Just In
Don't Miss!
- News
ಶ್ವಾನಗಳಿಂದ ಕೊರೊನಾ ಸೋಂಕು ನಿಖರ ಪತ್ತೆ: ಅಧ್ಯಯನ ವರದಿ
- Lifestyle
ಭಾನುವಾರದ ಭವಿಷ್ಯ: ಈ ದಿನ ಯಾವ ರಾಶಿಯವರಿಗೆ ಅದೃಷ್ಟದ ದಿನ
- Sports
ಹೈದರಾಬಾದ್ ಸೋಲಿಸಿ ಅಗ್ರ ಸ್ಥಾನಕ್ಕೇರಿದ ಮುಂಬೈ ಇಂಡಿಯನ್ಸ್
- Finance
ಮಹಾರಾಷ್ಟ್ರದಲ್ಲಿ ಲಾಕ್ಡೌನ್: ಕಾರುಗಳ ಉತ್ಪಾದನೆ ಮೇಲೆ ಭಾರೀ ಪರಿಣಾಮ
- Movies
ಸುಶಾಂತ್ ಸಿಂಗ್ ಸಾವಿನ ಬಗ್ಗೆ ಕಂಗನಾ ರಣಾವತ್ ಯೂ-ಟರ್ನ್?
- Education
Ninasam Diploma Admission 2020-21: ಮೇ ತಿಂಗಳಲ್ಲಿ ನೀನಾಸಂ ಡಿಪ್ಲೋಮಾ ಪ್ರವೇಶಾತಿ ಆರಂಭ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ವಾರದ ಪ್ರಮುಖ ಸುದ್ದಿ: ಕಠಿಣವಾಗಲಿದೆ ಡಿಎಲ್ ಟೆಸ್ಟ್, ದಾಖಲೆ ಮಟ್ಟದ ಟೋಲ್ ಸಂಗ್ರಹ, ಅಬ್ಬರಿಸುತ್ತಿವೆ ಇವಿ ಕಾರು
ಆರ್ಥಿಕ ಸಂಕಷ್ಟದ ನಡುವೆಯೂ ದೇಶಿಯ ಆಟೋ ಉದ್ಯಮವು ಇದೀಗ ದಾಖಲೆ ಪ್ರಮಾಣದ ಹೊಸ ವಾಹನಗಳ ಮಾರಾಟಕ್ಕೆ ಸಾಕ್ಷಿಯಾಗಿದ್ದು, ಕೇಂದ್ರ ಸರ್ಕಾರವು ವಾಹನಗಳಲ್ಲಿ ಪ್ರಮಾಣಿಕರಿಗೆ ಗರಿಷ್ಠ ಸುರಕ್ಷತೆ ಮತ್ತು ಮಾಲಿನ್ಯ ತಡೆ ಉದ್ದೇಶದಿಂದ ಹಲವು ಕಠಿಣ ಕ್ರಮಗಳೊಂದಿಗೆ ವಿವಿಧ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಹಾಗಾದ್ರೆ ಈ ವಾರದ ಪ್ರಮುಖ ಸುದ್ದಿಗಳ ಹೈಲೆಟ್ಸ್ ಇಲ್ಲಿ ತಿಳಿಯೋಣ.

ಮತ್ತಷ್ಟು ಕಠಿಣವಾಗಲಿದೆ ಡ್ರೈವಿಂಗ್ ಲೈಸೆನ್ಸ್ ಪರೀಕ್ಷೆ
ಡ್ರೈವಿಂಗ್ ಲೈಸೆನ್ಸ್ ಟೆಸ್ಟ್ ಮೊದಲಿಗಿಂತ ಹೆಚ್ಚು ಕಷ್ಟಕರವಾಗಲಿದೆ ಎಂದು ಕೇಂದ್ರ ಸರ್ಕಾರವು ಮಾಹಿತಿ ನೀಡಿದೆ. ಡ್ರೈವಿಂಗ್ ಲೈಸೆನ್ಸ್ ಪಡೆಯಲು ಡ್ರೈವಿಂಗ್ ಲೈಸೆನ್ಸ್ ಪರೀಕ್ಷೆಯಲ್ಲಿ 69% ಅಂಕಗಳನ್ನು ಪಡೆಯುವುದು ಕಡ್ಡಾಯವೆಂದು ಇತ್ತೀಚೆಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಲೋಕಸಭೆಯಲ್ಲಿ ಮಾಹಿತಿ ನೀಡಿದ್ದಾರೆ.
ವಾಹನವನ್ನು ಸರಿಯಾಗಿ ತಿರುಗಿಸುವುದು ಸೇರಿದಂತೆ ಡ್ರೈವಿಂಗ್ ಲೈಸೆನ್ಸ್ ಪರೀಕ್ಷೆಯನ್ನು ಮತ್ತಷ್ಟು ಕಠಿಣಗೊಳಿಸಲು ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ. ಈ ಬಗ್ಗೆ ಎಲ್ಲಾ ಆರ್‌ಟಿಒಗಳಿಗೆ ಅರ್ಹತಾ ಶೇಕಡಾವಾರು ಬಗ್ಗೆ ಮಾಹಿತಿ ನೀಡಲಾಗಿದೆ.

ಇನ್ಮುಂದೆ ಈ ಹೊಸ ನಿಯಮಗಳನ್ನು ಅನುಸರಿಸಲಾಗುತ್ತದೆ. ವಾಹನವು ರಿವರ್ಸ್ ಗೇರ್ ಹೊಂದಿದ್ದರೆ, ಬಲಕ್ಕೆ ಆಗಲಿ ಅಥವಾ ಎಡಕ್ಕೆ ಆಗಲಿ ಇಕ್ಕಟ್ಟಾದ ಜಾಗದಲ್ಲಿ ಸರಿಯಾದ ರೀತಿಯಲ್ಲಿ ನಿಲ್ಲಿಸಬೇಕಾಗುತ್ತದೆ. ಡ್ರೈವಿಂಗ್ ಲೈಸೆನ್ಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಚಾಲನಾ ಕೌಶಲ್ಯವೊಂದೇ ಮಾನದಂಡವಾಗಿದೆ ಎಂದು ನಿತಿನ್ ಗಡ್ಕರಿ ಹೇಳಿದರು. ಈ ಬಗ್ಗೆ ಕೇಂದ್ರ ಮೋಟಾರು ವಾಹನ ನಿಯಮ 1989ರ ನಿಬಂಧನೆಗಳ ಅಡಿಯಲ್ಲಿ ಹೇಳಲಾಗಿದೆ.

ಡಿಎಲ್, ಆರ್‌ಸಿ ಮಾನ್ಯತಾ ಅವಧಿ ವಿಸ್ತರಣೆ
ಕರೋನಾ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಡ್ರೈವಿಂಗ್ ಲೈಸೆನ್ಸ್, ಆರ್‌ಸಿಗಳಂತಹ ವಾಹನ ಸಂಬಂಧಿತ ದಾಖಲೆಗಳ ಮಾನ್ಯತೆ ಅವಧಿಯನ್ನು ಜೂನ್ ತಿಂಗಳವರೆಗೆ ವಿಸ್ತರಿಸಿದೆ.

ಈ ವಿಸ್ತರಣೆಯು 2020ರ ಫೆಬ್ರವರಿ 1 ಹಾಗೂ ಅದರ ನಂತರ ಮಾನ್ಯತೆ ಅಂತ್ಯವಾದ ದಾಖಲೆಗಳಿಗೆ ಮಾತ್ರ ಅನ್ವಯವಾಗಲಿದೆ. ಕರೋನಾ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ವಾಹನ ದಾಖಲೆಯ ಸಿಂಧುತ್ವವನ್ನು ಹೆಚ್ಚಿಸಲಾಗುತ್ತಿದೆ. ಇದಕ್ಕೂ ಮುನ್ನ ಕಳೆದ ವರ್ಷದ ಮಾರ್ಚ್ 30, ಜೂನ್ 9, ಆಗಸ್ಟ್ 24 ಹಾಗೂ ಡಿಸೆಂಬರ್ 27ರಂದು ವಾಹನ ದಾಖಲೆಯ ಮಾನ್ಯತೆಯನ್ನು ವಿಸ್ತರಿಸಿ ಆದೇಶ ಹೊರಡಿಸಲಾಗಿತ್ತು.

ಅಗ್ಗವಾಗಲಿವೆ ಎಲೆಕ್ಟ್ರಿಕ್ ವಾಹನಗಳು
ರಸ್ತೆ ಸುರಕ್ಷತೆ ಮತ್ತು ಸಾರಿಗೆ ಕುರಿತು ಮಾತನಾಡಿರುವ ಕೇಂದ್ರ ಸಚಿವ ನಿತಿನಿ ಗಡ್ಕರಿಯವರು, ನಾವು ಬಿಎಸ್ 6 ಮಾಲಿನ್ಯ ನಿಯಮಗಳ ಅನುಷ್ಟಾನದಲ್ಲಿ ಯಶಸ್ವಿಯಾಗಿದ್ದೇವೆ. ಆಟೋಮೊಬೈಲ್ ಉದ್ಯಮದ ಕಠಿಣ ಪರಿಶ್ರಮ ಹಾಗೂ ಸಹಕಾರಕ್ಕಾಗಿ ನಾನು ಉದ್ಯಮಕ್ಕೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಅವರು ಹೇಳಿದ್ದಾರೆ. ಜೊತೆಗೆ ಸದ್ಯಕ್ಕೆ ಎಲೆಕ್ಟ್ರಿಕ್ ವಾಹನಗಳತ್ತ ಗಮನ ಹರಿಸಲಾಗುತ್ತಿದೆ ಎಂದು ಸಚಿವ ನಿತಿನ್ ಗಡ್ಕರಿ ಹೇಳಿದರು. ಭಾರತವು ಪ್ರತಿವರ್ಷ 8 ಟ್ರಿಲಿಯನ್ ರೂಪಾಯಿ ಮೌಲ್ಯದ ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುತ್ತದೆ.

ಇದರಿಂದಾಗಿ ಹೆಚ್ಚಿನ ಆರ್ಥಿಕ ಹೊರೆ ಎದುರಾಗುತ್ತಿದೆ. ಜೊತೆಗೆ ಪೆಟ್ರೋಲ್, ಡೀಸೆಲ್ ವಾಹನಗಳಿಂದ ಪರಿಸರಕ್ಕೂ ಹಾನಿಯಾಗುತ್ತಿದೆ. ವಾಯು ಮಾಲಿನ್ಯ ಸಮಸ್ಯೆಯನ್ನು ಹೋಗಲಾಡಿಸಲು ದೆಹಲಿ ಸೇರಿದಂತೆ ಹಲವು ರಾಜ್ಯಗಳು ವಿವಿಧ ಕ್ರಮಗಳನ್ನು ಕೈಗೊಳ್ಳುತ್ತಿವೆ. ಮುಂಬರುವ ಎರಡು ವರ್ಷಗಳಲ್ಲಿ ಬ್ಯಾಟರಿ ಉತ್ಪನ್ನವು ಭಾರತದಲ್ಲಿ ನಿರ್ಮಾಣವಾಗುತ್ತಿರುವುದರಿಂದ ಬೆಲೆ ಇಳಿಕೆಯೆ ಸಹಕಾರಿಯಾಗಲಿದೆ ಎಂದಿದ್ದಾರೆ.

ಜಾಗ್ವಾರ್ ಐ-ಪೇಸ್ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ
ಜಾಗತಿಕ ಮಾರುಕಟ್ಟೆಗಳಲ್ಲಿ ಈಗಾಗಲೇ ಖರೀದಿಗೆ ಲಭ್ಯವಿರುವ ಐ-ಪೇಸ್ ಎಲೆಕ್ಟ್ರಿಕ್ ಎಸ್‌ಯುವಿ ಮಾದರಿಯು ಇದೀಗ ಭಾರತದಲ್ಲೂ ಬಿಡುಗಡೆಗೊಂಡಿದ್ದು, ಹೊಸ ಕಾರು ಎಸ್, ಎಸ್ಇ ಮತ್ತು ಹೆಚ್ಎಸ್ಇ ಎಂಬ ಮೂರು ವೆರಿಯೆಂಟ್‌ಗಳಲ್ಲಿ ಲಭ್ಯವಿರುತ್ತದೆ. ಹೊಸ ಕಾರಿನ ತಾಂತ್ರಿಕ ಅಂಶಗಳಿಗೆ ಅನುಗುಣವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 1.06 ಕೋಟಿಯಿಂದ ಟಾಪ್ ಎಂಡ್ ಮಾದರಿಯು ರೂ. 1.12 ಕೋಟಿ ಬೆಲೆ ಪಡೆದುಕೊಂಡಿದೆ.
MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಐ-ಪೇಸ್ ವಿಭಿನ್ನವಾದ ಹಲವಾರು ಸುಧಾರಿತ ತಂತ್ರಜ್ಞಾನ ಪ್ರೇರಣೆ ಪಡೆದುಕೊಂಡಿದ್ದು, ಡ್ಯುಯಲ್ ಎಲೆಕ್ಟ್ರಿಕ್ ಮೋಟಾರ್ ಮೂಲಕ ಗರಿಷ್ಠ 400-ಬಿಎಚ್‌ಪಿ ಮತ್ತು 696-ಎನ್ಎಂ ಟಾರ್ಕ್ ಉತ್ಪಾದನೆ ಮಾಡುವ ಐ-ಪೇಸ್ ಕಾರು ಮಾದರಿಯು 90kWh ಬ್ಯಾಟರಿ ಪ್ಯಾಕ್ ಮೂಲಕ ಪ್ರತಿ ಚಾರ್ಜ್‌ಗೆ 470 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

ಆಡಿ ಎಸ್5 ಸ್ಪೋರ್ಟ್‌ಬ್ಯಾಕ್ ಸೆಡಾನ್ ಬಿಡುಗಡೆ
ಜರ್ಮನ್ ಕಾರು ಉತ್ಪಾದನಾ ಕಂಪನಿಯಾದ ಆಡಿ ತನ್ನ ಬಹುನೀರಿಕ್ಷಿತ ಎಸ್5 ಸ್ಪೋರ್ಟ್‌ಬ್ಯಾಕ್ ಸೆಡಾನ್ ಮಾದರಿಯನ್ನು ಭಾರತದಲ್ಲೂ ಬಿಡುಗಡೆ ಮಾಡಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 79.06 ಲಕ್ಷ ಬೆಲೆ ಹೊಂದಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಲೈಫ್ ಸ್ಟೈಲ್ ಸ್ಪೋರ್ಟ್ ಸೆಡಾನ್ ಕಾರು ಮಾದರಿಗಳಲ್ಲೇ ಹೊಸ ವೈಶಿಷ್ಟ್ಯತೆಗಳನ್ನು ಹೊಂದಿರುವ ಎಸ್5 ಸ್ಪೋರ್ಟ್‌ಬ್ಯಾಕ್ ಮಾದರಿಯು ವಿಶೇಷವಾಗಿ ಪರ್ಫಾಮೆನ್ಸ್ ಮಾದರಿಯಾಗಿ ಗುರುತಿಸಿಕೊಳ್ಳಲಿದ್ದು, 3.0-ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿದೆ. 8-ಸ್ಪೀಡ್ ಟ್ರಿಪ್‌ಟ್ರಾನಿಕ್ ಆಟೋ ಟ್ರಾನ್ಸ್‌ಮಿಷನ್‌ನೊಂದಿಗೆ 349-ಬಿಎಚ್‌ಪಿ ಮತ್ತು 500-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.