ವಾರದ ಪ್ರಮುಖ ಸುದ್ದಿ: ಸಿಟ್ರನ್ ಕಾರು ಅನಾವರಣ, ಟಾಟಾ ಸಫಾರಿ ಬುಕ್ಕಿಂಗ್ ಶುರು, ಬಿಸಿತುಪ್ಪವಾದ ಗುಜುರಿ ನೀತಿ..!

ಆಟೋ ಉದ್ಯಮವು ಆರ್ಥಿಕ ಸಂಕಷ್ಟದ ನಡುವೆಯೂ ಸುಧಾರಿಸಿಕೊಳ್ಳುತ್ತಿದ್ದು, ಹೊಸ ವಾಹನಗಳ ಮಾರಾಟದಲ್ಲಿ ಸಾಕಷ್ಟು ಸುಧಾರಣೆ ಕಂಡುಬಂದಿದೆ. ಆಟೋ ಉದ್ಯಮಕ್ಕೆ ಮತ್ತಷ್ಟು ಉತ್ತೇಜನೆ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಗುಜುರಿ ನೀತಿ ಸೇರಿದಂತೆ ಕೆಲವು ಪ್ರಮುಖ ಬದಲಾವಣೆ ಪರಿಚಯಿಸುತ್ತಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಈ ವಾರದ ಪ್ರಮುಖ ಸುದ್ದಿಗಳ ಪಟ್ಟಿಯಲ್ಲಿ ಕೇಂದ್ರ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ಗುಜುರಿ ನೀತಿ ಸೇರಿದಂತೆ ಬಿಡುಗಡೆ ಸಿದ್ದವಾಗಿರುವ ಸಿಟ್ರನ್ ಇಂಡಿಯಾ ಕಂಪನಿಯ ಸಿ5 ಏರ್‌ಕ್ರಾಸ್, ನ್ಯೂ ಜನರೇಷನ್ ಟಾಟಾ ಸಫಾರಿ ಎಸ್‌ಯುವಿ ಕಾರಿನ ಬುಕ್ಕಿಂಗ್ ಪ್ರಕ್ರಿಯೆಗೆ ಚಾಲನೆ, ಸ್ಥಗಿತಗೊಂಡಿದ್ದ ಹಾರ್ಲೆ ಡೇವಿಡ್ಸನ್ ಉದ್ಯಮ ವ್ಯವಹಾರಕ್ಕೆ ಮರುಚಾಲನೆ ಸೇರಿ ಹಲವಾರು ಸುದ್ದಿಗಳ ಹೈಲೈಟ್ಸ್‌ಗಳನ್ನು ಈ ಲೇಖನದಲ್ಲಿ ನೋಡೋಣ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಹಳೆಯ ವಾಹನ ಮಾಲೀಕರಿಗೆ ಬಿಸಿತುಪ್ಪವಾಗಲಿದೆ ಗುಜುರಿ ನೀತಿ

ಆರ್ಥಿಕ ಉತ್ತೇಜನ ಮತ್ತು ಮಾಲಿನ್ಯ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರವು ಅವಧಿ ಮೀರಿದ ಹಳೆಯ ವಾಹನಗಳ ಓಡಾಟಕ್ಕೆ ಬ್ರೇಕ್ ಹಾಕಲು ಹೊಸ ಸ್ಕ್ರ್ಯಾಪೇಜ್ ನೀತಿಯನ್ನು ಕಡ್ಡಾಯ ಜಾರಿಗೆ ತರುವ ಮಹತ್ವದ ನಿರ್ಣಯ ಪ್ರಕಟಿಸಿದ್ದು, ಹೊಸ ಸ್ಕ್ರ್ಯಾಪೇಜ್ ನೀತಿಯಿಂದಾಗಿ ಹಳೆಯ ವಾಹನಗಳ ನಿರ್ವಹಣೆಯು ಮುಂಬರುವ ದಿನಗಳಲ್ಲಿ ಮತ್ತಷ್ಟು ದುಬಾರಿಯಾಗಲಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

20 ವರ್ಷ ಮೇಲ್ಪಟ್ಟ ವ್ಯಯಕ್ತಿಕ ಬಳಕೆಯ ವಾಹನಗಳು ಮತ್ತು 15 ವರ್ಷ ಮೇಲ್ಪಟ್ಟ ವಾಣಿಜ್ಯ ಬಳಕೆಯ ವಾಹನಗಳನ್ನು ಹೊಸ ಗುಜುರಿ ನೀತಿಯಡಿಯಲ್ಲಿ ಸ್ಕ್ರ್ಯಾಪ್‌ಗೊಳ್ಳಲಿದ್ದು, ಅವಧಿ ಮುಗಿದ ನಂತರವೂ ಹಳೆಯ ವ್ಯಯಕ್ತಿಕ ಬಳಕೆಯ ವಾಹನಗಳ ಸಂಚಾರವನ್ನು ಮುಂದುವರಿಸಬೇಕಿದ್ದಲ್ಲಿ ಹಲವಾರು ಕಠಿಣ ಕ್ರಮಗಳನ್ನು ಪಾಲನೆ ಮಾಡಬೇಕಾಗುತ್ತದೆ. ಅವಧಿ ಮುಗಿದ ವ್ಯಯಕ್ತಿಕ ವಾಹನಗಳ ಬಳಕೆಯನ್ನು ಮುಂದುವರಿಸುವ ಆಸಕ್ತಿ ಇದ್ದಲ್ಲಿ ವಿವಿಧ ಹಂತದ ಮಾಲಿನ್ಯ ಪರೀಕ್ಷೆಗಳನ್ನು ಎದುರಿಸಬೇಕಲ್ಲದೆ ದುಬಾರಿ ಮೊತ್ತದ ಹಸಿರು ತೆರಿಗೆ ಪಾವತಿಸಬೇಕಾಗುತ್ತದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಸಿಟ್ರನ್ ಸಿ5 ಏರ್‌ಕ್ರಾಸ್ ಎಸ್‌ಯುವಿ ಅನಾವರಣ

ಫ್ರೆಂಚ್ ಕಾರು ಉತ್ಪಾದನಾ ಕಂಪನಿ ಸಿಟ್ರನ್ ತನ್ನ ಬಹುನೀರಿಕ್ಷಿತ ಕಾರು ಮಾದರಿಯಾದ ಸಿ5 ಏರ್‌ಕ್ರಾಸ್ ಎಸ್‌ಯುವಿಯ ಉತ್ಪಾದನಾ ಆವೃತ್ತಿಯನ್ನು ಭಾರತದಲ್ಲಿ ಅನಾವರಣಗೊಳಿಸುವ ಮೂಲಕ ಶೀಘ್ರದಲ್ಲೇ ಬಿಡುಗಡೆ ಮಾಡುವ ಸುಳಿವು ನೀಡಿದ್ದು, ಹೊಸ ಕಾರು ಮಧ್ಯಮ ಗಾತ್ರದ ಎಸ್‌ಯುವಿ ಮಾದರಿಯಲ್ಲೇ ಅತಿ ಹೆಚ್ಚು ಪ್ರೀಮಿಯಂ ಫೀಚರ್ಸ್‌ಗಳನ್ನು ಪಡೆದುಕೊಂಡಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

2.0-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಬಿಡುಗಡೆಯಾಗಲಿರುವ ಸಿ5 ಏರ್‌ಕ್ರಾಸ್ ಎಸ್‌ಯುವಿ ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 23 ಲಕ್ಷದಿಂದ ರೂ. 27 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳುವ ಸಾಧ್ಯತೆಗಳಿದ್ದು, ಹೊಸ ಕಾರು ಮಾರ್ಚ್ ಆರಂಭದಲ್ಲಿ ಖರೀದಿಗೆ ಲಭ್ಯವಾಗುವ ಸಾಧ್ಯತೆಗಳಿವೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಟಾಟಾ ಸಫಾರಿ ಬುಕ್ಕಿಂಗ್ ಆರಂಭ

ಟಾಟಾ ಮೋಟಾರ್ಸ್ ಕಂಪನಿಯು ತನ್ನ ಬಹುನೀರಿಕ್ಷಿತ ನ್ಯೂ ಜನರೇಷನ್ ಸಫಾರಿ ಎಸ್‌ಯುವಿ ಕಾರು ಮಾದರಿಯನ್ನು ಅನಾವರಣಗೊಳಿಸಿ ಅಧಿಕೃತ ಬುಕ್ಕಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಹೊಸ ಕಾರು ಇದೇ ತಿಂಗಳು 22ರಿಂದ ಖರೀದಿಗೆ ಲಭ್ಯವಿರಲಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಹೊಸ ಸಫಾರಿ ಎಸ್‌ಯುವಿ ಕಾರು ಮಾದರಿಗಾಗಿ ರೂ.30 ಸಾವಿರ ಮುಂಗಡ ಬುಕ್ಕಿಂಗ್ ದರ ನಿಗದಿಪಡಿಸಲಾಗಿದ್ದು, ಟಾಟಾ ಕಂಪನಿಯು ಹೊಸ ಕಾರಿನ ಬೆಲೆ ಹೊರತುಪಡಿಸಿ ಇನ್ನುಳಿದ ಎಲ್ಲಾ ತಾಂತ್ರಿಕ ಅಂಶಗಳ ಮಾಹಿತಿಯನ್ನು ಹಂಚಿಕೊಂಡಿದೆ. ಹೊಸ ಕಾರು ಗ್ರಾಹಕರ ಬೇಡಿಕೆಯೆಂತೆ 6 ಸೀಟರ್ ಮತ್ತು 7 ಸೀಟರ್ ಆಸನ ಸೌಲಭ್ಯಗಳ ಆಯ್ಕೆ ಹೊಂದಿದ್ದು, 2.0-ಲೀಟರ್ ಕ್ರಿಯೊಟೆಕ್ ಡೀಸೆಲ್ ಎಂಜಿನ್ ಆಯ್ಕೆ ಹೊಂದಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ನಿಸ್ಸಾನ್ ವಿರುದ್ದ ಸುಳ್ಳು ಮಾಹಿತಿ ಪ್ರಚಾರದ ಆರೋಪ

ನಿಸ್ಸಾನ್ ಇಂಡಿಯಾ ಕಂಪನಿಯು ತನ್ನ ಹೊಚ್ಚ ಹೊಸ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಮೂಲಕ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ಕಾರು ಖರೀದಿಗೆ ಭಾರೀ ಬೇಡಿಕೆ ಹರಿದುಬರುತ್ತಿರುವ ಸಂದರ್ಭದಲ್ಲಿ ಹೊಸ ಕಾರಿನ ಕುರಿತು ಗ್ರಾಹಕರಿಗೆ ನಿಸ್ಸಾನ್ ಕಂಪನಿಯು ಸುಳ್ಳು ಮಾಹಿತಿಯನ್ನು ನೀಡುತ್ತಿದೆ ಎನ್ನುವ ಆರೋಪ ಕೇಳಿಬಂದಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಹೊಸ ಜಾಹೀರಾತುವೊಂದರಲ್ಲಿ ಕಾರಿನ ಕುರಿತಾಗಿ ತಪ್ಪು ಸಂದೇಶ ನೀಡುತ್ತಿದೆ ಎಂದು ಹಲವಾರು ಗ್ರಾಹಕರು ಜಾಹೀರಾತು ಮಾನದಂಡಗಳ ಮಂಡಳಿಯಲ್ಲಿ ದೂರು ದಾಖಲಿಸಿದ್ದು, ಗ್ರಾಹಕರ ದೂರಗಳ ಅನ್ವಯ ಜಾಹೀರಾತು ಮಾನದಂಡಗಳ ಮಂಡಳಿಯು ನಿಸ್ಸಾನ್ ಕಂಪನಿಗೆ ನೋಟಿಸ್ ನೀಡಿ ವಿಚಾರಣೆ ನಡೆಸುತ್ತಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಫೌಂಡರ್ಸ್ ಎಡಿಷನ್ ಕಾರುಗಳನ್ನು ಬಿಡುಗಡೆಗೊಳಿಸಿದ ಟಾಟಾ

ಟಾಟಾ ಮೋಟಾರ್ಸ್ ಕಂಪನಿಯು ಈ ವರ್ಷ ತನ್ನ 75ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿದೆ. ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಕಂಪನಿಯು ಟಿಯಾಗೊ, ಟಿಗೋರ್, ನೆಕ್ಸಾನ್, ಆಲ್‌ಟ್ರೊಜ್ ಹಾಗೂ ಹ್ಯಾರಿಯರ್ ಕಾರುಗಳ ಸ್ಥಾಪಕರ (ಫೌಂಡರ್ಸ್) ಆವೃತ್ತಿಯನ್ನು ಬಿಡುಗಡೆ ಮಾಡಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಟಾಟಾ ಮೋಟಾರ್ಸ್ ಕಂಪನಿಯು ಈ ವರ್ಷದುದ್ದಕ್ಕೂ ಹಲವು ಹೊಸ ಅಪ್ ಡೇಟ್'ಗಳನ್ನು ಬಿಡುಗಡೆಗೊಳಿಸುವುದಾಗಿ ಘೋಷಿಸಿದೆ. ಈ ಆವೃತ್ತಿಯ ಕಾರುಗಳು ಟಾಟಾ ಮೋಟಾರ್ಸ್ ಉದ್ಯೋಗಿಗಳಿಗೆ ಮಾತ್ರ ಲಭ್ಯವಿರಲಿವೆ. ಫೌಂಡರ್ಸ್ ಆವೃತ್ತಿಯು ಜೆಆರ್‌ಡಿ ಟಾಟಾರವರ ಸಹಿ ಹಾಗೂ ನೀಲಿ ಹಿನ್ನೆಲೆ ಹೊಂದಿರುವ ವಿಶೇಷ ಟಾಟಾ ಲೋಗೊವನ್ನು ಹೊಂದಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ಹಾರ್ಲೆ ಬೈಕ್ ಮಾರಾಟಕ್ಕಾಗಿ ಪ್ರತ್ಯೇಕ ವಿಭಾಗ ತೆರೆದ ಹೀರೋ

ಭಾರತದಲ್ಲಿ ಹೀರೋ ಮೋಟೊಕಾರ್ಪ್ ಜೊತೆಗೂಡಿ ಸಹಭಾಗಿತ್ವ ಯೋಜನೆಗೆ ಚಾಲನೆ ನೀಡಿರುವ ಅಮೆರಿಕ ಜನಪ್ರಿಯ ಹಾರ್ಲೆ ಡೇವಿಡ್ಸನ್ ಕಂಪನಿಯು ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಹೊಸ ಯೋಜನೆಯ ಭಾಗವಾಗಿ ಹೀರೋ ಮೊಟೋಕಾರ್ಪ್ ಕಂಪನಿಯು ಹಾರ್ಲೆ ಬೈಕ್ ಮಾರಾಟಕ್ಕಾಗಿ ಪ್ರತ್ಯೇಕ ಮಾರಾಟ ಸೌಲಭ್ಯ ತೆರೆದಿದೆ.

ಈ ವಾರದ ಪ್ರಮುಖ ಆಟೋಮೊಬೈಲ್ ಸುದ್ದಿಗಳು

ದೇಶಿಯ ಮಾರುಕಟ್ಟೆಯಲ್ಲಿ ಈ ಮೊದಲು ಸ್ವತಂತ್ರವಾಗಿ ತನ್ನ ಐಷಾರಾಮಿ ಬೈಕ್ ಮಾದರಿಗಳನ್ನು ಅಭಿವೃದ್ದಿಗೊಳಿಸಿ ಮಾರಾಟ ಮಾಡುತ್ತಿದ್ದ ಹಾರ್ಲೆ ಡೇವಿಡ್ಸನ್ ಕಂಪನಿಯು ನಿರ್ವಹಣಾ ವೆಚ್ಚಗಳನ್ನು ತಗ್ಗಿಸುವುದಕ್ಕಾಗಿ ದೇಶದ ಜನಪ್ರಿಯ ಬೈಕ್ ಉತ್ಪಾದನಾ ಕಂಪನಿಯಾಗಿರುವ ಹೀರೋ ಮೋಟೊಕಾರ್ಪ್ ಜೊತೆಗೂಡಿದ್ದು, ಬೈಕ್ ಮಾರಾಟ ಮತ್ತು ಗ್ರಾಹಕರ ಸೇವೆಗಳಿಗೆ ಸಮರ್ಥವಾಗಿ ಪೂರೈಸಲು ಸಹಭಾಗಿತ್ವ ಕಂಪನಿಯ ಪ್ಲ್ಯಾಟ್‌ಫಾರ್ಮ್‌ಗಳನ್ನು ಬಳಕೆ ಮಾಡಿಕೊಳ್ಳಲಿದೆ.

Most Read Articles

Kannada
English summary
Top Auto News Of The Week. Read in Kannada.
Story first published: Sunday, February 7, 2021, 8:45 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X