ವಾರದ ಸುದ್ದಿ: ಸಿಟ್ರನ್ ಕಾರು ಬಿಡುಗಡೆ, ಹೊಸ ವಾಹನ ಬೆಲೆ ಹೆಚ್ಚಳ, ಅಲ್ಕಾಜರ್ ಅನಾವರಣ, ಯುಗಾದಿ ಆಫರ್ ಘೋಷಣೆ!

ದೇಶಿಯ ಆಟೋ ಉದ್ಯಮವು ಹಲವಾರು ಹೊಸ ಬದಲಾವಣೆಗಳೊಂದಿಗೆ ದಾಖಲೆ ಪ್ರಮಾಣದ ವಾಹನಗಳ ಮಾರಾಟಕ್ಕೆ ಸಾಕ್ಷಿಯಾಗುತ್ತಿದ್ದು, ಹಲವಾರು ಹೊಸ ಮಾದರಿಯ ವಾಹನಗಳು ಮಾರುಕಟ್ಟೆ ಪ್ರವೇಶಿಸಿವೆ. ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ವಾಹನಗಳ ಬಿಡುಗಡೆಯ ಸಿದ್ದತೆಯಲ್ಲಿದ್ದು, ಈ ವಾರದ ಪ್ರಮುಖ ಸುದ್ದಿಗಳ ಹೈಲೆಟ್ಸ್‌ ಇಲ್ಲಿ ತಿಳಿಯೋಣ.

ವಾರದ ಸುದ್ದಿ: ಸಿಟ್ರನ್ ಕಾರು ಬಿಡುಗಡೆ, ಹೊಸ ವಾಹನ ಬೆಲೆ ಹೆಚ್ಚಳ, ಅಲ್ಕಾಜರ್ ಅನಾವರಣ, ಯುಗಾದಿ ಆಫರ್ ಘೋಷಣೆ!

ಹೊಸ ವಾಹನಗಳ ಬೆಲೆಯಲ್ಲಿ ಹೆಚ್ಚಳ

ಆಟೋ ಉತ್ಪಾದನಾ ಬಿಡಿಭಾಗಗಳ ಬೆಲೆ ಹೆಚ್ಚಳ ಪರಿಣಾಮ ಬಹುತೇಕ ವಾಹನ ಉತ್ಪಾದನಾ ಕಂಪನಿಗಳು ಬೆಲೆ ಹೆಚ್ಚಳಕ್ಕೆ ಪ್ರಕಟಿಸಿದ್ದು, ಟೊಯೊಟಾ ಸೇರಿದಂತೆ ಪ್ರಮುಖ ಕಾರು ಕಂಪನಿಯು ಕೂಡಾ ತನ್ನ ಪ್ರಮುಖ ಕಾರು ಮಾದರಿಗಳ ಬೆಲೆಯಲ್ಲಿ ಶೇ.1ರಿಂದ ಶೇ.3ರಷ್ಟು ಬೆಲೆ ಹೆಚ್ಚಳ ಮಾಡಿವೆ.

ವಾರದ ಸುದ್ದಿ: ಸಿಟ್ರನ್ ಕಾರು ಬಿಡುಗಡೆ, ಹೊಸ ವಾಹನ ಬೆಲೆ ಹೆಚ್ಚಳ, ಅಲ್ಕಾಜರ್ ಅನಾವರಣ, ಯುಗಾದಿ ಆಫರ್ ಘೋಷಣೆ!

ಈ ಹಿದೆ ಪ್ರತಿ ಆರು ತಿಂಗಳಿಗೆ ಒಂದು ಬಾರಿ ವಾಹನಗಳ ದರ ಪರಿಷ್ಕರಣೆ ಮಾಡುತ್ತಿದ್ದ ಆಟೋ ಕಂಪನಿಗಳು ಬಿಡಿಭಾಗಗಳ ವೆಚ್ಚದಲ್ಲಿ ನಿರಂತರವಾಗಿ ಹೆಚ್ಚುತ್ತಿರುವ ಪರಿಣಾಮ ಪ್ರತಿ ಮೂರು ತಿಂಗಳಿಗೆ ಒಂದು ಬಾರಿ ಬೆಲೆ ಪರಿಷ್ಕರಣೆ ಮಾಡುತ್ತಿದ್ದು, ಹೊಸ ವಾಹನಗಳು ಕಳೆದ ಒಂದು ವರ್ಷದಲ್ಲಿ ಸಾಕಷ್ಟು ಬೆಲೆ ಏರಿಕೆ ಕಂಡಿವೆ.

ವಾರದ ಸುದ್ದಿ: ಸಿಟ್ರನ್ ಕಾರು ಬಿಡುಗಡೆ, ಹೊಸ ವಾಹನ ಬೆಲೆ ಹೆಚ್ಚಳ, ಅಲ್ಕಾಜರ್ ಅನಾವರಣ, ಯುಗಾದಿ ಆಫರ್ ಘೋಷಣೆ!

ಹೊಸ ಶೋರೂಂ ತೆರೆಯಲು ಸಿದ್ದವಾದ ಟೆಸ್ಲಾ

ಅಮೆರಿಕ ಜನಪ್ರಿಯ ಎಲೆಕ್ಟ್ರಿಕ್ ಕಾರು ಉತ್ಪಾದನಾ ಕಂಪನಿಯಾಗಿರುವ ಟೆಸ್ಲಾ ಭಾರತದಲ್ಲೂ ತನ್ನ ಉದ್ಯಮ ವ್ಯವಹಾರ ವಿಸ್ತರಿಸುವ ಸಿದ್ದತೆಯಲಿದ್ದು, ಕಾರು ಮಾರಾಟಕ್ಕಾಗಿ ಈಗಾಗಲೇ ಅಗತ್ಯ ನೋಂದಣಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿರುವ ಟೆಸ್ಲಾ ಕಂಪನಿಯು ಇದೀಗ ದೇಶದ ಪ್ರಮುಖ ಮೂರು ನಗರಗಳಲ್ಲಿ ಹೊಸ ಶೋರೂಂ ತೆರೆಯುವ ಯೋಜನೆಗೆ ಚಾಲನೆ ನೀಡಿದೆ.

ವಾರದ ಸುದ್ದಿ: ಸಿಟ್ರನ್ ಕಾರು ಬಿಡುಗಡೆ, ಹೊಸ ವಾಹನ ಬೆಲೆ ಹೆಚ್ಚಳ, ಅಲ್ಕಾಜರ್ ಅನಾವರಣ, ಯುಗಾದಿ ಆಫರ್ ಘೋಷಣೆ!

ಬೆಂಗಳೂರಿನಲ್ಲೇ ಹೊಸ ಉದ್ಯಮ ಘಟಕವನ್ನು ತೆರೆಯುವ ಬಗ್ಗೆ ಇತ್ತೀಚೆಗೆ ಮಾಹಿತಿ ಬಹಿರಂಗಪಡಿಸಿದ್ದ ಟೆಸ್ಲಾ ಕಂಪನಿಯು ಇದೀಗ ಬೆಂಗಳೂರು, ಮುಂಬೈ ಮತ್ತು ದೆಹಲಿಯಲ್ಲಿ ಮೂರು ಹೊಸ ಶೋರೂಂಗಳನ್ನು ತೆರೆಯಲು ಸ್ಥಳ ಹುಡುಕಾಟ ನಡೆಸಿರುವ ಬಗ್ಗೆ ರಾಯಿಟರ್ಸ್ ಸುದ್ದಿ ಸಂಸ್ಥೆಯು ವರದಿ ಮಾಡಿದೆ. ಮೂರು ಮಾಹಾನಗರಗಳಲ್ಲಿ 20,000ದಿಂದ 30,000 ಚದರ ಅಡಿ ವಾಣಿಜ್ಯ ಜಾಗವನ್ನು ಹುಡುಕುತ್ತಿರುವ ಕಂಪನಿಯು ಇದಕ್ಕಾಗಿ ಪ್ರತ್ಯೇಕ ಅಧಿಕಾರಿಗಳ ತಂಡವನ್ನು ನೇಮಿಸಿದ್ದು, ಟೆಸ್ಲಾ ತನ್ನ ಮೊದಲ ಎಲೆಕ್ಟ್ರಿಕ್ ಕಾರು ಮಾದರಿಯನ್ನು 2021ರ ಮಧ್ಯಂತರದಲ್ಲಿ ಬಿಡುಗಡೆಗೊಳಿಸಲಿದೆ.

ವಾರದ ಸುದ್ದಿ: ಸಿಟ್ರನ್ ಕಾರು ಬಿಡುಗಡೆ, ಹೊಸ ವಾಹನ ಬೆಲೆ ಹೆಚ್ಚಳ, ಅಲ್ಕಾಜರ್ ಅನಾವರಣ, ಯುಗಾದಿ ಆಫರ್ ಘೋಷಣೆ!

ಗುಜುರಿ ನೀತಿ ಅಳವಡಿಸಿಕೊಳ್ಳುವ ಹಳೆಯ ವಾಹನ ಮಾಲೀಕರಿಗೆ ರೆನಾಲ್ಟ್ ಆಫರ್

ರೆನಾಲ್ಟ್ ಕಂಪನಿಯು ಕೂಡಾ ಮಹೀಂದ್ರಾ ಸೆರೊ ಸ್ಕ್ರ್ಯಾಪಿಂಗ್ ಕಂಪನಿ ಜೊತೆಗೂಡಿ ಹಳೆಯ ವಾಹನ ಮಾಲೀಕರಿಗೆ ವಿವಿಧ ಆಫರ್‌ಗಳನ್ನು ಘೋಷಿಸಿದ್ದು, ಹಳೆಯ ವಾಹನವನ್ನು ಗುಜುರಿಗೆ ಸೇರಿಸಿ ಹೊಸ ವಾಹನ ಖರೀದಿಸುವ ಗ್ರಾಹಕರಿಗೆ ಆಫರ್ ನೀಡುತ್ತಿದೆ.

ವಾರದ ಸುದ್ದಿ: ಸಿಟ್ರನ್ ಕಾರು ಬಿಡುಗಡೆ, ಹೊಸ ವಾಹನ ಬೆಲೆ ಹೆಚ್ಚಳ, ಅಲ್ಕಾಜರ್ ಅನಾವರಣ, ಯುಗಾದಿ ಆಫರ್ ಘೋಷಣೆ!

ಸ್ಕ್ರ್ಯಾಪಿಂಗ್ ನೀತಿಯಡಿಯಲ್ಲಿ ಬರುವ ಅಧಿಕೃತ ಪ್ರಕ್ರಿಯೆಗಳ ಮೂಲಕವೇ ಹಳೆಯ ವಾಹನದ ಸ್ಥಿತಿಗತಿಯ ಆಧಾರದ ಮೇಲೆ ಬೆಲೆ ನಿಗದಿಪಡಿಸುವುದು, ಸ್ಕ್ರ್ಯಾಪಿಂಗ್ ಸರ್ಟಿಫಿಕೇಟ್ ವಿತರಣೆ ಪ್ರಕ್ರಿಯೆಗಳನ್ನು ಪೂರ್ಣ ಪ್ರಮಾಣದಲ್ಲಿ ರೆನಾಲ್ಟ್ ಕಂಪನಿಯೇ ಕೈಗೊಳ್ಳಲಿದ್ದು, ಸರ್ಟಿಫಿಕೇಟ್ ವಿತರಣೆ ನಂತರ ಗ್ರಾಹಕರು ರೆನಾಲ್ಟ್ ಕಂಪನಿಯ ನಿರ್ಮಾಣದ ಹೊಸ ವಾಹನಗಳನ್ನು ಖರೀದಿಗೆ ಬಯಸಿದರೆ ಅಂತಹ ಗ್ರಾಹಕರಿಗೆ ಕಂಪನಿಯು ವಿವಿಧ ಆಫರ್‌ಗಳ ಮೂಲಕ ಹೊಸ ವಾಹನ ಖರೀದಿಗೆ ಕಡಿಮೆ ಬಡ್ಡಿದರದಲ್ಲಿ ಗರಿಷ್ಠ ಸಾಲಸೌಲಭ್ಯಗಳನ್ನು ಒದಗಿಸಲಿದೆ.

ವಾರದ ಸುದ್ದಿ: ಸಿಟ್ರನ್ ಕಾರು ಬಿಡುಗಡೆ, ಹೊಸ ವಾಹನ ಬೆಲೆ ಹೆಚ್ಚಳ, ಅಲ್ಕಾಜರ್ ಅನಾವರಣ, ಯುಗಾದಿ ಆಫರ್ ಘೋಷಣೆ!

ಸಿಟ್ರನ್ ಸಿ5 ಏರ್‌ಕ್ರಾಸ್ ಎಸ್‌ಯುವಿ

ಸಿಟ್ರನ್ ಇಂಡಿಯಾ ಕಂಪನಿಯು ತನ್ನ ಹೊಚ್ಚ ಹೊಸ ಸಿ5 ಏರ್‌ಕ್ರಾಸ್ ಎಸ್‌ಯುವಿ ಕಾರು ಮಾದರಿಯನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 29.90 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 31.90 ಲಕ್ಷ ಬೆಲೆ ಹೊಂದಿದೆ.

ವಾರದ ಸುದ್ದಿ: ಸಿಟ್ರನ್ ಕಾರು ಬಿಡುಗಡೆ, ಹೊಸ ವಾಹನ ಬೆಲೆ ಹೆಚ್ಚಳ, ಅಲ್ಕಾಜರ್ ಅನಾವರಣ, ಯುಗಾದಿ ಆಫರ್ ಘೋಷಣೆ!

ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಉತ್ತಮ ಪೈಪೋಟಿ ನೀಡಲಿರುವ ಸಿ5 ಏರ್‌ಕ್ರಾಸ್ ಏಸ್‌ಯುವಿ ಕಾರು ಮಾದರಿಯು 2.0-ಲೀಟರ್ ಡೀಸೆಲ್ ಎಂಜಿನ್‌ನೊಂದಿಗೆ ಐಷಾರಾಮಿ ಮಾದರಿಯಾಗಿ ಗುರುತಿಸಿಕೊಳ್ಳಲಿದ್ದು, ಹಲವಾರು ಸಾಫ್ಟ್ ಟಚ್ ಮೆಟಿರಿಯರ್‌ಗಳೊಂದಿಗೆ ವಿಶಾಲವಾದ ಕ್ಯಾಬಿನ್ ಪಡೆದುಕೊಂಡಿದೆ.

ವಾರದ ಸುದ್ದಿ: ಸಿಟ್ರನ್ ಕಾರು ಬಿಡುಗಡೆ, ಹೊಸ ವಾಹನ ಬೆಲೆ ಹೆಚ್ಚಳ, ಅಲ್ಕಾಜರ್ ಅನಾವರಣ, ಯುಗಾದಿ ಆಫರ್ ಘೋಷಣೆ!

ಮಹೀಂದ್ರಾ ಎಕ್ಸ್‌ಯುವಿ700 ಅನಾವರಣ

ಮಹೀಂದ್ರಾ ಕಂಪನಿಯು ಎಕ್ಸ್‌ಯುವಿ ಸರಣಿ ಕಾರು ಮಾರಾಟದಲ್ಲಿ ತನ್ನದೇ ಆದ ಜನಪ್ರಿಯತೆ ಹೊಂದಿದ್ದು, ಸುಧಾರಿತ ತಂತ್ರಜ್ಞಾನ ಪ್ರೇರಣೆಯೊಂದಿಗೆ ಕಂಪನಿಯು ಹೊಚ್ಚ ಹೊಸ ಎಕ್ಸ್‌ಯುವಿ700 ಮಾದರಿಯನ್ನು ಬಿಡುಗಡೆಗೊಳಿಸುವ ಯೋಜನೆಯಲ್ಲಿದೆ.

ವಾರದ ಸುದ್ದಿ: ಸಿಟ್ರನ್ ಕಾರು ಬಿಡುಗಡೆ, ಹೊಸ ವಾಹನ ಬೆಲೆ ಹೆಚ್ಚಳ, ಅಲ್ಕಾಜರ್ ಅನಾವರಣ, ಯುಗಾದಿ ಆಫರ್ ಘೋಷಣೆ!

ಸ್ಯಾಂಗ್‌ಯಾಂಗ್ ಕಂಪನಿಯ ಜೊತೆಗಿನ ಮಹೀಂದ್ರಾ ಸಹಭಾಗಿತ್ವ ಯೋಜನೆ ಸ್ಥಗಿತದ ನಂತರ ಅಲ್ಟುರಾಸ್ ಜಿ4 ಮಾದರಿಯ ಉತ್ಪಾದನೆ ಸ್ಥಗಿತಗೊಳಿಸಲಾಗಿದ್ದು, ಅಲ್ಟುರಾಸ್ ಜಿ4 ಸ್ಥಾನಕ್ಕಾಗಿ ಮಹೀಂದ್ರಾ ಹೊಸ ಪ್ಲ್ಯಾಟ್‌ಫಾರ್ಮ್ ಮೂಲಕ ಮತ್ತೊಂದು ಫುಲ್ ಸೈಜ್ ಎಸ್‌ಯವಿ ಮಾದರಿಯನ್ನು ಅಭಿವೃದ್ದಿಗೊಳಿಸುತ್ತಿದೆ. ಹೊಸ ಎಸ್‌ಯುವಿ ಕಾರು ಮಾದರಿಯು ಅಲ್ಟುರಾಸ್ ಜಿ4 ಮಾದರಿಗಿಂತಲೂ ಹೆಚ್ಚಿನ ಮಟ್ಟದ ತಾಂತ್ರಿಕ ಅಂಶಗಳಲನ್ನು ಪಡೆದುಕೊಳ್ಳಲಿದ್ದು, 7 ಸೀಟರ್ ಸೌಲಭ್ಯದೊಂದಿಗೆ ಟೊಯೊಟಾ ಫಾರ್ಚೂನರ್ ಮತ್ತು ಫೋರ್ಡ್ ಎಂಡೀವರ್ ಕಾರುಗಳಿಗೆ ಪೈಪೋಟಿ ನೀಡಲಿದೆ.

ವಾರದ ಸುದ್ದಿ: ಸಿಟ್ರನ್ ಕಾರು ಬಿಡುಗಡೆ, ಹೊಸ ವಾಹನ ಬೆಲೆ ಹೆಚ್ಚಳ, ಅಲ್ಕಾಜರ್ ಅನಾವರಣ, ಯುಗಾದಿ ಆಫರ್ ಘೋಷಣೆ!

ಹ್ಯುಂಡೈ ಅಲ್ಕಾಜರ್ ಅನಾವರಣ

ಹ್ಯುಂಡೈ ಇಂಡಿಯಾ ಕಂಪನಿಯು ತನ್ನ ಬಹುನೀರಿಕ್ಷಿತ ಅಲ್ಕಾಜರ್ ಎಸ್‌ಯುವಿ ಕಾರಿನ ಉತ್ಪಾದನಾ ಮಾದರಿಯನ್ನು ಅನಾರವಣಗೊಳಿಸಿದ್ದು, ಹೊಸ ಕಾರು ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರುಗಳಲ್ಲೇ ಅತ್ಯುತ್ತಮ ಎಂಜಿನ್ ಆಯ್ಕೆ ಮತ್ತು ಫೀಚರ್ಸ್‌ಗಳನ್ನು ಹೊಂದಿರಲಿದೆ.

ವಾರದ ಸುದ್ದಿ: ಸಿಟ್ರನ್ ಕಾರು ಬಿಡುಗಡೆ, ಹೊಸ ವಾಹನ ಬೆಲೆ ಹೆಚ್ಚಳ, ಅಲ್ಕಾಜರ್ ಅನಾವರಣ, ಯುಗಾದಿ ಆಫರ್ ಘೋಷಣೆ!

ಕ್ರೆಟಾ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಆಧರಿಸಿ ಉತ್ಪಾದನೆಗೊಂಡಿರುವ ಹೊಸ ಅಲ್ಕಾಜರ್ ಕಾರು ಹಲವಾರು ಹೊಸ ತಾಂತ್ರಿಕ ಸೌಲಭ್ಯಗಳೊಂದಿಗೆ 6 ಸೀಟರ್ ಮತ್ತು 7 ಸೀಟರ್ ಮಾದರಿಗಳಲ್ಲಿ ಮಾರಾಟಗೊಳ್ಳಲಿದ್ದು, 2.0-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆಯೊಂದಿಗೆ ಮುಂದಿನ ಕೆಲವೇ ದಿನಗಳಲ್ಲಿ ಹೊಸ ಕಾರು ಭಾರತ ಸೇರಿದಂತೆ ವಿಶ್ವದ ಪ್ರಮುಖ ಮಾರುಕಟ್ಟೆಗಳಲ್ಲಿ ಮಾರಾಟಗೊಳ್ಳಲಿದೆ.

ವಾರದ ಸುದ್ದಿ: ಸಿಟ್ರನ್ ಕಾರು ಬಿಡುಗಡೆ, ಹೊಸ ವಾಹನ ಬೆಲೆ ಹೆಚ್ಚಳ, ಅಲ್ಕಾಜರ್ ಅನಾವರಣ, ಯುಗಾದಿ ಆಫರ್ ಘೋಷಣೆ!

ವಿವಿಧ ಕಾರುಗಳ ಖರೀದಿ ಮೇಲೆ ಯುಗಾದಿ ಆಫರ್

ಯುಗಾದಿ ಸಂಭ್ರಮಕ್ಕಾಗಿ ಟಾಟಾ, ರೆನಾಲ್ಟ್, ನಿಸ್ಸಾನ್, ಮಹೀಂದ್ರಾ ಸೇರಿದಂತೆ ಪ್ರಮುಖ ಕಾರುಗಳ ಖರೀದಿಯ ಮೇಲೆ ವಿಶೇಷ ಆಫರ್ ನೀಡಲಾಗುತ್ತಿದ್ದು, ವಿವಿಧ ಕಾರು ಮಾದರಿಗಳ ಮೇಲೆ ಗ್ರಾಹಕರಿಗೆ ಗರಿಷ್ಠ ಪ್ರಮಾಣದ ಡಿಸ್ಕೌಂಟ್ ನೀಡಲಾಗುತ್ತಿದೆ. ಯುಗಾದಿ ಸಂಭ್ರಮದಲ್ಲಿ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿರುವ ಆಟೋ ಕಂಪನಿಗಳು ಭರ್ಜರಿ ಆಫರ್ ನೀಡುತ್ತಿವೆ.

ವಾರದ ಸುದ್ದಿ: ಸಿಟ್ರನ್ ಕಾರು ಬಿಡುಗಡೆ, ಹೊಸ ವಾಹನ ಬೆಲೆ ಹೆಚ್ಚಳ, ಅಲ್ಕಾಜರ್ ಅನಾವರಣ, ಯುಗಾದಿ ಆಫರ್ ಘೋಷಣೆ!

ಹೊಸ ಆಫರ್‌ಗಳಲ್ಲಿ ಕ್ಯಾಶ್ ಡಿಸ್ಕೌಂಟ್, ಎಕ್ಸ್‌ಚೆಂಜ್ ಆಫರ್ ಜೊತೆಗೆ ವಿಶೇಷ ಪ್ಯಾಕೇಜ್ ನೀಡುತ್ತಿದ್ದು, ಆಕರ್ಷಕ ಆಫರ್‌ಗಳು ಆಟೋ ಕಂಪನಿಗಳಿಗೆ ಉತ್ತಮ ಬೇಡಿಕೆ ತಂದುಕೊಡುವ ನೀರಿಕ್ಷೆಯಿದೆ.

Most Read Articles

Kannada
English summary
Top Auto News Of The Week. Read in Kannada.
Story first published: Sunday, April 11, 2021, 1:06 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X