ವಾರದ ಸುದ್ದಿ: ಲಾಕ್‌ಡೌನ್ ಭೀತಿಯಲ್ಲಿ ಆಟೋ ಉದ್ಯಮ, ವಾಹನಗಳ ಬೆಲೆ ಏರಿಕೆ, ಇವಿ ಸಬ್ಸಡಿ ಮಾನ್ಯತೆ ವಿಸ್ತರಣೆ

ದೇಶಿಯ ಆಟೋ ಉದ್ಯಮವು ಹಲವಾರು ಹೊಸ ಬದಲಾವಣೆಗಳೊಂದಿಗೆ ದಾಖಲೆ ಪ್ರಮಾಣದ ವಾಹನಗಳ ಮಾರಾಟಕ್ಕೆ ಸಾಕ್ಷಿಯಾಗುತ್ತಿದ್ದು, ಈ ನಡುವೆ ಕೋವಿಡ್ 2ನೇ ಅಲೆ ಹೆಚ್ಚಿರುವುದರಿಂದ ಆಟೋಉದ್ಯಮ ಮತ್ತೆ ನೆಲಕಚ್ಚುವ ಭೀತಿಯಲ್ಲಿದೆ. ಇದರ ನಡುವೆ ವಾಹನಳಗಳ ಬೆಲೆ ಹೆಚ್ಚಳವು ಗ್ರಾಹಕರಿಗೆ ಹೊರೆ ಉಂಟುಮಾಡಲಿದ್ದು, ಈ ವಾರದ ಪ್ರಮುಖ ಸುದ್ದಿಗಳ ಹೈಲೆಟ್ಸ್‌ ಇಲ್ಲಿ ತಿಳಿಯೋಣ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಹೊಸ ವಾಹನಗಳ ಉತ್ಪಾದನೆಯಲ್ಲಿ ಕುಸಿತ

ದೇಶಾದ್ಯಂತ ಕೋವಿಡ್ 2ನೇ ಅಲೆ ಹೆಚ್ಚಿರುವುದರಿಂದ ವಿವಿಧ ರಾಜ್ಯಗಳಲ್ಲಿ ಹಲವು ಕಠಿಣ ಕ್ರಮಗಳೊಂದಿಗೆ ಭಾಗಶಃ ಲಾಕ್ಡೌನ್, ಕರ್ಫ್ಯೂ ವಿಧಿಸಲಾಗುತ್ತಿದ್ದು, ಹೊಸ ಸುರಕ್ಷಾ ಕ್ರಮಗಳ ಪರಿಣಾಮ ಆಟೋ ಉದ್ಯಮ ಮತ್ತೆ ನೆಲಕಚ್ಚುವ ಭೀತಿ ಎದುರಿಸುತ್ತಿದೆ. ಕಳೆದ ವರ್ಷದ ಲಾಕ್‌ಡೌನ್‌ ಹೊಡೆತಕ್ಕೆ ಸಿಲುಕಿ ಸುಧಾರಿಸಿಕೊಳ್ಳುತ್ತಿದ್ದ ಆಟೋ ಉದ್ಯಮವು ಇದೀಗ ಮತ್ತೆ ಲಾಕ್‌ಡೌನ್ ಭೀತಿ ಎದುರಿಸುತ್ತಿದ್ದು, ಮಹಾರಾಷ್ಟ್ರದಲ್ಲಿ ನೆಲೆಗೊಂಡಿರುವು ಹಲವು ಆಟೋ ಕಂಪನಿಗಳು ಈಗಾಗಲೇ ಕನಿಷ್ಠ ಪ್ರಮಾಣದ ಉದ್ಯೋಗಿಗಳೊಂದಿಗೆ ಕಾರ್ಯನಿರ್ವಹಿಸುತ್ತಿವೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಹೊಸ ವಾಹನಗಳಿಗೆ ಬೇಡಿಕೆ ಹೆಚ್ಚುತ್ತಿರುವ ಸಂದರ್ಭದಲ್ಲೇ ಮತ್ತೆ ಉತ್ಪಾದನೆಯು ತಗ್ಗಿರುವುರುವುದು ಭಾರೀ ನಷ್ಟ ಎದುರಿಸುವ ಭೀತಿ ಎದುರಾಗಿದ್ದು, ಹೊಸ ಸುರಕ್ಷಾ ಕ್ರಮ ಕೈಗೊಂಡು ಉತ್ಪಾದನೆ ಕೈಗೊಳ್ಳುತ್ತಿವೆ. ಪುಣೆ ಸುತ್ತುಮತ್ತ ನೆಲೆಗೊಂಡಿರುವ ದೇಶದ ಪ್ರಮುಖ ಆಟೋ ಕಂಪನಿಗಳು ಶೇ.50ಕ್ಕಿಂತಲೂ ಕಡಿಮೆ ಪ್ರಮಾಣದ ಉದ್ಯೋಗಿಗಳೊಂದಿಗೆ ಕಾರ್ಯನಿರ್ವಹಣೆ ಮಾಡುತ್ತಿದ್ದು, ವಾಹನ ಮಾರಾಟದಲ್ಲೂ ಕೂಡಾ ಹೊಸ ತಂತ್ರಗಳನ್ನು ಅಳವಡಿಸಿಕೊಂಡು ವೈರಸ್ ಹರಡುವಿಕೆ ತಡೆಯೊಂದಿಗೆ ಉದ್ಯಮ ವ್ಯವಹಾರ ಕೈಗೊಳ್ಳುತ್ತಿವೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಹೊಸ ಕಾರುಗಳ ಬೆಲೆಯಲ್ಲಿ ಮತ್ತೆ ಹೆಚ್ಚಳ

ಆಟೋ ಉತ್ಪಾದನಾ ಬಿಡಿಭಾಗಗಳ ಬೆಲೆ ಹೆಚ್ಚಳ ಪರಿಣಾಮ ಬಹುತೇಕ ವಾಹನ ಉತ್ಪಾದನಾ ಕಂಪನಿಗಳು ಬೆಲೆ ಹೆಚ್ಚಳ ಮಾಡಿದ್ದು, ಮಾರುತಿ ಸುಜುಕಿ, ಎಂಜಿ ಮೋಟಾರ್, ಹೋಂಡಾ ಕಂಪನಿಯು ಕೂಡಾ ತನ್ನ ಪ್ರಮುಖ ಕಾರು ಮಾದರಿಗಳ ಬೆಲೆ ಏರಿಕೆ ಮಾಡಿ ಹೊಸ ದರ ಪಟ್ಟಿ ಬಿಡುಗಡೆ ಮಾಡಿವೆ. 2021ರ ಅವಧಿಯಲ್ಲೇ ಈಗಾಗಲೇ ಒಂದು ಬಾರಿ ಪ್ರಮುಖ ಕಾರುಗಳ ಬೆಲೆಯಲ್ಲಿ ಹೆಚ್ಚಳವಾಗಿದ್ದು, ಇದೀಗ ಎರಡನೇ ಬಾರಿಗೆ ಏಪ್ರಿಲ್ ತಿಂಗಳಿನಲ್ಲಿ ಮತ್ತೆ ಹೊಸ ವಾಹನಗಳ ಬೆಲೆಯಲ್ಲಿ ಏರಿಕೆ ಮಾಡಲಾಗುತ್ತಿವೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಈ ಹಿಂದೆ ಪ್ರತಿ ಆರು ತಿಂಗಳಿಗೆ ಒಂದು ಬಾರಿ ವಾಹನಗಳ ದರ ಪರಿಷ್ಕರಣೆ ಮಾಡುತ್ತಿದ್ದ ಆಟೋ ಕಂಪನಿಗಳು ಇದೀಗ ಬಿಡಿಭಾಗಗಳ ವೆಚ್ಚವು ನಿರಂತರವಾಗಿ ಹೆಚ್ಚುತ್ತಿರುವ ಪರಿಣಾಮ ಪ್ರತಿ ಮೂರು ತಿಂಗಳಿಗೆ ಒಂದು ಬಾರಿ ಬೆಲೆ ಪರಿಷ್ಕರಣೆ ಮಾಡುತ್ತಿದ್ದು, ಹೊಸ ವಾಹನಗಳು ಕಳೆದ ಒಂದು ವರ್ಷದಲ್ಲಿ ಸಾಕಷ್ಟು ಬೆಲೆ ಏರಿಕೆ ಕಂಡಿವೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಫೇಮ್ 2 ಮಾನ್ಯತಾ ಅವಧಿ ವಿಸ್ತರಿಸಿದ ಕೇಂದ್ರ ಸರ್ಕಾರ

ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಮತ್ತು ಖರೀದಿಯನ್ನು ಉತ್ತೇಜಿಸಲು ಹಲವಾರು ಸಬ್ಸಡಿ ಯೋಜನೆಗಳನ್ನು ಘೋಷಿಸಿದ್ದು, 2020 ಮಾರ್ಚ್ 31ಕ್ಕೆ ಮುಕ್ತಾಯಗೊಂಡಿದ್ದ ಫೇಮ್ 2 ಮಾನ್ಯತಾ ಪ್ರಮಾಣ ಪತ್ರದ ಅವಧಿಯನ್ನು ಹೆಚ್ಚುವರಿಯಾಗಿ ಮತ್ತೆ ಒಂದು ವರ್ಷ ವಿಸ್ತರಿಸಲಾಗಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಹೆಚ್ಚುತ್ತಿರುವ ಇಂಧನಗಳ ಬೆಲೆ ಮತ್ತು ಮಾಲಿನ್ಯದ ಕಾರಣಕ್ಕೆ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹ ನೀಡುತ್ತಿರುವುದು ಹೊಸ ಬದಲಾವಣೆಗೆ ಕಾರಣವಾಗಿದೆ. ಇಂಧನ ಚಾಲಿತ ವಾಹನಗಳನ್ನು ತಗ್ಗಿಸಿ ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರವು ಫೇಮ್ 2 ಸಬ್ಸಡಿ ಯೋಜನೆಯಡಿ ಎಲೆಕ್ಟ್ರಿಕ್ ವಾಹನಗಳ ಉತ್ಪಾದಕ ಕಂಪನಿಗಳಿಗೆ ಮತ್ತು ಖರೀದಿ ಮಾಡುವ ಗ್ರಾಹಕರಿಗೆ ಗರಿಷ್ಠ ಧನಸಹಾಯ ಒದಗಿಸುತ್ತಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಫೇಮ್ 2 ವ್ಯಾಪ್ತಿಗೆ ಬರಲಿವೆ ಹೈಡ್ರೋಜನ್ ಫ್ಯೂಯಲ್ ಸೆಲ್ ಕಾರು

ದೇಶದಲ್ಲಿರುವ ಹೈಡ್ರೋಜನ್ ಫ್ಯೂಯಲ್ ಸೆಲ್ ಕಾರುಗಳನ್ನು ಸಹ ಫೇಮ್ 2 ವ್ಯಾಪ್ತಿಗೆ ತರುವ ಸಾಧ್ಯತೆಗಳಿವೆ. ಎಲೆಕ್ಟ್ರಿಕ್ ಹೈಬ್ರಿಡ್ ಅಥವಾ ಮೈಲ್ಡ್ ಹೈಬ್ರಿಡ್ ಕಾರುಗಳಿಗಿಂತ ಹೈಡ್ರೋಜನ್ ಫ್ಯೂಯಲ್ ಸೆಲ್ ಕಾರುಗಳು ಕಡಿಮೆ ಪ್ರಮಾಣದ ಹೊರಸೂಸುವಿಕೆ ಪ್ರಮಾಣವನ್ನು ಹೊಂದಿವೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಈ ಕಾರುಗಳು ಹೈಡ್ರೋಜನ್ ಫ್ಯೂಯಲ್ ಸೆಲ್'ಗಳಿಂದ ಚಾಲನೆಯಾಗುತ್ತವೆ. ಇದರಿಂದಾಗಿ ಈ ಕಾರುಗಳು ಪರಿಸರ ಸ್ನೇಹಿಯಾಗಿವೆ. ಈ ಅಂಶಗಳನ್ನು ಪರಿಗಣಿಸಿರುವ ಕೇಂದ್ರ ಸರ್ಕಾರವು ಶೀಘ್ರದಲ್ಲೇ ಅವುಗಳನ್ನು ಫೇಮ್ -2 ಯೋಜನೆಯಡಿಯಲ್ಲಿ ಸೇರಿಸಲು ನಿರ್ಧರಿಸಬಹುದು.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಬಿಡುಗಡೆಯಾಗಲಿವೆ ಮಹೀಂದ್ರಾ ನಾಲ್ಕು ಹೊಸ ಎಕ್ಸ್‌ಯುವಿ ಸರಣಿ

ಎಸ್‌ಯುವಿ ಕಾರುಗಳ ಮಾರಾಟದಲ್ಲಿ ತನ್ನದೆ ಆದ ಜನಪ್ರಿಯತೆ ಹೊಂದಿರುವ ಮಹೀಂದ್ರಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ಮತ್ತಷ್ಟು ಹೊಸ ಕಾರುಗಳನ್ನು ಬಿಡುಗಡೆ ಮಾಡುವ ಸಿದ್ದತೆಯಲ್ಲಿದ್ದು, ಎಕ್ಸ್‌ಯುವಿ ಸರಣಿಯಲ್ಲಿ ಹಲವು ಹೊಸ ಕಾರು ಮಾದರಿಯನ್ನು ಬಿಡುಗಡೆ ಮಾಡಲಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಕೇಂದ್ರ ಸಾರಿಗೆ ಇಲಾಖೆಯಲ್ಲಿ ದಾಖಲಿಸಲಾಗಿರುವ ಹೊಸ ಹಕ್ಕು ಸ್ವಾಮ್ಯ ಪ್ರತಿಯಲ್ಲಿ ಮಹೀಂದ್ರಾ ಕಂಪನಿಯು ಎಕ್ಸ್‌‌ಯುವಿ700 ಮಾದರಿಯ ಜೊತೆಗೆ ಎಕ್ಸ್‌ಯುವಿ100, ಎಕ್ಸ್‌‌ಯುವಿ400 ಎಕ್ಸ್‌ಯುವಿ900 ಸೇರಿ ಒಟ್ಟು ನಾಲ್ಕು ಹೊಸ ಎಸ್‌ಯುವಿ ಕಾರುಗಳನ್ನು ಬಿಡುಗಡೆ ಮಾಡುತ್ತಿದೆ.

Most Read Articles

Kannada
English summary
Top Auto News Of The Week. Read in Kannada.
Story first published: Sunday, April 18, 2021, 1:20 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X