ವಾರದ ಸುದ್ದಿ: Toll ಶುಲ್ಕ ಹೆಚ್ಚಳಕ್ಕೆ ನಿರ್ಧಾರ, Mahindra XUV700 ಮತ್ತು MG Astor ಅನಾವರಣ..

ಕೋವಿಡ್ 2ನೇ ಅಲೆ ನಿಯಂತ್ರಣದ ನಂತರ ಹೊಸ ವಾಹನಗಳ ಮಾರಾಟವು ಸಾಕಷ್ಟು ಸುಧಾರಣೆಗೊಂಡಿದ್ದು, ಪ್ರಮುಖ ಕಾರು ಕಂಪನಿಗಳು ವಿವಿಧ ಹೊಸ ವಾಹನಗಳನ್ನು ಬಿಡುಗಡೆ ಮಾಡುತ್ತಿವೆ. ಹಾಗೆಯೇ ಈ ವಾರದ ಪ್ರಮುಖ ಸುದ್ದಿಯಲ್ಲಿ ಟೋಲ್ ಶುಲ್ಕ ಹೆಚ್ಚಳಕ್ಕೆ ನಿರ್ಧಾರವು ಪ್ರಮುಖವಾಗಿದ್ದು, ವಾರದ ಪ್ರಮುಖ ಸುದ್ದಿಗಳ ಹೈಲೆಟ್ಸ್ ಇಲ್ಲಿ ತಿಳಿಯೋಣ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು!

ಸೆಪ್ಟೆಂಬರ್ 1ರಿಂದ Toll ಶುಲ್ಕ ಹೆಚ್ಚಳ

ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರದವು ಕರ್ನಾಟಕ ಸೇರಿದಂತೆ ದೇಶಾದ್ಯಂತ ಪ್ರಮುಖ ಟೋಲ್ ಪ್ಲಾಜಾಗಳ ಶುಲ್ಕವನ್ನು ಸೆಪ್ಟೆಂಬರ್ 1ರಿಂದ ಏರಿಕೆಗೆ ಮುಂದಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಹೈರಣಾಗಿರುವ ವಾಹನ ಸವಾರರಿಗೆ ಟೋಲ್ ಶುಲ್ಕ ಏರಿಕೆಯು ಇದೀಗ ಮತ್ತಷ್ಟು ಹೊರೆಯಾಗಲಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು!

Mahindra XUV700 ಅನಾವರಣ

Mahinndra ಕಂಪನಿಯು ತನ್ನ ಬಹುನೀರಿಕ್ಷಿತ ಎಕ್ಸ್‌ಯುವಿ700 ಎಸ್‌ಯುವಿ ಮಾದರಿಯನ್ನು ಭಾರತದಲ್ಲಿ ಅನಾವರಣಗೊಳಿಸಿದೆ. ಹೊಸ ಕಾರು ಎಂಎಕ್ಸ್ ಸೀರಿಸ್ ಮತ್ತು ಆಂಡ್ರಿನೊಎಕ್ಸ್ ಸೀರಿಸ್‌ ಪಡೆದುಕೊಂಡಿದೆ. ಇದರಲ್ಲಿ ಎಂಎಕ್ಸ್ ಸೀರಿಸ್ ಮಾದರಿಗಳು 5 ಸೀಟರ್‌ನೊಂದಿಗೆ ಬಿಡುಗಡೆಯಾಗಲಿದ್ದರೆ ಆಂಡ್ರಿನೊಎಕ್ಸ್ ಸೀರಿಸ್‌ ಕಾರುಗಳು 7 ಸೀಟರ್ ಸೌಲಭ್ಯದೊಂದಿಗೆ ತುಸು ಐಷಾರಾಮಿ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು!

Mahindra ಕಂಪನಿಯು 5 ಸೀಟರ್ ಹೊಂದಿರುವ ಎಂಎಕ್ಸ್ ಸೀರಿಸ್ ಹೊಂದಿರುವ ಎಕ್ಸ್‌ಯುವಿ700 ಮಾದರಿಯ ಬೆಲೆಯನ್ನು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 14.99 ಲಕ್ಷ ಬೆಲೆಗೆ ನಿಗದಿಪಡಿಸಿದ್ದು, 7 ಸೀಟರ್ ಸೌಲಭ್ಯದ ಆಂಡ್ರಿನೊಎಕ್ಸ್ ಸೀರಿಸ್‌ ಬೆಲೆಯನ್ನು ಮುಂದಿನ ತಿಂಗಳು ಬಹಿರಂಗಪಡಿಸಲಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು!

ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನ ಪ್ರೇರಿತ MG Astor ಅನಾವರಣ

MG Motor ಕಂಪನಿಯು ಭಾರತದಲ್ಲಿ ವಿವಿಧ ಕಾರು ಮಾದರಿಗಳೊಂದಿಗೆ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಕಂಪನಿಯು ಶೀಘ್ರದಲ್ಲೇ ತನ್ನ ಬಹುನೀರಿಕ್ಷಿತ Astor ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಬಿಡುಗಡೆ ಮಾಡುವ ಸಿದ್ದತೆಯಲ್ಲಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು!

ಹೊಸ Astor ಕಾರು ಕಂಪ್ಯಾಕ್ಟ್ ಎಸ್‌ಯುವಿಯು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನ ಹೊಂದಿರುವ ಭಾರತದ ಮೊದಲ ಕಾರು ಮಾದರಿಯಾಗಿ ಗ್ರಾಹಕರಿಗೆ ವಿಭಿನ್ನವಾದ ಚಾಲನಾ ಅನುಭವ ನೀಡಲಿದ್ದು, ಸ್ಟ್ಯಾಂಡರ್ಡ್ Hector ಮಾದರಿಗಿಂತಲೂ ಕೆಳ ದರ್ಜೆಯ ಕಾರು ಮಾದರಿಯಾಗಿ ಮಾರಾಟಗೊಳ್ಳಲಿರುವ ಹೊಸ ಕಾರು 1.3-ಲೀಟರ್ ಮತ್ತು 1.5-ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆಯೊಂದಿಗೆ ಮುಂಬರುವ ಕೆಲವೇ ತಿಂಗಳುಗಳಲ್ಲಿ ಬಿಡುಗಡೆಯಾಗಲಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು!

2021ರ Honda Amaze ಬಿಡುಗಡೆ

Honda Cars India ಕಂಪನಿಯು ತನ್ನ 2021ರ Amaze ಕಂಪ್ಯಾಕ್ಟ್ ಸೆಡಾನ್ ಕಾರನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದ್ದು, ಹೊಸ ಹೋಂಡಾ ಅಮೇಜ್ ಕಾರು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.6.32 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯು ರೂ. 11.15 ಲಕ್ಷ ಬೆಲೆ ಹೊಂದಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು!

ಹೊಸ Amaze ಕಾರಿನಲ್ಲಿ 1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಸುರಕ್ಷತೆಗಾಗಿ ಹಲವಾರು ಫೀಚರ್ಸ್ ಗಳನ್ನು ಸ್ಟ್ಯಾಂಡರ್ಡ್ ನೀಡಲಾಗಿದೆ. ಎಬಿಎಸ್ ಜೊತೆ ಇಬಿಡಿ, ISOFIX ಚೈಲ್ಡ್ ಸೀಟ್ ಆಂಕರ್‌ಗಳೊಂದಿಗೆ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್, ಹಿಂಭಾಗದ ಪಾರ್ಕಿಂಗ್ ಸೆನ್ಸಾರ್‌ಗಳು, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಕ್ರೂಸ್ ಕಂಟ್ರೋಲ್, ಸೀಟ್-ಬೆಲ್ಟ್ ರಿಮೈಂಡರ್ ಗಳನ್ನು ಹೊಂದಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು!

ಜಿಪ್‌ಟ್ರಾನ್ ತಂತ್ರಜ್ಞಾನ ಪ್ರೇರಿತ Tata Tigor EV ಅನಾವರಣ

Tata Motors ಕಂಪನಿಯು ಸದ್ಯ ಎಲೆಕ್ಟ್ರಿಕ್ ಹೊಸ ಕಾರುಗಳ ಉತ್ಪಾದನೆ ಹೊಸ ಬದಲಾವಣೆಗಳೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಕಂಪನಿಯು ಗ್ರಾಹಕರ ಬೇಡಿಕೆಯೆಂತೆ Tigor EV ಆವೃತ್ತಿಯನ್ನು ಹೊಸ ಡ್ರೈವ್ ಟೆಕ್ನಾಲಜಿಯೊಂದಿಗೆ ಉನ್ನತೀಕರಿಸಿ ಅನಾವರಣಗೊಳಿಸಿದ್ದು, ಇದೇ ತಿಂಗಳಾಂತ್ಯಕ್ಕೆ ಬಿಡುಗಡೆಯಾಗಲಿರುವ ಹೊಸ ಕಾರು ಗ್ರಾಹಕರ ಬೇಡಿಕೆಯೆಂತೆ ಹಲವಾರು ಹೊಸ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಳ್ಳಲಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು!

ಹೊಸ ಪವರ್‌ಟ್ರೈನ್ ತಂತ್ರಜ್ಞಾನ ಹೊಂದಿರುವ Tigor EV ಕಾರು ಅತ್ಯುತ್ತಮ ಪರ್ಫಾಮೆನ್ಸ್‌ನೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸಲಿದ್ದು, ಹೊಸ ಕಾರು ಇದೇ ತಿಂಗಳು 31ರಂದು ಬಿಡುಗಡೆಯಾಗಲಿದೆ. ನವೀಕೃತ Tigor EV ಮಾದರಿಯಲ್ಲಿ Nexon EV ಕಾರಿನಲ್ಲಿ ಬಳಕೆ ಮಾಡಲಾಗುತ್ತಿರುವ ಹೈ-ವೊಲ್ಟೆಜ್ ಆರ್ಕಿಟೆಕ್ಚರ್ ಪ್ರೇರಿತ ಜಿಪ್‌ಟ್ರಾನ್ ತಂತ್ರಜ್ಞಾನವನ್ನು ಜೋಡಣೆ ಮಾಡಲಾಗಿದ್ದು, ಜಿಪ್‌ಟ್ರಾನ್ ಪವರ್‌ಟ್ರೈನ್ ತಂತ್ರಜ್ಞಾನವನ್ನು ಹಲವು ಸುಧಾರಿತ ವೈಶಿಷ್ಟ್ಯತೆಗಳೊಂದಿಗೆ ಅಭಿವೃದ್ದಿಗೊಳಿಸಲಾಗಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು!

Volkswagen Taigun ಕಾರು ಉತ್ಪಾದನೆಗೆ ಅಧಿಕೃತ ಚಾಲನೆ

Volkswagen India ಕಂಪನಿಯು ತನ್ನ ಹೊಸ Taigun ಪ್ರೀಮಿಯಂ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಅನಾವರಣಗೊಳಿಸಿ ಬಿಡುಗಡೆಗೆ ಸಿದ್ದವಾಗಿದ್ದು, ಮುಂದಿನ ತಿಂಗಳು ಬಿಡುಗಡೆಯಾಗಲಿರುವ ಹೊಸ ಕಾರಿನ ಅಧಿಕೃತ ಉತ್ಪಾದನೆಗೆ ಚಾಲನೆ ನೀಡುವುದರ ಜೊತೆಗೆ ಬುಕ್ಕಿಂಗ್ ಪ್ರಕ್ರಿಯೆ ಆರಂಭಿಸಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು!

ಹೊಸ Taigun ಕಾರು ಮಾದರಿಯನ್ನು Volkswagen ಕಂಪನಿಯು ಈಗಾಗಲೇ ಭಾರತದಲ್ಲಿ ಅನಾವರಣಗೊಳಿಸಿದ್ದು, ಹೊಸ ಕಾರು ಮುಂದಿನ ತಿಂಗಳು ಸೆಪ್ಟೆಂಬರ್ ಮೂರನೇ ವಾರದಲ್ಲಿ ಬಿಡುಗಡೆಯಾಗುವುದು ಖಚಿತವಾಗಿದೆ. ಹೊಸ Taigun ಕಾರು 1.0-ಲೀಟರ್ ಮತ್ತು 1.5 ಲೀಟರ್ ಪೆಟ್ರೋಲ್ ಎಂಜಿನ್‌ಗಳ ಆಯ್ಕೆ ಹೊಂದಿರಲಿದ್ದು, ಹೊಸ ಕಾರು ಗ್ರಾಹಕರ ಬೇಡಿಕೆ ಅನುಸಾರವಾಗಿ ಸ್ಟ್ಯಾಂಡರ್ಡ್ ಮತ್ತು ಜಿಟಿ ಆವೃತ್ತಿಗಳಲ್ಲಿ ಖರೀದಿಗೆ ಲಭ್ಯವಿರಲಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು!

Bolero Neo ಕಾರಿನ ಟಾಪ್ ಎಂಡ್ N10(0) ಬಿಡುಗಡೆ

Mahindra ಕಂಪನಿಯು TUV300 ಸ್ಥಗಿತಗೊಳಿಸಿ ಹೊಸದಾಗಿ Bolero Neo ಆವೃತ್ತಿಯನ್ನು ಬಿಡುಗಡೆಗೊಳಿಸಿ ಮಾರಾಟ ಮಾಡುತ್ತಿದ್ದು, ಕಂಪನಿಯು ಹೊಸ ಕಾರಿನ ಟಾಪ್ ಎಂಡ್ ಮಾದರಿಯ ಬೆಲೆ ಮಾಹಿತಿಯನ್ನು ಇದೀಗ ಹಂಚಿಕೊಂಡಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು!

Bolero Neo ಬಿಡುಗಡೆಯ ಸಂದರ್ಭದಲ್ಲಿ ಹೊಸ ಕಾರಿನ N10(0) ವೆರಿಯೆಂಟ್ ಬೆಲೆಯ ಮಾಹಿತಿಯನ್ನು ಕಾರಣಾಂತರಗಳಿಂದ ತಡವಾಗಿ ಹಂಚಿಕೊಳ್ಳುವುದಾಗಿ ಹೇಳಿದ್ದ Mahindra ಕಂಪನಿಯು ಇದೀಗ ಬೆಲೆ ಮಾಹಿತಿ ಪ್ರಕಟಿಸಿದ್ದು, ಟಾಪ್ ಎಂಡ್ ಮಾದರಿಯಾಗಿ ಮಾರಾಟವಾಗಲಿರುವ Bolero Neo N10(0) ಆವೃತ್ತಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 10.69 ಲಕ್ಷ ಬೆಲೆ ಹೊಂದಿದೆ.

Most Read Articles

Kannada
English summary
Top News Of The Week. Read in Kannada.
Story first published: Sunday, August 22, 2021, 8:45 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X