ವಾರದ ಸುದ್ದಿ: ಇಂಧನ ಬೆಲೆ ಇಳಿಕೆ, ಹೆಚ್ಚು ಮೈಲೇಜ್ ನೀಡುವ ಇ6 ಬಿಡುಗಡೆ, ದ್ವಿಗುಣಗೊಂಡ ಇವಿ ಚಾರ್ಜಿಂಗ್ ನಿಲ್ದಾಣ..

ದುಬಾರಿ ಇಂಧನಗಳ ಪರಿಣಾಮ ಹೈರಾಣಾಗಿದ್ದ ವಾಹನ ಮಾಲೀಕರಿಗೆ ಕೊನೆಗೂ ಸಿಹಿಸುದ್ದಿ ನೀಡಿದ್ದು, ಇಂಧನಗಳ ಮೇಲಿನ ಅಬಕಾರಿ ಸುಂಕವನ್ನು ಕಡಿತ ಮಾಡುವ ಮೂಲಕ ಪೆಟ್ರೋಲ್ ಇಳಿಕೆ ಮಾಡಿದೆ. ಇದರ ಜೊತೆಗೆ ಇವಿ ವಾಹನಗಳ ಹೆಚ್ಚಳಕ್ಕೂ ಕ್ರಮಕೈಗೊಂಡಿರುವ ಕೇಂದ್ರ ಸರ್ಕಾರವು ಇವಿ ನಿಲ್ದಾಣಗಳನ್ನು ಹೆಚ್ಚಿಸುತ್ತಿದ್ದು, ಈ ವಾರದ ಪ್ರಮುಖ ಸುದ್ದಿಗಳಲ್ಲಿ ಇಂಧನಗಳ ದರ ಇಳಿಕೆ ಜೊತೆಗೆ ಇವಿ ವಾಹನಗಳ ಬಿಡುಗಡೆ ಮತ್ತು ಮಾರಾಟ ಪ್ರಕ್ರಿಯೆ ಹೆಚ್ಚು ಗಮನಸೆಳೆದಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಭಾರೀ ಇಳಿಕೆ

ದಿನಂಪ್ರತಿ ಹೆಚ್ಚುತ್ತಿರುವ ಇಂಧನ ಬೆಲೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ವಾಹನ ಮಾಲೀಕರಿಗೆ ಕೇಂದ್ರ ಸರ್ಕಾರವು ಇಂಧನಗಳ ಮೇಲಿನ ಅಬಕಾರಿ ಸುಂಕ(Excise Duty) ಪ್ರಮಾಣವನ್ನು ಕಡಿತ ಮಾಡಿದ್ದು, ಕೇಂದ್ರ ಸರ್ಕಾರವು ಅಬಕಾರಿ ಸುಂಕ ಕಡಿತಗೊಳಿಸುತ್ತಿದ್ದಂತೆ ಕರ್ನಾಟಕ ಸರ್ಕಾರವು ಸಹ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಕೇಂದ್ರ ಸರ್ಕಾರಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಇಳಿಕೆ ಮಾಡಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಕೇಂದ್ರ ಸರ್ಕಾರದ ಸಲಹೆ ಮೇರೆಗೆ ಮೊದಲ ದಿನ ಕರ್ನಾಟಕ ಸರ್ಕಾರವು ಪೆಟ್ರೋಲ್ ಬೆಲೆಯಲ್ಲಿ ಪ್ರತಿ ಲೀಟರ್‌ಗೆ ರೂ. 6.29 ಪೈಸೆ ಮತ್ತು ಡೀಸೆಲ್ ಬೆಲೆಯಲ್ಲಿ ರೂ. 12.47 ಪೈಸೆ ಇಳಿಕೆ ಮಾಡಿದ್ದು, ಎರಡನೇ ದಿನ ಪೆಟ್ರೋಲ್ ಬೆಲೆಯಲ್ಲಿ ಪ್ರತಿ ಲೀಟರ್‌ಗೆ ರೂ. 7.06 ಪೈಸೆ ಮತ್ತು ಡೀಸೆಲ್ ಬೆಲೆಯಲ್ಲಿ ರೂ. 7.02 ಪೈಸೆ ಕಡಿತ ಮಾಡಿದೆ. ಬೆಂಗಳೂರಿನಲ್ಲಿ ನವೆಂಬರ್ 4 ಮತ್ತು 5 ರಂದು ಪೆಟ್ರೋಲ್ ಬೆಲೆಯಲ್ಲಿ ಪ್ರತಿ ಲೀಟರ್‌ಗೆ ರೂ. 14 ಮತ್ತು ಡೀಸೆಲ್ ಬೆಲೆಯಲ್ಲಿ ರೂ.20 ಇಳಿಕೆಯಾಗಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

520 ಕಿ.ಮೀ ಮೈಲೇಜ್ ನೀಡುವ ಬಿವೈಡಿ ಇ6 ಬಿಡುಗಡೆ

ಬಿವೈಡಿ ಇವಿ ಎಲೆಕ್ಟ್ರಿಕ್ ಎಂಪಿವಿ ಕಾರು ಮಾದರಿಯು ಎಕ್ಸ್‌ಶೋರೂಂ ಪ್ರಕಾರ ರೂ. 29.15 ಲಕ್ಷ ಬೆಲೆ ಹೊಂದಿದ್ದು, ಹೊಸ ಎಲೆಕ್ಟ್ರಿಕ್ ಕಾರನ್ನು ಕಂಪನಿಯು ಆರಂಭಿಕವಾಗಿ ಬಿ2ಬಿ ಉದ್ದೇಶಗಳಿಗೆ ಮಾತ್ರ ಮಾರಾಟ ಮಾಡಲಿದೆ. ಬಿ2ಬಿ(ಬ್ಯುಸಿನೆಸ್ ಟು ಬ್ಯುಸಿನೆಸ್) ಉದ್ದೇಶಗಳಿಗಾಗಿ ಪರಿಚಯಿಸಲಾಗಿರುವ ಹೊಸ ಇ6 ಕಾರನ್ನು ಸದ್ಯಕ್ಕೆ ಫ್ಲೀಟ್ ಆಪರೇಟರ್‌ಗಳು ಮತ್ತು ಇತರೆ ಕಾರ್ಪೊರೇಟ್ ಸಂಸ್ಥೆಗಳು ಮಾತ್ರ ಖರೀದಿಸಬಹುದಾಗಿದ್ದು, ಮುಂಬರುವ ಕೆಲ ತಿಂಗಳ ನಂತರ ಹೊಸ ಕಾರನ್ನು ವ್ಯಯಕ್ತಿಕ ಕಾರು ಬಳಕೆದಾರರು ಕೂಡಾ ಖರೀದಿಸಬಹುದಾಗಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಹೊಸ ಕಾರಿನಲ್ಲಿ ಬ್ಲೇಡ್ ಲಿಥಿಯಂ ಫೆರೋ ಫಾಸ್ಫೇಟ್ ಬ್ಯಾಟರಿ ಪ್ಯಾಕ್‌ AC ಮತ್ತು DC ಚಾರ್ಜಿಂಗ್ ಮಾನದಂಡಗಳನ್ನು ಬೆಂಬಲಿಸಲಿದ್ದು, WLTP ಮಾನದಂಡಗಳ ಪ್ರಕಾರ ಹೊಸ ಕಾರು ಪ್ರತಿ ಚಾರ್ಜ್‌ಗೆ ಕನಿಷ್ಠ 415 ಕಿ.ಮೀ ನಿಂದ ಗರಿಷ್ಠ 520 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ. ಹೊಸ ಕಾರನ್ನು ದೆಹಲಿ ಎನ್‌ಸಿಆರ್, ಬೆಂಗಳೂರು, ಹೈದರಾಬಾದ್, ಮುಂಬೈ, ಚೆನ್ನೈ, ವಿಜಯವಾಡ, ಕೊಚ್ಚಿ ಮತ್ತು ಅಹಮದಾಬಾದ್‌ನಲ್ಲಿರುವ ಬಿವೈಡಿ ಶೋರೂಂಗಳಲ್ಲಿ ಖರೀದಿಸಬಹುದಾಗಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಗರಿಷ್ಠ ಬೇಡಿಕೆ ಪಡೆದುಕೊಂಡ ಟಾಟಾ

ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಸದ್ಯ ಅಗ್ರಸ್ಥಾನದಲ್ಲಿರುವ ಟಾಟಾ ಮೋಟಾರ್ಸ್ ಕಂಪನಿಯು ಮಾರುಕಟ್ಟೆಯಲ್ಲಿನ ಗ್ರಾಹಕರ ಬೇಡಿಕೆಯೆಂತೆ ನೆಕ್ಸಾನ್ ಇವಿ(Nexon EV), ಟಿಗೋರ್ ಇವಿ(Tigor EV) ಮತ್ತು ಎಕ್ಸ್‌ಪ್ರೆಸ್-ಟಿ ಇವಿ(XPres-T EV) ಕಾರು ಮಾದರಿಗಳ ಮಾರಾಟದೊಂದಿಗೆ ಹೊಸ ದಾಖಲೆಗಳಿಗೆ ಕಾರಣವಾಗಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಎಲೆಕ್ಟ್ರಿಕ್ ವಾಹನ ಮಾರಾಟ ಆರಂಭಿಸಿದ ನಂತರ ಹಲವಾರು ಹೊಸ ಬದಲಾವಣೆಗಳನ್ನು ಪರಿಚಯಿಸಿರುವ ಟಾಟಾ ಮೋಟಾರ್ಸ್ ಕಂಪನಿಯು ಹೊಸ ಇವಿ ವಾಹನಗಳ ಮೂಲಕ ಉತ್ತಮ ಬೇಡಿಕೆ ಕಂಡುಕೊಳ್ಳುವಲ್ಲಿ ಯಶಸ್ವಿಯಾಗುತ್ತಿದೆ. ಟಾಟಾ ಮೋಟಾರ್ಸ್ ಕಂಪನಿಯು ಮೊದಲ ಬಾರಿಗೆ 1,586 ಯುನಿಟ್ ಇವಿ ಕಾರುಗಳನ್ನು ಮಾರಾಟ ಮಾಡಿದ್ದು,ಇದು ಕಳೆದ ವರ್ಷದ ಅಕ್ಟೋಬರ್ ಅವಧಿಯಲ್ಲಿನ ಇವಿ ಕಾರು ಮಾರಾಟಕ್ಕಿಂತಲೂ ಶೇ. 276 ರಷ್ಟು ಹೆಚ್ಚಳವಾಗಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಎಲೆಕ್ಟ್ರಿಕ್ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲು ಸಿದ್ದವಾದ ತೈಲ ಕಂಪನಿಗಳು

ಕೇಂದ್ರ ಸರ್ಕಾರದ ಹೊಸ ಯೋಜನೆಗೆ ಅನುಗುಣವಾಗಿ ವಿವಿಧ ನಗರಗಳಲ್ಲಿ ಎಲೆಕ್ಟ್ರಿಕ್ ವಾಹನಗಳಿ ಪೂರಕವಾಗಿ ಚಾರ್ಜಿಂಗ್ ನಿಲ್ದಾಣಗಳ ಸಂಖ್ಯೆ ನಿಧಾನವಾಗಿ ಹೆಚ್ಚಳವಾಗುತ್ತಿದ್ದು, ಖಾಸಗಿ ಮತ್ತು ಸರ್ಕಾರಿ ಸಹಭಾಗೀತ್ವದಲ್ಲಿ ಚಾರ್ಜಿಂಗ್ ನಿಲ್ದಾಣಗಳು ಒಂದೊಂದಾಗಿ ಕಾರ್ಯನಿರ್ವಹಣೆ ಆರಂಭಿಸುತ್ತಿವೆ. ಸರ್ಕಾರಿ ಸ್ವಾಮ್ಯದ ಪ್ರಮುಖ ತೈಲ ಮಾರಾಟ ಸಂಸ್ಥೆಗಳು ಕೂಡಾ ಇವಿ ಚಾರ್ಜಿಂಗ್ ನಿಲ್ದಾಣಗಳ ಮೇಲೆ ಆಸಕ್ತಿ ತೋರುತ್ತಿದ್ದು, ಮುಂದಿನ ಎರಡು ವರ್ಷಗಗಳಲ್ಲಿ ಸುಮಾರು 20 ಸಾವಿರ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯುವ ಸಿದ್ದತೆಯಲ್ಲಿವೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಅಸ್ತಿತ್ವದಲ್ಲಿ ಪೆಟ್ರೋಲ್ ಬಂಕ್‌ಗಳಲ್ಲಿ ಇವಿ ನಿಲ್ದಾಣಗಳನ್ನು ತೆರೆಯಲಾಗುತ್ತಿದ್ದು, ಹಂತ-ಹಂತವಾಗಿ ಚಾರ್ಜಿಂಗ್ ನಿಲ್ದಾಣಗಳ ಸಂಖ್ಯೆ ಹೆಚ್ಚಳವಾಗಲಿವೆ. ಅತಿ ಕಡಿಮೆ ಅವಧಿಯ ಹೆಚ್ಚಿನ ಪ್ರಮಾಣದ ಚಾರ್ಜ್ ಮಾಡಬಹುದಾದ ಫಾಸ್ಟ್ ಚಾರ್ಜಿಂಗ್ ಪರಿಚಯಿಸಲಾಗುತ್ತಿದ್ದು, ಹೆಚ್ಚುತ್ತಿರುವ ಇಂಧನ ಬೆಲೆ ತಗ್ಗಿಸಲು ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಮಟ್ಟದ ವಿನಾಯ್ತಿಗಳನ್ನು ನೀಡುತ್ತಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಭರ್ಜರಿ ಬೇಡಿಕೆ ಪಡೆದುಕೊಂಡ ಟಾಟಾ ಪಂಚ್ ಮೈಕ್ರೊ ಎಸ್‌ಯುವಿ

ಹೊಸ ಪಂಚ್ ಕಾರು ಮಾದರಿಗಾಗಿ ಟಾಟಾ ಮೋಟಾರ್ಸ್ ಕಂಪನಿಯು ಇದುವರೆಗೆ ಸುಮಾರು ಇಪತ್ತು ಸಾವಿರಕ್ಕೂ ಹೆಚ್ಚು ಬುಕ್ಕಿಂಗ್ ಪಡೆದುಕೊಂಡಿದ್ದು, ಅಕ್ಟೋಬರ್ ಅವಧಿಯಲ್ಲಿ ಹೊಸ ಕಾರು ಸುಮಾರು 8,453 ಯುನಿಟ್ ವಿತರಣೆಗೊಂಡಿದೆ. ಹೊಸ ಕಾರು ಮಾದರಿಯು ಪ್ರಮುಖ ನಾಲ್ಕು ವೆರಿಯೆಂಟ್‌ಗಳೊಂದಿಗೆ ಆಕರ್ಷಕ ಬೆಲೆ ಹೊಂದಿದ್ದು, ಹೊಸ ಕಾರು ಮೈಕ್ರೊ ಎಸ್‌ಯುವಿ ಮಾದರಿಗಳಿಗೆ ಮಾತ್ರವಲ್ಲದೆ ಹ್ಯಾಚ್‌ಬ್ಯಾಕ್ ಕಾರು ಮಾದರಿಗಳಿಗೂ ಭರ್ಜರಿ ಪೈಪೋಟಿ ನೀಡುತ್ತಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಪಂಚ್ ಕಾರು ಪ್ಯೂರ್, ಅಡ್ವೆಂಚರ್, ಅಕಾಂಪ್ಲಿಶೆಡ್ ಮತ್ತು ಕ್ರಿಯೆಟಿವ್ ಎನ್ನುವ ನಾಲ್ಕು ವೆರಿಯೆಂಟ್‌ಗಳೊಂದಿಗೆ ಖರೀದಿಗೆ ಲಭ್ಯವಿದ್ದು, ವಿವಿಧ ಮಾದರಿಗಳ ತಾಂತ್ರಿಕ ಸೌಲಭ್ಯಗಳಿಗೆ ಅನುಗುಣವಾಗಿ ಹೊಸ ಕಾರು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.49 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 9.09 ಲಕ್ಷ ಬೆಲೆ ಹೊಂದಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

70 ಸಾವಿರ ಯುನಿಟ್‌ಗೆ ದಾಟಿದ ಎಕ್ಸ್‌ಯುವಿ700 ಬುಕ್ಕಿಂಗ್

ಮಹೀಂದ್ರಾ ಎಕ್ಸ್‌ಯುವಿ700 ಮಾದರಿಯು ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಹಲವು ಹೊಸ ದಾಖಲೆಗೆ ಕಾರಣವಾಗಿದ್ದು, ಹೊಸ ಕಾರು ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಸುಮಾರು 70 ಸಾವಿರಕ್ಕೂ ಹೆಚ್ಚು ಬುಕ್ಕಿಂಗ್ ಪಡೆದುಕೊಂಡಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಹೊಸ ಕಾರು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಆಕರ್ಷಕ ಬೆಲೆಯೊಂದಿಗೆ ಗ್ರಾಹಕರನ್ನು ಸೆಳೆಯುತ್ತಿದ್ದು, ಕಂಪನಿಯು ಕಳೆದ ವಾರವಷ್ಟೇ ವಿತರಣೆ ಆರಂಭಿಸುವ ಮೂಲಕ ಮೊದಲ ತಿಂಗಳಿನಲ್ಲಿಯೇ ಸುಮಾರು 1,300 ಯುನಿಟ್‌ಗಳನ್ನು ವಿತರಣೆ ಮಾಡಿದೆ. ಹೊಸ ಕಾರು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಗ್ರಾಹಕರ ಬೇಡಿಕೆಯೆಂತೆ 5 ಸೀಟರ್ ಮತ್ತು 7 ಸೀಟರ್ ಮಾದರಿಗಳಲ್ಲಿ ಖರೀದಿಗೆ ಲಭ್ಯವಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11.99 ಲಕ್ಷಕ್ಕೆ ಮತ್ತು ಹೆಚ್ಚಿನ ಮಟ್ಟದ ಫೀಚರ್ಸ್ ಹೊಂದಿರುವ ಟಾಪ್ ಎಂಡ್ ಮಾದರಿಯನ್ನು ರೂ. 22.89 ಲಕ್ಷ ಬೆಲೆ ಹೊಂದಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಒಂದೇ ದಿನ 500 ಆಸ್ಟರ್ ಕಾರುಗಳ ವಿತರಣೆ

ಭಾರತದ ಮೊದಲ ವ್ಯಯಕ್ತಿಕರಣಗೊಳಿಸಿದ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಸೌಲಭ್ಯ ಹೊಂದಿರುವ ಕಾರು ಮಾದರಿಯಾಗಿ ಆಸ್ಟರ್ ಎಸ್‌ಯುವಿ ಮಾರುಕಟ್ಟೆ ಪ್ರವೇಶಿಸಿದ್ದು, ಹೊಸ ಕಾರಿನ ಬುಕ್ಕಿಂಗ್ ಆರಂಭಿಸಿದ ಮೊದಲ ದಿನವೇ ಕೇವಲ 20 ನಿಮಿಷಗಳಲ್ಲಿ 5 ಸಾವಿರ ಯುನಿಟ್‌ಗಳಿಗೆ ಬುಕ್ಕಿಂಗ್ ಪಡೆದುಕೊಳ್ಳುವ ಮೂಲಕ 2021ರ ಅವಧಿಗೆ ಪೂರ್ತಿಯಾಗಿ ಮಾರಾಟಗೊಂಡಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಎಂಜಿ ಮೋಟಾರ್ ಕಂಪನಿಯು ಸದ್ಯ ಹೊಸ ಆಸ್ಟರ್ ಕಾರಿಗಾಗಿ 2ನೇ ಹಂತದ ಬುಕ್ಕಿಂಗ್ ಆರಂಭಿಸುವ ಮೂಲಕ ಮೊದಲ ಹಂತದಲ್ಲಿ ಬುಕ್ಕಿಂಗ್ ಮಾಡಲಾದ ಗ್ರಾಹಕರಿಗೆ ವಿತರಣೆ ಆರಂಭಿಸಿದ್ದು, ದಸರಾ ಸಂಭ್ರಮದ ವೇಳೆ ಕಂಪನಿಯು ಸುಮಾರು 500 ಯುನಿಟ್ ಕಾರುಗಳನ್ನು ಒಂದೇ ದಿನದಲ್ಲಿ ದೇಶಾದ್ಯಂತ ಪ್ರಮುಖ ನಗರಗಳಲ್ಲಿ ವಿತರಣೆ ಮಾಡಿದೆ. ಹೊಸ ಕಾರು 1.3-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆಯೊಂದಿಗೆ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.9.78 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 16.78 ಲಕ್ಷ ಬೆಲೆ ಹೊಂದಿದೆ.

Most Read Articles

Kannada
English summary
Top auto news of the week petrol diesel price reduced byd e6 launched tata ev cars sales and more
Story first published: Sunday, November 7, 2021, 0:41 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X