ವಾರದ ಸುದ್ದಿ: ದುಬಾರಿಯಾದ ಇಂಧನ ದರ, ಹೊಸ ವಾಹನಗಳ ಬೆಲೆ ಏರಿಕೆ, ಬಗೆಹರಿಯದ ಸೆಮಿಕಂಡಕ್ಟರ್ ಕೊರತೆ...

ಕೋವಿಡ್‌ನಿಂದಾಗಿ ಉಂಟಾಗಿರುವ ಆರ್ಥಿಕ ಸಂಕಷ್ಟದಲ್ಲೂ ಆಟೋ ಉದ್ಯಮವು ಚೇತರಿಕೆ ಕಾಣುತ್ತಿದ್ದು, ಇಂಧನಗಳ ದುಬಾರಿ ಬೆಲೆಯು ಹೊಸ ವಾಹನಗಳ ಮಾರಾಟದ ಮೇಲೆ ಪರಿಣಾಮ ಬೀರುತ್ತಿದೆ. ಇದರೊಂದಿಗೆ ಹೊಸ ವಾಹನಗಳಿಗೆ ಬೇಡಿಕೆ ಹೆಚ್ಚುತ್ತಿರುವಾಗಲೇ ಸೆಮಿಕಂಡಕ್ಟರ್ ಕೊರತೆಯು ಸಹ ಆಟೋ ಉತ್ಪಾದನಾ ಕಂಪನಿಗಳಿಗೆ ತಲೆಬಿಸಿಯಾಗಿ ಪರಿಣಮಿಸಿದೆ.

ವಾರದ ಸುದ್ದಿ

ದುಬಾರಿಯಾದ ಇಂಧನ ದರ, ಹೊಸ ವಾಹನಗಳ ಬೆಲೆ ಏರಿಕೆ, ಸೆಮಿಕಂಡಕ್ಟರ್ ಕೊರತೆಯ ನಡುವೆಯೂ ವಿವಿಧ ಕಾರು ಕಂಪನಿಗಳು ತಮ್ಮ ಹಲವು ಹೊಸ ವಾಹನಗಳನ್ನು ಮಾರುಕಟ್ಟೆಗೆ ಪರಿಚಯಿಸುತ್ತಿದ್ದು, ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳ ಹೈಲೆಟ್ಸ್‌ಗಳನ್ನು ಮುಂದಿನ ಸ್ಲೈಡ್‌ಗಳಲ್ಲಿ ತಿಳಿಯೋಣ.

ವಾರದ ಸುದ್ದಿ

ಬಗೆಹರಿಯದ ಸೆಮಿಕಂಡಕ್ಟರ್ ಬಿಕ್ಕಟ್ಟು

ಹೊಸ ವಾಹನ ಉತ್ಪಾದನೆ ಮತ್ತು ಮಾರಾಟದಲ್ಲಿ ನಿರಂತರವಾಗಿ ಏರಿಳಿತ ಉಂಟಾಗುತ್ತಿದ್ದು, ಹೊಸ ವಾಹನಗಳಿಗೆ ಬೇಡಿಕೆ ಹೆಚ್ಚುತ್ತಿರುವ ಸಂದರ್ಭದಲ್ಲೇ ಎಲೆಕ್ಟ್ರಾನಿಕ್ ಬಿಡಿಭಾಗಗಳ ಕೊರತೆ ಆಟೋ ಉದ್ಯಮಕ್ಕೆ ಭಾರೀ ಹೊಡೆತ ನೀಡುತ್ತಿದೆ. ಹೊಸ ತಂತ್ರಜ್ಞಾನ ಪ್ರೇರಿತ ವಾಹನಗಳ ಉತ್ಪಾದನೆಗೆ ಅವಶ್ಯವಾಗಿರುವ ಎಲೆಕ್ಟ್ರಾನಿಕ್ ಚಿಪ್(ಸೆಮಿಕಂಡಕ್ಟರ್) ಕೊರತೆಯು ಜಾಗತಿಕ ಆಟೋ ಉದ್ಯಮದ ಮೇಲೆ ವ್ಯತರಿಕ್ತ ಪರಿಣಾಮ ಬೀರುತ್ತಿದೆ.

ವಾರದ ಸುದ್ದಿ

ಎಲೆಕ್ಟ್ರಾನಿಕ್ ಚಿಪ್ ಕೊರತೆಯಿಂದಾಗಿ ಭಾರತದಲ್ಲಿ ಮಾತ್ರವಲ್ಲ ವಿಶ್ವದ ಪ್ರಮುಖ ವಾಹನ ಉತ್ಪಾದನಾ ಕಂಪನಿಗಳಿಗೂ ಬಿಸಿ ತಟ್ಟಿದ್ದು, ಪ್ರಮುಖ ವಾಹನಗಳ ಉತ್ಪಾದನಾ ಪ್ರಮಾಣವು ಗಣನೀಯವಾಗಿ ಇಳಿಕೆಯಾಗಿರುವುದು ಆಟೋ ಉತ್ಪಾದನಾ ಕಂಪನಿಗಳ ಆದಾಯಕ್ಕೆ ಹೊಡೆತ ನೀಡುತ್ತದೆ.

ಎಲೆಕ್ಟ್ರಾನಿಕ್ ಚಿಪ್ ಅಗತ್ಯ ಪ್ರಮಾಣದ ಸ್ಟಾಕ್ ಇಲ್ಲದಿರುವ ಕಾರಣಕ್ಕೆ ತನ್ನ ಪ್ರಮುಖ ಕಾರು ಉತ್ಪಾದನಾ ಘಟಕಗಳಲ್ಲಿ ಕನಿಷ್ಠ ಪ್ರಮಾಣದ ಉತ್ಪಾದನೆ ಕೈಗೊಳ್ಳುತ್ತಿದ್ದು, ಹೊಸ ಕಾರುಗಳ ಕಾಯುವಿಕೆ ಅವಧಿಯು ಹೆಚ್ಚಳವಾಗಲಿದೆ.

ವಾರದ ಸುದ್ದಿ

ಬೆಲೆ ಏರಿಕೆ ಬಿಸಿ

ಆಟೋ ಬಿಡಿಭಾಗಗಳ ವೆಚ್ಚವು ಹೆಚ್ಚುತ್ತಿರುವ ಪರಿಣಾಮ ಹೊಸ ವಾಹನಗಳ ಬೆಲೆಯು ನಿರಂತರವಾಗಿ ಏರಿಕೆಯಾಗುತ್ತಿದ್ದು, ಪ್ರೀಮಿಯಂ ಕಾರುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಪ್ರಮುಖ ಕಾರು ಕಂಪನಿಗಳು ಉತ್ಪಾದನಾ ವೆಚ್ಚ ನಿರ್ವಹಣೆಗಾಗಿ ತನ್ನ ಪ್ರಮುಖ ಕಾರು ಮಾದರಿಗಳ ಬೆಲೆ ಹೆಚ್ಚಿಸಿವೆ.

ವಾರದ ಸುದ್ದಿ

ಹೊಸ ವಾಹನಗಳ ಉತ್ಪಾದನಾ ವೆಚ್ಚಗಳನ್ನು ನಿರ್ವಹಿಸಲು ಪ್ರಮುಖ ವಾಹನ ತಯಾರಕ ಕಂಪನಿಗಳು ತಮ್ಮ ಹೊಸ ವಾಹನಗಳ ಬೆಲೆಯನ್ನು ನಿರಂತರವಾಗಿ ಪರಿಷ್ಕರಣೆ ಮಾಡುತ್ತಿದ್ದು, ನಿರಂತರ ಬೆಲೆ ಏರಿಕೆ ಪರಿಣಾಮ ಹೊಸ ವಾಹನ ಮಾಲೀಕತ್ವವು ದಿನದಿಂದ ದಿನಕ್ಕೆ ದುಬಾರಿಯಾಗಿ ಪರಿಣಮಿಸುತ್ತಿದೆ. ಕಳೆದ ಕೆಲವು ತಿಂಗಳುಗಳಲ್ಲಿ ಹೊಸ ವಾಹನಗಳ ಬೆಲೆಯು ಸಾಕಷ್ಟು ಏರಿಕೆಯಾಗಿದ್ದು, ಪ್ರತಿ ಎರಡರಿಂದ ಮೂರು ತಿಂಗಳಿಗೆ ಒಂದು ವಿವಿಧ ಮಾದರಿಗಳಿಗೆ ಅನುಗುಣವಾಗಿ ಶೇ.1 ರಿಂದ ಶೇ. 2 ರಷ್ಟು ಹೆಚ್ಚಳ ಮಾಡಲಾಗುತ್ತಿದೆ.

ವಾರದ ಸುದ್ದಿ

ಗಗನಮುಖಿಯಾದ ಇಂಧನ ಬೆಲೆ

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮತ್ತೆ ಮುಂದುವರೆದಿದ್ದು, ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಕಚ್ಚಾ ತೈಲದ ಬೆಲೆ ಏರಿಕೆಯಿಂದಾಗಿ ಇಂಧನಗಳ ಬೆಲೆಯನ್ನು ಹೆಚ್ಚಿಸಲಾಗುತ್ತಿದೆ. ಅಂತರ ರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 82 ಡಾಲರ್ ಗಳಿಗೆ ಏರಿಕೆಯಾಗಿದೆ. ಒಂದು ತಿಂಗಳ ಹಿಂದೆ ಅಂತರ ರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತಿ ಬ್ಯಾರೆಲ್ ಕಚ್ಚಾ ತೈಲದ ಬೆಲೆ 72 ಡಾಲರ್ ಗಳಾಗಿತ್ತು.

ವಾರದ ಸುದ್ದಿ

ಕಳೆದ ಎರಡು ವರ್ಷಗಳಿಂದ ಇಂಧನದ ಮೇಲಿನ ಅಬಕಾರಿ ಸುಂಕ ಗಮನಾರ್ಹವಾಗಿ ಹೆಚ್ಚಾಗಿದ್ದು, ಹೊಸ ದರದಂತೆ ಬೆಂಗಳೂರಿನಲ್ಲಿ ಪ್ರತಿ ಪೆಟ್ರೋಲ್ ಬೆಲೆ ರೂ. 110.98 ಪೈಸೆಗಳಾದರೆ ಡೀಸೆಲ್ ದರವು ಪ್ರತಿ ಲೀಟರ್‌ಗೆ ರೂ. 101.86 ಪೈಸೆ ಹೊಂದಿದೆ.

ವಾರದ ಸುದ್ದಿ

ಆಕರ್ಷಕ ಬೆಲೆಯಲ್ಲಿ ಟಾಟಾ ಪಂಚ್ ಬಿಡುಗಡೆ

ಅಲ್ಫಾ ಪ್ಲಾಟ್‌ಫಾರ್ಮ್ ಆಧರಿಸಿರುವ ಹೊಸ ಟಾಟಾ ಪಂಚ್ ಕಾರು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಪ್ಯೂರ್, ಅಡ್ವೆಂಚರ್, ಅಕಾಂಪ್ಲಿಶೆಡ್ ಮತ್ತು ಕ್ರಿಯೆಟಿವ್ ಎನ್ನುವ ನಾಲ್ಕು ವೆರಿಯೆಂಟ್‌ಗಳೊಂದಿಗೆ ಖರೀದಿಗೆ ಲಭ್ಯವಿದ್ದು, ವಿವಿಧ ಮಾದರಿಗಳ ತಾಂತ್ರಿಕ ಸೌಲಭ್ಯಗಳಿಗೆ ಅನುಗುಣವಾಗಿ ಹೊಸ ಕಾರು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.49 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 9.09 ಲಕ್ಷ ಬೆಲೆ ಹೊಂದಿದೆ.

ವಾರದ ಸುದ್ದಿ

ಅತ್ಯುತ್ತಮ ಎಂಜಿನ್ ಆಯ್ಕೆಯೊಂದಿಗೆ ಸೆಗ್ಮೆಂಟ್ ಬೆಸ್ಟ್ ಫಿಚರ್ಸ್ ಪಡೆದುಕೊಳ್ಳಲಿರುವ ಟಾಟಾ ಪಂಚ್ ಕಾರಿನಲ್ಲಿ ಕಂಪನಿಯು 1.2-ಲೀಟರ್ ರಿವೊಟ್ರಾನ್ ತ್ರಿ ಸಿಲಿಂಡರ್ ನ್ಯಾಚುರಲ್ ಆಸ್ಪೆರೆಟೆಡ್ ಪೆಟ್ರೋಲ್ ಎಂಜಿನ್ ಪರಿಚಯಿಸಿದೆ. ಹೊಸ ಕಾರು 3840 ಎಂಎಂ ಉದ್ದ, 1800 ಎಂಎಂ ಅಗಲ ಮತ್ತು 1635 ಎಂಎಂ ಎತ್ತರದೊಂದಿಗೆ 2450 ಎಂಎಂ ವ್ಹೀಲ್ ಬೇಸ್, 187 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದ್ದು, ಪ್ರತಿ ಮಾದರಿಯಲ್ಲೂ ಕಂಪನಿಯು ಅತ್ಯುತ್ತಮ ಫೀಚರ್ಸ್‌ಗಳನ್ನು ನೀಡುವ ಮೂಲಕ ಉತ್ತಮ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ವಾರದ ಸುದ್ದಿ

ಟೊಯೊಟಾ ಇನೋವಾ ಕ್ರಿಸ್ಟಾ ಲಿಮಿಟೆಡ್ ಎಡಿಷನ್ ಬಿಡುಗಡೆ

ಟೊಯೊಟಾ ಕಂಪನಿಯು ತನ್ನ ಜನಪ್ರಿಯ ಎಂಪಿವಿ ಮಾದರಿಯಾದ ಇನೋವಾ ಕ್ರಿಸ್ಟಾ ಮಾದರಿಯಲ್ಲಿ ಸೀಮಿತ ಅವಧಿಗಾಗಿ ಲಿಮಿಟೆಡ್ ಎಡಿಷನ್ ಬಿಡುಗಡೆ ಮಾಡಿದೆ. ಹೊಸ ಕಾರಿನಲ್ಲಿ ಕಂಪನಿಯು ಆ್ಯಪಲ್ ಕಾರ್ ಪ್ಲೇ ಮತ್ತು ಅಂಡ್ರಾಯಿಡ್ ಆಟೋ, ಹೊಸ ಮಾದರಿಯ ಡಿಸ್‌ಪ್ಲೇ ಮತ್ತು ಅಡ್ವಾನ್ಸ್ ಕನೆಕ್ಟಿವಿಟಿ ಸೌಲಭ್ಯದ ಜೊತೆಗೆ ಮಲ್ಟಿ ಟೆರೇನ್ ಮಾನಿಟರ್ ಸಿಸ್ಟಂ(360 ಡಿಗ್ರಿ ಕ್ಯಾಮೆರಾ), ವರ್ಚುವಲ್ ಬರ್ಡ್ ಐ ವ್ಯೂ, ಹೆಡ್ಸ್ ಅಪ್ ಡಿಸ್‌ಪ್ಲೇ, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ವೈರ್‌ಲೆಸ್ ಚಾರ್ಜರ್, ಡೋರ್ ಎಡ್ಜ್ ಲೈಟಿಂಗ್ ನೀಡಲಾಗಿದೆ.

ವಾರದ ಸುದ್ದಿ

ಲಿಮಿಟೆಡ್ ಎಡಿಷನ್ ಇನೋವಾ ಕ್ರಿಸ್ಟಾ ಕಾರು ಮುಂದಿನ ಕೆಲ ದಿನಗಳ ತನಕ ಮಾತ್ರವೇ ಖರೀದಿಗೆ ಲಭ್ಯವಿರಲಿದ್ದು, ಹೊಸ ಆವೃತ್ತಿಯು ಬೆಲೆಯು ಸಾಮಾನ್ಯ ಮಾದರಿಗಿಂತ ವಿವಿಧ ವೆರಿಯೆಂಟ್‌ಗಳಿಂತ ರೂ.5 ಸಾವಿರದಿಂದ ರೂ.20 ಸಾವಿರದಷ್ಟು ಹೆಚ್ಚುವರಿ ಬೆಲೆ ಪಡೆದುಕೊಂಡಿದೆ. ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 17.18 ಲಕ್ಷದಿಂದ ಟಾಪ್ ಎಂಡ್ ಮಾದರಿಯು 24.99 ಲಕ್ಷ ಬೆಲೆ ಪಡೆದುಕೊಂಡಿದ್ದು, ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಮಾದರಿಯು ಜಿ, ಜಿಎಕ್ಸ್, ವಿಎಕ್ಸ್ ಮತ್ತು ಜೆಡ್ಎಕ್ಸ್ ಎಂಬ ನಾಲ್ಕು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದೆ.

ವಾರದ ಸುದ್ದಿ

ಬಿಎಂಡಬ್ಲ್ಯು 5 ಸಿರೀಸ್ ಎಂ ಸ್ಪೋರ್ಟ್ ಕಾರ್ಬನ್ ಎಡಿಷನ್ ಬಿಡುಗಡೆ

ಜರ್ಮನಿ ಮೂಲದ ಐಷಾರಾಮಿ ಕಾರು ತಯಾರಕ ಕಂಪನಿಯಾದ ಬಿಎಂಡಬ್ಲ್ಯು ತನ್ನ ಹೊಸ 5 ಸಿರೀಸ್ ಎಂ ಸ್ಪೋರ್ಟ್ 'ಕಾರ್ಬನ್ ಎಡಿಷನ್' ಅನ್ನು ಬಿಡುಗಡೆಗೊಳಿಸಿದೆ. ಈ ಹೊಸ ಬಿಎಂಡಬ್ಲ್ಯು 530ಐ ಎಂ ಸ್ಪೋರ್ಟ್ 'ಕಾರ್ಬನ್ ಎಡಿಷನ್ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.66.30 ಲಕ್ಷಗಳಾಗಿದೆ.

ವಾರದ ಸುದ್ದಿ

ಈ ಹೊಸ ಕಾರನ್ನು ಸ್ಥಳೀಯವಾಗಿ ಭಾರತದಲ್ಲಿ ಕಂಪನಿಯ ಚೆನ್ನೈ ಸ್ಥಾವರದಲ್ಲಿ ಉತ್ಪಾದಿಸಲಾಗುತ್ತದೆ. ಇನ್ನು ಬಿಎಂಡಬ್ಲ್ಯು 530ಐ ಎಂ ಸ್ಪೋರ್ಟ್ 'ಕಾರ್ಬನ್ ಎಡಿಷನ್ ಮಾದರಿಯ ಖರೀದಿಗಾಗಿ ಕಂಪನಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಬುಕ್ಕಿಂಗ್ ಪ್ರಾರಂಭಿಸಲಾಗಿದೆ. ಈ ಹೊಸ ಬಿಎಂಡಬ್ಲ್ಯು 530ಐ ಎಂ ಸ್ಪೋರ್ಟ್ 'ಕಾರ್ಬನ್ ಎಡಿಷನ್ ಹಲವಾರು ಆಕರ್ಷಕ ಬಾಹ್ಯ ಅಂಶಗಳೊಂದಿಗೆ ಸಂಯೋಜಿಸಲ್ಪಟ್ಟಿದೆ.

ವಾರದ ಸುದ್ದಿ

ಎಂಜಿ ಆಸ್ಟರ್ ಮೊದಲ ಬ್ಯಾಚ್ ಸೋಲ್ಡ್ ಔಟ್

ಎಂಜಿ ಮೋಟಾರ್‌ ಕಂಪನಿಯು ಹೊಸ ಆಸ್ಟರ್ ಪ್ರೀಮಿಯಂ ಕಂಪ್ಯಾಕ್ಟ್ ಎಸ್‌ಯುವಿ ಮೂಲಕ ಪ್ರತಿಸ್ಪರ್ಧಿ ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದ್ದು, ಬುಕ್ಕಿಂಗ್ ಆರಂಭವಾದ ಕೆಲವೇ ನಿಮಿಷಗಳಲ್ಲಿ ಹೊಸ ಕಾರಿನ ಮೊದಲ ಬ್ಯಾಚ್ ಪೂರ್ಣ ಮಾರಾಟಗೊಂಡಿದೆ. ಹೊಸ ಕಾರಿನ ಬುಕ್ಕಿಂಗ್ ಆರಂಭಿಸಿದ ಕೇವಲ 20 ನಿಮಿಷಗಳಲ್ಲಿ ಮೊದಲ ಬ್ಯಾಚ್‌ನಲ್ಲಿದ್ದ 5 ಸಾವಿರ ಯುನಿಟ್‌ಗೆ ಪೂರ್ಣ ಪ್ರಮಾಣದಲ್ಲಿ ಬುಕ್ಕಿಂಗ್ ದಾಖಲಾಗಿದೆ.

ವಾರದ ಸುದ್ದಿ

ಹೊಸ ಆಸ್ಟರ್ ಕಾರು ಮಾದರಿಯನ್ನು 2021ರ ಡಿಸೆಂಬರ್ ಕೊನೆಯ ತನಕ 5 ಸಾವಿರ ಯುನಿಟ್ ಮಾರಾಟ ಗುರಿಹೊಂದಿರುವ ಎಂಜಿ ಕಂಪನಿಯು ಮೊದಲ ಬ್ಯಾಚ್ ಪೂರ್ಣ ಪ್ರಮಾಣದಲ್ಲಿ ಮಾರಾಟಗೊಳಿಸುವ ಮೂಲಕ ಇದೀಗ ಇದೀಗ ಎರಡನೇ ಬ್ಯಾಚ್‌ಗೂ ಬುಕ್ಕಿಂಗ್ ಪುನಾರಂಭಿಸಿದೆ. ಹೊಸ ಕಾರು ಐದು ವೆರಿಯೆಂಟ್‌ಗಳೊಂದಿಗೆ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.9.78 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 16.78 ಲಕ್ಷ ಬೆಲೆ ಹೊಂದಿದೆ.

ವಾರದ ಸುದ್ದಿ

ಹೊಸ ಮೈಲಿಗಲ್ಲು ಸಾಧಿಸಿದ Tesla

ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಸದ್ಯ ಜಾಗತಿಕವಾಗಿ ಗುರುತಿಸಿಕೊಂಡಿರುವ ಅಮೆರಿಕದ ಟೆಸ್ಲಾ ಕಂಪನಿಯು ಇವಿ ಕಾರುಗಳ ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ್ದು, ಕಂಪನಿಯು ಕಳೆದ 13 ವರ್ಷಗಳಲ್ಲಿ ಬರೋಬ್ಬರಿ 20 ಲಕ್ಷ ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡುವ ಮೂಲಕ ಹೊಸ ದಾಖಲೆ ನಿರ್ಮಿಸಿದೆ.

ವಾರದ ಸುದ್ದಿ

ಎಲೆಕ್ಟ್ರಿಕ್ ಕಾರು ಮಾರಾಟವನ್ನು 2008ರಲ್ಲೇ ಆರಂಭಿಸಿದ್ದರೂ 2018ರ ತನಕ ಕೇವಲ 5 ಲಕ್ಷ ಕಾರುಗಳನ್ನು ಮಾರಾಟ ಮಾಡಿದ್ದ ಟೆಸ್ಲಾ ಕಂಪನಿಯು 2018ರ ಮಧ್ಯಂತರದಿಂದ ಹೆಚ್ಚಿನ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಕೇವಲ ಅಮೆರಿಕ ಮಾತ್ರವಲ್ಲದೆ ವಿಶ್ವದ ಪ್ರಮುಖ ರಾಷ್ಟ್ರಗಳಿಗೆ ರಫ್ತು ಕೈಗೊಳ್ಳುತ್ತಿರುವ ಟೆಸ್ಲಾ ಕಂಪನಿಯು ಕೇವಲ ಮೂರು ವರ್ಷಗಳಲ್ಲಿ 15 ಲಕ್ಷ ಕಾರುಗಳನ್ನು ಮಾರಾಟ ಮಾಡಿದೆ.

Most Read Articles

Kannada
English summary
Top auto news of the week tata punch launched fuel prices hiked semiconductor shortage crisis and mo
Story first published: Saturday, October 23, 2021, 23:41 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X