ವಾರದ ಪ್ರಮುಖ ಸುದ್ದಿ: ಏರ್‌ಬ್ಯಾಗ್ ಕಡ್ಡಾಯ, ಬಿಡುಗಡೆಗೆ ಸಜ್ಜಾದ ಸಿಟ್ರನ್, ಟೊಯೊಟಾ ನೌಕರರ ಮುಷ್ಕರ ಅಂತ್ಯ!

ಕೋವಿಡ್ ಪರಿಣಾಮ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಆಟೋ ಉದ್ಯಮವು ಇದೀಗ ದಾಖಲೆ ಪ್ರಮಾಣದ ಹೊಸ ವಾಹನಗಳ ಮಾರಾಟಕ್ಕೆ ಸಾಕ್ಷಿಯಾಗಿದ್ದು, ಶೀಘ್ರದಲ್ಲೇ ಮತ್ತಷ್ಟು ಹೊಸ ವಾಹನಗಳು ಗ್ರಾಹಕರ ಬೇಡೆಕೆಯೆಂತೆ ಮಾರುಕಟ್ಟೆ ಪ್ರವೇಶಿಸಲು ಸಿದ್ದವಾಗಿವೆ. ಹೊಸ ವಾಹನ ಮಾರಾಟ ಹೆಚ್ಚುತ್ತಿದ್ದಂತೆ ಕೇಂದ್ರ ಸರ್ಕಾರವು ವಾಹನಗಳ ಸುರಕ್ಷತೆ ಕುರಿತಂತೆ ಹೊಸದೊಂದು ಕಡ್ಡಾಯ ನಿಯಮ ಜಾರಿಗೆ ತರುತ್ತಿದ್ದು, ಈ ವಾರದ ಸುದ್ದಿಗಳ ಹೈಲೆಟ್ಸ್ ಇಲ್ಲಿ ತಿಳಿಯೋಣ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಏಪ್ರಿಲ್ 1ರಿಂದ ಡ್ಯಯಲ್ ಏರ್‌ಬ್ಯಾಗ್ ಕಡ್ಡಾಯ

ಕಳಪೆ ಗುಣಮಟ್ಟಕ್ಕೆ ಬ್ರೇಕ್ ಹಾಕಿ ಪ್ರಯಾಣಿಕರಿಗೆ ಗರಿಷ್ಠ ಪ್ರಮಾಣದ ಸುರಕ್ಷತೆ ಒದಗಿಸುವ ಕುರಿತಂತೆ ಹೊಸ ನಿಯಮ ಜಾರಿಗೆ ತಂದಿರುವ ಕೇಂದ್ರ ಸಾರಿಗೆ ಇಲಾಖೆಯು ಮುಂಬರುವ ಏಪ್ರಿಲ್ 1ರಿಂದಲೇ ಹೊಸದಾಗಿ ಉತ್ಪಾದನೆಗೊಳ್ಳುವ ಪ್ರತಿ ಕಾರಿನಲ್ಲೂ ಕನಿಷ್ಠ ಎರಡು ಏರ್‌ಬ್ಯಾಗ್ ಅಳವಡಿಕೆಯನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ಕೇಂದ್ರ ಸರ್ಕಾರದ ಸೂಚನೆಗೆ ಆಟೋ ಕಂಪನಿಗಳು ಕೂಡಾ ಈಗಾಗಲೇ ಒಪ್ಪಿಗೆ ಸೂಚಿಸಿದ್ದು, ಹೊಸ ನಿಯಮದಿಂದಾಗಿ ಇನ್ಮುಂದೆ ಎಂಟ್ರಿ ಲೆವಲ್ ಕಾರು ಮಾದರಿಯಲ್ಲೂ ಕಡ್ಡಾಯವಾಗಿ ಫ್ರಂಟ್ ಡ್ಯುಯಲ್ ಏರ್‌ಬ್ಯಾಗ್ ಅಳವಡಿಕೆಯನ್ನು ಹೊಂದಿರಲಿವೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಹೊಸ ನಿಯಮದನ್ವಯ ಮುಂಭಾಗದಲ್ಲಿ ಚಾಲಕ ಮತ್ತು ಸಹ ಪ್ರಯಾಣಿಕನಿಗೆ ಏರ್‌ಬ್ಯಾಗ್ ಸುರಕ್ಷತೆಯು ಕಡ್ಡಾಯವಾಗಿ ಅಳವಡಿಕೆಯಾಗಲಿದ್ದು, ಹೊಸ ಸೌಲಭ್ಯದ ನಂತರ ಎಂಟ್ರಿ ಲೆವಲ್ ಕಾರುಗಳ ಬೆಲೆಯಲ್ಲಿ ತುಸು ಏರಿಕೆಯಾಗುವ ಸಾಧ್ಯತೆಗಳಿವೆ. ಮಧ್ಯಮ ಕ್ರಮಾಂಕದ ಬಹುತೇಕ ಕಾರುಗಳಲ್ಲಿ ಈಗಾಗಲೇ ಕಡ್ಡಾಯವಾಗಿ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್ ಸೌಲಭ್ಯವನ್ನು ಹೊಂದಿದ್ದು, ಎಂಟ್ರಿ ಲೆವಲ್ ಕಾರುಗಳ ಸುರಕ್ಷತೆ ಹೆಚ್ಚಿಸುವ ಸಂಬಂಧ ಹೊಸ ನಿಯಮ ಜಾರಿಗೆ ತರಲಾಗುತ್ತಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಅಧಿಕೃತ ಬುಕ್ಕಿಂಗ್ ಆರಂಭಿಸಿದ ಸಿಟ್ರನ್

ಸಿಟ್ರನ್ ಇಂಡಿಯಾ ಕಂಪನಿಯು ತನ್ನ ಹೊಚ್ಚ ಹೊಸ ಸಿ5 ಏರ್‌ಕ್ರಾಸ್ ಕಾರು ಮಾದರಿಯನ್ನು ಅನಾವರಣಗೊಳಿಸಿ ಬಿಡುಗಡೆಗೆ ಸಿದ್ದವಾಗಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನ ಕಾರು ಖರೀದಿಗಾಗಿ ಅಧಿಕೃತ ಬುಕ್ಕಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿದೆ. ಸಿ5 ಏರ್‌ಕ್ರಾಸ್ ಕಾರು ಖರೀದಿಗಾಗಿ ಸಿಟ್ರನ್ ಕಂಪನಿಯು ರೂ.50 ಸಾವಿರ ಬುಕ್ಕಿಂಗ್ ದರ ನಿಗದಿಪಡಿಸಿದ್ದು, ಆಸಕ್ತ ಗ್ರಾಹಕರು ಶೋರೂಂನಲ್ಲಿ ಅಥವಾ ವೆಬ್‌ಸೈಟ್ ಮೂಲಕ ಬುಕ್ಕಿಂಗ್ ಮಾಡಬಹುದಾಗಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಹೊಸ ಕಾರು ಈ ತಿಂಗಳು ಮಧ್ಯಂತರದಲ್ಲಿ ಖರೀದಿಗೆ ಲಭ್ಯವಾಗಲಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನ ವಿವಿಧ ನಗರಗಳಲ್ಲಿ ಮತ್ತಷ್ಟು ಹೊಸ ಶೋರೂಂಗಳಿಗೆ ಚಾಲನೆ ನೀಡುವ ಸಿದ್ದತೆಯಲ್ಲಿದೆ. 2.0-ಲೀಟರ್(1,997ಸಿಸಿ) ಡೀಸೆಲ್ ಎಂಜಿನ್ ಹೊಂದಿರುವ ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 25 ಲಕ್ಷದಿಂದ ರೂ. 28 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳುವ ಸಾಧ್ಯತೆಗಳಿವೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಅಂತ್ಯವಾದ ಟೊಯೊಟಾ ಕಂಪನಿ ನೌಕರರ ಮುಷ್ಕರ

ಹಲವಾರು ದಿನಗಳಿಂದ ಮುಷ್ಕರ ನಡೆಸುತ್ತಿದ್ದ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಕಂಪನಿಯ ನೌಕರರು ತಮ್ಮ ಮುಷ್ಕರವನ್ನು ಅಂತ್ಯಗೊಳಿಸಿದ್ದಾರೆ. ಕಂಪನಿಯ 3,350 ಉದ್ಯೋಗಿಗಳು ಕೆಲಸಕ್ಕೆ ಮರಳಿದ್ದು, ಉತ್ಪಾದನಾ ಘಟಕದಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ನೌಕರರು ಹಾಗೂ ಕಂಪನಿಯ ನಡುವೆ ಹೊಂದಾಣಿಕೆ ಏರ್ಪಾಡುವಂತೆ ಮಾಡಿದ ಕರ್ನಾಟಕ ಸರ್ಕಾರಕ್ಕೆ ಹಾಗೂ ಕಾರ್ಮಿಕ ಇಲಾಖೆಗೆ ಟೊಯೊಟಾ ಕಂಪನಿಯುಧನ್ಯವಾದ ಸಲ್ಲಿಸಿದೆ. ಬಿಡದಿಯಲ್ಲಿರುವ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯ ನೌಕರರು ಕಳೆದ ವರ್ಷದ ನವೆಂಬರ್‌ನಿಂದಲೇ ಮುಷ್ಕರ ನಡೆಸುತ್ತಿದ್ದರು.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಹ್ಯುಂಡೈ ವಿವಿಧ ಕಾರುಗಳ ಖರೀದಿ ಮೇಲೆ ಭರ್ಜರಿ ರಿಯಾಯಿತಿ

ಜನಪ್ರಿಯ ಕಾರು ತಯಾರಕ ಕಂಪನಿಯಾದ ಹ್ಯುಂಡೈ ಇಂಡಿಯಾ ಹೊಸ ಗ್ರಾಹಕರನ್ನು ಆಕರ್ಷಿಸಲು ಮಾರ್ಚ್ ತಿಂಗಳಿನಲ್ಲಿ ಹಲವಾರು ಆಫರ್‌ಗಳನ್ನು ಘೋಷಿಸಿದ್ದು, ಹೊಸ ಆಫರ್‌ಗಳಲ್ಲಿ ಪ್ರಮುಖ ಕಾರುಗಳ ಖರೀದಿಯೊಂದಿಗೆ ಗರಿಷ್ಠ ಉಳಿತಾಯ ಮಾಡಬಹುದಾಗಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಹ್ಯುಂಡೈ ಹೊಸ ಆಫರ್‌ಗಳಲ್ಲಿ ಸ್ಯಾಂಟ್ರೋ ಆವೃತ್ತಿಯ ಮೇಲೆ ರೂ.50 ಸಾವಿರ ಆಫರ್ ನೀಡುತ್ತಿದ್ದು, ಗ್ರಾಂಡ್ ಐ10 ನಿಯೋಸ್ ಹ್ಯಾಚ್‌ಬ್ಯಾಕ್ ಆವೃತ್ತಿಯ ಮೇಲೆ ಗರಿಷ್ಠ ರೂ. 60 ಸಾವಿರ ತನಕ ಉಳಿತಾಯಕ್ಕೆ ಅವಕಾಶ ನೀಡಿದ್ದು, ಮುಂಬರುವ ದಿನಗಳಲ್ಲಿ ಬರುವ ಯುಗಾದಿ ವೇಳೆಗೆ ಮತ್ತಷ್ಟು ಬೇಡಿಕೆ ಹರಿದುಬರುವ ನೀರಿಕ್ಷೆಯೊಂದಿಗೆ ವಿವಿಧ ಆಫರ್‌ಗಳ ಮೂಲಕ ಗ್ರಾಹಕರನ್ನು ಸೆಳೆಯಲಾಗುತ್ತಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಮಹೀಂದ್ರಾ ಕಾರುಗಳ ಖರೀದಿ ಮೇಲೂ ಭರ್ಜರಿ ಆಫರ್

ಹೊಸ ವರ್ಷದ ಸಂಭ್ರಮದಲ್ಲಿ ಕಾರು ಖರೀದಿದಾರರನ್ನು ಸೆಳೆಯಲು ಹಲವಾರು ಆಫರ್‌ಗಳನ್ನು ಘೋಷಣೆ ಮಾಡಿದ್ದ ಮಹೀಂದ್ರಾ ಕಂಪನಿಯು ಮಾರ್ಚ್ ಅವಧಿಗೂ ವಿಸ್ತರಿಸಿದ್ದು, ಕಾರು ಮಾದರಿಗಳಿಗೆ ಅನುಗುಣವಾಗಿ ಕನಿಷ್ಠ ರೂ. 17 ಸಾವಿರದಿಂದ ಗರಿಷ್ಠ ರೂ. 3 ಲಕ್ಷದ ತನಕ ಉಳಿತಾಯ ಮಾಡಬಹುದಾಗಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಕೋವಿಡ್ ಪರಿಣಾಮ ಕಾರು ಮಾರಾಟದಲ್ಲಿ ಹಿನ್ನಡೆ ಅನುಭವಿಸಿದ್ದ ಮಹೀಂದ್ರಾ ಕಂಪನಿಯು ಕಳೆದ ಕೆಲ ತಿಂಗಳಿನಿಂದ ಹೊಸ ಕಾರುಗಳ ಮಾರಾಟದಲ್ಲಿ ಸಾಕಷ್ಟು ಸುಧಾರಣೆ ಕಂಡಿದ್ದು, ಹೊಸ ಆಫರ್‌ಗಳ ಮೂಲಕ ಕಾರು ಮಾರಾಟದಲ್ಲಿ ಚೇತರಿಸಿಕೊಳ್ಳುವ ವಿಶ್ವಾಸದಲ್ಲಿದೆ. ಹೀಗಾಗಿ ಹೊಸ ವರ್ಷದ ಸಂಭ್ರಮದಲ್ಲಿ ಕಾರು ಖರೀದಿ ಯೋಜನೆಯಲ್ಲಿರುವ ಗ್ರಾಹಕರನ್ನು ಸೆಳೆಯಲು ವಿವಿಧ ಕಾರು ಮಾದರಿಗಳ ಮೇಲೆ ಭರ್ಜರಿ ಆಫರ್ ಘೋಷಣೆ ಮಾಡಿದ್ದ ಕಂಪನಿಯು ಹೊಸ ಆಫರ್‌ಗಳನ್ನು ಮಾರ್ಚ್ ಅವಧಿಗೂ ಮುಂದುವರಿಸಿದೆ.

Most Read Articles

Kannada
English summary
Top Auto News Of The Week. Read in Kannada.
Story first published: Sunday, March 7, 2021, 8:45 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X