ವಾರದ ಸುದ್ದಿ: ಇವಿ ಉತ್ಪಾದನೆ ಮೇಲೆ ಹೆಚ್ಚಿದ ಹೂಡಿಕೆ, ಕಾರುಗಳ ಖರೀದಿ ಮೇಲೆ ಇಯರ್ ಎಂಡ್ ಆಫರ್..

ಇಂಧನಗಳ ಮೇಲಿನ ತೆರಿಗೆ ಹೆಚ್ಚಳ ನಂತರ ಇವಿ ವಾಹನ ಮಾರಾಟದಲ್ಲಿ ಭಾರೀ ಬೇಡಿಕೆ ಕಂಡುಬರುತ್ತಿದ್ದು, ಹೊಸ ವಾಹನ ಖರೀದಿದಾರರು ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೆಚ್ಚಿನ ಆಸಕ್ತಿ ತೋರುತ್ತಿದ್ದಾರೆ. ಹೀಗಾಗಿ ವಿವಿಧ ಕಾರು ಕಂಪನಿಗಳು ಇವಿ ವಾಹನಗಳ ಮೇಲೆ ಹೂಡಿಕೆ ಮಾಡುತ್ತಿದ್ದು, ಈ ವಾರದ ಪ್ರಮುಖ ಸುದ್ದಿಗಳಲ್ಲಿ ಇವಿ ವಾಹನಗಳ ಮಾಹಿತಿಯು ಅಗ್ರಸ್ಥಾನದಲ್ಲಿದೆ. ಇನ್ನುಳಿದಂತೆ ವರ್ಷಾಂತ್ಯದಲ್ಲಿ ಹೊಸ ವಾಹನ ಖರೀದಿಗಾಗಿ ಇಯರ್ ಆಫರ್, ಹೊಸ ವಾಹನಗಳ ಬಿಡುಗಡೆ ಮಾಹಿತಿಯನ್ನು ವಾರದ ಸುದ್ದಿಯಲ್ಲಿ ನೋಡಬಹುದಾಗಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಇವಿ ವಾಹನ ಉತ್ಪಾದನೆಗಾಗಿ ಹ್ಯುಂಡೈ ಕಂಪನಿಯಿಂದ ಭಾರೀ ಹೂಡಿಕೆ

2028ರ ವೇಳೆಗೆ ಜಾಗತಿಕ ಮಾರುಕಟ್ಟೆಯಲ್ಲಿ 30ಕ್ಕೂ ಹೆಚ್ಚು ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಹೊಂದಲಿರುವ ಹ್ಯುಂಡೈ ಮೋಟಾರ್ಸ್ ಕಂಪನಿಯು ಭಾರತದಲ್ಲಿ ಗ್ರಾಹಕರ ಬೇಡಿಕೆಯೆಂತೆ ಮುಂದಿನ ಐದು ವರ್ಷಗಳಲ್ಲಿ ಆರು ಹೊಸ ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಬಿಡುಗಡೆ ಮಾಡುತ್ತಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಹ್ಯುಂಡೈ ಕಂಪನಿಯು ಹೊಸ ಇವಿ ಕಾರುಗಳ ಉತ್ಪಾದನೆಗೆ ಪೂರಕವಾದ ಮತ್ತು ಗುಣಮಟ್ಟದ ಮಾದರಿಗಳನ್ನು ಸಿದ್ದಪಡಿಸಲು ಆಧುನಿಕ ತಂತ್ರಜ್ಞಾನ ಪ್ರೇರಿತ ಗ್ಲೋಬಲ್ ಮಾಡ್ಯುಲರ್ ಪ್ಲಾಟ್‌ಫಾರ್ಮ್ (ಇ-ಜಿಎಂಪಿ) ಪ್ಲ್ಯಾಟ್‌ಫಾರ್ಮ್ ಬಳಕೆ ಮಾಡಲು ಉದ್ದೇಶಿಸಿದ್ದು, ಹೊಸ ಪ್ಲ್ಯಾಟ್‌ಫಾರ್ಮ್ ಅಡಿಯಲ್ಲಿ ಆರು ಇವಿ ಪರಿಚಯಿಸಲು ಸುಮಾರು ರೂ.4 ಸಾವಿರ ಕೋಟಿ ಹೂಡಿಕೆಗೆ ಸಿದ್ದವಾಗಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಬಜೆಟ್ ಬೆಲೆಯ ಇವಿ ಕಾರು ಬಿಡುಗಡೆ ಮಾಡಲಿದೆ ಎಂಜಿ ಮೋಟಾರ್

ಸದ್ಯ ಮಾರುಕಟ್ಟೆಯಲ್ಲಿರುವ ಎಂಜಿ ಜೆಡ್ಎಸ್ ಇವಿ ಕಾರು ಮಾದರಿಯು ಅತ್ಯುತ್ತಮ ಫೀಚರ್ಸ್‌ಗಳೊಂದಿಗೆ ತುಸು ದುಬಾರಿ ಎನ್ನಿಸಲಿದ್ದು, ಮುಂಬರುವ ದಿನಗಳಲ್ಲಿ ಎಂಜಿ ಬಿಡುಗಡೆ ಮಾಡಲಿರುವ ಹೊಸ ಕಾರು ಮಾದರಿಯು ರೂ.11 ಲಕ್ಷದಿಂದ ರೂ. 15 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಲಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಸದ್ಯ ನಂ.1 ಸ್ಥಾನ ಕಾಯ್ದುಕೊಂಡಿರುವ ಟಾಟಾ ನೆಕ್ಸಾನ್ ಇವಿ ಕಾರು ಮಾದರಿಗೆ ಪೈಪೋಟಿಯಾಗಿ ಎಂಜಿ ಕಂಪನಿಯು ಹೊಸ ಕಾರು ಮಾದರಿಯನ್ನು ನಿರ್ಮಾಣ ಮಾಡುತ್ತಿದ್ದು, ಹೊಸ ಕಾರು ಸಬ್ ಫೋರ್ ಮೀಟರ್ ಆವೃತ್ತಿಯಾಗಿರಲಿದೆ. ಹೊಸ ಕಾರು ಪ್ರತಿ ಚಾರ್ಜ್‌ಗೆ ಕನಿಷ್ಠ 300 ರಿಂದ 350 ಕಿ.ಮೀ ಮೈಲೇಜ್ ಪ್ರೇರಣೆ ಹೊಂದಿದ್ದು, ಹೊಸ ಕಾರು 2023ರ ಆರಂಭದಲ್ಲಿ ಬಿಡುಗಡೆಯಾಗಲಿದೆಯೆಂತೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಆಕರ್ಷಕ ಇಯರ್ ಎಂಡ್ ಆಫರ್ ಘೋಷಣೆ

ಕೋವಿಡ್‌ ಪರಿಣಾಮ ಏರಿಳಿತವಾಗಿರುವ ಹೊಸ ವಾಹನಗಳ ಮಾರಾಟದಲ್ಲಿ ಸ್ಥಿರತೆ ಕಾಯ್ದುಕೊಳ್ಳಲು ಮುಂದಾಗಿರುವ ಪ್ರಮುಖ ಕಾರು ಕಂಪನಿಗಳು ವರ್ಷಾಂತ್ಯದಲ್ಲಿ ವಾಹನ ಖರೀದಿದಾರರನ್ನು ಸೆಳೆಯಲು ವಿವಿಧ ಆಫರ್‌ಗಳನ್ನು ಘೋಷಣೆ ಮಾಡುತ್ತಿದ್ದು, ಹ್ಯುಂಡೈ, ರೆನಾಲ್ಟ್, ನಿಸ್ಸಾನ್, ಟೊಯೊಟಾ ಕಂಪನಿಗಳು ಸಹ ಡಿಸೆಂಬರ್ ಅವಧಿಯಲ್ಲಿ ವಿವಿಧ ಕಾರುಗಳ ಖರೀದಿ ಮೇಲೆ ಆಕರ್ಷಕ ಆಫರ್ ನೀಡುತ್ತಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಹೊಸ ಆಫರ್‌ಗಳಲ್ಲಿ ಎಕ್ಸ್‌ಚೆಂಜ್, ಕ್ಯಾಶ್ ಬ್ಯಾಕ್, ಕಾರ್ಪೊರೇಟ್ ಡಿಸ್ಕೌಂಟ್ ನೀಡಲಾಗುತ್ತಿದ್ದು, ಹೊಸ ವಾಹನಗಳ ಮಾರಾಟಕ್ಕೆ ಪೂರಕವಾಗಿ ಬಹುತೇಕ ಆಟೋ ಕಂಪನಿಗಳು ಹಲವಾರು ಆಫರ್ ನೀಡುತ್ತಿರುವುದಲ್ಲದೆ ಸರಳ ಸಾಲ ಸೌಲಭ್ಯಗಳನ್ನು ಒದಗಿಸುತ್ತಿರುವುದು ಕಾರು ಖರೀದಿಗೆ ಪ್ರಮುಖ ಆಕರ್ಷಣೆಯಾಗಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಹೊಸ ಫೋಕ್ಸ್‌ವ್ಯಾಗನ್ ಟಿಗ್ವಾನ್ ಬಿಡುಗಡೆ

ಹೊಸ ಫೋಕ್ಸ್‌ವ್ಯಾಗನ್ ಟಿಗ್ವಾನ್ ಎಸ್‍ಯುವಿಯು ಭಾರತದಲ್ಲಿ ಬಿಡುಗಡೆಯಾಗಿದ್ದು, ಹೊಸ ಕಾರು ಎಕ್ಸ್‌ಶೋರೂಂ ಪ್ರಕಾರ ರೂ. 31.99 ಲಕ್ಷ ಬೆಲೆ ಹೊಂದಿದೆ. ಹೊಸ ಟಿಗ್ವಾನ್ ಎಸ್‌‍ಯುವಿಯು ತೀಕ್ಷ್ಣವಾದ ವಿನ್ಯಾಸ, ಅತ್ಯುತ್ತಮ ಕಾರ್ಯಕ್ಷಮತೆ, ಸುರಕ್ಷತೆ ಮತ್ತು ಅತ್ಯಾಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ನವೀಕರಿಸಿದ ಹೊಸ ಟಿಗ್ವಾನ್ ಎಸ್‍ಯುವಿಯಲ್ಲಿ 2.0-ಲೀಟರ್ ಟಿಎಸ್ಐ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 187.34 ಬಿಹೆಚ್‍ಪಿ ಪವರ್ ಮತ್ತು 320 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ನೊಂದಿಗೆ 7-ಸ್ಪೀಡ್ ಡಿಎಸ್ಜಿ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ. ಇದರೊಂದಿಗೆ ಆಲ್-ವ್ಹೀಲ್-ಡ್ರೈವ್ ಸಿಸ್ಟಂ ಅನ್ನು ನೀಡಲಾಗಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಆಡಿ ಎ4 ಪ್ರೀಮಿಯಂ ವೆರಿಯೆಂಟ್ ಬಿಡುಗಡೆ

ಆಡಿ ಎ4 ಪ್ರೀಮಿಯಂ ವೆರಿಯೆಂಟ್ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ. 39.99 ಲಕ್ಷ ಬೆಲೆ ಹೊಂದಿದ್ದು, ಈ ಪ್ರೀಮಿಯಂ ಟ್ರಿಮ್ ಮಿಡ್ ಪ್ರೀಮಿಯಂ ಪ್ಲಸ್ ವೆರಿಯೆಂಟ್ ಮತ್ತು ಸರಣಿಯ-ಟಾಪ್ ಟೆಕ್ನಾಲಜಿ ವೆರಿಯೆಂಟ್ ಲೈನ್-ಅಪ್‌ಗೆ ಸೇರುತ್ತದೆ. ಇದರಲ್ಲಿ 2.0-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್‌ ಅನ್ನು ಹೊಂದಿದೆ. ಈ ಎಂಜಿನ್ 188 ಬಿಹೆಚ್‍ಪಿ ಪವರ್ ಮತ್ತು 320 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಆಡಿ ಎ4 ಪ್ರೀಮಿಯಂ ವೆರಿಯೆಂಟ್ 7.3 ಸೆಕೆಂಡುಗಳಲ್ಲಿ 0-100 ಕಿ.ಮೀ ಸ್ಪೀಡ್ ಅನ್ನು ಪಡೆದುಕೊಳ್ಳುತ್ತದೆ. ಬೇಸ್ ಪ್ರೀಮಿಯಂ ಟ್ರಿಮ್ ಪ್ರೀಮಿಯಂ ಪ್ಲಸ್ ರೂಪಾಂತರಕ್ಕಿಂತಲೂ ಸುಮಾರು ರೂ. 3.7 ಲಕ್ಷ ಅಗ್ಗವಾಗಿದ್ದು, ಯಾಂತ್ರಿಕವಾಗಿ ಬೇಸ್ ಆಡಿ ಎ4 ಟಾಪ್-ಎಂಡ್ ಟ್ರಿಮ್‌ಗಳಿಗೆ ಹೋಲುತ್ತದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಕಿಯಾ ಕೆರೆನ್ಸ್ ಎಂಪಿವಿ ವಿನ್ಯಾಸ ಬಹಿರಂಗ

ಕಿಯಾ ಇಂಡಿಯಾ ಕಂಪನಿಯು ತನ್ನ ಬಹುನೀರಿಕ್ಷಿತ ಮಲ್ಟಿ ಪರ್ಪಸ್ ಕಾರು ಮಾದರಿಯಾದ ಕೆರೆನ್ಸ್ ಆವೃತ್ತಿಯನ್ನು ಇದೇ ತಿಂಗಳು 16ರಂದು ಉತ್ಪಾದನಾ ಮಾದರಿಯೊಂದಿಗೆ ಅನಾವರಣಗೊಳಿಸುತ್ತಿದ್ದು, ಹೊಸ ಕಾರು ಆಕರ್ಷಕ ಬೆಲೆಯೊಂದಿಗೆ ವಿವಿಧ ಎಂಜಿನ್ ಆಯ್ಕೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಹೊಸ ಕೆರೆನ್ಸ್ ಕಾರು ಮಾದರಿಯು ಮಧ್ಯಮ ಕ್ರಮಾಂಕದ ಎಂಪಿವಿ ಮಾದರಿಯಾಗಿದ್ದು, ಹೊಸ ಕಾರು ಸೆಲ್ಟೊಸ್ ಮಾದರಿಯಲ್ಲಿಯೇ ತಾಂತ್ರಿಕ ಸೌಲಭ್ಯಗಳೊಂದಿಗೆ ವಿಭಿನ್ನವಾದ ಹೊಸ ವಿನ್ಯಾಸವನ್ನು ಪಡೆದುಕೊಳ್ಳಲಿದೆ. ಗ್ರಾಹಕರ ಬೇಡಿಕೆಯೆಂತೆ ಹೊಸ ಕಾರು 6 ಸೀಟರ್ ಮತ್ತು 7 ಸೀಟರ್ ಸೌಲಭ್ಯದೊಂದಿಗೆ ಭರ್ಜರಿ ಬೇಡಿಕೆ ಗಿಟ್ಟಿಸಿಕೊಳ್ಳವ ನೀರಿಕ್ಷೆಯಲ್ಲಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 11 ಲಕ್ಷದಿಂದ ರೂ. 16 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳಬಹುದಾಗಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

5600 ಕಿ.ಮೀ ರಸ್ತೆ ನಿರ್ಮಿಸಿದ ಕೇಂದ್ರ ಸರ್ಕಾರ

ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಇಲಾಖೆಯು ಈ ವರ್ಷ ಇದುವರೆಗೂ 12,000 ಕಿಮೀ ರಸ್ತೆ ನಿರ್ಮಾಣದ ಗುರಿಯಲ್ಲಿ 5,600 ಕಿ.ಮೀ ಪೂರ್ಣಗೊಳಿಸಿದೆ ಎಂದು ಮಾಹಿತಿ ನೀಡಿದೆ. ದಕ್ಷಿಣ ಭಾರತದ ರಾಜ್ಯಗಳಲ್ಲಿ ಭಾರೀ ಮಳೆಯ ಹೊರತಾಗಿಯೂ. ಆರ್ಥಿಕ ವರ್ಷದ ಅಂತ್ಯದ ವೇಳೆಗೆ ಸಂಪೂರ್ಣ ಗುರಿ ಸಾಧಿಸುವ ನೀರಿಕ್ಷೆಯಲ್ಲಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಕ್ಯೂ7 ಎಸ್‌ಯುವಿ ಉತ್ಪಾದನೆಗೆ ಚಾಲನೆ ನೀಡಿದ ಆಡಿ

ಆಡಿ ಇಂಡಿಯಾ ಕಂಪನಿಯು ತನ್ನ ನವೀಕರಿಸಿದ ಕ್ಯೂ7 ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದ್ದು, ಹೊಸ ಕಾರಿನ ಉತ್ಪಾದನಾ ಪ್ರಕ್ರಿಯೆಗೆ ಕಂಪನಿಯು ಅಧಿಕೃತ ಚಾಲನೆ ನೀಡಿದೆ. ನವೀಕೃತ ಆಡಿ ಕ್ಯೂ7 ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಮುಂದಿನ ವರ್ಷದ ಜನವರಿಯಲ್ಲಿ ಬಿಡುಗಡೆಯಾಗುವ ನೀರಿಕ್ಷೆಗಳಿದ್ದು, ಹೊಸ ಕಾರನ್ನು ಕಂಪನಿಯು ಇದೀಗ ಭಾರತದಲ್ಲೇ ಪೂರ್ಣ ಪ್ರಮಾಣದಲ್ಲಿ ಉತ್ಪಾದನೆ ಆರಂಭಿಸಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಮಹಾರಾಷ್ಟ್ರದಲ್ಲಿರುವ ಔರಂಗಾಬಾದ್‌ನಲ್ಲಿರುವ ಆಡಿ ಅಸ್ಲೆಂಬಿ ಘಟಕದಲ್ಲಿ ಹೊಸ ಕಾರಿನ ಉತ್ಪಾದನೆಯು ಅಧಿಕೃತವಾಗಿ ಆರಂಭಗೊಂಡಿದ್ದು, ಹೊಸ ಕಾರು ಈ ಬಾರಿಗೆ ಸಾಕಷ್ಟು ಹೊಸ ಬದಲಾವಣೆಗಳನ್ನು ಪಡೆದುಕೊಂಡಿರಲಿದೆ. ಹೊಸ ಆಡಿ ಕ್ಯೂ7 ಎಸ್‍ಯುವಿಯಲ್ಲಿ ಆಡಿ ಕಂಪನಿಯು ಎರಡು ಪೆಟ್ರೋಲ್ ಎಂಜಿನ್ ಆಯ್ಕೆ ನೀಡಬಹುದಾಗಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಎಕ್ಸ್‌ಯುವಿ700 ಕಾಯುವಿಕೆ ಅವಧಿ ಹೆಚ್ಚಳ

ಹೊಸ ಎಕ್ಸ್‌ಯುವಿ700 ಕಾರು ಮಾದರಿಯನ್ನು ಬಿಡುಗಡೆಗೊಳಿಸಿದ ಮೊದಲ ಎರಡು ದಿನಗಳಲ್ಲಿ ಬರೋಬ್ಬರಿ 50 ಸಾವಿರ ಯನಿಟ್‌ಗಳಿಗೆ ಬುಕ್ಕಿಂಗ್ ಪಡೆದುಕೊಂಡಿದ್ದ ಹೊಸ ಕಾರು ಇದುವರೆಗೆ 75 ಸಾವಿರಕ್ಕೂ ಹೆಚ್ಚು ಬುಕ್ಕಿಂಗ್ ಪಡೆದುಕೊಂಡಿದ್ದು, ಹೊಸ ಕಾರು ಉತ್ಪಾದನಾ ಸಾಮಾರ್ಥ್ಯದ ಆಧಾರದ ಮೇಲೆ ಹೊಸ ಕಾರಿನ ಕಾಯುವಿಕೆ ಅವಧಿಯು ವಿವಿಧ ವೆರಿಯೆಂಟ್‌‌ಗಳಿಗೆ ಅನುಗುಣವಾಗಿ ಗರಿಷ್ಠ ಒಂದು ವರ್ಷದ ತನಕ ಕಾಯಬೇಕಾಗುತ್ತದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಹೊಸ ಕಾರು ಖರೀದಿಗೆ ಬುಕ್ಕಿಂಗ್ ಸಲ್ಲಿಸಿರುವ ಮೊದಲ 25 ಸಾವಿರ ಗ್ರಾಹಕರಿಗೆ 2022ರ ಮಧ್ಯಂತರದ ವೇಳೆಗೆ ವಿತರಣೆಯಾಗಲಿದ್ದು, 25 ಸಾವಿರ ಯುನಿಟ್ ನಂತರ ಬುಕ್ಕಿಂಗ್ ಸಲ್ಲಿಸಿರುವ ಗ್ರಾಹಕರಿಗೆ ಹೊಸ ಕಾರು 2022ರ ಜೂನ್‌ನಿಂದ ಡಿಸೆಂಬರ್ ತನಕ ಮತ್ತು 50 ಸಾವಿರ ಯುನಿಟ್ ಬುಕ್ಕಿಂಗ್ ಸಲ್ಲಿಕೆ ಮಾಡಿರುವ ಗ್ರಾಹಕರಿಗೆ 2023ರ ನಂತರ ಹೊಸ ಕಾರು ಖರೀದಿಗೆ ಲಭ್ಯವಿರಲಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಬೆಲೆ ಏರಿಕೆ ಘೋಷಣೆ ಮಾಡಿದ ಕಾರು ಕಂಪನಿಗಳು

ಆಟೋ ಬಿಡಿಭಾಗಗಳ ಉತ್ಪಾದನಾ ವೆಚ್ಚ ಹೆಚ್ಚುತ್ತಿರುವ ಪರಿಣಾಮ ಹೊಸ ವಾಹನಗಳ ಬೆಲೆಯು ಕೂಡಾ ನಿರಂತರವಾಗಿ ಏರಿಕೆಯಾಗುತ್ತಿದ್ದು, ಕಳೆದ ತಿಂಗಳು ಬೆಲೆ ಏರಿಕೆ ಮಾಡಿದ್ದ ಪ್ರಮುಖ ಕಾರು ಕಂಪನಿಗಳು ಇದೀಗ ಮತ್ತೊಮ್ಮೆ ಹೊಸ ವಾಹನಗಳ ಬೆಲೆ ಪರಿಷ್ಕರಣೆಗೆ ಮುಂದಾಗಿವೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಕೋವಿಡ್‌ ಪರಿಣಾಮ ಜಾಗತಿಕ ಮಾರುಕಟ್ಟೆಯಲ್ಲಿ ಆಟೋ ಬಿಡಿಭಾಗಗಳ ಕೊರತೆಯು ಬೆಲೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗುತ್ತಿದ್ದು, ಹೆಚ್ಚುತ್ತಿರುವ ವೆಚ್ಚಗಳ ನಿರ್ವಹಣೆಗಾಗಿ ಆಟೋ ಕಂಪನಿಗಳು ನಿರಂತರವಾಗಿ ಬೆಲೆ ಪರಿಷ್ಕರಣೆ ಮಾಡುತ್ತಿವೆ. ಮಾರುತಿ ಸುಜುಕಿ, ಹ್ಯುಂಡೈ, ಟಾಟಾ ಮೋಟಾರ್ಸ್ ಸೇರಿದಂತೆ ಪ್ರಮುಖ ಕಾರು ಕಂಪನಿಗಳು ಜನವರಿ 1ರಿಂದಲೇ ಬೆಲೆ ಹೆಚ್ಚಳ ಮಾಡುವುದಾಗಿ ಸುಳಿವು ನೀಡಿದ್ದು, ನಿರಂತರ ಬೆಲೆ ಏರಿಕೆ ಪರಿಣಾಮ ವಾಹನ ಮಾಲೀಕತ್ವವು ದಿನದಿಂದ ದಿನಕ್ಕೆ ದುಬಾರಿಯಾಗಿ ಪರಿಣಮಿಸಿದೆ.

Article Published On: Sunday, December 12, 2021, 9:00 [IST]
English summary
Top auto news of the week hyundai india ev plan new volkswagen launched and more
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+