು ಪ್ರತಿ ಲೀಟರ್‌ಗೆ ಗರಿಷ್ಠ 26 ಕಿ.ಮೀ ಮೈಲೇಜ್ ನೀಡಲಿದ್ದು, ಅತ್ಯುತ್ತಮ ಫೀಚರ್ಸ್ ಒಳಗೊಂಡಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ನವೀಕೃತ ಪೋರ್ಷೆ ಮಕಾನ್ ಫೇಸ್‌ಲಿಫ್ಟ್ ಬಿಡುಗಡೆ

ಜರ್ಮನ್ ಐಷಾರಾಮಿ ಕಾರು ಉತ್ಪಾದನಾ ಕಂಪನಿಯಾಗಿರುವ ಪೋರ್ಷೆ ತನ್ನ ಜನಪ್ರಿಯ ಎಂಟ್ರಿ ಲೆವಲ್ ಸ್ಪೋರ್ಟ್ ಎಸ್‌ಯುವಿ ಮಾದರಿಯಾದ ಮಕಾನ್ ಫೇಸ್‌ಲಿಫ್ಟ್ ಬಿಡುಗಡೆಗೊಳಿಸಿದ್ದು, ಹೊಸ ಕಾರು ಈ ಬಾರಿ ಸುಧಾರಿತ ಎಂಜಿನ್ ಮತ್ತು ನವೀಕೃತ ಸ್ಪೋರ್ಟಿ ವಿನ್ಯಾಸದಲ್ಲಿ ಮಾರುಕಟ್ಟೆ ಪ್ರವೇಶಿಸಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಹೊಸ ಪೋರ್ಷೆ ಮಕಾನ್ ಫೇಸ್‌ಲಿಫ್ಟ್ ಎಸ್‍ಯುವಿಯು ಗ್ರಾಹಕರ ಬೇಡಿಕೆ ತಾಂತ್ರಿಕ ಅಂಶಗಳಿಗೆ ಅನುಗುಣವಾಗಿ ಸ್ಟ್ಯಾಂಡರ್ಡ್ ಮಕಾನ್, ಮಕಾನ್ ಎಸ್ ಮತ್ತು ಮಕಾನ್ ಜಿಟಿಎಸ್ ಎಂಬ ಮೂರು ರೂಪಾಂತರಗಳನ್ನು ಪಡೆದುಕೊಂಡಿದ್ದು, ಹೊಸ ಕಾರು 2.0-ಲೀಟರ್ ಮತ್ತು 2.9 ಲೀಟರ್ ಎಂಜಿನ್ ಆಯ್ಕೆಯೊಂದಿಗೆ ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ರೂ. 83.21 ಲಕ್ಷ ಆರಂಭಿಕ ಬೆಲೆ ಹೊಂದಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಎಕ್ಸ್‌ಯುವಿ500 ಕಾರಿನ ಉತ್ಪಾದನೆ ಸ್ಥಗಿತ

ಮಹೀಂದ್ರಾ ಕಂಪನಿಯು ಇತ್ತೀಚೆಗೆ ಹೊಸ ತಲೆಮಾರಿನ ಎಕ್ಸ್‌ಯುವಿ700 ಎಸ್‌ಯು‌ವಿಯನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದ್ದು, ಹೊಸ ಕಾರು ಭಾರೀ ಪ್ರಮಾಣದಲ್ಲಿ ಬೇಡಿಕೆ ಪಡೆದುಕೊಂಡಿದೆ. ಹೀಗಾಗಿ ಎಕ್ಸ್‌ಯುವಿ700 ಮೇಲೆ ಹೆಚ್ಚಿನ ಗಮನಹರಿಸಿರುವ ಮಹೀಂದ್ರಾ ಕಂಪನಿಯು ಎಕ್ಸ್‌ಯುವಿ500 ಮಾದರಿಯ ಉತ್ಪಾದನೆಯನ್ನು ಸ್ಥಗಿತಗೊಳಿಸಿದೆ. ಹೊಸ ಎಕ್ಸ್‌ಯುವಿ700 ಮಾದರಿಯಲ್ಲಿಯೇ ಕಂಪನಿಯು 5 ಸೀಟರ್ ಮತ್ತು 7 ಸೀಟರ್ ಆಯ್ಕೆಗಳನ್ನು ನೀಡಿರುವುದರಿಂದ ಎಕ್ಸ್‌ಯುವಿ500 ಕಾರು ಖರೀದಿಯ ಗ್ರಾಹಕರು ಇದೀಗ ಹೊಸ ಕಾರಿನತ್ತ ಮುಖ ಮಾಡಿದ್ದಾರೆ.

Most Read Articles

Kannada
English summary
Top auto news of the week e amrit web portal launched new maruti celerio launched mahindra ev cars p
Story first published: Sunday, November 14, 2021, 1:06 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X