ವಾರದ ಸುದ್ದಿ: ಸ್ಕೋಡಾ ಸ್ಲಾವಿಯಾ ಅನಾವರಣ, ಮರ್ಸಿಡಿಸ್ ಹೊಸ ಎಎಂಜಿ ಬಿಡುಗಡೆ, ಕಾರುಗಳ ಬೆಲೆ ಹೆಚ್ಚಳ..

ಸೆಮಿ ಕಂಡಕ್ಟರ್ ಕೊರತೆ ಪರಿಣಾಮ ಇಳಿಕೆಯಾಗಿದ್ದ ಹೊಸ ಕಾರುಗಳ ಮಾರಾಟವು ಇದೀಗ ಸುಧಾರಿಸುತ್ತಿದ್ದು, ಹಲವು ಹೊಸ ಕಾರು ಮಾದರಿಗಳು ಇದೀಗ ಮಾರುಕಟ್ಟೆ ಪ್ರವೇಶಿಸುತ್ತಿವೆ. ಈ ವಾರದ ಪ್ರಮುಖ ಸುದ್ದಿಗಳಲ್ಲಿ ಸ್ಕೋಡಾ ಸ್ಲಾವಿಯಾ ಮತ್ತು ಮರ್ಸಿಡಿಸ್ ಹೊಸ ಎಎಂಜಿ ಪ್ರಮುಖವಾಗಿದ್ದು, ಈ ವಾರದ ಪ್ರಮುಖ ಸುದ್ದಿಗಳ ಹೈಲೆಟ್ಸ್ ಅನ್ನು ಇಲ್ಲಿ ನೋಡೋಣ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಸ್ಕೋಡಾ ಸ್ಲಾವಿಯಾ ಅನಾವರಣ

ಹೊಸ ಸ್ಲಾವಿಯಾ ಕಾರು ಮಾದರಿಯನ್ನು ಸ್ಕೋಡಾ ಕಂಪನಿಯು ಫೋಕ್ಸ್‌ವ್ಯಾಗನ್ ಕಂಪನಿ ಜೊತೆಗಿನ ಇಂಡಿಯಾ 2.0 ಪ್ರೊಜೆಕ್ಟ್ ಯೋಜನೆ ಅಡಿಯಲ್ಲಿ ಅಭಿವೃದ್ದಿಗೊಳಿಸುತ್ತಿದ್ದು, ಹೊಸ ಯೋಜನೆಯೊಂದಿಗೆ ಎರಡು ಕಂಪನಿಗಳು ಒಟ್ಟು ನಾಲ್ಕು ಹೊಸ ಕಾರು ಮಾದರಿಗಳನ್ನು ಬಿಡುಗಡೆಗೊಳಿಸಲು ಯೋಜಿಸಿವೆ. ಸ್ಲಾವಿಯಾ ಸೆಡಾನ್ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿನ ಹೋಂಡಾ ಸಿಟಿ, ಮಾರುತಿ ಸುಜುಕಿ ಸಿಯಾಜ್, ಹ್ಯುಂಡೈ ವೆರ್ನಾ ಕಾರುಗಳಿಗೆ ಉತ್ತಮ ಪೈಪೋಟಿ ನೀಡಲಿದ್ದು, ರ‍್ಯಾಪಿಡ್‌ಗಿಂತಲೂ ಆಕರ್ಷಕ ವಿನ್ಯಾಸದೊಂದಿಗೆ ಲಾಂಗ್‌ವೀಲ್ಹ್ ಬೆಸ್ ಪಡೆದುಕೊಂಡಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಸ್ಲಾವಿಯಾ ಕಾರು ಕುಶಾಕ್ ಮಾದರಿಯಂತೆ ಪ್ರಮುಖ ಮೂರು ವೆರಿಯೆಂಟ್‌ಗಳೊಂದಿಗೆ 1.0-ಲೀಟರ್ ಟಿಎಸ್ಐ ಮೂರು-ಸಿಲಿಂಡರ್ ಎಂಜಿನ್ ಮತ್ತು 1.5-ಲೀಟರ್ ನಾಲ್ಕು-ಸಿಲಿಂಡರ್ ಟಿಎಸ್ಐ ಎಂಜಿನ್ ಜೊತೆಗೆ ಎರಡೂ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಆಯ್ಕೆ ಪಡೆದುಕೊಂಡಿರಲಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಮರ್ಸಿಡಿಸ್-ಎಎಂಜಿ ಎ 45 ಎಸ್ 4ಮ್ಯಾಟಿಕ್ ಪ್ಲಸ್ ಬಿಡುಗಡೆ

ಮರ್ಸಿಡಿಸ್ ಬೆಂಝ್ ಇಂಡಿಯಾ ಕಂಪನಿಯು ತನ್ನ ಬಹುನೀರಿಕ್ಷಿತ ಮರ್ಸಿಡಿಸ್-ಎಎಂಜಿ ಎ 45 ಎಸ್ 4ಮ್ಯಾಟಿಕ್ ಪ್ಲಸ್ ಪರ್ಫಾಮೆನ್ಸ್ ಆವೃತ್ತಿಯನ್ನು ಭಾರತದಲ್ಲೂ ಬಿಡುಗಡೆ ಮಾಡಿದ್ದು, ಪವರ್‌ಫುಲ್ ಎಂಜಿನ್ ಪ್ರೇರಿತ ಹೊಸ ಕಾರು ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ರೂ. 79.50 ಲಕ್ಷ ಬೆಲೆ ಹೊಂದಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಮರ್ಸಿಡಿಸ್-ಎಎಂಜಿ ಎ 45 ಎಸ್ ಮಾದರಿಯು ಮರ್ಸಿಡಿಸ್ ಬೆಂಝ್ ಕಂಪನಿಯ ಅತ್ಯಂತ ಶಕ್ತಿಯುತವಾದ ಫೋರ್ ಸಿಲಿಂಡರ್ ಮೋಟಾರ್ ಪ್ರೇರಿತ 2.0-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಹೊಂದಿದ್ದು, ಇದು 8-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ 412 ಬಿಎಚ್‌ಪಿ ಮತ್ತು 500 ಎನ್ಎಂ ಟಾರ್ಕ್ ಉತ್ಪಾದಿಸಬಲ್ಲದು.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಹೊಸ ವೆರಿಯೆಂಟ್ ಪಡೆದುಕೊಂಡ ಟಾಟಾ ಆಲ್‌ಟ್ರೊಜ್

ಆಲ್‌ಟ್ರೊಜ್ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಮಾದರಿಯಲ್ಲಿ ಇದೀಗ ಹೊಸದಾಗಿ ಎಕ್ಸ್ಇ ಪ್ಲಸ್ ರೂಪಾಂತರವನ್ನು ಬಿಡುಗಡೆ ಮಾಡಲಾಗಿದೆ. ಆಲ್‌ಟ್ರೊಜ್ ಕಾರಿನ ಎಕ್ಸ್ಇ ಮತ್ತು ಈ ಹಿಂದಿನ ಎಕ್ಸ್ಎಂ ರೂಪಾಂತರದ ನಡುವೆ ಗಮನಾರ್ಹ ಬೆಲೆಯ ಅಂತರವಿದ್ದ ಕಾರಣ ಟಾಟಾ ಮೋಟಾರ್ಸ್ ಕಂಪನಿಯು ಹೊಸ ಹೆಚ್ಚು ಕೈಗೆಟುಕುವ ಬೆಲೆಯ ಎಕ್ಸ್ಇ ಪ್ಲಸ್ ಆವೃತ್ತಿಯನ್ನು ಪರಿಚಯಿಸಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಹೊಸ ಆಲ್‌ಟ್ರೊಜ್ ಎಕ್ಸ್ಇ ಪ್ಲಸ್ ರೂಪಾಂತದ ಪೆಟ್ರೋಲ್ ಆವೃತ್ತಿಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 6.35 ಲಕ್ಷ ಮತ್ತು ಡೀಸೆಲ್ ರೂಪಾಂತರವು ಆರಂಭಿಕವಾಗಿ ರೂ. 7.55 ಲಕ್ಷ ಬೆಲೆ ಪಡೆದುಕೊಂಡಿವೆ. ಹೊಸ ಮಾದರಿಯನ್ನು ಹೆಚ್ಚು ಕೈಗೆಟುಕುವಂತೆ ಮಾಡಲು ಖರೀದಿ ನಿರ್ಧಾರಗಳ ಮೇಲೆ ಪರಿಣಾಮ ಬೀರದ ಕೆಲವು ವೈಶಿಷ್ಟ್ಯಗಳನ್ನು ತೆಗೆದುಹಾಕಲಾಗಿದ್ದು, ಪ್ರಮುಖ ಪ್ರೀಮಿಯಂ ಫೀಚರ್ಸ್‌ಗಳನ್ನು ಕೈಬಿಡಲಾಗಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ರೆನಾಲ್ಟ್ ಕ್ವಿಡ್ ಹೊಸ ಮೈಲಿಗಲ್ಲು

ನಾಲ್ಟ್ ಕ್ವಿಡ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ 4 ಲಕ್ಷ ಯುನಿಟ್‌ಗಳು ಮಾರಾಟವಾಗಿ ಮಾರಾಟದಲ್ಲಿ ಹೊಸ ಮೈಲಿಗಲ್ಲನ್ನು ಸಾಧಿಸಿದೆ. 2015ರಲ್ಲಿ ಬಿಡುಗಡೆಯಾದ ಹ್ಯಾಚ್‌ಬ್ಯಾಕ್ ಆರಂಭದಲ್ಲಿ ಅದರ ಕಾಂಪ್ಯಾಕ್ಟ್ ಶೈಲಿಯ ವಿನ್ಯಾಸ ಮತ್ತು ಕೈಗೆಟುಕುವ ಬೆಲೆಗೆ ಹೆಚ್ಚಿನ ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದು, ಬಿಎಸ್6 ಆವೃತ್ತಿಯನ್ನು ಕಳೆದ ವರ್ಷದ ಆರಂಭದಲ್ಲಿ ಬಿಡುಗಡೆಗೊಳಿಸಿತ್ತು.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ರೆನಾಲ್ಟ್ ಕ್ವಿಡ್ ನಾಲ್ಕು ಟ್ರಿಮ್‌ಗಳೊಂದಿಗೆ 10 ರೂಪಾಂತರಗಳಲ್ಲಿ ಖರೀದಿಗೆ ಲಭ್ಯವಿದ್ದು, ಕ್ವಿಡ್ ಕಾರಿನ ಆರಂಭಿಕ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ 4.11 ಲಕ್ಷಗಳಾಗಿದೆ. ಕ್ವಿಡ್ ಖರೀದಿದಾರರಲ್ಲಿ ಜನಪ್ರಿಯವಾಗಲು ಮುಖ್ಯ ಕಾರಣವೆಂದರೆ ಇದರ ಲುಕ್ ಮತ್ತು ಪ್ರಾರಂಭವಾದ ಸಮಯದಲ್ಲಿ ತನ್ನ ವಿಭಾಗದಲ್ಲಿ ಟಚ್‌ಸ್ಕ್ರೀನ್ ನೀಡುವ ಏಕೈಕ ಮಾದರಿಯಾಗಿತ್ತು.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಹ್ಯುಂಡೈ ಐ20 ಡ್ಯುಯಲ್ ಟೋನ್ ಸ್ಥಗಿತ

ಹ್ಯುಂಡೈ ಕಂಪನಿಯು ಐ20 ಕಾರಿನ ಕೆಲವು ಮಾದರಿಗಳಿಂದ ಡ್ಯುಯಲ್ ಟೋನ್ ಬಣ್ಣವನ್ನು ಕೈಬಿಟ್ಟಿದೆ. ಡ್ಯುಯಲ್ ಟೋನ್ ಬಣ್ಣ 11 ಮಾದರಿಗಳಲ್ಲಿ ಲಭ್ಯವಿದ್ದು, ಅದರಲ್ಲಿ 6 ಮಾದರಿಗಳಿಂದ ಡ್ಯುಯಲ್ ಟೋನ್ ಬಣ್ಣದ ಆಯ್ಕೆಯನ್ನು ತೆಗೆದುಹಾಕಲಾಗಿದೆ. ಇದನ್ನು ಕಳೆದ ವರ್ಷ ನವೆಂಬರ್‌ನಲ್ಲಿ ಪರಿಚಯಿಸಿದ್ದ ಹ್ಯುಂಡೈ ಕಂಪನಿಯು ಈಗ ಸರಿಯಾಗಿ ಒಂದು ವರ್ಷದ ನಂತರ ಡ್ಯುಯಲ್ ಟೋನ್ ಬಣ್ಣ ಆಯ್ಕೆಯನ್ನು ಬೇಡಿಕೆಯ ದೃಷ್ಟಿಯಿಂದ ಸ್ಥಗಿತಗೊಳಿಸಲಾಗಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಹ್ಯುಂಡೈ i20 ಕಾರಿನಲ್ಲಿರುವ 1.0 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 120 ಬಿ‌ಹೆಚ್‌ಪಿ ಪವರ್ ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ ಡಿಸಿಟಿ ಹಾಗೂ ಆರು ಸ್ಪೀಡ್ ಐಎಂಟಿ ಗೇರ್ ಬಾಕ್ಸ್ ನೀಡಲಾಗಿದೆ. ಇನ್ನು 1.2 ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಎಂಜಿನ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ 88 ಬಿ‌ಹೆಚ್‌ಪಿ ಪವರ್ ಹಾಗೂ ಐದು ಸ್ಪೀಡ್ ಮ್ಯಾನುಯಲ್ ಗೇರ್‌ಬಾಕ್ಸ್‌ನೊಂದಿಗೆ 83 ಬಿ‌ಹೆಚ್‌ಪಿ ಪವರ್ ಉತ್ಪಾದಿಸುತ್ತದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಟೈಗುನ್ ಮತ್ತು ಕುಶಾಕ್ ಬೆಲೆ ಹೆಚ್ಚಳ

ಸ್ಕೋಡಾ ಮತ್ತು ಫೋಕ್ಸ್‌ವ್ಯಾಗನ್ ಕಂಪನಿಗಳು ಭಾರತದಲ್ಲಿ ಕುಶಾಕ್ ಮತ್ತು ಟೈಗುನ್ ಕಾರು ಮಾದರಿಯೊಂದಿಗೆ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಹೊಸ ಕಾರುಗಳ ಬಿಡುಗಡೆಯ ನಂತರ ಮೊದಲ ಬಾರಿಗೆ ಕುಶಾಕ್ ಮತ್ತು ಟೈಗುನ್ ಕಾರಿನ ಬೆಲೆಯಲ್ಲಿ ಹೆಚ್ಚಳ ಮಾಡಿವೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಸ್ಕೋಡಾ ಕಂಪನಿಯು ಬಿಡುಗಡೆ ಮಾಡಿರುವ ಕುಶಾಕ್ ಕಾರಿನ ಹೊಸ ದರಪಟ್ಟಿಯಲ್ಲಿ 1.0-ಲೀಟರ್ ಆಕ್ಟಿವಾ ಪೆಟ್ರೋಲ್ ಮ್ಯಾನುವಲ್ ಮಾದರಿಯು ರೂ. 10.49 ಲಕ್ಷದಿಂದ ರೂ. 10.79 ಲಕ್ಷಕ್ಕೆ ಬೆಲೆ ಏರಿಕೆಯಾಗಿದ್ದು, ಸುಮಾರು ರೂ.30 ಸಾವಿರದಷ್ಟು ಹೆಚ್ಚುವರಿ ಬೆಲೆ ಪಡೆದುಕೊಂಡಿದೆ. ಹಾಗೆಯೇ ಹೊಸ ದರ ಪಟ್ಟಿಯಲ್ಲಿ ಟೈಗುನ್ ಕಾರು ಮಾದರಿಯು ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ರೂ. 4 ಸಾವಿರದಿಂದ ರೂ.10 ಸಾವಿರ ತನಕ ಬೆಲೆ ಹೆಚ್ಚಳ ಪಡೆದುಕೊಂಡಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಕಿಯಾ ಇವಿ9 ಅನಾವರಣ

ದಕ್ಷಿಣ ಕೊರಿಯಾದ ಕಿಯಾ ಕಂಪನಿಯು ಜಾಗತಿಕ ಮಾರುಕಟ್ಟೆಗಾಗಿ ವಿವಿಧ ಮಾದರಿಯ ಇವಿ ಆವೃತ್ತಿಗಳನ್ನು ಅಭಿವೃದ್ದಿಪಡಿಸುತ್ತಿದ್ದು, ಕಂಪನಿಯು ಲಾಸ್ ಏಂಜಲೀಸ್‌ನಲ್ಲಿ ನಡೆಯುತ್ತಿರುವ ಆಟೋ ಶೋನಲ್ಲಿ ತನ್ನ ಇವಿ9 ಪರಿಕಲ್ಪನೆ ಮಾದರಿಯನ್ನು ಅನಾವರಣಗೊಳಿಸಿದೆ.

ಈ ವಾರದ ಪ್ರಮುಖ ಆಟೋ ಸುದ್ದಿಗಳು

ಅಮೆರಿಕದ ಅತಿ ದೊಡ್ಡ ಮೋಟಾರ್ ಶೋನಲ್ಲಿ ಅನಾವರಣಗೊಂಡ ಹ್ಯುಂಡೈ ಸೆವೆನ್ ಪರಿಕಲ್ಪನಾ ಮಾದರಿಯೊಂದಿಗೆ ಗಮನಾರ್ಹವಾದ ಹೋಲಿಕೆ ಹೊಂದಿರುವ ಕಿಯಾ ಇವಿ9 ಮಾದರಿಯು ಇ-ಜಿಎಂಪಿ ಪ್ಲ್ಯಾಟ್‌ಫಾರ್ಮ್ ಆಧರಿಸಿ ನಿರ್ಮಾಣಗೊಂಡಿದ್ದು, ಹೊಸ ಪರಿಕಲ್ಪನಾ ಆವೃತ್ತಿಯು ಮುಂಬರುವ ಕೆಲವೇ ದಿನಗಳಲ್ಲಿ ಉತ್ಪಾದನಾ ಆವೃತ್ತಿಯೊಂದಿಗೆ ರಸ್ತೆಗಿಳಿಯಲಿದೆ. ಹೊಸ ಕಾರು ಪ್ರತಿ ಚಾರ್ಜ್‌ಗೆ ಕನಿಷ್ಠ 482 ಕಿ.ಮೀ ಮೈಲೇಜ್ ನೀಡುವುದಾಗಿ ಕಿಯಾ ಕಂಪನಿಯೇ ಮಾಹಿತಿ ಹಂಚಿಕೊಂಡಿದೆ.

Most Read Articles

Kannada
English summary
Top auto news of the week skoda slavia unveiled mercedes amg a 45 s launched and more
Story first published: Sunday, November 21, 2021, 9:00 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X