ವಾರದ ಪ್ರಮುಖ ಸುದ್ದಿ: ಶತಕ ಪೂರೈಸಿದ ಇಂಧನ ಬೆಲೆ, ಕುಸಿದ ವಾಹನ ಮಾರಾಟ, ಇವಿ ಸಬ್ಸಡಿಯಲ್ಲಿ ಹೆಚ್ಚಳ!

ಕೋವಿಡ್ ಎರಡನೇ ಅಲೆಯ ಪರಿಣಾಮ ದೇಶಿಯ ಆಟೋ ಉದ್ಯಮವು ಭಾರೀ ಪ್ರಮಾಣದ ನಷ್ಟ ಅನುಭವಿಸಿದ್ದು, ಇಂಧನಗಳ ಬೆಲೆ ಏರಿಕೆಯು ಕೂಡಾ ಹೊಸ ವಾಹನಗಳ ಮಾರಾಟದ ಪರಿಣಾಮ ಬೀರುತ್ತಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಕಳೆದ ವರ್ಷದ ಕೋವಿಡ್ ಅಬ್ಬರ ತಗ್ಗಿದ ನಂತರ ದಸರಾ ಮತ್ತು ದೀಪಾವಳಿಯ ವೇಳೆಗೆ ಉತ್ಪಾದನೆಯಲ್ಲಿ ಭಾರೀ ಏರಿಕೆ ಕಂಡಿದ್ದ ಆಟೋ ಉತ್ಪಾದನಾ ಕಂಪನಿಗಳಿಗೆ ಕೋವಿಡ್ ಎರಡನೇ ಅಲೆಯಿಂದ ಭಾರೀ ನಷ್ಟ ಉಂಟಾಗಿದ್ದು, ಜೊತೆಗೆ ಇಂಧನ ಬೆಲೆ ಏರಿಕೆ, ವಾಹನ ಉತ್ಪಾದನೆ ಕುಸಿತ, ಕೋವಿಡ್ ಅಬ್ಬರದ ನಡುವೆಯು ಹೊಸ ವಾಹನಗಳ ಬಿಡುಗಡೆ ಪ್ರಕ್ರಿಯೆ ಈ ವಾರದ ಪ್ರಮುಖ ಸುದ್ದಿಗಳಾಗಿವೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಉತ್ಪಾದನೆಯಲ್ಲಿ ಕುಂಠಿತ, ಮಾರಾಟದಲ್ಲೂ ಕುಸಿತ

ಲಾಕ್‌ಡೌನ್‌ ಹೊಡೆತಕ್ಕೆ ಸಿಲುಕಿ ಸುಧಾರಣೆಯ ಹಾದಿಯಲ್ಲಿದ್ದ ಆಟೋ ಉದ್ಯಮವು ಇದೀಗ ಮತ್ತಷ್ಟು ಸಂಕಷ್ಟಕರ ಪರಿಸ್ಥಿತಿಗೆ ಸಿಲುಕಿದ್ದು, ಬಹುತೇಕ ವಾಹನ ಉತ್ಪಾದನಾ ಕಂಪನಿಗಳು ಉತ್ಪಾದನೆಯಲ್ಲಿ ಶೇ.70 ರಿಂದ ಶೇ. 80ರಷ್ಟು ಕುಸಿತ ಕಂಡಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಜೊತೆಗೆ ಹೊಸ ವಾಹನಗಳಿಗೆ ಬೇಡಿಕೆ ಹೆಚ್ಚುತ್ತಿದ್ದ ಸಂದರ್ಭದಲ್ಲೇ ಲಾಕ್‌ಡೌನ್‌ನಿಂದಾಗಿ ಭಾರೀ ಪ್ರಮಾಣದ ನಷ್ಟ ಎದುರಿಸುವ ಭೀತಿ ಎದುರಾಗಿದ್ದು, ಆರ್ಥಿಕ ಅಭದ್ರತೆಯಿಂದಾಗಿ ಗ್ರಾಹಕರು ಸಹ ಹೊಸ ವಾಹನಗಳ ಖರೀದಿಗೆ ಹಿಂದೇಟು ಹಾಕುತ್ತಿದ್ದಾರೆ. ಮೇ ಅವಧಿಯಲ್ಲಿನ ಕಾರು ಮಾರಾಟದಲ್ಲೂ ಬಹುತೇಕ ಕಾರು ಕಂಪನಿಗಳು ಏಪ್ರಿಲ್ ಅವಧಿಯಲ್ಲಿನ ಕಾರು ಮಾರಾಟಕ್ಕಿಂತಲೂ ಶೇ. 40ರಿಂದ ಶೇ.60 ರಷ್ಟು ಕುಸಿತ ಕಂಡಿವೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಶತಕ ಪೂರೈಸಿದ ಇಂಧನ ಬೆಲೆ

ದೇಶಾದ್ಯಂತ ಇಂಧನಗಳ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದ್ದು, ವಾಹನ ಸವಾರರು ಇಂಧನ ಬೆಲೆ ಹೊಡೆತಕ್ಕೆ ಹೈರಾಣಾಗಿ ಹೋಗಿದ್ದಾರೆ. ದೇಶದ ಪ್ರಮುಖ ನಗರಗಳಲ್ಲಿ ಈಗಾಗಲೇ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ರೂ.100 ದಾಟಿದ್ದು, ಡೀಸೆಲ್ ಬೆಲೆಯು ಕೂಡಾ ವಿವಿಧ ನಗರಗಳಲ್ಲಿ ರೂ.91 ರಿಂದ ರೂ. 93 ಬೆಲೆ ಹೊಂದಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯು ಕೂಡಾ ಹೊಸ ವಾಹನಗಳ ಮಾರಾಟದಲ್ಲಿ ಕುಸಿತ ಕಾಣಲು ಪ್ರಮುಖ ಕಾರಣವಾಗಿದ್ದು, ಇಂಧನ ಬೆಲೆ ಇಳಿಕೆಗಾಗಿ ಕೇಂದ್ರ ಸರ್ಕಾರವು ಹಲವಾರು ಕಠಿಣ ಕ್ರಮಗಳನ್ನು ಜಾರಿಗೊಳಿಸುತ್ತಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಇವಿ ವಾಹನ ಹೆಚ್ಚಳಕ್ಕಾಗಿ ಫೇಮ್ 2 ತಿದ್ದುಪಡಿ

ಹೆಚ್ಚುತ್ತಿರುವ ಇಂಧನಗಳ ಬೆಲೆ ಮತ್ತು ಮಾಲಿನ್ಯದ ಕಾರಣಕ್ಕೆ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕೇಂದ್ರ ಸರ್ಕಾರವು ಪ್ರಸ್ತುತ ಎಲೆಕ್ಟ್ರಿಕ್ ವಾಹನಗಳಿಗೆ ನೀಡಲಾಗುತ್ತಿರುವ ಫೇಮ್ 2 ಸಬ್ಸಡಿಯನ್ನು ದ್ವಿಚಕ್ರ ವಾಹನಗಳಿಗಾಗಿ ಹೆಚ್ಚಿಸಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಹೊಸ ತಿದ್ದುಪಡಿಯ ಮೂಲಕ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಸಬ್ಸಿಡಿ ಪ್ರಮಾಣವನ್ನು ಬ್ಯಾಟರಿ ಪ್ಯಾಕ್ ಆಧರಿಸಿ ಪ್ರತಿ ಕಿಲೋವ್ಯಾಟ್‌ಗೆ ರೂ. 15 ಸಾವಿರ ಏರಿಕೆ ಮಾಡಲಾಗಿದ್ದು, ಹೊಸ ತಿದ್ದುಪಡಿಯ ನಂತರ ಪ್ರತಿ ಇವಿ ಸ್ಕೂಟರ್ ಖರೀದಿ ಮೇಲೆ ಗ್ರಾಹಕರು ರೂ. 10 ಸಾವಿರ ರೂ.15 ಸಾವಿರದಷ್ಟು ಇಳಿಕೆಯಾಗಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ನ್ಯೂ ಜನರೇಷನ್ ಸ್ಕೋಡಾ ಆಕ್ಟೀವಿಯಾ

ಕೋವಿಡ್ ಅಬ್ಬರದ ನಡುವೆಯೂ ಸ್ಕೋಡಾ ಇಂಡಿಯಾ ಕಂಪನಿಯು ತನ್ನ ಜನಪ್ರಿಯ ಮಧ್ಯಮ ಗಾತ್ರದ ಸೆಡಾನ್ ಕಾರು ಮಾದರಿಯಾದ ಆಕ್ಟೀವಿಯಾ ಆವೃತ್ತಿಯ 2021ರ ಮಾದರಿಯನ್ನು ಹೊಸ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಭಾರತದಲ್ಲಿ ಬಿಡುಗಡೆ ಮಾಡಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಸ್ಟೈಲ್ ಮಾದರಿಯು ರೂ. 25.99 ಲಕ್ಷ ಮತ್ತು ಲೊರಿನ್ ಅಂಡ್ ಕ್ಲೆಮೆಂಟ್ ಮಾದರಿಯು ರೂ. 28.99 ಲಕ್ಷ ಬೆಲೆ ಹೊಂದಿದ್ದು, 2.0 ಲೀಟರ್ ಟಿಎಫ್‌ಎಸ್‌ಐ ಪೆಟ್ರೋಲ್ ಎಂಜಿನ್‌ನೊಂದಿಗೆ ಮಾರಾಟಗೊಳ್ಳಲಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

2021ರ ಎಫ್-ಪೇಸ್ ಎಸ್‌ಯುವಿ ಬಿಡುಗಡೆ

ಬ್ರಿಟಿಷ್ ಐಷಾರಾಮಿ ಕಾರು ಉತ್ಪಾದನಾ ಕಂಪನಿಯಾಗಿರುವ ಜಾಗ್ವಾರ್ ತನ್ನ ಫ್ಲ್ಯಾಗ್‌ಶಿಪ್ ಎಸ್‌ಯುವಿ ಮಾದರಿಯಾದ ಎಫ್-ಪೇಸ್ 2021ರ ಆವೃತ್ತಿಯನ್ನು ಬಿಡುಗಡೆ ಮಾಡಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.69.99 ಲಕ್ಷ ಬೆಲೆ ಹೊಂದಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಹೊಸ ಎಫ್‌-ಪೇಸ್ ಕಾರು 2.0-ಲೀಟರ್ ಪೆಟ್ರೋಲ್ ಟರ್ಬೊ ಮತ್ತು 2.0-ಲೀಟರ್ ಟರ್ಬೊಚಾಜ್ಡ್ ಡೀಸೆಲ್ ಎಂಜಿನ್ ಆಯ್ಕೆ ಹೊಂದಿದ್ದು, 8-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ ಪೆಟ್ರೋಲ್ ಕಾರು 201 ಬಿಎಚ್‌ಪಿ, 430 ಎನ್ಎಂ ಟಾರ್ಕ್ ಮತ್ತು ಡೀಸೆಲ್ ಕಾರು 246 ಬಿಎಚ್‌ಪಿ, 365 ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಉತ್ಪಾದನೆಯಲ್ಲಿ ಟಾಟಾ ನೆಕ್ಸಾನ್ ಹೊಸ ದಾಖಲೆ

ಟಾಟಾ ಮೋಟಾರ್ಸ್ ನಿರ್ಮಾಣದ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಉತ್ಪಾದನೆಯಲ್ಲಿ ಹೊಸ ದಾಖಲೆಗೆ ಕಾರಣವಾಗಿದ್ದು, ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ಕಾರಿನ 2 ಲಕ್ಷ ಯುನಿಟ್ ಉತ್ಪಾದನೆಯನ್ನು ಪೂರ್ಣಗೊಳಿಸಿತು.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಗ್ರಾಹಕರ ವಿಶ್ವಾಸದಂತೆ ಹೊಸ ಕಾರುಗಳಲ್ಲಿ ಐಷಾರಾಮಿ ವಿನ್ಯಾಸ, ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ನೀಡುವುದರ ಜೊತೆಗೆ ಎಂಜಿನ್ ಕಾರ್ಯಕ್ಷಮತೆಯಲ್ಲೂ ಗಮನಸೆಳೆಯುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ಉತ್ಪಾದನೆಯಲ್ಲಿ ಅತಿ ಅವಧಿಯಲ್ಲಿ ಹೊಸ ದಾಖಲೆಗೆ ಕಾರಣವಾಗಿದ್ದು, ನೆಕ್ಸಾನ್ ಫೇಸ್‌ಲಿಫ್ಟ್ ಮಾದರಿಯ ಬಿಡುಗಡೆಯ ನಂತರ ಹೊಸ ಕಾರಿನ ಮಾರಾಟದಲ್ಲಿ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ರೋಡ್ ಟೆಸ್ಟಿಂಗ್ ಆರಂಭಿಸಿದ ಟೆಸ್ಲಾ

ಅಮೆರಿಕದ ಜನಪ್ರಿಯ ಎಲೆಕ್ಟ್ರಿಕ್ ಕಾರು ತಯಾರಿಕಾ ಕಂಪನಿಯಾಗಿರುವ ಟೆಸ್ಲಾ ಇದೇ ವರ್ಷಾಂತ್ಯಕ್ಕೆ ಭಾರತದಲ್ಲಿ ತನ್ನ ಮೊದಲ ಎಲೆಕ್ಟ್ರಿಕ್ ಕಾರು ಮಾದರಿಯನ್ನು ಮಾರಾಟ ಮಾಡುವ ಯೋಜನೆಯಲ್ಲಿದ್ದು, ಹೊಸ ಕಾರುಗಳ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ವಾಣಿಜ್ಯ ನಗರಿ ಮುಂಬೈನಲ್ಲಿ ತನ್ನ ಕೇಂದ್ರ ಕಚೇರಿ ತೆರೆಯಲು ಉದ್ದೇಶಿಸಿರುವ ಟೆಸ್ಲಾ ಕಂಪನಿಯು ಮಾಡೆಲ್ 3 ಕಾರು ಮಾದರಿಯ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಹೊಸ ಮಾದರಿಯ ಎಲೆಕ್ಟ್ರಿಕ್ ಕಾರುಗಳ ಮೂಲಕ ಟೆಸ್ಲಾ ಕಂಪನಿಯು ಉತ್ತಮ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

Most Read Articles

Kannada
English summary
Top Auto News Of The Week. Read in Kannada.
Story first published: Sunday, June 13, 2021, 0:10 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X