Just In
Don't Miss!
- Lifestyle
ಭಾನುವಾರದ ದಿನ ಭವಿಷ್ಯ: ಈ ದಿನ ನಿಮ್ಮ ರಾಶಿಫಲ ಹೇಗಿದೆ ನೋಡಿ
- Sports
ಐಪಿಎಲ್ನಲ್ಲಿ ಕೆಟ್ಟ ದಾಖಲೆ ಬರೆದ ಕೂಲ್ ಕ್ಯಾಪ್ಟನ್ ಎಂಎಸ್ ಧೋನಿ
- Finance
ಶಾಲೆಯನ್ನ ಅರ್ಧಕ್ಕೆ ತೊರೆದು, 8,000 ರೂ. ವೇತನ ಪಡೆಯುತ್ತಿದ್ದ ನಿಖಿಲ್ ಕಾಮತ್ ಶತಕೋಟ್ಯಧಿಪತಿ ಆಗಿದ್ದೇಗೆ?
- News
ನೈಟ್ ಕರ್ಫ್ಯೂ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಪೊಲೀಸರ ಬಿಗಿ ರೂಲ್ಸ್
- Education
Bank Of Baroda Recruitment 2021: 512 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- Movies
ಅಜಯ್ ದೇವಗನ್-ಅಮಿತಾಭ್ ಸಿನಿಮಾದ ಚಿತ್ರೀಕರಣಕ್ಕೆ ಕೊರೊನಾ ಅಡ್ಡಿ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ವಾರದ ಪ್ರಮುಖ ಸುದ್ದಿ: ಹಳೆಯ ಸರ್ಕಾರಿ ವಾಹನಗಳಿಗೆ ನಿಷೇಧ, ಇವಿ ವಾಹನಗಳಿಗೆ ಉತ್ತೇಜನ, ಎಕ್ಸ್‌ಸಿ40 ಇವಿ ಅನಾವರಣ
ಕೋವಿಡ್ ಪರಿಣಾಮ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಆಟೋ ಉದ್ಯಮವು ಇದೀಗ ದಾಖಲೆ ಪ್ರಮಾಣದ ಹೊಸ ವಾಹನಗಳ ಮಾರಾಟಕ್ಕೆ ಸಾಕ್ಷಿಯಾಗಿದ್ದು, ಮಾರುಕಟ್ಟೆಯಲ್ಲಿ ಹೊಸ ವಾಹನಗಳ ಬಿಡುಗಡೆ ಪ್ರಕ್ರಿಯೆ ಜೋರಾಗಿದೆ. ಹೊಸ ವಾಹನ ಮಾರಾಟ ಹೆಚ್ಚುತ್ತಿದ್ದಂತೆ ಕೇಂದ್ರ ಸರ್ಕಾರವು ವಾಹನಗಳ ಸುರಕ್ಷತೆ ಮತ್ತು ಮಾಲಿನ್ಯ ತಡೆ ಉದ್ದೇಶದಿಂದ ಹಲವು ಕಠಿಣ ಕ್ರಮಗಳೊಂದಿಗೆ ವಿವಿಧ ಯೋಜನೆಗಳನ್ನು ಜಾರಿಗೆ ತರುತ್ತಿದ್ದು, ಈ ವಾರದ ಸುದ್ದಿಗಳ ಹೈಲೆಟ್ಸ್ ಇಲ್ಲಿ ತಿಳಿಯೋಣ.

15 ವರ್ಷ ಹಳೆಯ ಸರ್ಕಾರಿ ವಾಹನಗಳ ಮರುನೋಂದಣಿ ರದ್ದು
ಕೇಂದ್ರ ಸರ್ಕಾರದ ಹೊಸ ಗುಜುರಿ ನೀತಿ ಅನ್ವಯ 15 ವರ್ಷ ಹಳೆಯ ಕಮರ್ಷಿಯಲ್ ಹಾಗೂ 20 ವರ್ಷ ಹಳೆಯ ಖಾಸಗಿ ವಾಹನಗಳು ಫಿಟ್‌ನೆಸ್ ಪ್ರಮಾಣಪತ್ರವನ್ನು ಪಡೆಯಬೇಕು. ಫಿಟ್‌ನೆಸ್ ಪರೀಕ್ಷೆಯಲ್ಲಿ ವಿಫಲವಾಗುವ ವಾಹನಗಳಿಗೆ ದಂಡ ವಿಧಿಸುವುದರ ಜೊತೆಗೆ, ವಾಹನಗಳನ್ನು ಜಪ್ತಿ ಮಾಡಲಾಗುತ್ತದೆ ಎಂದು ಹೇಳಲಾಗಿದೆ.

ಆದರೆ ಹೊಸ ಆದೇಶವು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು, ಕೇಂದ್ರಾಡಳಿತ ಪ್ರದೇಶಗಳು, ಸ್ಥಳೀಯ ಸರ್ಕಾರಿ ಇಲಾಖೆಗಳು ಹಾಗೂ ಸ್ವಾಯತ್ತ ಸರ್ಕಾರಿ ಸಂಸ್ಥೆಗಳು ಸೇರಿದಂತೆ ಎಲ್ಲಾ ಸರ್ಕಾರಿ ಅಂಗಸಂಸ್ಥೆಗಳ ಸಂಬಂಧಿಸಿದ ಸರ್ಕಾರಿ ಹಳೆಯ ವಾಹನಗಳಿಗೆ ಮರು ನೋಂದಣಿಯನ್ನು ನಿಷೇಧಿಸಿದೆ. ವಾಯುಮಾಲಿನ್ಯವನ್ನು ನಿಯಂತ್ರಿಸಲು ಕೇಂದ್ರ ಸಾರಿಗೆ ಇಲಾಖೆಯು ಈ ಕಠಿಣ ಕ್ರಮ ಕೈಗೊಂಡಿದೆ.

ಆಮದು ಪ್ರಮಾಣವನ್ನು ಕಡಿಮೆ ಮಾಡುವಂತೆ ಆಟೋ ಕಂಪನಿಗಳಿಗೆ ಕೇಂದ್ರದಿಂದ ಮನವಿ
ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ವಿದೇಶಿ ಆಮದನ್ನು ಕಡಿಮೆ ಮಾಡಿಕೊಳ್ಳುವಂತೆ ಆಟೋಮೊಬೈಲ್ ಕಂಪನಿಗಳಿಗೆ ಮನವಿ ಮಾಡಿದ್ದಾರೆ. ದುಬಾರಿ ಬೆಲೆಯ ಆಮದನ್ನು ಕಡಿಮೆ ಮಾಡುವ ಮೂಲಕ ವಾಹನ ಕ್ಷೇತ್ರದಲ್ಲಿ ದೇಶಿಯ ಉತ್ಪನ್ನಗಳತ್ತ ಗಮನ ಹರಿಸುವಂತೆ ಅವರು ತಿಳಿಸಿದ್ದಾರೆ.

ಮೇಕ್ ಇನ್ ಇಂಡಿಯಾ ಅಭಿಯಾನಕ್ಕಾಗಿ ಆಟೋ ಮೊಬೈಲ್ ಕಂಪನಿಗಳು ಭಾರತದಲ್ಲಿ ಹೊಸದಾಗಿ ಉಪಕರಣಗಳನ್ನು ತಯಾರಿಸುವ ಅಗತ್ಯವಿದೆ ಎಂದು ಅವರು ಹೇಳಿದರು. ಆಟೋ ಕಂಪನಿಗಳನ್ನುದ್ದೇಶಿಸಿ ಮಾತನಾಡಿದ ನಿತಿನ್ ಗಡ್ಕರಿ, ಆಟೋ ವಲಯದಲ್ಲಿ ಸ್ಥಳೀಯ ಉತ್ಪಾದನೆಯನ್ನು 70%ನಿಂದ 100%ಗೆ ಹೆಚ್ಚಿಸುವಂತೆ ತಿಳಿಸಿದರು. ಬಿಡಿಭಾಗಗಳಿಗಾಗಿ ಚೀನಾದ ಮೇಲಿನ ಅವಲಂಬನೆಯನ್ನು ಕೊನೆಗೊಳಿಸುವುದು ಅವಶ್ಯಕವೆಂದು ಅವರು ಹೇಳಿದರು. ಸ್ಥಳೀಯ ಉತ್ಪಾದನೆಗೆ ಒತ್ತು ನೀಡುವುದರಿಂದ ವಾಹನ ಉತ್ಪಾದನಾ ವೆಚ್ಚವು ಕಡಿಮೆಯಾಗುವುದರ ಜೊತೆಗೆ ದೇಶದಲ್ಲಿ ಉದ್ಯೋಗವಕಾಶ ಹೆಚ್ಚಲಿದೆ ಎಂದು ಅವರು ಹೇಳಿದರು.

ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸಲು ಕ್ರಮ
ಹೆಚ್ಚುತ್ತಿರುವ ಇಂಧನಗಳ ಬೆಲೆ ಮತ್ತು ಮಾಲಿನ್ಯದ ಕಾರಣಕ್ಕೆ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹ ನೀಡುತ್ತಿರುವುದು ಹೊಸ ಬದಲಾವಣೆಗೆ ಕಾರಣವಾಗಿದೆ.

ಫೇಮ್ ಯೋಜನೆಯ ಮೊದಲ ಹಂತದಲ್ಲಿ ಸುಮಾರು ರೂ. 3 ಸಾವಿರ ಕೋಟಿ ನೀಡಿದ್ದ ಕೇಂದ್ರ ಸರ್ಕಾರವು ಎರಡನೇ ಹಂತದ ಯೋಜನೆಗಾಗಿ ರೂ. 10 ಸಾವಿರ ಕೋಟಿ ಮೀಸಲಿಟ್ಟಿದ್ದು, ಎರಡನೇ ಹಂತದಲ್ಲಿ 62 ಸಾವಿರ ಪ್ಯಾಸೆಂಜರ್ ಕಾರುಗಳು ಮತ್ತು ಬಸ್‌ಗಳಿಗೆ, 15 ಲಕ್ಷ ದ್ವಿಚಕ್ರ ವಾಹನಗಳ ಮತ್ತು ತ್ರಿ ಚಕ್ರ ವಾಹನಗಳು ಸಬ್ಸಡಿ ಪಡೆದುಕೊಳ್ಳಲಿವೆ. ವ್ಯಯಕ್ತಿಕ ಬಳಕೆಯ ವಾಹನಗಳ ಜೊತೆಗೆ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲೂ ಎಲೆಕ್ಟ್ರಿಕ್ ವಾಹನಗಳ ಅಳವಡಿಸಿಕೊಳ್ಳಲು ಮಹತ್ವದ ಕ್ರಮ ಕೈಗೊಳ್ಳಲಾಗಿದ್ದು, ಮಾಲಿನ್ಯ ತಡೆ ಜೊತೆಗೆ ಹೆಚ್ಚುತ್ತಿರುವ ಇಂಧನ ಬಳಕೆ ಪ್ರಮಾಣವನ್ನು ತಗ್ಗಿಸಲು ಇದರ ಪ್ರಮುಖ ಉದ್ದೇಶವಾಗಿದೆ.

2021ರ ರೆನಾಲ್ಟ್ ಟ್ರೈಬರ್ ಮಿನಿ ಎಂಪಿವಿ ಬಿಡುಗಡೆ
ಬಜೆಟ್ ಬೆಲೆಯ ಎಂಪಿವಿ ಕಾರು ಮಾದರಿಯಲ್ಲೇ ವಿಶೇಷ ಸೌಲಭ್ಯಗಳೊಂದಿಗೆ ಗ್ರಾಹಕರ ಆಕರ್ಷಣೆಗೆ ಕಾರಣವಾಗಿರುವ ರೆನಾಲ್ಟ್ ಟ್ರೈಬರ್ ಕಾರು ಮಾದರಿಯ 2021ರ ಆವೃತ್ತಿಯನ್ನು ಬಿಡುಗಡೆ ಮಾಡಲಾಗಿದ್ದು, ಹೊಸ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾದರಿಗಿಂತಲೂ ಮತ್ತಷ್ಟು ಹೊಸ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದೆ.

ಟ್ರೈಬರ್ ಮೂಲಕ ಎಂಟ್ರಿ ಲೆವೆಲ್ ಎಂಪಿವಿ ಕಾರುಗಳ ಮಾರಾಟದಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿರುವ ರೆನಾಲ್ಟ್ ಇಂಡಿಯಾ ಕಂಪನಿಯು ಪ್ರಸ್ತುತ ಮಾರುಕಟ್ಟೆಯಲ್ಲಿ ಗ್ರಾಹಕರ ಬೇಡಿಕೆಯೆಂತೆ ಕೆಲವು ಪ್ರಮುಖ ಬದಲಾವಣೆಗಳೊಂದಿಗೆ 2021ರ ಆವೃತ್ತಿಯನ್ನು ಬಿಡುಗಡೆ ಮಾಡಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.30 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 7.65 ಲಕ್ಷ ಬೆಲೆ ಪಡೆದುಕೊಂಡಿದೆ.

ಡಿಫೆಂಡರ್ ಡೀಸೆಲ್ ವರ್ಷನ್ ಬಿಡುಗಡೆ
ಲ್ಯಾಂಡ್ ರೋವರ್ ಇಂಡಿಯಾ ಕಂಪನಿಯು ತನ್ನ ಜನಪ್ರಿಯ ಆಫ್ ರೋಡ್ ಎಸ್‌ಯುವಿ ಕಾರು ಮಾದರಿಯಾದ ಡಿಫೆಂಡರ್ ಮಾದರಿಯನ್ನು ಭಾರತದಲ್ಲಿ ಕಳೆದ ವರ್ಷವಷ್ಟೇ ಬಿಡುಗಡೆ ಮಾಡಿತ್ತು. ಆರಂಭದಲ್ಲಿ ಹೊಸ ಕಾರನ್ನು ಪೆಟ್ರೋಲ್ ಮಾದರಿಯಲ್ಲಿ ಮಾತ್ರವೇ ಪರಿಚಯಿಸಿದ್ದ ಕಂಪನಿಯು ಇದೀಗ ಗ್ರಾಹಕರ ಬೇಡಿಕೆಯ ಆಧಾರದ ಮೇಲೆ ಡೀಸೆಲ್ ಮಾದರಿಯಲ್ಲೂ ಬಿಡುಗಡೆ ಮಾಡಿದೆ.

ಐಷಾರಾಮಿ ಸೌಲಭ್ಯಗಳೊಂದಿಗೆ ಆಫ್ ರೋಡ್ ಚಾಲನೆಗಾಗಿಯೇ ವಿಶೇಷ ವೈಶಿಷ್ಟ್ಯತೆಗಳನ್ನು ಹೊಂದಿರುವ ಲ್ಯಾಂಡ್ ರೋವಲ್ ಡಿಫೆಂಡರ್ ಎಸ್‌ಯುವಿ ಸದ್ಯ ಐಷಾರಾಮಿ ಕಾರುಗಳ ವಿಭಾಗದಲ್ಲಿ ಉತ್ತಮ ಬೇಡಿಕೆ ಪಡೆದುಕೊಂಡಿದ್ದು, ಗ್ರಾಹಕರು ಇನ್ಮುಂದೆ ಹೊಸ ಕಾರನ್ನು ತಮ್ಮ ಬೇಡಿಕೆ ಅನುಸಾರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಎರಡು ಮಾದರಿಗಳಲ್ಲೂ ಖರೀದಿ ಮಾಡಬಹುದಾಗಿದೆ. ಡಿಫೆಂಡರ್ ಹೊಸ ಡೀಸೆಲ್ ಕಾರು ಮಾದರಿಯು ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ದರದಂತೆ ಆರಂಭಿಕವಾಗಿ ರೂ. 94.36 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ. 1.08 ಕೋಟಿ ಬೆಲೆ ಹೊಂದಿದೆ.

ವೊಲ್ವೊ ಎಕ್ಸ್‌ಸಿ40 ರಿಚಾರ್ಜ್ ಎಲೆಕ್ಟ್ರಿಕ್ ಎಸ್‌ಯುವಿ ಅನಾವರಣ
ಹೊಸ ಎಕ್ಸ್‌ಸಿ40 ರಿಚಾರ್ಜ್ ಎಲೆಕ್ಟ್ರಿಕ್ ಕಾರು ಮಾದರಿಯ ಬಿಡುಗಡೆಗೂ ಮುನ್ನ ಅನಾವರಣಗೊಳಿಸಿದ ವೊಲ್ವೊ ಕಂಪನಿಯು ಪ್ರಮುಖ ಮಾಹಿತಿಗಳನ್ನು ಹಂಚಿಕೊಂಡಿದ್ದು, ಜೂನ್ ಮೊದಲ ವಾರದಲ್ಲಿ ಹೊಸ ಕಾರು ಖರೀದಿಗೆ ಬುಕ್ಕಿಂಗ್ ಆರಂಭಿಸುವುದಾಗಿ ಹೇಳಿಕೊಂಡಿದೆ. ಜೂನ್‌ನಲ್ಲಿ ಬುಕ್ಕಿಂಗ್ ಆರಂಭವಾದ ನಂತರ ಅಕ್ಟೊಬರ್ ಆರಂಭದಲ್ಲಿ ಹೊಸ ಕಾರಿನ ವಿತರಣೆಯು ಆರಂಭವಾಗಲಿದ್ದು, ಹೊಸ ಕಾರು ಸಂಪೂರ್ಣವಾಗಿ ವಿದೇಶಿ ಮಾರುಕಟ್ಟೆಯಿಂದಲೇ ಆಮದುಗೊಳ್ಳಲಿದೆ.

ಡ್ಯಯಲ್ ಎಲೆಕ್ಟ್ರಿಕ್ ಮೋಟಾರ್ ಸೌಲಭ್ಯ ಹೊಂದಿರುವ ಹೊಸ ಕಾರು 408-ಬಿಎಚ್‌ಪಿ ಮತ್ತು 660-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದು, ಎಲೆಕ್ಟ್ರಿಕ್ ಕಾರು ಮಾದರಿಯಲ್ಲೇ ಉತ್ತಮ ಪರ್ಫಾಮೆನ್ಸ್‌ನೊಂದಿಗೆ ಅಧಿಕ ಮೈಲೇಜ್ ಪ್ರೇರಣೆ ಪಡೆದುಕೊಂಡಿರುವ ಹೊಸ ಕಾರು ಪ್ರತಿ ಚಾರ್ಜ್‌ಗೆ ಗರಿಷ್ಠ 418 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ಓಲಾ ಇವಿ ಸ್ಕೂಟರ್ ಬಿಡುಗಡೆ ಮಾಹಿತಿ ಬಹಿರಂಗ
ಓಲಾ ಕಂಪನಿಯು ತನ್ನ ಅಂಗಸಂಸ್ಥೆಯಾದ ಓಲಾ ಎಲೆಕ್ಟ್ರಿಕ್ ಕಂಪನಿಯ ಮೂಲಕ ಜಾಗತಿಕ ಆಟೋ ಉದ್ಯಮಕ್ಕೆ ಅಧಿಕೃತವಾಗಿ ಪ್ರವೇಶಿಸುತ್ತಿದ್ದು, ಹೊಸ ಯೋಜನೆಗಾಗಿ ಭಾರೀ ಪ್ರಮಾಣದ ಹೂಡಿಕೆಯೊಂದಿಗೆ ಇವಿ ವಾಹನ ಉತ್ಪಾದನೆಯಲ್ಲಿ ಹೊಸ ಸಂಚಲನ ಸೃಷ್ಠಿಸುವ ತವಕದಲ್ಲಿದೆ.

ಎಟರ್ಗೋ ಆ್ಯಪ್‌ಸ್ಕೂಟರ್ ಮಾದರಿಯಲ್ಲೇ ಅಭಿವೃದ್ದಿಗೊಂಡಿರುವ ಓಲಾ ಹೊಸ ಇವಿ ಸ್ಕೂಟರ್ ಮಾದರಿಯು ಪ್ರೀಮಿಯಂ ಫೀಚರ್ಸ್ ಜೊತೆಗೆ ಸುಧಾರಿತ ಬ್ಯಾಟರಿ ಪ್ಯಾಕ್‌ನೊಂದಿಗೆ ಪ್ರತಿ ಚಾರ್ಜ್‌ಗೆ ಗರಿಷ್ಠ 240 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, ಹೊಸ ಸ್ಕೂಟರ್ ಮಾದರಿಯು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಮುಂದಿನ ಕೆಲವೇ ತಿಂಗಳಿನಲ್ಲಿ ಬಿಡುಗಡೆಯಾಗಲಿದೆ.